Homeಮುಖಪುಟಫೇಕ್‌ನ್ಯೂಸ್‌ ಹರಿಬಿಡುವವರ ವಿರುದ್ಧ ಕಠಿಣ ಕಾನೂನು ಕ್ರಮ: ಸಿದ್ದರಾಮಯ್ಯ ಖಡಕ್ ಸೂಚನೆ

ಫೇಕ್‌ನ್ಯೂಸ್‌ ಹರಿಬಿಡುವವರ ವಿರುದ್ಧ ಕಠಿಣ ಕಾನೂನು ಕ್ರಮ: ಸಿದ್ದರಾಮಯ್ಯ ಖಡಕ್ ಸೂಚನೆ

- Advertisement -
- Advertisement -

ಇತ್ತಿಚೆಗೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಫೇಕ್ ನ್ಯೂಸ್ ಹಾವಳಿ ಹೆಚ್ಚಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಫೇಕ್‌ನ್ಯೂಸ್‌ಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿಸುತ್ತಿರುವವರನ್ನು ಗುರುತಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಮಂಗಳವಾರ ಸಿಎಂ ಸಿದ್ದರಾಮಯ್ಯ ಅವರನ್ನು ಗೃಹ ಸಚಿವ ಜಿ.ಪರಮೇಶ್ವರ್ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಅವರ ಜೊತೆ ಫೇಕ್ ನ್ಯೂಸ್ ಹಾವಳಿ ಹೆಚ್ಚಾಗಿರುವ ಬಗ್ಗೆ ಚರ್ಚಿಸಿದ್ದಾರೆ.

”2013ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆ ಫೇಕ್ ನ್ಯೂಸ್‌ಗಳ ಹಾವಳಿ ಹೆಚ್ಚಾಗಿತ್ತು. ಈ ಬಾರಿ ಕೂಡ ಅದೇ ತಂತ್ರವನ್ನು ರಾಜಕೀಯ ವಿರೋಧಿಗಳು ಅನುಸರಿಸುತ್ತಿದ್ದಾರೆ. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿರುವುದರಿಂದ ಮಾಮೂಲಿಯಂತೆ ಫೇಕ್ ನ್ಯೂಸ್‌ಗಳನ್ನು ಹೆಚ್ಚೆಚ್ಚು ಸೃಷ್ಟಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಹೀಗಾಗಿ ಆರಂಭದಲ್ಲೇ ಸುಳ್ಳು ಸುದ್ದಿಗಳ ಮೂಲಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬೇರು ಸಮೇತ ಕತ್ತರಿಸುವ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಿದೆ” ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯವರಿಗೆ ನಿಜವಾಗಿಯೂ ಬಡವರ ಬಗ್ಗೆ ಕಾಳಜಿ ಇದ್ದರೆ ಕೇಂದ್ರದ ಮೇಲೆ ಒತ್ತಡ ತಂದು ಅಕ್ಕಿ ಕೊಡಿಸಲಿ: ಸಿದ್ದರಾಮಯ್ಯ

ಕಳೆದ ಬಾರಿ ಮಕ್ಕಳ ಕಳ್ಳರು, ಗೋಮಾಂಸ ಸಾಗಿಸುವವರು… ಇತ್ಯಾದಿ ಸುಳ್ಳು ಸುದ್ದಿಗಳನ್ನು ಹರಡಿಸಿ ಅಪರಿಚಿತರು ಕಂಡರೆ ಹಲ್ಲೆ ಮಾಡುವುದು, ದನಕರುಗಳ ವ್ಯಾಪಾರಿಗಳ ಹತ್ಯೆ ಮಾಡುವ ಮೂಲಕ ಬಾರಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ಮಾಡಿದ್ದರು. ರಾಜ್ಯದ ಜನರು ಎಲ್ಲವನ್ನೂ ನೋಡಿಯೇ ಈ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಸಂಘ ಪರಿವಾರವನ್ನು ನಿಷ್ಠುರವಾಗಿ ತಿರಸ್ಕರಿಸಿದ್ದಾರೆ. ಆದರೆ ದೇಶದ ಪ್ರಜಾಪ್ರಭುತ್ತದ ಉಳಿವಿಗೆ ಅತ್ಯಂತ ಮಹತ್ವದ್ದಾಗಿರುವ 2024ರ ಲೋಕಸಭಾ ಚುನಾವಣೆಗೆ ನಾವು ಸಜ್ಜಗುತ್ತಿರುವ ಹೊತ್ತಿನಲ್ಲಿ ಸುಳ್ಳು ಸುದ್ದಿ, ವದಂತಿಗಳ ಮೂಲಕ ಗುಂಪುಹಲ್ಲೆ, ಗಲಭೆಗಳನ್ನು ಸೃಷ್ಟಿಸುವ ಪ್ರಯತ್ನಗಳು ನಡೆಯಬಹುದು ಎನ್ನುವ ಸೂಚನೆಗಳೂ ಕಾಣಿಸುತ್ತಿವೆ. ಹೀಗಾಗಿ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಗೃಹಸಚಿವರಿಗೆ ಸಿಎಂ ಸೂಚಿಸಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಪೊಲೀಸ್‌ ಪ್ರಧಾನ ಕಚೇರಿಯಲ್ಲೇ ಈ ಹಿಂದೆ ಒಂದು ತಾಂತ್ರಿಕ ತಂಡ ಫೇಕ್ ನ್ಯೂಸ್‌ಗಳನ್ನು ಪತ್ತೆ ಹಚ್ಚಿ, ಫ್ಯಾಕ್ಟ್‌ಚೆಕ್ ಮಾಡಿ ಜನರನ್ನು ಎಚ್ಚರಿಸುವ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿತ್ತು. ಆದರೆ, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣ ಫ್ಯಾಕ್ಟ್ ಚೆಕ್ ಮಾಡುವುದನ್ನು ಬಂದ್ ಮಾಡಿಸಿದೆ. ಇದನ್ನು ಮತ್ತೆ ಆರಂಭಿಸಬೇಕು. ಸೈಬರ್ ಪೊಲೀಸರು ಫೇಕ್ ನ್ಯೂಸ್‌ಗಳ ಮೂಲಗಳನ್ನು ಪತ್ತೆಹಚ್ಚಲು ಸರ್ವಸನ್ನದ್ದವಾಗಿ ಕೆಲಸ ಮಾಡಬೇಕು. ಪ್ರತೀ ತಿಂಗಳು ಈ ಬಗ್ಗೆ ವರದಿಯನ್ನು ನೀಡಬೇಕು ಎಂದು ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಇಲ್ಲಸಲ್ಲದ ಸುದ್ದಿ ಪೋಸ್ಟ್ ಮಾಡುವುದು ಅಥವಾ ಶೇರ್​ ಮಾಡುವವರು ಕೊಂಚ ಎಚ್ಚರಿಂದ ಇರುವುದು ಒಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...

ಸಿಜೆಐ ಸೂರ್ಯಕಾಂತ್ ವಿರುದ್ಧದ ಪೋಸ್ಟ್: ಕೇರಳ ಕಾಂಗ್ರೆಸ್ ಅಧ್ಯಕ್ಷರಿಗೆ ಎಸ್‌ಸಿಬಿಎ ಜಂಟಿ ಕಾರ್ಯದರ್ಶಿಯಿಂದ ಲೀಗಲ್ ನೋಟಿಸ್!

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯಕಾಂತ್ ಅವರನ್ನು ಗುರಿಯಾಗಿಸಿ ಕೇರಳ ಕಾಂಗ್ರೆಸ್‌ನ ಅಧಿಕೃತ ಎಕ್ಸ್ (X) ಖಾತೆಯಿಂದ ಮಾಡಲಾಗಿತ್ತು ಎನ್ನಲಾದ ಪೋಸ್ಟ್‌ಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್‌ನ (SCBA) ಜಂಟಿ...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ನೇಹಾ ಬೋರಾ ಬಿಡುಗಡೆ : ಅಭಿಜಿತ್ ದೀಪ್ಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿರುವ ಪೊಲೀಸರು

ಶುಕ್ರವಾರ (ಅಕ್ಟೋಬರ್ 16) ಬಂಧಿತರಾಗಿದ್ದ ಆಲ್ ಇಂಡಿಯಾ ಸ್ಟೂಡೆಂಟ್ಸ್ ಅಸೋಸಿಯೇಷನ್ (ಎಐಎಸ್‌ಎ) ಅಧ್ಯಕ್ಷೆ ನೇಹಾ ಬೋರಾ ಅವರನ್ನು ಶನಿವಾರ (ಅ.17) ಮುಂಜಾನೆ ಬಿಡುಗಡೆ ಮಾಡಲಾಗಿದ್ದು, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜಿತ್...

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...