Homeಕರ್ನಾಟಕಬೀದಿ ನಾಯಿಗಳ ಮೈಕ್ರೋಚಿಪಿಂಗ್ ವಿರುದ್ಧ ಅರ್ಜಿ | ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಬೀದಿ ನಾಯಿಗಳ ಮೈಕ್ರೋಚಿಪಿಂಗ್ ವಿರುದ್ಧ ಅರ್ಜಿ | ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ಬೆಂಗಳೂರಿನ ಬೀದಿ ನಾಯಿಗಳಿಗೆ ಮೈಕ್ರೋಚಿಪ್‌ಗಳನ್ನು ಅಳವಡಿಸುವ ಬಿಬಿಎಂಪಿಯ ಪ್ರಸ್ತಾಪವನ್ನು ಸೇವ್ ಅವರ್ ಅನಿಮಲ್ಸ್ ಚಾರಿಟಬಲ್ ಟ್ರಸ್ಟ್ ಮತ್ತು ಪರಿಸರ ಹೋರಾಟಗಾರ್ತಿ ನವೀನ ಕಾಮತ್ ಅವರು ರಾಜ್ಯ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್) ಪ್ರತಿಕ್ರಿಯೆಯಾಗಿ ಮಂಗಳವಾರ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು, ಬಿಬಿಎಂಪಿ ಮತ್ತು ಇತರರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಬೀದಿ ನಾಯಿಗಳ

2024 ಫೆಬ್ರವರಿ 29ರ ಬಿಬಿಎಂಪಿ ಪ್ರಸ್ತಾವನೆಯ ಕಾನೂನುಬದ್ಧತೆಯನ್ನು ಪ್ರಶ್ನಿಸುವ ಈ ಅರ್ಜಿಯ ವಾದವನ್ನು ಆಲಿಸಿದ ನಂತರ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ನೋಟಿಸ್‌ಗಳನ್ನು ನೀಡಿದೆ. ನ್ಯಾಯಾಲಯವು ಪ್ರಕರಣವನ್ನು ಡಿಸೆಂಬರ್ 16 ಕ್ಕೆ ಹೆಚ್ಚಿನ ವಿಚಾರಣೆಗೆ ಮುಂದೂಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲರು, ”ಬೀದಿ ನಾಯಿಗಳನ್ನು ನಿಯಂತ್ರಿಸಲು ನಾಯಿಗಳಿಗೆ ಮೈಕ್ರೋಚಿಪ್ಪಿಂಗ್ ಅಳವಡಿಸಲು ಬಿಡ್ ನೀಡಲು ಬಿಬಿಎಂಪಿಗೆ ಯಾವುದೇ ಕಾನೂನು ಅಧಿಕಾರವಿಲ್ಲ. ಏಕೆಂದರೆ ಪ್ರಾಣಿ ಜನನ ನಿಯಂತ್ರಣ (ಎಬಿಸಿ) ನಿಯಮಗಳು, 2023, ಇದಕ್ಕೆ ಅನುಮತಿ ನೀಡುವುದಿಲ್ಲ. ಅಲ್ಲದೆ, ಕಾರ್ಯವಿಧಾನವನ್ನು ಮೇಲ್ವಿಚಾರಣೆ ಮಾಡಲು ಸಮಿತಿಯನ್ನು ರಚಿಸುವ ಅಧಿಕಾರ ಮತ್ತು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯಿಂದ ಇದಕ್ಕೆ ಯಾವುದೇ ಅನುಮತಿ ಇರಲಿಲ್ಲ. ಬಿಡ್ ನೀಡುವ ಸಂಪೂರ್ಣ ಪ್ರಕ್ರಿಯೆಯು ಕಾನೂನುಬಾಹಿರವಾಗಿದೆ” ಎಂದು ಹೇಳಿದ್ದಾರೆ.

ಬಿಬಿಎಂಪಿಯ ಜಂಟಿ ನಿರ್ದೇಶಕರು ಪಶ್ಚಿಮ ಮತ್ತು ಆರ್‌ಆರ್‌ನಗರ ವಲಯಗಳಲ್ಲಿ ಪ್ರಾಯೋಗಿಕ ಯೋಜನೆಯಾಗಿ ಮೈಕ್ರೋಚಿಪಿಂಗ್ ಅಳವಡಿಸಲು ಪ್ರಸ್ತಾಪಿಸಿದ್ದು, ಬಿಬಿಎಂಪಿಯ ಉಳಿದ ಆರು ವಲಯಗಳಿಗೆ ವಿಸ್ತರಿಸಲು ಯೋಜಿಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ. ಈ ಪ್ರಸ್ತಾವನೆಯನ್ನು ವಿರೋಧಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಅವರ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಅವರು ಹೇಳಿದ್ದಾರೆ.

“ಎಬಿಸಿ ನಿಯಮಗಳು – 2023 ರ ಅಡಿಯಲ್ಲಿ ಮೈಕ್ರೋಚಿಪ್ಪಿಂಗ್ ಅಳವಡಿಕೆಯು ಹೆಚ್ಚುವರಿ ವಿಧಾನವಾಗಿದೆ. ಈ ಅಳವಡಿಕೆಯಲ್ಲಿ ಬೀದಿ ನಾಯಿಗಳನ್ನು ಅನೇಕ ಬಾರಿ ಹಿಡಿಯಬೇಕಾಗುತ್ತದೆ, ಇದು ಈ ನಾಯಿಗಳಿಗೆ ಆಘಾತಕಾರಿಯಾಗಿದ್ದು, ಅವುಗಳಿಗೆ ಅನಗತ್ಯ ಒತ್ತಡ ನೀಡುತ್ತದೆ ಅಥವಾ ಅವುಗಳು ಆಕ್ರಮಣಕಾರಿಯಾಗು ಅಪಾಯವಿರುತ್ತದೆ” ಎಂದು ಅರ್ಜಿದಾರರು ದೂರಿದ್ದಾರೆ.

“ನಾಯಿಗಳ ಲಸಿಕೆ ಸ್ಥಿತಿಯನ್ನು ಕಂಡುಹಿಡಿಯಲು ಮತ್ತು ಮೈಕ್ರೋಚಿಪ್‌ಗಳನ್ನು ಸ್ಕ್ಯಾನ್ ಮಾಡಲು ನಾಯಿಗಳನ್ನು ಹಿಡಿಯಬೇಕಾಗುತ್ತದೆ. ಈ ವೇಳೆ ಸಂಬಂಧಿಸಿದ ಏಜೆನ್ಸಿಗಳ ಅನಗತ್ಯ ಪ್ರಯತ್ನಗಳು ಈ ನಾಯಿಗಳು ಅಕ್ರಮಣಕಾರಿಯಾಲು ಕಾರಣವಾಗುತ್ತವೆ.” ಎಂದು ಅವರು ಹೇಳಿದ್ದಾರೆ. ಬೀದಿ ನಾಯಿಗಳ

ಎಬಿಸಿ ನಿಯಮಗಳು, 2023 ರ ನಿಯಮ 8 (2) ಅನ್ನು ಉಲ್ಲೇಖಿಸಿರುವ ಅರ್ಜಿದಾರರು, ಬೀದಿ ನಾಯಿಗಳಿಗೆ ಜಂತುಹುಳು ನಿವಾರಣೆ, ಸಂತಾನಹರಣ ಮತ್ತು ಸಾಮಾನ್ಯ ರೋಗನಿರೋಧಕಕ್ಕೆ ಮಾತ್ರ ನಿರ್ದಿಷ್ಟ ಅನುಮೋದನೆಯನ್ನು ನೀಡಲಾಗಿದೆ ಎಂದು ಕೋರ್ಟ್‌ಗೆ ಹೇಳಿದ್ದಾರೆ. ಆದರೆ ಈ ಅನುಮೋದಿತ ಕಾರ್ಯವಿಧಾನಗಳ ಭಾಗವಾಗಿ ಮೈಕ್ರೋಚಿಪಿಂಗ್ ಬಗ್ಗೆ ಅದರಲ್ಲಿ ಯಾವುದೇ ಉಲ್ಲೇಖವಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ಹೃದಯಹೀನ ಸರ್ಕಾರದ ನೀತಿ, ಕ್ರಾಂತಿಯ ಅಪ್ರಯೋಗಿಕ ಹಾದಿ ವಿಕ್ರಂ ಗೌಡ ದುರಂತ ಅಂತ್ಯಕ್ಕೆ ಕಾರಣ: ನೂರು ಶ್ರೀಧರ್ ಮತ್ತು ನಾಗರಾಜ್ ಸಿರಿಮನೆ ಜಂಟಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...