Homeಮುಖಪುಟವಕ್ಫ್ ಕಾಯ್ದೆಗೆ ತಡೆ ನೀಡಲು ಬಲವಾದ ಪ್ರಕರಣ ಅಗತ್ಯ: ಸುಪ್ರೀಂ ಕೋರ್ಟ್

ವಕ್ಫ್ ಕಾಯ್ದೆಗೆ ತಡೆ ನೀಡಲು ಬಲವಾದ ಪ್ರಕರಣ ಅಗತ್ಯ: ಸುಪ್ರೀಂ ಕೋರ್ಟ್

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಾದಾತ್ಮಕ 2025ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ತಡೆಹಿಡಿಯಲು ಬಲವಾದ ಪ್ರಕರಣವನ್ನು ರೂಪಿಸಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ ಎಂದು ಲೈವ್ ಲಾ ವರದಿ ಮಾಡಿದೆ. ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಗುಂಪನ್ನು ಮಂಗಳವಾರ ಕೋರ್ಟ್ ವಿಚಾರಣೆ ನಡೆಸಿದೆ. ವಕ್ಫ್ ಕಾಯ್ದೆಗೆ ತಡೆ

“ಪ್ರತಿಯೊಂದು ಕಾನೂನಿನ ಪರವಾಗಿ ಸಾಂವಿಧಾನಿಕ ಸಿಂಧುತ್ವದ ಊಹೆ ಇರುತ್ತದೆ. ಮಧ್ಯಂತರ ಪರಿಹಾರ ಬೇಕು ಎಂದರೆ, ನೀವು ಬಲವಾದ ಮತ್ತು ಎದ್ದುಕಾಣುವಂತೆ ಪ್ರಕರಣವನ್ನು ರೂಪಿಸಬೇಕು. ಇಲ್ಲದಿದ್ದರೆ, ಸಾಂವಿಧಾನಿಕ ಸಿಂಧುತ್ವದ ಊಹೆ ಇರುತ್ತದೆ.” ಎಂದು ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಹೇಳಿದ್ದಾರೆ.

ಗವಾಯಿ ಮತ್ತು ನ್ಯಾಯಮೂರ್ತಿ ಆಗಸ್ಟೀನ್ ಜಾರ್ಜ್ ಮಸಿಹ್ ಅವರ ಪೀಠವು ಮೂರು ಗಂಟೆಗಳಿಗೂ ಹೆಚ್ಚು ಕಾಲ ವಾದಗಳನ್ನು ಆಲಿಸಿದ ನಂತರ ಬುಧವಾರದವರೆಗೆ ವಿಷಯವನ್ನು ಮುಂದೂಡಿದೆ. ಅದಾಗ್ಯೂ, ಈ ವೇಳೆ ಯಾವುದೇ ಮಧ್ಯಂತರ ಆದೇಶವನ್ನು ಅಂಗೀಕರಿಸಲಾಗಿಲ್ಲ.

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಹಲವಾರು ಅರ್ಜಿಗಳನ್ನು ಸುಪ್ರೀಂಕೋರ್ಟ್ ವಿಚಾರಣೆ ನಡೆಸುತ್ತಿದೆ. ಕೇಂದ್ರದ ಬಿಜೆಪಿ ತಂದಿರುವ ಈ ಕಾಯ್ದೆಯು ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುತ್ತದೆ ಮತ್ತು ವಕ್ಫ್ ಆಸ್ತಿ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತದೆ ಎಂದು ಅರ್ಜಿಗಳು ಹೇಳುತ್ತವೆ. ವಕ್ಫ್ ಎನ್ನುವುದು ಧಾರ್ಮಿಕ, ಶೈಕ್ಷಣಿಕ ಅಥವಾ ದತ್ತಿ ಉದ್ದೇಶಕ್ಕಾಗಿ ಮೀಸಲಾಗಿರುವ ಇಸ್ಲಾಮಿಕ್ ಕಾನೂನಿನಡಿಯಲ್ಲಿನ ದತ್ತಿಯಾಗಿದೆ.

2024 ರ ವಕ್ಫ್ ತಿದ್ದುಪಡಿ ಮಸೂದೆಯು 1995 ರ ವಕ್ಫ್ ಕಾಯ್ದೆಯ 44 ವಿಭಾಗಗಳಿಗೆ ತಿದ್ದುಪಡಿಗಳನ್ನು ಪ್ರಸ್ತಾಪಿಸಿತು. ಇದರಲ್ಲಿ ಮುಸ್ಲಿಮೇತರರಿಗೆ ವಕ್ಫ್ ಮಂಡಳಿಗಳಲ್ಲಿ ಅವಕಾಶ ನೀಡುವುದು, ಆಸ್ತಿ ದೇಣಿಗೆಗಳನ್ನು ನಿರ್ಬಂಧಿಸುವುದು ಮತ್ತು ವಕ್ಫ್ ನ್ಯಾಯಮಂಡಳಿಗಳ ಕಾರ್ಯನಿರ್ವಹನೆಯನ್ನು ಬದಲಾಯಿಸುವುದು ಸೇರಿವೆ.

ವಿವಾದಿತ ಮಸೂದೆಯನ್ನು ಏಪ್ರಿಲ್ 4 ರಂದು ಸಂಸತ್ತು ಅಂಗೀಕರಿಸಿತು. ಏಪ್ರಿಲ್ 5 ರಂದು ರಾಷ್ಟ್ರಪತಿಗಳ ಒಪ್ಪಿಗೆ ಪಡೆದ ಅದು ಏಪ್ರಿಲ್ 8 ರಂದು ಜಾರಿಗೆ ಬಂದಿತು.

ಕಾಂಗ್ರೆಸ್ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೇಹಾದುಲ್ ಮುಸ್ಲಿಮೀನ್ ಸೇರಿದಂತೆ ಹಲವಾರು ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ಈ ಮಸೂದೆಯ ಸಾಂವಿಧಾನಿಕ ಸಿಂಧುತ್ವದ ವಿಚಾರದಲ್ಲಿ ಪ್ರಶ್ನಿಸಿದ್ದಾರೆ.

ಮಂಗಳವಾರ, ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಮಧ್ಯಂತರ ಪರಿಹಾರವನ್ನು ಪರಿಗಣಿಸುವಾಗ ವಿಚಾರಣೆಯನ್ನು ಮೂರು ಪ್ರಮುಖ ಪ್ರಶ್ನೆಗಳಿಗೆ ಸೀಮಿತಗೊಳಿಸಬೇಕೆಂದು ಸುಪ್ರೀಂ ಕೋರ್ಟ್ ಅನ್ನು ಒತ್ತಾಯಿಸಿದ್ದಾರೆ. ಆದಾಗ್ಯೂ, ಅರ್ಜಿದಾರರ ಪರವಾಗಿ ಹಾಜರಾದ ಹಿರಿಯ ವಕೀಲರಾದ ಕಪಿಲ್ ಸಿಬಲ್ ಮತ್ತು ಅಭಿಷೇಕ್ ಮನು ಸಿಂಘ್ವಿ ಈ ಕ್ರಮವನ್ನು ವಿರೋಧಿಸಿದ್ದು, ತಿದ್ದುಪಡಿಗಳನ್ನು ವಿಶಾಲ ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ವಕ್ಫ್ ಆಸ್ತಿಗಳನ್ನು ನೋಂದಾಯಿಸಲು ಕಠಿಣ ಮತ್ತು ಅನ್ಯಾಯದ ಷರತ್ತುಗಳನ್ನು ವಿಧಿಸುವ ಮೂಲಕ ಸರ್ಕಾರ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡಿದೆ ಎಂದು ಕಾಯ್ದೆಯನ್ನು ಪ್ರಶ್ನಿಸುವ ಅರ್ಜಿದಾರರು ಸುಪ್ರೀಂಕೋರ್ಟ್‌ನಲ್ಲಿ ವಾದ ಮಂಡಿಸಿದ್ದಾರೆ. ಇತರ ಧಾರ್ಮಿಕ ಗುಂಪುಗಳ ದತ್ತಿಗಳಿಗೆ ವ್ಯತಿರಿಕ್ತವಾಗಿ ಈ ತಿದ್ದುಪಡಿಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ವಕ್ಫ್ ಕಾಯ್ದೆಗೆ ತಡೆ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ

ಮಿಜೋರಾಂ ಅನ್ನು ಸಂಪೂರ್ಣ ಸಾಕ್ಷರ ರಾಜ್ಯ ಎಂದು ಘೋಷಿಸಿದ ಸಿಎಂ ಲಾಲ್ದುಹೋಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...