Homeಕರ್ನಾಟಕಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ: ಮಠಾಧೀಶರ ಸಲಹೆಗಳಿಗೆ ತೀವ್ರ ವಿರೋಧ

- Advertisement -
- Advertisement -

ರಾಜ್ಯದಲ್ಲಿ ಮಾಂಸಾಹಾರದ ಕುರಿತು ಚರ್ಚೆ ಮತ್ತೆ ಭುಗಿಲೆದ್ದಿದೆ. ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣ ಶಿಕ್ಷಣವನ್ನು ಅನುಷ್ಠಾನಗೊಳಿಸುವುದರ ಕುರಿತು ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಮಠಾಧೀಶರು ಮಾಂಸಾಹಾರದ ಮೇಲೆ ಮತ್ತೆ ಪ್ರಹಾರ ನಡೆಸಿದ್ದಾರೆ. ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು, ಅಂಗಡಿಗಳ ಮುಂದೆ ಮಾಂಸ ನೇತು ಹಾಕುವುದನ್ನು ಬ್ಯಾನ್ ಮಾಡಬೇಕೆಂಬ ಆಗ್ರಹಗಳು ಕೇಳಿಬಂದಿವೆ. ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಕಂಡುಬಂದಿದೆ.

ಸಭೆಯಲ್ಲಿ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಮಾತನಾಡಿ, “ಆಹಾರಕ್ಕೂ ವ್ಯಕ್ತಿತ್ವಕ್ಕೂ ಸಂಬಂಧವಿದೆ.  ಕೆಲವು ಆಹಾರಗಳು ಮಕ್ಕಳಲ್ಲಿ ನಕರಾತ್ಮಕ ಮನೋಭಾವ ಬೆಳೆಸುತ್ತವೆ. ಹಾಗಾಗಿ ಮಕ್ಕಳಿಗೆ ಸಾತ್ವಿಕ ಆಹಾರ ನೀಡಬೇಕು ಮತ್ತು ಭಗವದ್ಗೀತೆಯನ್ನು ಮುಕ್ತವಾಗಿ ಬೋಧಿಸಬೇಕು” ಎಂದು ಪ್ರತಿಪಾದಿಸಿದ್ದಾರೆ.

ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಮಾತನಾಡಿ, “ಮಕ್ಕಳ ಮೇಲೆ ಹಿಂಸೆಯ ಪ್ರಭಾವವನ್ನು ಕಡಿಮೆ ಮಾಡಬೇಕು. ಹಾಗಾಗಿ ಮಕ್ಕಳ ಮುಂದೆ ಪ್ರಾಣಿವಧೆ ಮಾಡಬಾರದು ಮತ್ತು ಅಂಗಡಿಗಳ ಮುಂದೆ ಮಾಂಸ ನೇತುಹಾಕಬಾರದು ಅಥವಾ ಅದನ್ನು ಮುಚ್ಚಬೇಕು ಎಂದು ಸಲಹೆ ನೀಡಿದ್ದಾರೆ.

ಮಕ್ಕಳು ಅಪೌಷ್ಠಿಕತೆಯಿಂದ ನರಳುತ್ತಿರುವ ಸಂದರ್ಭದಲ್ಲಿ ಮಾಂಸಾಹಾರದಂತಹ ಪೌಷ್ಠಿಕ ಆಹಾರದ ಮೇಲಿನ ಸ್ವಾಮೀಜಿಗಳ ಪ್ರಹಾರವನ್ನು ಹಲವಾರು ಜನ ಸಾಮಾಜಿಕ ಜಾಲತಾಣಗಳಲ್ಲಿ ಖಂಡಿಸಿದ್ದಾರೆ.

“ಬುದ್ಧನೂ, ರಾಮನೂ, ಕೃಷ್ಣನೂ, ಬಾಬಾ ಸಾಹೇಬರೂ, ವಿವೇಕರೂ ತಿಂದದ್ದು ನೀವು ಹೇಳುವ ಸಾತ್ವಿಕ ಆಹಾರ ಅಲ್ಲ!” ಅಂತ ನಿಮ್ಮ ಮಠಗಳಿಗೊಂದು ಮೈಲ್ ಹಾಕಬೇಕು. ಐಡಿ ಕಳಿಸಿ ಸ್ವಾಮಿಗೋಳೇ! ಹಂಗೇ, “ಹೆಣ್ಮಕ್ಕಳನ್ನು ಹರಿದು ತಿಂದ, ಕಪ್ಪುಹಣ ಬಚ್ಚಿಡುವ, ಸಾವುಗಳನ್ನು ಮುಚ್ಚಿಡುವ ಕಾವಿಗಳ ಆಹಾರ- ಶುದ್ಧ ಸಾತ್ವಿಕವಾದುದೇ!” ಅಂತ ತಿಳಿಸಿ ನಿಮಗೊಂದು ವಾಟ್ಸಾಪೂ ಮಾಡಬೇಕಿದೆ. ನಂಬರೂ ಕಳಿಸಿ ಸ್ವಾಮಿಗೋಳೇ! ಎಂದು ಖ್ಯಾತ ವ್ಯಂಗ್ಯಚಿತ್ರಕಾರ ದಿನೇಶ್ ಕುಕ್ಕಜಡ್ಕ ವ್ಯಂಗ್ಯವಾಡಿದ್ದಾರೆ.

ತೊಂಬತ್ತು ಭಾಗ ಜನರು ತಿನ್ನುವ ಆಹಾರವನ್ನು ತೆಗಳ್ತಾರಲ್ಲ! ಇವರುಗಳು ಸೈಕೊಗಳಿಗಿಂತ ಕ್ರೂರ ಎಂದು ಸಾಮಾಜಿಕ ಕಾರ್ಯಕರ್ತ ವಿ.ಎಲ್ ಬಾಲು ಕಿಡಿಕಾರಿದ್ದಾರೆ.

ಮೌಲಿಕ ಶಿಕ್ಷಣದ ಬಗ್ಗೆ ಶೈಕ್ಷಣಿಕ ತಜ್ಞರ ಸಲಹೆ ಪಡೆಯಬೇಕಿದ್ದ ಸರ್ಕಾರವು ಮಠಾಧೀಶರ ಸಲಹೆಗಳನ್ನು ಪಡೆಯುತ್ತಿರುವುದು ಹಾಸ್ಯಾಸ್ಪದ ಇದರಲ್ಲಿ ಪೇಜಾವರ ಮಠದ ಸ್ವಾಮೀಜಿಯು ಮಾಂಸಹಾರದ ಬಗ್ಗೆ ಅಸಹನೆ ತೋರುವುದನ್ನೇ ಮೌಲ್ಯ ಎಂದಿದ್ದರೆ ಇನ್ನೊಬ್ಬ ಮಹಾಶಯರು ಪುನರ್ಜನ್ಮದ ಬಗ್ಗೆ ತಿಳಿಸಿಕೊಡಿ ಎಂದು ಹೇಳಿರುತ್ತಾರೆ ಇವು ಮೌಲಿಕ ಶಿಕ್ಷಣದ ಸಲಹೆಗಳೇ? ಎಂದು ಮಾಜಿ ಸಚಿವ ಡಾ.ಎಚ್.ಸಿ ಮಹಾದೇವಪ್ಪ ಟ್ವೀಟ್ ಮಾಡಿದ್ದಾರೆ.

RSS ನ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ರಾಜ್ಯ ಸರ್ಕಾರವು RSS ಗೆ ಬೇಕಾದ ಆಹಾರ ವಿರೋಧಿಯಾದ, ಮೌಢ್ಯತೆಯಿಂದ ಕೂಡಿದ, ಕೋಮುವಾದಿ ಪಠ್ಯಗಳನ್ನು ರೂಪಿಸುವ ದುರುದ್ದೇಶವನ್ನು ಹೊಂದಿ ಅದಕ್ಕೆ ತಕ್ಕನಾದ ರೀತಿಯಲ್ಲಿ ಅಭಿಪ್ರಾಯಗಳನ್ನು ಸಂಗ್ರಹ ಮಾಡಿಸಿದೆ. ಇದನ್ನೆಲ್ಲಾ ಮೌಲಿಕ ಸಲಹೆಗಳು ಎಂದು ಒಪ್ಪಲು ಆದೀತೇ? ಎಂದು ಅವರು ಪ್ರಶ್ನಿಸಿದ್ದಾರೆ.

ನಮ್ಮೂರ ಮಾರಿ ಜಾತ್ರೆಯಲ್ಲಿ ಪ್ರತಿ ಮನೆಯಿಂದ ಬರುವ ಮಾಂಸದ ಆಮ್ರದ ಪರಿಮಳದಲ್ಲಿ ನಾನು ಅನುಭವಿಸಿದ ಸಾತ್ವಿಕತೆಯ ಭಾವನೆಯನ್ನು… ಇನ್ಯಾವ ಸಂರ್ಭದಲ್ಲೂ ಅನುಭವಿಸಿಲ್ಲ…
ನನ್ನ ಆಹಾರ ನನ್ನ ಹಕ್ಕು ಎಂದು ಅಕ್ಷತಾ ಹುಂಚದಕಟ್ಟೆಯವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರೆಕ್ಟಾಗಿ ಹೇಳಿದಾರೆ! ಸಾತ್ವಿಕ ಆಹಾರ ಅಂದರೆ ಸತ್ವಯುತ ಆಹಾರ! ಅಂದರೆ ಮೊಟ್ಟೆ, ಮಾಂಸ ಇತ್ಯಾದಿ! ಎಂದು ಚಿಂತಕ ಸುರೇಶ್ ಕಂಜರ್ಪಣೆ ತಿಳಿಸಿದ್ದಾರೆ.

ಮಾಂಸದ ಅಂಗಡಿ ಮುಂದೆ ಮಾಂಸ ನೋಡಿದ್ರೆ ಮಕ್ಕಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತೆ ಆದ್ರೆ ಮಠಗಳಲ್ಲಿ ನೀವು ಮಾಡೋ ಪಂಕ್ತಿ ಭೇದ, ಜಾತಿ ಭೇದ ಮಾಡೋದ್ರಿಂದ ಮಕ್ಕಳ ಮನಸ್ಸಿನ ಮೇಲೆ ಯಾವ ಕೆಟ್ಟ ಪರಿಣಾಮ ಬೀರಲ್ಲ ಅಲ್ವಾ ಸ್ವಾಮ್ಗಳೇ ಎಂದು ರಘುನಂದನರವರು ಪ್ರಶ್ನಿಸಿದ್ದಾರೆ.

ಮಾಂಸಾಹಾರವನ್ನು ಕನಿಷ್ಟಗೊಳಿಸಿ ನೋಡುವ, ಸಾತ್ವಿಕ ಆಹಾರವೇ ಉತ್ತಮ ಎಂದು ಪ್ರತಿಪಾದಿಸುವ ಶ್ರೇ‍ಷ್ಠತೆಯ ವ್ಯಸನ ನಿಲ್ಲಬೇಕೆಂದು ಹಲವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ದೇವರಿಗೆ ಮಾಂಸಾಹಾರದ ಎಡೆ: ಚಾರಿತ್ರಿಕ, ಜಾನಪದೀಯ ಅಧ್ಯಯನಗಳು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...