Homeಕರ್ನಾಟಕಉರಿಗೌಡ ನಂಜೆಗೌಡ ಕಥೆ; ಬಿಜೆಪಿಯು ಒಕ್ಕಲಿಗರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿ ಕಟ್ಟುತ್ತಿದೆ: ಕಾಂಗ್ರೆಸ್

ಉರಿಗೌಡ ನಂಜೆಗೌಡ ಕಥೆ; ಬಿಜೆಪಿಯು ಒಕ್ಕಲಿಗರಿಗೆ ದೇಶದ್ರೋಹಿಗಳೆಂಬ ಹಣೆಪಟ್ಟಿ ಕಟ್ಟುತ್ತಿದೆ: ಕಾಂಗ್ರೆಸ್

- Advertisement -
- Advertisement -

ಉರಿಗೌಡ ನಂಜೆಗೌಡ ಎನ್ನುವವರು ಟಿಪ್ಪು ಸುಲ್ತಾನ್‌ಅನ್ನು ಕೊಂದರು ಎನ್ನುವ ಹೊಸ ಕಥೆಯನ್ನು ಬಿಜೆಪಿ ಪದೇ ಪದೇ ಹೇಳುತ್ತಿದೆ. ಈ ವಿಚಾರದಲ್ಲಿ ಬಿಜೆಪಿಯವರು ಗೋಬೇಲ್ಸ್ ಥಿಯರಿ ಅಳವಡಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಟೀಕಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್ ಘಟಕ, ”ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದೇ ಸತ್ಯವಾಗುತ್ತದೆ ಎಂಬ ಗೋಬೇಲ್ಸ್ ಥಿಯರಿಯನ್ನು ಅಳವಡಿಸಿಕೊಂಡಿರುವ ಬಿಜೆಪಿ, ಸುಳ್ಳು ಪಾತ್ರಗಳನ್ನು ಸೃಷ್ಟಿಸಿ ಒಕ್ಕಲಿಗ ಸಮುದಾಯಕ್ಕೆ ದೇಶದ ಸ್ವತಂತ್ರದ ವಿರುದ್ದ ಕೆಲಸ ಮಾಡಿದವರು ಎಂಬ ಹಣೆಪಟ್ಟಿ ಕಟ್ಟುತ್ತಿದೆ” ಎಂದು ವ್ಯಾಖ್ಯಾನಿಸಿದೆ.

ಕಾಂಗ್ರೆಸ್ ಟ್ವೀಟ್‌ನಲ್ಲಿ ವಿಡಿಯೋ ಒಂದನ್ನು ಹಂಚಿಕೊಂಡಿದ್ದು, ಆ ವಿಡಿಯೋದಲ್ಲಿ ಸಿಟಿ ರವಿಯವರು ಮಂಡ್ಯದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ್ದಾರೆ. ”ಉರಿಗೌಡ, ನಂಜೇಗೌಡ ಒಕ್ಕಲಿಗರು ಎನ್ನುವುದು ಅವರಿಗೆ ಹೊಟ್ಟೆಉರಿನಾ? ಒಕ್ಕಲಿಗರಲ್ಲಿ ಶೌರ್ಯ ಪ್ರದರ್ಶನ ಮಾಡುವವರು ಇರಬಾರದಾ? ಟಿಪ್ಪು ಹುಲಿಯನ್ನು ಕೊಂದ ಎನ್ನುವುದು ಗಿಣಿಕಥೆ, ಹುಲಿ ಕೊಂದಿದ್ದನ್ನು ನೀವು ನೋಡಿದ್ದೀರಾ? ಟಿಪ್ಪುವನ್ನ ಉರಿಗೌಡ ನಂಜೇಗೌಡ ಕೊಂದಿರುವುದಕ್ಕೆ ಐತಿಹಾಸಿಕ ದಾಖಲೆಗಳೇ ಇವೆ. ಇವು ಹೊರಗಡೆ ಬಂದರೆ ಒಕ್ಕಲಿಗರಲ್ಲಿ ಸ್ವಾಭಿಮಾನ, ಶೈರ್ಯ ಉಕ್ಕುತ್ತದೆ ಹಾಗಾಗಿ ಅದನ್ನು ಅದಮಿಡುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ” ಎಂದು ಸಿಟಿ ರವಿ ಹೇಳಿದ್ದಾರೆ.

ಇದನ್ನೂ ಓದಿ: ‘ಉರಿಗೌಡ, ನಂಜೇಗೌಡ’ರು ಜೀವಿಸಿದ್ದ ಯಾವುದೇ ಕುರುಹು ಇಲ್ಲ: ಆದರೂ ಸುಳ್ಳು ಹೇಳುತ್ತಿರುವ ಬಿಜೆಪಿ

”ಟಿಪ್ಪುವನ್ನು ಕೊಂದವರು ಉರಿಗೌಡ ಮತ್ತು ದೊಡ್ಡ ನಂಜೇಗೌಡ” ಎಂಬ ಸುಳ್ಳು ಕಥೆಯನ್ನು ಹುಟ್ಟಿದ್ದು ವಾಟ್ಸಾಪ್‌ ಯುನಿವರ್ಸಿಟಿಯಲ್ಲಿ, ಬಿಜೆಪಿ ಹಾಗೂ ಅದರ ಬೆಂಬಲಿಗರು ಅದನ್ನೇ ಪ್ರತಿಪಾದಿಸತೊಡಗಿದ್ದಾರೆ. ಈ ಕಥೆಯನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಮುನ್ನೆಲೆಗೆ ತಂದರು. ಆನಂತರ ಕೆಲವು ಬಿಜೆಪಿ ನಾಯಕರು ಹಾಗೂ ಅವರ ಬೆಂಬಲಿಗರು ಅದೇ ನಿಜವೇನೋ ಎನ್ನುವಂತೆ ಪದೇ ಪದೇ ಹೇಳಲು ಶುರು ಮಾಡಿದ್ದಾರೆ.

ಈ ಸುಳ್ಳು ಕಥೆಯನ್ನು ಬಿಜೆಪಿಯವರು ಪದೇ ಪದೇ ಹೇಳುವ ಮೂಲಕ ಎಲ್ಲರಿಗೂ ಅದೇ ಸತ್ಯ ಇರಬಹುದು ಎನ್ನುವಂತೆ ಮಾಡುತ್ತಿದ್ದಾರೆ. ಇದನ್ನು ಗೋಬೇಲ್ಸ್ ಥಿಯರಿ ಎಂದು ಹೇಳುತ್ತಾರೆ. ಆದರೆ ಈ ಸುಳ್ಳಿನ ಕಥೆಯ ಮೂಲಕ ಬಿಜೆಪಿಯವರು ಒಕ್ಕಲಿಗರನ್ನು ಮುಸ್ಲಿಂ ವಿರುದ್ಧ ನಿಲ್ಲಿಸುವುದು ಮಾತ್ರವಲ್ಲದೇ, ಒಕ್ಕಲಿಗರು ಬ್ರಿಟಿಷರ ಪರ ಇದ್ದರೆಂದು ಸುಳ್ಳನ್ನು ಪ್ರತಿಪಾದಿಸುತ್ತ, ದೇಶದ ಸ್ವತಂತ್ರದ ವಿರುದ್ದ ಕೆಲಸ ಮಾಡಿದವರು ಎಂಬ ಹಣೆಪಟ್ಟಿ ಕಟ್ಟುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಬಿಜೆಪಿ ನಾಯಕರು ಚುನಾವಣಾ ಉದ್ದೇಶದಿಂದ ಇಂತಹದ್ದೊಂದು ಸುಳ್ಳು ಕಥೆಯ ಮೂಲಕ ಒಕ್ಕಲಿಗರ ಮತ ಸೆಳೆಯಲು ಮುಂದಾಗಿರಬಹುದು. ಆದರೆ, ಒಕ್ಕಲಿಗರು ಈ ಸುಳ್ಳು ಕಥೆ ಬಗ್ಗೆ ಬಹಳ ಗಂಭಿರವಾಗಿ ಯೋಚಿಸಬೇಕಾಗಿದೆ. ಏಕೆಂದರೆ ಈ ಸುಳ್ಳು ಕಥೆಯಲ್ಲಿ ಟಿಪ್ಪುವನ್ನು ಒಕ್ಕಲಿಗರು ಕೊಂದರು ಎನ್ನುವುದಾದರೆ, ಒಕ್ಕಲಿಗರು ಈ ದೇಶದ ವಿರುದ್ಧ ಕೆಲಸ ಮಾಡಿದವರು, ಬ್ರಿಟಿಷರ ಪರವಾಗಿ ಕೆಲಸ ಮಾಡಿದವರು ಎಂದಾಗುತ್ತದೆ. ಬಿಜೆಪಿಯವರು ಅವಸರದಲ್ಲಿ ಕಟ್ಟಿದ ಸುಳ್ಳಿನ ಕಥೆಯಲ್ಲಿ ಒಕ್ಕಲಿಗರನ್ನು ಹೀರೋ ಮಾಡಲು ಹೋಗಿ ದೇಶದ್ರೋಹಿಗಳು ಎನ್ನುವಂತೆ ತೋರಿಸಲಾಗುತ್ತಿದೆ. ಈ ಸುಳ್ಳು ಕಥೆಯ ಬಗ್ಗೆ ಒಕ್ಕಲಿಗ ಸಮುದಾಯದ ನಾಯಕರು ಮಾತನಾಡುವುದು ಅತ್ಯವಶ್ಯಕವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...