Homeಕರ್ನಾಟಕಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ರಾಜ್ಯಸಭೆ ಚುನಾವಣೆಯ ಗೆಲುವಿನ ಸಂಭ್ರಮಾಚರಣೆ ವೇಳೆ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದದ ಸಿಎಂ, ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಆಡಿಯೋವನ್ನು ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್) ಗೆ ಕಳುಹಿಸಲಾಗಿದೆ. ಅಲ್ಲಿಂದ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ, ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ, ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರದ ವಿರುದ್ಧ ಘೋಷಣೆ ಕೂಗಿರುವುದು ಸಾಬೀತಾದರೆ ಯಾರೇ ಆಗಲಿ ಕಠಿಣ ಕ್ರಮ ವಹಿಸಲಾಗುವುದು ಎಂದರು. ವಿಧಾನಸೌಧದಲ್ಲಿ ಈ ಘಟನೆ ಆಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ, ಕೂಗುವವರಿಗೆ ಇಲ್ಲಿಯಾದರೇನು, ಎಲ್ಲಾದರೇನು? ನಿಜ ಆಗಿದ್ದರೆ ಕಠಿಣ ಕ್ರಮ ಆಗುತ್ತದೆ ಎಂದು ತಿಳಿಸಿದರು.

ರಾಜ್ಯಸಭೆಗೆ ನಿನ್ನೆ ಚುನಾವಣೆ ನಡೆದಿದ್ದು, ಕರ್ನಾಟಕದಿಂದ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಮತ್ತು ಓರ್ವ ಬಿಜೆಪಿ- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಗೆಲುವನ್ನು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರು ಜಯ ಗಳಿಸಿದ್ದರು. ನಾಸಿರ್ ಹುಸೇನ್ ಗೆಲುವಿನ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಸಿರ್ ಹುಸೇನ್ ಬೆಂಬಲಿಗರು ಸಂಭ್ರಮಾಚರಣೆ ಮಾಡಿದ್ದಾರೆ. ಈ ವೇಳೆ ‘ಪಾಕಿಸ್ತಾನ್‌ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂದು ಕನ್ನಡದ ಬಹುತೇಕ ಟಿವಿ ಚಾನಲ್‌ಗಳು ವರದಿ ಮಾಡಿದ್ದು, ಬಿಜೆಪಿ ನಾಯಕರೂ ಕೂಡ ಇದೇ ಆರೋಪ ಮಾಡಿದ್ದಾರೆ.

ಇದನ್ನೂ ಓದಿ : ತುಮಕೂರು: ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರ ಅಟ್ಟಹಾಸ; ಡಿವೈಎಸ್ಪಿಗೆ ಗಾಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...