ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ 2025ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ತಡೆಹಿಡಿಯಲು ಬಲವಾದ ಪ್ರಕರಣವನ್ನು ರೂಪಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಮಂಗಳವಾರ ಕೋರ್ಟ್ ವಿಚಾರಣೆ ನಡೆಸಿದೆ. ವಕ್ಫ್ ಕಾಯ್ದೆಗೆ ತಡೆ
“ಪ್ರತಿಯೊಂದು ಕಾನೂನಿನ ಪರವಾಗಿ ಸಾಂವಿಧಾನಿಕ ಸಿಂಧುತ್ವದ ಊಹೆ ಇರುತ್ತದೆ. ಮಧ್ಯಂತರ ಪರಿಹಾರ ಬೇಕು ಎಂದರೆ, ನೀವು ಬಲವಾದ ಮತ್ತು ಎದ್ದುಕಾಣುವಂತೆ ಪ್ರಕರಣವನ್ನು ರೂಪಿಸಬೇಕು. ಇಲ್ಲದಿದ್ದರೆ, ಸಾಂವಿಧಾನಿಕ ಸಿಂಧುತ್ವದ ಊಹೆ ಇರುತ್ತದೆ.” ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ.
ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಮೂರು ಗಂಟೆಗಳಿಗೂ ಹೆಚ್ಚು ಕಾಲ ವಾದಗಳನ್ನು ಆಲಿಸಿದ ನಂತರ ಬುಧವಾರದವರೆಗೆ ವಿಷಯವನ್ನು ಮುಂದೂಡಿದೆ. ಅದಾಗ್ಯೂ, ಈ ವೇಳೆ ಯಾವುದೇ ಮಧ್ಯಂತರ ಆದೇಶವನ್ನು ಅಂಗೀಕರಿಸಲಾಗಿಲ್ಲ.
ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ಕೇಂದ್ರದ ಬಿಜೆಪಿ ತಂದಿರುವ ಈ ಕಾಯ್ದೆಯು ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಮತ್ತು ವಕ್ಫ್ ಆಸ್ತಿ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂದು ಅರ್ಜಿಗಳು ಹೇಳುತ್ತವೆ. ವಕ್ಫ್ ಎನ್ನುವುದು ಧಾರ್ಮಿಕ, ಶೈಕ್ಷಣಿಕ ಅಥವಾ ದತ್ತಿ ಉದ್ದೇಶಕ್ಕಾಗಿ ಮೀಸಲಾಗಿರುವ ಇಸ್ಲಾಮಿಕ್ ಕಾನೂನಿನಡಿಯಲ್ಲಿನ ದತ್ತಿಯಾಗಿದೆ.
2024 ರ ವಕ್ಫ್ ತಿದ್ದುಪಡಿ ಮಸೂದೆಯು 1995 ರ ವಕ್ಫ್ ಕಾಯ್ದೆಯ 44 ವಿಭಾಗಗಳಿಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿತು. ಇದರಲ್ಲಿ ಮುಸ್ಲಿಮೇತರರಿಗೆ ವಕ್ಫ್ ಮಂಡಳಿಗಳಲ್ಲಿ ಅವಕಾಶ ನೀಡುವುದು, ಆಸ್ತಿ ದೇಣಿಗೆಗಳನ್ನು ನಿರ್ಬಂಧಿಸುವುದು ಮತ್ತು ವಕ್ಫ್ ನ್ಯಾಯಮಂಡಳಿಗಳ ಕಾರ್ಯನಿರ್ವಹನೆಯನ್ನು ಬದಲಾಯಿಸುವುದು ಸೇರಿವೆ.
ವಿವಾದಿತ ಮಸೂದೆಯನ್ನು ಏಪ್ರಿಲ್ 4 ರಂದು ಸಂಸತ್ತು ಅಂಗೀಕರಿಸಿತು. ಏಪ್ರಿಲ್ 5 ರಂದು ರಾಷ್ಟ್ರಪತಿಗಳ ಒಪ್ಪಿಗೆ ಪಡೆದ ಅದು ಏಪ್ರಿಲ್ 8 ರಂದು ಜಾರಿಗೆ ಬಂದಿತು.
ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ ಸೇರಿದಂತೆ ಹಲವಾರು ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ಈ ಮಸೂದೆಯ ಸಾಂವಿಧಾನಿಕ ಸಿಂಧುತ್ವದ ವಿಚಾರದಲ್ಲಿ ಪ್ರಶ್ನಿಸಿದ್ದಾರೆ.
ಮಂಗಳವಾರ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮಧ್ಯಂತರ ಪರಿಹಾರವನ್ನು ಪರಿಗಣಿಸುವಾಗ ವಿಚಾರಣೆಯನ್ನು ಮೂರು ಪ್ರಮುಖ ಪ್ರಶ್ನೆಗಳಿಗೆ ಸೀಮಿತಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದ್ದಾರೆ. ಆದಾಗ್ಯೂ, ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಈ ಕ್ರಮವನ್ನು ವಿರೋಧಿಸಿದ್ದು, ತಿದ್ದುಪಡಿಗಳನ್ನು ವಿಶಾಲ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.
ವಕ್ಫ್ ಆಸ್ತಿಗಳನ್ನು ನೋಂದಾಯಿಸಲು ಕಠಿಣ ಮತ್ತು ಅನ್ಯಾಯದ ಷರತ್ತುಗಳನ್ನು ವಿಧಿಸುವ ಮೂಲಕ ಸರ್ಕಾರ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ ಎಂದು ಕಾಯ್ದೆಯನ್ನು ಪ್ರಶ್ನಿಸುವ ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ. ಇತರ ಧಾರ್ಮಿಕ ಗುಂಪುಗಳ ದತ್ತಿಗಳಿಗೆ ವ್ಯತಿರಿಕ್ತವಾಗಿ ಈ ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಕ್ಫ್ ಕಾಯ್ದೆಗೆ ತಡೆ
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ
ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ