Homeಮುಖಪುಟವಿಚಿತ್ರ ಘಟನೆ | ಸಿಎಂಗೆ ಸಮೋಸ ನೀಡದ್ದಕ್ಕೆ ಐವರು ಪೊಲೀಸರಿಗೆ ಶೋಕಾಸ್ ನೋಟಿಸ್; ತನಿಖೆಗೆ ಆದೇಶ!

ವಿಚಿತ್ರ ಘಟನೆ | ಸಿಎಂಗೆ ಸಮೋಸ ನೀಡದ್ದಕ್ಕೆ ಐವರು ಪೊಲೀಸರಿಗೆ ಶೋಕಾಸ್ ನೋಟಿಸ್; ತನಿಖೆಗೆ ಆದೇಶ!

- Advertisement -
- Advertisement -

ಸಿಎಂಗೆ ಮೀಸಲಾದ ಸಮೋಸಾವನ್ನು ಅವರ ಸಿಬ್ಬಂದಿಗೆ ನೀಡಿದ ಕಾರಣಕ್ಕೆ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದ್ದಲ್ಲದೆ, ಐವರು ಪೊಲೀಸರಿಗೆ ಸಮನ್ಸ್ ನೀಡಿರುವ ವಿಚಿತ್ರ ಘಟನೆ ಹಿಮಾಚಲ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇಷ್ಟೆ ಅಲ್ಲದೆ, ಈ ಬಗ್ಗೆ ರಾಜ್ಯದ ರಾಜಕೀಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದ್ದು, ಆಡಳಿತರೂಢ ಪಕ್ಷ ಮತ್ತು ಪ್ರತಿಪಕ್ಷಗಳು ಪರಸ್ಪರ ವಾಗ್ದಾಳಿಗಳು ನಡೆಸುತ್ತಿವೆ.

ಘಟನೆ ಏನು?

ಅಕ್ಟೋಬರ್ 21 ರಂದು ಶಿಮ್ಲಾದ ಹೋಟೆಲ್‌ನಲ್ಲಿ ರಾಜ್ಯದ ಸಿಐಡಿ ಅಧಿಕಾರಿಗಳ ಕಾರ್ಯಕ್ರಮದಲ್ಲಿ ಸಿಎಂ ಸುಖು ಭಾಗವಹಿಸಿದ್ದರು. ಈ ವೇಳೆ ಸಿಎಂಗೆ ಮೀಸಲಾದ ಸಮೋಸಾಗಳು ಪ್ಯಾಕೆಟ್‌ಗಳಲ್ಲಿ ಬಂದಿತ್ತು. ಆದರೆ, ಈ ಸಮೋಸವನ್ನು ಅವರಿಗೆ ನೀಡದೆ ಅವರ ಭದ್ರತಾ ಸಿಬ್ಬಂದಿಗೆ ನೀಡಲಾಗಿತ್ತು. ಈ ಘಟನೆ ರಾಜ್ಯ ಸಿಐಡಿಯಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದು, ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜ್ಯದ ಕಾಂಗ್ರೆಸ್ ಸರ್ಕಾರವು ಅನಗತ್ಯ ವಿಷಯಗಳತ್ತ ಗಮನ ಹರಿಸುತ್ತಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸುತ್ತಿವೆ.

ಘಟನೆ ನಡೆದು ಹದಿನೈದು ದಿನಗಳ ನಂತರ, ರಾಜ್ಯ ಅಪರಾಧ ತನಿಖಾ ಇಲಾಖೆ (ಸಿಐಡಿ) ನಡೆಸಿದ ತನಿಖೆಯು ಇದನ್ನು “ಸರ್ಕಾರ ವಿರೋಧಿ” ಕೃತ್ಯ ಎಂದು ಬಣ್ಣಿಸಿದೆ. ಇದರ ಪರಿಣಾಮವಾಗಿ ಮಹಿಳಾ ಇನ್ಸ್‌ಪೆಕ್ಟರ್ ಸೇರಿದಂತೆ ಐವರು ಪೊಲೀಸ್ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ.

ಕಾಂಗ್ರೆಸ್ ಸರ್ಕಾರದ ಈ ಕ್ರಮವನ್ನು ಪ್ರತಿಪಕ್ಷ ಬಿಜೆಪಿ ವಿರೋಧಿಸಿದ್ದು, “ಸರ್ಕಾರವು ನಾಪತ್ತೆಯಾಗಿರುವ ಸಮೋಸಾಗಳ ಬಗ್ಗೆ ತನಿಖೆಗೆ ಆದೇಶಿಸಿದೆ. ಆದರೆ ಗಂಭೀರ ಪ್ರಕರಣಗಳತ್ತ ಕಣ್ಣು ಮುಚ್ಚಿ ಕುಳಿತಿದೆ” ಎಂದು ತರಾಟೆಗೆ ತೆಗೆದುಕೊಂಡಿದೆ.

ವಿರೋಧ ಪಕ್ಷದ ನಾಯಕ ಮತ್ತು ಮಾಜಿ ಸಿಎಂ ಜೈ ರಾಮ್ ಠಾಕೂರ್ ಪ್ರತಿಕ್ರಿಯಿಸಿ, “ಪ್ರತಿಪಕ್ಷಗಳು ಆ ಸಮೋಸಗಳನ್ನು ತಿಂದಿಲ್ಲ. ಸರ್ಕಾರದ ಭಾಗವಾಗಿದ್ದ ವ್ಯಕ್ತಿಗಳೆ ಆ ಸಮೋಸಗಳನ್ನು ಬಡಿಸಿದ್ದಾರೆ. ಹಾಗಾದರೆ ಈ ನಡೆಯು ಸರ್ಕಾರಿ ವಿರೋಧಿ ಆಗುವುದು ಹೇಗೆ?” ಎಂದು ಕೇಳಿದ್ದಾರೆ.

“ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಸಮೋಸಾ ಸಂಚಿಕೆ ಬಗ್ಗೆ ತನಿಖೆಗೆ ಆದೇಶಿಸಬೇಕು” ಎಂದು ಅವರು ಹೇಳಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆ ನಡೆಸುತ್ತಿಲ್ಲ. ಬದಲಾಗಿ ಸಮೋಸಾ ವಿತರಣೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಹಿಮಾಚಲ ಪ್ರದೇಶದ ಬಿಜೆಪಿಯ ಮಾಜಿ ಮುಖ್ಯಸ್ಥ ಸತ್ಪಾಲ್ ಸತ್ತಿ ಅವರು ಕಾಂಗ್ರೆಸ್ ಸರ್ಕಾರವು ಸಮೋಸಾಗಳ ವಿಚಾರಣೆಗೆ ಆದೇಶಿಸುವ ಮೂಲಕ ನಗೆಪಾಟಲಿಗೀಡಾಗಿದೆ ಎಂದು ಹೇಳಿದ್ದಾರೆ.

ಆದರೆ ಕಾಂಗ್ರೆಸ್ ಸರ್ಕಾರ ಇದನ್ನು ನಿರಾಕರಿಸಿದೆ. ಬಿಜೆಪಿಗೆ ಬೇರೆ ಯಾವುದೇ ಸಮಸ್ಯೆಗಳಿಲ್ಲ. ಕಾಂಗ್ರೆಸ್ ಸರ್ಕಾರದ ವಿರುದ್ಧ ಸುಳ್ಳು ಪ್ರಚಾರ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರ ನರೇಶ್ ಚೌಹಾಣ್ ಹೇಳಿದ್ದಾರೆ.

ವಿವಾದದ ಸುಳಿಯಲ್ಲಿ ಸಿಲುಕಿರುವ ಸಿಐಡಿ ಈ ವಿಚಾರವನ್ನು ಆಂತರಿಕ ವಿಚಾರ ಎಂದು ಬಣ್ಣಿಸಿದ್ದು, ರಾಜಕೀಯ ಮಾಡಬೇಡಿ ಎಂದು ಎಲ್ಲರಿಗೂ ಮನವಿ ಮಾಡಿದೆ. ”ಇದು ನಮ್ಮ ಇಲಾಖೆಯ ಆಂತರಿಕ ವಿಚಾರ. ಸರಕಾರಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ,’’ ಎಂದು ಸಿಐಡಿ ಮಹಾನಿರ್ದೇಶಕ (ಡಿಜಿ) ಸಂಜೀವ್ ರಂಜನ್ ಓಜಾ ಹೇಳಿದ್ದಾರೆ.

ಮುಖ್ಯಮಂತ್ರಿಗಳಿಗೆ ತರಿಸಿದ್ದ ತಿಂಡಿ ಏನಾಯಿತು ಎಂದು ತಿಳಿಯಲು ಕೇವಲ ಮೌಖಿಕ ಆದೇಶಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ. “ಯಾವುದೇ ತನಿಖೆಗೆ ಆದೇಶಿಸಲಾಗಿಲ್ಲ, ಯಾವುದೇ ವಿವರಣೆಯನ್ನು ಕೇಳಲಾಗಿಲ್ಲ ಮತ್ತು ಯಾರ ವಿರುದ್ಧವೂ ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ. ಜನರು ಈ ವಿಷಯವನ್ನು ಉಲ್ಬಣಗೊಳಿಸುವುದನ್ನು ಮತ್ತು ರಾಜಕೀಯಗೊಳಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಸಿಐಡಿ ಪ್ರಧಾನ ಕಚೇರಿಗೆ ತೆರಳಿದ್ದ ಮುಖ್ಯಮಂತ್ರಿಗಳಿಗೆ ನೀಡಲು ಶಿಮ್ಲಾದ ಲಕ್ಕರ್ ಬಜಾರ್‌ನಲ್ಲಿರುವ ಹೋಟೆಲ್ ರಾಡಿಸನ್ ಬ್ಲೂನಿಂದ ಮೂರು ಬಾಕ್ಸ್‌ನಲ್ಲಿ ತಿಂಡಿ ತಿನಿಸುಗಳನ್ನು ತರಲಾಗಿತ್ತು. ಆದರೆ ಸಿಎಂಗೆ ಮೀಸಲಾದ ಸಮೋಸವನ್ನು ಯಾರು ತಿಂದರು ಎಂಬ ವಿಚಾರದಲ್ಲಿ ಗಲಾಟೆ ಶುರುವಾದೆ ಎಂದು TNIE ವರದಿ ಮಾಡಿದೆ.

ಆದರೆ, ಡಿಎಸ್ಪಿ ನಡೆಸಿದ ವಿಚಾರಣಾ ವರದಿಯ ಪ್ರಕಾರ ಬಾಕ್ಸ್‌ಗಳನ್ನು ಸಿಎಂ ಭದ್ರತಾ ಸಿಬ್ಬಂದಿಗೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ವರದಿ ಉಲ್ಲೇಖಿಸಿದೆ. ವಿಚಿತ್ರ ಘಟನೆ

ಇದನ್ನೂ ಓದಿ: ಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ ಸುಪ್ರೀಂ ಕೋರ್ಟ್

ಮಣಿಪುರ ಹಿಂಸಾಚಾರದಲ್ಲಿ ಸಿಎಂ ಬಿರೇನ್ ಸಿಂಗ್ ಪಾತ್ರ ಆರೋಪ : ಆಡಿಯೋ ಟೇಪ್ ಪರಿಶೀಲಿಸಲಿರುವ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...