Homeಕರ್ನಾಟಕಮೇ 20ಕ್ಕೆ ಮುಷ್ಕರ: ಕಂಪನಿಗಳಿಗೆ ರೈತರ ಬೆಳೆ ದಾಸ್ತಾನು ಮಾಡಿ, ದರದ ಜೂಜಾಟಕ್ಕೆ ಪರವಾನಗಿ: ಬೀದಿಗಿಳಿಯಲು...

ಮೇ 20ಕ್ಕೆ ಮುಷ್ಕರ: ಕಂಪನಿಗಳಿಗೆ ರೈತರ ಬೆಳೆ ದಾಸ್ತಾನು ಮಾಡಿ, ದರದ ಜೂಜಾಟಕ್ಕೆ ಪರವಾನಗಿ: ಬೀದಿಗಿಳಿಯಲು ಸಂಯುಕ್ತ ಹೋರಾಟ ಕರೆ

- Advertisement -
- Advertisement -

ಬೆಂಗಳೂರು: ಇದೇ ಮೇ 20ರಂದು ಜೆಸಿಟಿಯು ಮತ್ತು ಎಸ್‌ ಕೆ ಎಂ‌ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಲಾಗಿದೆ. ಕಾರ್ಮಿಕರೊಂದಿಗೆ ಅಂದು ರೈತರು ಕೂಡ ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಹೋರಾಟಕ್ಕಿಳಿಯಲಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರವೂ ಬಿಜೆಪಿ ತಂದಿದ್ದ ನೀತಿಗಳನ್ನೇ ಮುಂದುವರೆಸುತ್ತಿರುವುದರಿಂದ ಮತ್ತು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಕೊಟ್ಟ ಮಾತುಗಳನ್ನೆಲ್ಲಾ ಮರೆತಿರುವುದರಿಂದ ರಾಜ್ಯ ಹಾಗೂ ಕೇಂದ್ರ ಎರಡರ ವಿರುದ್ಧವೂ ಪ್ರತಿಭಟನೆಯನ್ನು ದಾಖಲಿಸಬೇಕಿದೆ ಎಂದು ರಾಜ್ಯ ರೈತ ಸಂಘಟನೆಗಳ ಐಕ್ಯ ವೇದಿಕೆಯಾದ ಸಂಯುಕ್ತ ಹೋರಾಟ-ಕರ್ನಾಟಕವು ಹೇಳಿಕೆಯಲ್ಲಿ ಕರೆ ನೀಡಿದೆ.

ಅಂಬಾನಿ-ಅದಾನಿಯಂತಹ ಬಕಾಸುರ ಕಂಪನಿಗಳ ಕಣ್ಣಿ ಬಿದ್ದಿರುವುದು ಕಾರ್ಮಿಕರ ಶ್ರಮ ಮತ್ತು ಸಾರ್ವಜನಿಕ ಸಂಪತ್ತಿನ ಮೇಲೆ ಮಾತ್ರವಲ್ಲ ರೈತರ ಭೂಮಿ ಮತ್ತು ಬೆಳೆಯ ಮೇಲೆ ಸಹ. ನಮ್ಮ ಭೂಮಿಯನ್ನು ಅವರು ಕಬಳಿಸಬೇಕಿದೆ, ನಮ್ಮ ಬೆಳೆಯನ್ನು ಅವರು ನಿಯಂತ್ರಿಸಬೇಕಿದೆ. ಆದ್ದರಿಂದ ಭೂಮಿಯ ಖರೀದಿಯ ಮೇಲೆ, ಭೂಮಿಯ ಗುತ್ತಿಗೆ ಮೇಲೆ ಇದ್ದ ನಿರ್ಬಂಧಗಳನ್ನೆಲ್ಲಾ ತೆಗೆದು, ಯಾರು ಎಷ್ಟು ಬೇಕಾದರೂ ಖರೀದಿಸಬಹುದು, ಯಾರು ಯಾರಿಂದ ಬೇಕಾದರೂ ಭೂಮಿಯನ್ನು ಗುತ್ತಿಗೆಗೆ ಪಡೆದುಕೊಳ್ಳಬಹುದು ಎಂಬ ಕಾನೂನುಗಳನ್ನು ತರಲಾಗುತ್ತಿದೆ. ಇವುಗಳನ್ನೆಲ್ಲಾ ಪ್ರತಿಭಟಿಸಿ ನಾವು ಮೇ 20ರ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಎಲ್ಲ ರೈತ ವರ್ಗಕ್ಕೆ ಕರೆ ನೀಡುತ್ತೇವೆ ಎಂದು ಸಂಯುಕ್ತ ಹೋರಾಟ ಹೇಳಿದೆ.

ರೈತರ ಬೆಳೆಯ ಬೆಲೆ ನಿಗದಿ, ಬೆಲೆ ನಿಯಂತ್ರಣ ಹಾಗೂ ಬೆಂಬಲ ಬೆಲೆಯ ಜಾರಿಗಾಗಿ ಇದ್ದ ಎಪಿಎಂಸಿಗಳನ್ನು ದುರ್ಬಲಗೊಳಿಸಿ, ಮುಚ್ಚಿಹಾಕಿ ಕೃಷಿ ಮಾರುಕಟ್ಟೆಯನ್ನು ಸಂಪೂರ್ಣವಾಗಿ ಖಾಸಗೀ ಕಂಪನಿಗಳಿಗೆ ಒಪ್ಪಿಸುವ ಸಂಚು ರೂಪಗೊಂಡಿದೆ. ರೈತರ ಬೆಳೆಯನ್ನೆಲ್ಲಾ ದೊಡ್ಡ ಪ್ರಮಾಣದಲ್ಲಿ ದಾಸ್ತಾನು ಮಾಡಿ, ರೇಟಿನ ಜೂಜಾಟ ನಡೆಸಿ, ಮನಬಂದ ಬೆಲೆಗೆ ಮಾರಿ ರೈತರನ್ನೂ ಮತ್ತು ಸಾರ್ವಜನಿಕರನ್ನು ಇಬ್ಬರನ್ನೂ ದೋಚುವ ಪರವಾನಗಿಯನ್ನು ಖಾಸಗಿಯವರಿಗೆ ನೀಡಲಾಗುತ್ತಿದೆ. ರೈತರು ತಮ್ಮ ಬೆಳೆಗೆ ಬೆಲೆ ಖಾತ್ರಿ ಕಾಯ್ದೆ ತರಬೇಕೆಂದು ಒತ್ತಾಯಿಸುತ್ತಿದ್ದರೂ, ಐತಿಹಾಸಿಕ ದೆಹಲಿ ರೈತಾಂದೋಲನಕ್ಕೆ ಮಣಿದು, ಅದನ್ನು ಜಾರಿ ಮಾಡುವುದಾಗಿ ತಾತ್ವಿಕವಾಗಿ ಒಪ್ಪಿಕೊಂಡಿದ್ದರೂ, ಆ ನಿಟ್ಟಿನಲ್ಲಿ ಒಂದು ಸಣ್ಣ ಹೆಜ್ಜೆಯನ್ನೂ ಇಡದೆ, ರೈತರನ್ನು ಖಾಸಗೀ ಮಾರುಕಟ್ಟೆಯ ಜೂಜಾಟಕ್ಕೆ ತಳ್ಳುವ ಹುನ್ನಾರಗಳೇ ಚಾಲ್ತಿಯಲ್ಲಿವೆ. ಅದಕ್ಕಾಗಿಯೇ “ಕೃಷಿ ಉತ್ಪನ್ನಗಳ ಮಾರುಕಟ್ಟೆಗಾಗಿ ರಾಷ್ಟ್ರೀಯ ಚೌಕಟ್ಟು ನೀತಿ”ಯನ್ನು ಕೇಂದ್ರ ಸರ್ಕಾರವು ಸಿದ್ಧಪಡಿಸಿ ರಾಜ್ಯಗಳ ಮೂಲಕ ಜಾರಿಗೆ ತರುವ ಪ್ರಯತ್ನದಲ್ಲಿದೆ ಎಂದು ಅದು ಆರೋಪಿಸಿದೆ.

ಮೋದಿ ಸರ್ಕಾರವು ಇದುವರೆಗೆ ಕಾರ್ಪೊರೇಟ್‌ ಕಂಪನಿಗಳ 50 ಲಕ್ಕ ಕೋಟಿಗೂ ಹೆಚ್ಚಿನ ಸಾಲವನ್ನು ಮನ್ನಾ ಮಾಡಿ ಪೋಷಿಸಿದೆ. ಆದರೆ ಇಡೀ ದೇಶದ ರೈತರ ಸಾಲ ಮನ್ನಾ ಮಾಡಲು ಅಗತ್ಯವಿರುವ 5 ಲಕ್ಷ ಕೋಟಿ ಹಣ ತನ್ನ ಬಳಿ ಇಲ್ಲ ಎಂದು ನಾಟಕವಾಡುತ್ತಿದೆ. ವಾಸ್ತವದಲ್ಲಿ ರೈತರನ್ನು ಸಂಕಷ್ಟದಿಂದ ಪಾರು ಮಾಡುವ ಬದಲು, ಅವರನ್ನು ಮತ್ತಷ್ಟು ದುಸ್ಥಿತಿಗೆ ತಳ್ಳಿ, ಅವರು ಭೂಮಿಯನ್ನು ಬಂಡವಾಳಿಗರಿಗೆ ಮಾರಿಕೊಂಡು ಹಳ್ಳಿಗಳನ್ನು ತೊರೆಯುವ ಪರಿಸ್ಥಿತಿ ನಿರ್ಮಾಣ ಮಾಡುತ್ತಿದೆ. ಕಾರ್ಪೊರೇಟ್‌ ಪರವಾಗಿ ನಡೆಯುತ್ತಿರುವ ಈ ಹುನ್ನಾರುಗಳು ರೈತರು ಮತ್ತು ಕಾರ್ಮಿಕರನ್ನು ಮಾತ್ರವಲ್ಲ,ಇಡೀ ದೇಶದ ಜನರ ಮೇಲೆ ವಿಪರೀತಕರ ಪರಿಣಾಮಗಳನ್ನು ಬೀರಲಿವೆ. ಮುಖ್ಯವಾಗಿ ಸರ್ವ ಕ್ಷೇತ್ರಗಳ ಖಾಸಗೀಕರಣ ಮತ್ತು ಕೇಂದ್ರ ಸರ್ಕಾರ ನಡೆಸಿರುವ ಜಿ ಎಸ್‌ ಟಿ ಮತ್ತು ಸೆಸ್‌ ಲೂಟಿಯಿಂದಾಗಿ ಬೆಲೆಗಳು ಏರುತ್ತಾ ಹೋಗಲಿದೆ, ಬದುಕು ದುಬಾರಿಯಾಗುತ್ತಾ ಹೋಗಲಿದೆ. ಮತ್ತೊಂದೆಡೆ ರೈತರನ್ನು ಭೂಮಿಯಿಂದ ಬಿಡಿಸುವ, ಮತ್ತು ಆದಾಯವನ್ನು ಕುಗ್ಗಿಸುತ್ತವೆ. ಒಟ್ಟಾರೆ ಕಂಪನಿಗಳ ಹಿತ ಕಾಯಲು ರೈತರ, ಕಾರ್ಮಿಕರ, ಯುವ ತಲೆಮಾರಿನ ಹಾಗೂ ಎಲ್ಲಾ ಜನಸಾಮಾನ್ಯರ ಬದುಕನ್ನು ಸಂಕಷ್ಟದ ಕೂಪಕ್ಕೆ ತಳ್ಳಲು ಕೇಂದ್ರ ಸರ್ಕಾರ ಹೊರಟಿದೆ ಎಂದು ಸಂಯುಕ್ತ ಹೋರಾಟವು ಆರೋಪಿಸಿದೆ.

ಕೇಂದ್ರದ ಬಿಜೆಪಿ ಸರ್ಕಾರವಂತೂ ಜನಸಾಮಾನ್ಯರ ಪರವಾಗಿ ಇದ್ದಿದ್ದಿಲ್ಲ, ಅದು ಸದಾ ಕಂಪನಿಗಳ ಪರ, ಖಾಸಗೀಕರಣದ ಪರ ನಿಲುವನ್ನೇ ತಾಳಿದೆ. ಹಾಗಾಗಿ ಅದರ ಜೊತೆ ಗುದ್ದಾಡಬೇಕೇ ಹೊರತು ಯಾವುದೇ ನಿರೀಕ್ಷೆ ಇಟ್ಟುಕೊಳ್ಳುವ ಸ್ಥಿತಿ ಇಲ್ಲ. ಆದರೆ ಬಿಜೆಪಿ ತರುತ್ತಿರುವ ಈ ನೀತಿಗಳನ್ನೆಲ್ಲ ವಿರೋಧ ಪಕ್ಷವಾಗಿದ್ದಾಗ ವಿರೋಧಿಸಿದ್ದ ಮತ್ತು ತಾನು ಅಧಿಕಾರಕ್ಕೆ ಬಂದರೆ ಅವನ್ನೆಲ್ಲಾ ರದ್ದು ಮಾಡುವುದಾಗಿ ಪ್ರಣಾಳಿಕೆಯಲ್ಲಿ ಲಿಖಿತ ಭರವಸೆ ನೀಡಿದ್ದ ರಾಜ್ಯ ಕಾಂಗ್ರೆಸ್‌ ಪಕ್ಷ ಅದಿಕಾರಕ್ಕೆ ಬಂದ ನಂತರ ಚಾಚೂ ತಪ್ಪದೆ ಬಿಜೆಪಿಯ ನೀತಿಗಳನ್ನೇ ಪಾಲಿಸುತ್ತಿದೆ. ಬಗರ್‌ ಹುಕುಂ ರೈತರಿಗೆ ಹುಸಿ ಭರವಸೆಗಳನ್ನು ನೀಡುತ್ತಾ, ಇದ್ದಬದ್ದ ಭೂಮಿಯನ್ನೂ ರೈತರಿಂದ ಕಸಿದು ಕಂಪನಿಗಳಿಗೆ ನೀಡುವ ಕೆಲಸ ಮಾಡುತ್ತಿದೆ. ಇದೊಂದು ವಿಶ್ವಾಸ ದ್ರೋಹದ ಕೆಲಸವಾಗಿದೆ ಎಂದು ಅದು ತಿಳಿಸಿದೆ.

ಹೀಗಾಗಿಯೇ ಮೇ 20ರಂದು ದೇಶವ್ಯಾಪಿಯಾಗಿ ನಡೆಸುತ್ತಿರುವ ಮುಷ್ಕರದಲ್ಲಿ ನಾಡಿನ ರೈತರೆಲ್ಲಾ ಭಾಗವಹಿಸಲು ಕರೆ ನೀಡುತ್ತೇವೆ. ಈ ಮುಷ್ಕರವನ್ನು ನಾವು ದೊಡ್ಡ ಮಟ್ಟದಲ್ಲಿ ಯಶಸ್ವಿಗೊಳಿಸಬೇಕಿದೆ. ನಮ್ಮ ನಮ್ಮ ಜಿಲ್ಲೆಯ ಎಲ್ಲಾ ರೈತರು ಆಯ್ದ ಆಯಕಟ್ಟಿನ ಸ್ಥಳಗಳಲ್ಲಿ ಬೃಹತ್‌ ಪ್ರಮಾಣದ ಪ್ರತಿಭಟನೆಗಳನ್ನು ಸಂಘಟಿಸಬೇಕಿದೆ. ಸರ್ಕಾರ ನಮ್ಮ ಹಕ್ಕೊತ್ತಾಯಗಳಿಗೆ ಸ್ಪಂದಿಸದೇ ಹೋದರೆ ರಸ್ತೆಗಳನ್ನು ಬಂದ್‌ ಮಾಡಿ, ಲಕ್ಷಾಂತರ ಸಂಖ್ಯೆಯಲ್ಲಿ ಜೈಲ್‌ ಭರೋ ನಡೆಸಿ ನಮ್ಮ ಪ್ರತಿರೋಧವನ್ನು ದಾಖಲಿಸಬೇಕಿದೆ. ಮೇ 20ರ ಹೋರಾಟ ರೈತ, ಕಾರ್ಮಿಕರು ಕೂಡಿ ಸರ್ಕಾರಗಳಿಗೆ ಕೊಡುತ್ತಿರುವ ಮೊದಲ ಎಚ್ಚರಿಕೆಯಾಗಿದೆ. ಸರ್ಕಾರಗಳು ಸ್ಪಂದಿಸದೇ ಹೋದಲ್ಲಿ ದೇಶದ ಆಗುಹೋಗುಗಗಳನ್ನೇ ಸ್ಥಬ್ದಗೊಳಿಸಬಲ್ಲ ಶಕ್ತಿ ನಮಗಿದೆ ಎಂಬ ಸಂದೇಶವನ್ನೂ ನಾವು ಕಳುಹಿಸಬೇಕಿದೆ ಎಂದು ಅದು ಎಚ್ಚರಿಸಿದೆ.

ರಾಜ್ಯ ಸರ್ಕಾರವು ಕೊಟ್ಟ ಮಾತಿನಂತೆ ಬಿಜೆಪಿ ಜಾರಿಗೆ ತಂದಿದ್ದ “ಭೂ ತಿದ್ದುಪಡಿ ಕಾಯ್ದೆ”, “ಎಪಿಎಂಸಿ ಕಾಯ್ದೆ”, “ಜಾನುವಾರು ಕಾಯ್ದೆ” ಮುಂತಾದವನ್ನು ಕೊಟ್ಟ ಮಾತಿನಂತೆ ಈ ಕೂಡಲೇ ಹಿಂಪಡೆಯಬೇಕು. ರೈತರಿಗೆ ಬೆಲೆ ಖಾತ್ರಿ ಕಾಯ್ದೆ, ಬಗರ್‌ ಹುಕುಂ ರೈತರಿಗೆ ಹಕ್ಕುಪತ್ರ, ದುಡಿಯುವ ಜನರ ಸಾಲಮನ್ನಾ ಮುಂತಾದ ಹಕ್ಕೊತ್ತಾಯಗಳ ಕುರಿತು ಚರ್ಚಿಸಲು ರೈತ ಮತ್ತು ಕಾರ್ಮಿಕ ಸಂಘಟನೆಗಳ ಜೊತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೂಡಲೇ ಸಭೆ ಕರೆಯಬೇಕು. ಇವು ನಮ್ಮ ಹಕ್ಕೊತ್ತಾಯಗಳು ಎಂದು ಸಂಯುಕ್ತ ಹೋರಾಟವು ಹೇಳಿಕೆಯಲ್ಲಿ ತಿಳಿಸಿದೆ.

ಮೇ 20ಕ್ಕೆ ದೇಶಾದ್ಯಂತ ಮುಷ್ಕರ: ಕೇಂದ್ರವು ಜಾರಿಗೆ ತರಲು ಹೊರಟಿರುವ 4 ಕಾರ್ಮಿಕ ಕಾಯ್ದೆಗಳನ್ನು ವಿರೋಧಿಸುತ್ತಿರುವುದೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ನಾಸಿಕ್‌ನ...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...