Homeಚಳವಳಿತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ತೀವ್ರಗೊಳ್ಳುತ್ತಿರುವ ರೈತ ಹೋರಾಟ: ಹರಿಯಾಣದ 60 ಗ್ರಾಮಗಳಲ್ಲಿ ಬಿಜೆಪಿಗೆ ಪ್ರವೇಶ ನಿಷೇಧ

ಬಿಜೆಪಿ ಮತ್ತು ಜೆಜೆಪಿ ನಾಯಕರು ಹಾಗೂ ಕಾರ್ಯಕರ್ತರು ಗ್ರಾಮಕ್ಕೆ ಪ್ರವೇಶಿಸಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನಿನ ವಿರುದ್ದ ದೆಹಲಿಯ ಸುತ್ತ ರೈತರು ಹೋರಾಟ ಮಾಡುತ್ತಿದ್ದಾರೆ. ದೆಹಲಿಯ ನೆರೆಯ ರಾಜ್ಯವಾದ ಹರಿಯಾಣದಲ್ಲಿ ರೈತ ಹೋರಾಟಕ್ಕೆ 60 ಗ್ರಾಮಗಳು ಸಂಪೂರ್ಣವಾಗಿ ಬೆಂಬಲಿಸಿವೆ. ಈ 60 ಗ್ರಾಮಗಳು ರಾಜ್ಯದ ಆಡಳಿತ ಪಕ್ಷವಾದ ಬಿಜೆಪಿ ಹಾಗೂ ಜೆಜೆಪಿ ನಾಯಕರು ಮತ್ತು ಕಾರ್ಯಕರ್ತರಿಗೆ ಪ್ರವೇಶವನ್ನು ನಿಷೇಧಿಸಿದೆ.

ರೈತ ವಿರೋಧಿ ಕಾನೂನನ್ನು ವಿರೋಧಿಸಿ ರಾಷ್ಟ್ರದಾದ್ಯಂತದ ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿರುವುದರಿಂದ ರಾಜ್ಯದ ಅನೇಕ ಗ್ರಾಮಗಳ ನಿವಾಸಿಗಳು ಬಿಜೆಪಿ-ಜೆಜೆಪಿಯ ಸಚಿವರು ಮತ್ತು ಶಾಸಕರನ್ನು ಬಹಿಷ್ಕರಿಸಿ ನಿರ್ಣಯಗಳನ್ನು ಅಂಗೀಕರಿಸಿದ್ದಾರೆ.

ಈ ಬಗ್ಗೆ ರೈತರು ಗ್ರಾಮದ ವಿವಿಧ ಪ್ರವೇಶ ಕೇಂದ್ರಗಳಲ್ಲಿ ಹೋರ್ಡಿಂಗ್‌ಗಳನ್ನು ಹಾಕಿದ್ದು, ಬಿಜೆಪಿ ಮತ್ತು ಜೆಜೆಪಿ ನಾಯಕರು ಹಾಗೂ ಕಾರ್ಯಕರ್ತರು ಗ್ರಾಮಕ್ಕೆ ಪ್ರವೇಶಿಸಿದರೆ ಅದರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದ್ದಾರೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ರಾಜ್ಯದ ಫತೇಹಾಬಾದ್‌ನ ಅಹೆರ್ವಾನ್, ಭಾನಿ ಖೇರಾ, ತಲ್ವಾರಾ, ಬಾರಾ, ಸಿಧಾನಿ, ಧನಿ ಬಾಬನ್ಪುರ್, ಕಾಮನಾ ಮತ್ತು ಲಂಬಾ ಗ್ರಾಮಗಳು ಈ ಪಟ್ಟಿಯಲ್ಲಿ ಸೇರಿದೆ. ಈ ಗ್ರಾಮಗಳಲ್ಲಿ ನಿವಾಸಿಗಳು ಆಡಳಿತ ಪಕ್ಷದ ಮುಖಂಡರ ವಿರುದ್ಧ ಬ್ಯಾನರ್‌ಗಳನ್ನು ಅಳವಡಿಸಿದ್ದಾರೆ.

ಇದನ್ನೂ ಓದಿ: ದೆಹಲಿ ರೈತ ಹೋರಾಟ ಸಾಗಿ ಬಂದ ಹಾದಿ: ಮಂಡಿಯೂರುತ್ತಿರುವ ಕೇಂದ್ರ ಸರ್ಕಾರ!

ಹಿಸಾರ್‌‌ನ, ಕನಿಷ್ಠ 17 ಹಳ್ಳಿಗಳ ನಿವಾಸಿಗಳು ವಿಧಾನಸಭೆಯ ಉಪಸಭಾಪತಿ ರಣಬೀರ್ ಗಂಗ್ವಾ ಸೇರಿದಂತೆ ಎಲ್ಲಾ ರಾಜಕಾರಣಿಗಳಿಗೆ ಸಾಮಾಜಿಕ ಬಹಿಷ್ಕಾರವನ್ನು ಹಾಕಿ ಹಳ್ಳಿಗಳ ಪ್ರವೇಶವನ್ನು ನಿಷೇಧಿಸಿದ್ದಾರೆ.

ಬಿಜೆಪಿ ಸರ್ಕಾರವನ್ನು ಬೆಂಬಲಿಸಿದ್ದಕ್ಕಾಗಿ ಉಪಮುಖ್ಯಮಂತ್ರಿ, ಜೆಜೆಪಿ ಮುಖಂಡ ದುಶ್ಯಂತ್ ಚೌತಾಲಾ ಮತ್ತು ಹಿಸಾರ್ ಸಂಸದ ಬ್ರಿಜೇಂದ್ರ ಸಿಂಗ್ ಅವರನ್ನು ಸಾಮಾಜಿಕವಾಗಿ ಬಹಿಷ್ಕರಿಸಲಾಗುವುದು ಎಂದು ಜಿಂದ್ ಸರ್ವ್ ಖಾಪ್ (14 ಖಾಪ್ ಸಮುದಾಯಗಳ ಒಕ್ಕೂಟ) ಈಗಾಗಲೇ ಘೋಷಿಸಿದೆ. ಭಿವಾನಿ ಜಿಲ್ಲೆಯ ಲೊಹರು ಗ್ರಾಮದ ನಿವಾಸಿಗಳು ಕೃಷಿ ಸಚಿವ ಜೆ.ಪಿ. ದಲಾಲ್ ಅವನ್ನು ಗ್ರಾಮಕ್ಕೆ ಪ್ರವೇಶಿಸುವುದನ್ನು ಈ ಹಿಂದೆ ತಡೆದಿದ್ದರು.

ಈಗಾಗಲೇ ಹಲವಾರು ಬಿಜೆಪಿ ಮತ್ತು ಜೆಜೆಪಿಯ ನಾಯಕರ ನಿವಾಸಗಳ ಹೊರಗಡೆ  ರೈತರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಅಷ್ಟೇ ಅಲ್ಲದೆ ಕೇಂದ್ರದ ಹೊಸ ಕೃಷಿ ಕಾನೂನುಗಳ ವಿರುದ್ದ ರೈತರ ಪರವಾಗಿ ನಾವಿದ್ದೇವೆ ಎಂದು ಐದು ಜೆಜೆಪಿ ಶಾಸಕರು ಈಗಾಗಲೇ ಹೇಳಿದ್ದಾರೆ.

ಇದನ್ನೂ ಓದಿ:ಮೃದು ಧೋರಣೆ ತಳೆಯಿರಿ ಎಂದ ಕೇಂದ್ರ: ರೈತರೊಂದಿಗಿನ 9ನೇ ಸುತ್ತಿನ ಮಾತುಕತೆ ವಿಫಲ 9ನೇ ಸುತ್ತಿನ ಮಾತುಕತೆ ವಿಫಲ: ತಾನು ಬಗ್ಗದೆ, ಮೃದು ಧೋರಣೆ ತಳೆಯುವಂತೆ ಆಗ್ರಹಿಸಿದ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...