Homeಮುಖಪುಟಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

ಮಣಿಪುರದ ಬಗ್ಗೆ ನಿರ್ಲಕ್ಷ್ಯಕ್ಕೆ ಬೆಲೆತೆತ್ತ ಬಿಜೆಪಿ

- Advertisement -
- Advertisement -

ಪ್ರಕ್ಷುಬ್ಧ ಈಶಾನ್ಯ ರಾಜ್ಯ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ನಡುವೆ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ನಾಗಾ ಪೀಪಲ್ಸ್ ಫ್ರಂಟ್(ಎನ್‌ಪಿಎಫ್)ನ್ನು ಸೋಲಿಸುವ ಮೂಲಕ ಪ್ರತಿಪಕ್ಷವಾದ ಕಾಂಗ್ರೆಸ್‌ ಎರಡೂ ಸಂಸದೀಯ ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಮೂಲಕ ಮಣಿಪುರದ ಕುರಿತು ನಿರ್ಲಕ್ಷ್ಯ ತೋರಿದ ಬಿಜೆಪಿ ಸರಕಾರಕ್ಕೆ ಮಣಿಪುರದ ಜನತೆ ತಕ್ಕ ಪಾಠವನ್ನು ಕಲಿಸಿದ್ದಾರೆ.

ನಮಗೆ ಶಾಶ್ವತ ಭಯ ಮುಕ್ತ ಬದುಕುವ ವಾತಾವರಣ ಬೇಕು, ಶಿಬಿರಗಳಲ್ಲಿ ದಿನದೂಡುತ್ತಿರುವ ನಾವು ಮತದಾನ ಮಾಡುವುದಿಲ್ಲ ಎಂದು ಲೋಕಸಭೆ ಚುನಾವಣೆಗೆ ಈ ಹಿಂದೆ ಮಣಿಪುರದ ನಿರಾಶ್ರಿತರ ಶಿಬಿರದಲ್ಲಿದ್ದ ಜನತೆ ಬಹಿಷ್ಕಾರವನ್ನು ಹಾಕಿದ್ದರು. ಮಣಿಪುರದಲ್ಲಿ ಶಾಂತಿ ಸ್ಥಾಪನೆ, ಪುನರ್ವಸತಿ ಬಗ್ಗೆ ರಾಜ್ಯ ಮತ್ತು ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಮಣಿಪುರದಲ್ಲಿ ಎರಡು ಲೋಕಸಭೆ ಕ್ಷೇತ್ರಗಳಿದೆ. ಇನ್ನರ್ ಮಣಿಪುರ ಕ್ಷೇತ್ರದಲ್ಲಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ, ಕಾಂಗ್ರೆಸ್ ಅಭ್ಯರ್ಥಿ ಅಂಗೋಮ್ಚಾ ಬಿಮೋಲ್ ಅಕೋಯಿಜಮ್ ಅವರು ರಾಜ್ಯ ಶಿಕ್ಷಣ ಸಚಿವ ಬಿಜೆಪಿಯ ಟಿ ಬಸಂತ ಕುಮಾರ್ ಸಿಂಗ್ ಅವರನ್ನು 109,801 ಮತಗಳಿಂದ ಸೋಲಿಸಿದ್ದಾರೆ. ಹೊರ ಮಣಿಪುರ ಕ್ಷೇತ್ರವು ಬುಡಕಟ್ಟು ಸಮುದಾಯಗಳಿಗೆ ಮೀಸಲಾದ ಕ್ಷೇತ್ರ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ ಆಲ್‌ಫ್ರೆಡ್ ಕಂಗಮ್ ಆರ್ಥರ್ ಗೆದ್ದುಕೊಂಡಿದ್ದಾರೆ. ಕಂಗಮ್ ಆರ್ಥರ್ ನಿವೃತ್ತ ಕಂದಾಯ ಅಧಿಕಾರಿ ಎನ್‌ಪಿಎಫ್‌ನ ಕಚುಯಿ ತಿಮೋತಿ ಜಿಮಿಕ್ ಅವರನ್ನು 85,418 ಮತಗಳಿಂದ ಸೋಲಿಸಿದ್ದಾರೆ.

2019ರಲ್ಲಿ ಬಿಜೆಪಿ ಇನ್ನರ್ ಮಣಿಪುರ ಸ್ಥಾನವನ್ನು ಗೆದ್ದಿತ್ತು, ಎನ್‌ಪಿಎಫ್ ಹೊರ ಮಣಿಪುರವನ್ನು ಗೆದ್ದುಕೊಂಡಿತ್ತು. ಈ ಬಾರಿ ಇನ್ನರ್ ಮಣಿಪುರದಲ್ಲಿ ಬಿಜೆಪಿ ತನ್ನದೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಹೊರ ಮಣಿಪುರದಲ್ಲಿ ಎನ್‌ಪಿಎಫ್‌ಗೆ ಬೆಂಬಲ ನೀಡಿತ್ತು.

ಮಣಿಪುರ ಕಳೆದ ಒಂದು ವರ್ಷ ವ್ಯಾಪಕ ಹಿಂಸಾಚಾರದಿಂದ ಪ್ರಕ್ಷುಬ್ಧವಾಗಿತ್ತು. ಆದರೆ ಪ್ರಧಾನಿ ಮೋದಿ ಒಂದೇ ಒಂದು ಬಾರಿ ಮಣಿಪುರಕ್ಕೆ ಭೇಟಿ ನೀಡಿರಲಿಲ್ಲ. ಹಿಂಸಾಚಾರವನ್ನು ತಡೆಯುವಲ್ಲಿ ಯಾವುದೇ ಪರಿಣಾಮಕಾರಿ ಪ್ರಯತ್ನವನ್ನು ಮಣಿಪುರ ಬಿಜೆಪಿ ಬೆಂಬಲಿತ ಸರಕಾರವಾಗಲೀ, ಕೇಂದ್ರ ಸರಕಾರವಾಗಲೀ ಮಾಡಿರಲಿಲ್ಲ. ಸಂಘರ್ಷಕ್ಕೆ ಸಂಬಂಧಿಸಿದಂತೆ ಬಿರೇನ್‌ ಸಿಂಗ್‌ ನೇತೃತ್ವದ ಸರ್ಕಾರ ಪಕ್ಷಪಾತಿಯಾಗಿ ವರ್ತಿಸಿದೆ. ಅಲ್ಪಸಂಖ್ಯಾತರಾದ, ಮುಖ್ಯವಾಗಿ ಕ್ರೈಸ್ತ ಧರ್ಮಕ್ಕೆ ಸೇರಿದ ಕುಕಿ ಬುಡಕಟ್ಟು ಜನರು ಮತ್ತು ಬಹುಸಂಖ್ಯಾತರಾದ ಮೈತೇಯಿ ಸಮುದಾಯದ ಜನರು ಹಿಂಸಾಕೃತ್ಯಗಳನ್ನು ನಡೆಸಿದ್ದಾರೆ. ಎರಡೂ ಸಮುದಾಯಗಳ ನಡುವಣ ವೈರತ್ವಕ್ಕೆ ಹಲವು ದಶಕಗಳ ಇತಿಹಾಸ ಇದೆ. ಆದರೆ ಹಿಂದೆಂದೂ ಈ ರೀತಿ ನಡೆದಿರಲಿಲ್ಲ. ಮೈತೈ ಸಮುದಾಯದ ತೀವ್ರಗಾಮಿ ಗುಂಪು ಅರಂಬಾಯಿ ತೆಂಗೊಲ್‌ಗೆ ರಾಜ್ಯ ಸರ್ಕಾರವು ಪೂರ್ಣ ಸ್ವಾತಂತ್ರ್ಯವನ್ನೇ ಕೊಟ್ಟಿದ್ದು ಹಿಂಸಾಚಾರದ ತೀವ್ರತೆ ಹೆಚ್ಚಲು ಕಾರಣವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಮಣಿಪುರವು ಒಂದು ವರ್ಷದಿಂದ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿದೆ ಮತ್ತು ಜನರು ಬಳಲುತ್ತಿದ್ದಾರೆ. ಆದರೆ ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರ್ಕಾರಗಳು ಇದನ್ನು ಪರಿಹರಿಸಲು ವಿಫಲವಾಗಿವೆ. ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಪರ ತೀರ್ಪು ರಾಜ್ಯದಾದ್ಯಂತ ಮತದಾರರ ಹತಾಶೆಯನ್ನು ಸೂಚಿಸುತ್ತದೆ. ಪ್ರಧಾನಿ ನರೇಂದ್ರ ಮೋದಿ ಕಳೆದ ಒಂದು ವರ್ಷದಿಂದ ಹಿಂಸಾಚಾರ ನಡೆಯುತ್ತಿದ್ದರೂ ರಾಜ್ಯಕ್ಕೆ ಭೇಟಿ ನೀಡಿಲ್ಲ. ಆದರೆ ರಾಹುಲ್‌ ಗಾಂಧಿ ಭಾರತ್‌ ಜೋಡೋ ನ್ಯಾಯ ಯಾತ್ರೆಯನ್ನು ಮಣಿಪುರದಿಂದಲೇ ಆರಂಭಿಸಿದ್ದಾರೆ, ಮಣಿಪುರದ ಜನರಿಗೆ ಧೈರ್ಯ ತುಂಬಿದ್ದಾರೆ ಎಂದು ಮಣಿಪುರ ಕಾಂಗ್ರೆಸ್ ಅಧ್ಯಕ್ಷ ಕೆ ಮೇಘಚಂದ್ರ ಸಿಂಗ್ ಹೇಳಿದ್ದಾರೆ.

ಇದನ್ನು ಓದಿ: ಮೋದಿ ನೇತೃತ್ವದ ಎನ್‌ಡಿಎಗೆ ಬೆಂಬಲಿಸಬೇಡಿ: ನಿತೀಶ್‌, ನಾಯ್ಡುಗೆ ಮಮತಾ ಬ್ಯಾನರ್ಜಿ ಮನವೊಲಿಸಲು ಪ್ರಯತ್ನ

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...