Homeಕರ್ನಾಟಕ‘ಮುಷ್ಕರ ಕೈಬಿಡದಿದ್ದರೆ ಕಠಿಣ ಕ್ರಮ’ - ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಎಚ್ಚರಿಕೆ

‘ಮುಷ್ಕರ ಕೈಬಿಡದಿದ್ದರೆ ಕಠಿಣ ಕ್ರಮ’ – ಸಾರಿಗೆ ನೌಕರರಿಗೆ ಮುಖ್ಯಮಂತ್ರಿ ಎಚ್ಚರಿಕೆ

- Advertisement -
- Advertisement -

ಸಾರಿಗೆ ನೌಕರರು ನಾಳೆ ರಾಜ್ಯದಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದು, ಮುಖ್ಯವಾಗಿ ಆರನೇ ಆಯೋಗದ ವರದಿ ಜಾರಿಗೆ ಸರ್ಕಾರದೊಂದಿಗೆ ಬೇಡಿಕೆ ಇಟ್ಟಿದ್ದಾರೆ. ಆದರೆ ಇದಕ್ಕೆ ಹುಬ್ಬಳ್ಳಿಯಲ್ಲಿ ಮಂಗಳವಾರ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಮುಷ್ಕರ ಕೈ ಬಿಡದಿದ್ದರೆ ಸರ್ಕಾದಿಂದ ಕಟ್ಟುನಿಟ್ಟಿನ ಕ್ರಮ ಖಚಿತ ಎಂದು ಸಾರಿಗೆ ನೌಕರರಿಗೆ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈಗಾಗಲೇ ಸಾರಿಗೆ ನೌಕರರ ಒಂಬತ್ತು ಬೇಡಿಕೆಯಲ್ಲಿ ಎಂಟು ಬೇಡಿಕೆ ಈಡೇರಿಸಿದ್ದೇವೆ. ಮುಂದೆಯೂ ಸಾರಿಗೆ ನೌಕರರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುವುದು. ಇಷ್ಟಾಗಿಯೂ ನೌಕರರು ಮುಷ್ಕರ ಮಾಡುವುದು ಸರಿಯಲ್ಲ. ಸರ್ಕಾರ ಬಿಗಿಯಾದ ಕ್ರಮ ಕೈಗೊಳ್ಳಲು ಅವಕಾಶ ಮಾಡಿಕೊಡಬಾರದು. ಮುಷ್ಕರದ ನಿರ್ಧಾರ ಕೈ ಬಿಟ್ಟು ಸರ್ಕಾರಕ್ಕೆ ಸಹಕರಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ಮುಷ್ಕರಕ್ಕೆ ಬೆದರಿದ ಬಿಎಸ್‌ವೈ ಸರ್ಕಾರ; ಎಸ್ಮಾ ಜಾರಿ ಎಚ್ಚರಿಕೆ

ಮುಷ್ಕರ ಕರೆ ಹಿನ್ನೆಲೆಯಲ್ಲಿ ಈಗಾಗಲೇ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲೂ ತಯಾರಿ ಮಾಡಲಾಗಿದೆ. ಪರ್ಮಿಟ್ ಇರುವ ಖಾಸಗಿ ಬಸ್‌ಗಳ ಓಡಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರೈಲು ಸಂಚಾರ ಹೆಚ್ಚಳಕ್ಕೂ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರ ಬಿಗಿಯಾದ ಕ್ರಮ ಕೈಗೊಳ್ಳುವ ಮುನ್ನವೇ ಸಾರಿಗೆ ನೌಕರರು ಮುಷ್ಕರದಿಂದ ಹಿಂದೆ ಸರಿಯಬೇಕು. ಇಲ್ಲದಿದ್ದಲ್ಲಿ ಮುಷ್ಕರ ನಿರತರ ಮೇಲೆ ಕಠಿಣ ಕ್ರಮ ಖಚಿತ ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ಸಾರಿಗೆ ನೌಕರರು ಮುಷ್ಕರ ಹೂಡಲು ಸಜ್ಜಾಗಿದ್ದು, ರಾಜ್ಯ ಸರ್ಕಾರದ ವಿರುದ್ದ ಸಂಘರ್ಷಕ್ಕೆ ಮುಂದಾಗಿದ್ದಾರೆ. ಆದರೆ ಸರ್ಕಾರ ಮಾತ್ರ ನೌಕರರ ಬೇಡಿಕೆ ಈಡೇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದರ ಹೊರತಾಗಿಯೂ ನೌಕರರು ಮುಷ್ಕರ ನಡೆಸಿದರೆ ಸರ್ಕಾರ ‘ಎಸ್ಮಾ’ ಜಾರಿಗೆ ಯೋಚಿಸಲಾಗುತ್ತಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಇಂದು ಮಧ್ಯಾಹ್ನ ಹೇಳಿದ್ದರು.

ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರು ಪ್ರಮುಖವಾಗಿ, ‘ಆರನೇ ವೇತನ ಆಯೋಗದ ವರದಿ’ ಜಾರಿಯಾಗಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಸರ್ಕಾರವು ಆರನೇ ವೇತನ ಜಾರಿ ಬದಲು ಸಾರಿಗೆ ನೌಕರರಿಗೆ 8% ರಷ್ಟು ಸಂಬಳ ಹೆಚ್ಚಳ ಮಾಡುವುದಾಗಿ ತಿಳಿಸಿದೆ. ಆದರೆ ಇದನ್ನು ನೌಕರರು ನಿರಾಕರಿಸಿದ್ದು, “ತಮಗೆ ವೇತನ ಹೆಚ್ಚಳ ಬೇಕಾಗಿಲ್ಲ. ಆರನೇ ವೇತನ ಆಯೋಗ ಜಾರಿಯೇ ಆಗಬೇಕು. ಅದಕ್ಕಾಗಿ ಬುಧವಾರ ಮುಷ್ಕರ ನಡೆಸಿಯೇ ತೀರುತ್ತೇವೆ” ಎಂದು ಹೇಳಿದ್ದಾರೆ

ಇದನ್ನೂ ಓದಿ: ಅನಿಲ್ ದೇಶ್ಮುಖ್ ವಿರುದ್ಧ ಸಿಬಿಐ ತನಿಖೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಹಾರಾಷ್ಟ್ರ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...