Homeಅಂತರಾಷ್ಟ್ರೀಯಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ: ಬೃಹತ್ ಕಟ್ಟಡ ಕುಸಿತ, 43 ಕಾರ್ಮಿಕರು ಸಿಲುಕಿರುವ ಶಂಕೆ

ಮ್ಯಾನ್ಮಾರ್‌, ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ: ಬೃಹತ್ ಕಟ್ಟಡ ಕುಸಿತ, 43 ಕಾರ್ಮಿಕರು ಸಿಲುಕಿರುವ ಶಂಕೆ

- Advertisement -
- Advertisement -

ಬ್ಯಾಂಕಾಕ್‌ನಲ್ಲಿ ಶುಕ್ರವಾರ (ಮಾ.28) ಸಂಭವಿಸಿದ ಪ್ರಬಲ ಭೂಕಂಪದಿಂದ ಸರ್ಕಾರಿ ಕಚೇರಿಗಳಿಗಾಗಿ ನಿರ್ಮಾಣ ಹಂತದಲ್ಲಿದ್ದ 30 ಅಂತಸ್ತಿನ ಗಗನಚುಂಬಿ ಕಟ್ಟಡ ಕುಸಿದು 43 ಕಾರ್ಮಿಕರು ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ದಿ ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮ್ಯಾನ್ಮಾರ್‌ನಲ್ಲಿ ಕೇಂದ್ರಿತವಾಗಿರುವ 7.7 ತೀವ್ರತೆಯ ಪ್ರಬಲ ಭೂಕಂಪದ ನಂತರ ಥಾಯ್ ರಾಜಧಾನಿಯ ಉತ್ತರದಲ್ಲಿದ್ದ ಕಟ್ಟಡ ಕೆಲವೇ ಸೆಕೆಂಡುಗಳಲ್ಲಿ ಧರಾಶಾಹಿಯಾಗಿದೆ.

ಶುಕ್ರವಾರ ಮಧ್ಯಾಹ್ನ ಮ್ಯಾನ್ಮಾರ್‌ನ ಸಾಗೈಂಗ್ ನಗರದ ವಾಯುವ್ಯ ಪ್ರದೇಶದಲ್ಲಿ ಕೇಂದ್ರಿತವಾಗಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ. ಇದಾದ ಕೆಲವೇ ನಿಮಿಷಗಳಲ್ಲಿ ಅದೇ ಪ್ರದೇಶದಲ್ಲಿ 6.4 ತೀವ್ರತೆಯ ಮತ್ತೊಂದು ಕಂಪನ ಸಂಭವಿಸಿದೆ ಎಂದು ಹೇಳಿದೆ.

ಥಾಯ್ ಅಧಿಕಾರಿಗಳು ಬ್ಯಾಂಕಾಕ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ತಿಳಿಸಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಕಂಪನ

ಎಎಫ್‌ಪಿ ಪತ್ರಕರ್ತರ ಪ್ರಕಾರ, ಭೂಕಂಪದ ನಂತರ ಮ್ಯಾನ್ಮಾರ್ ರಾಜಧಾನಿ ನೇಪಿಡಾವ್‌ನಲ್ಲಿ ಕಟ್ಟಡಗಳ ಛಾವಣಿ ತುಂಡುಗಳು ರಸ್ತೆಯಲ್ಲಿ ಬಿದ್ದಿರುವ ದೃಶ್ಯ ಕಂಡು ಬಂದಿದೆ. ನೇಪಿಡಾವ್‌ 20 ಪಥಗಳ ಹೆದ್ದಾರಿಗಳನ್ನು ಹೊಂದಿರುವ ವಿಸ್ತಾರವಾದ ಯೋಜಿತವಾಗಿ ನಿರ್ಮಿಸಿದ ನಗರವಾಗಿದೆ.

ಭೂಕಂಪ ಸಂಭವಿಸಿ ಕಟ್ಟಡಗಳು ನಡುಗಲು ಪ್ರಾರಂಭಿಸಿದಾಗ ಪತ್ರಕರ್ತರ ತಂಡ ನೇಪಿಡಾವ್‌ನಲ್ಲಿರುವ ರಾಷ್ಟ್ರೀಯ ವಸ್ತುಸಂಗ್ರಹಾಲಯದಲ್ಲಿತ್ತು.

ಸಮವಸ್ತ್ರ ಧರಿಸಿದ ಸಿಬ್ಬಂದಿ ಹೊರಗೆ ಓಡಿ ಹೋಗುತ್ತಿದ್ದಂತೆ ಸೀಲಿಂಗ್‌ನಿಂದ ಛಾವಣಿ ತುಂಡುಗಳು ಬಿದ್ದವು ಮತ್ತು ಗೋಡೆಗಳು ಬಿರುಕು ಬಿಟ್ಟವು. ಈ ವೇಳೆ ಕೆಲವರು ನಡುಗುತ್ತಾ ಕಣ್ಣೀರು ಸುರಿಸುತ್ತಿದ್ದರು. ಇನ್ನು ಕೆಲವರು ತಮ್ಮ ಸಂಬಂಧಿಕರನ್ನು ಸಂಪರ್ಕಿಸಲು ಮೊಬೈಲ್ ಫೋನ್‌ಗಳನ್ನು ಎತ್ತಿಕೊಂಡರು ಎಂದು ಪತ್ರಕರ್ತರ ತಂಡ ಭೂಕಂಪದ ಸಂದರ್ಭವನ್ನು ವಿವರಿಸಿದೆ.

ಮ್ಯಾನ್ಮಾರ್‌ನಲ್ಲಿ ಸುಮಾರು ಅರ್ಧ ನಿಮಿಷಗಳ ಕಾಲ ಭೂಮಿ ಕಂಪಿಸಿದೆ. ಭೂಕಂಪದ ನಂತರ ಸಾವು ನೋವುಗಳ ಬಗ್ಗೆ ತಕ್ಷಣಕ್ಕೆ ಖಚಿತ ವರದಿಗಳು ಬಂದಿಲ್ಲ. ಆದರೆ, ಉತ್ತರ ಥೈಲ್ಯಾಂಡ್‌ನ ನಗರಗಳಲ್ಲಿ ಮತ್ತು ರಾಜಧಾನಿ ಬ್ಯಾಂಕಾಕ್‌ನಲ್ಲಿ ಭೂಕಂಪದಿಂದ ಜನರು ಭಯಭೀತರಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.

ಕಟ್ಟಡಗಳಿಗೆ ಹಾನಿ

ಭೂಕಂಪದಿಂದಾಗಿ ಬ್ಯಾಂಕಾಕ್‌ನಲ್ಲಿ ಕಟ್ಟಡಗಳಿಗೆ ಹಾನಿಯಾಗಿದೆ. ಅಲ್ಲಿನ ನಗರಗಳಲ್ಲಿ ಮೆಟ್ರೋ ಮತ್ತು ಲಘು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಚೀನಾದ ನೈಋತ್ಯ ಯುನ್ನಾನ್ ಪ್ರಾಂತ್ಯದಲ್ಲೂ ಶುಕ್ರವಾರ ಕಂಪನದ ಅನುಭವವಾಗಿದೆ ಎಂದು ಬೀಜಿಂಗ್‌ನ ಭೂಕಂಪನ ಸಂಸ್ಥೆ ತಿಳಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 7.9 ರಷ್ಟಿತ್ತು ಎಂದು ಅದು ಹೇಳಿದೆ.

‘ಯುದ್ಧ ನಿಲ್ಲಿಸಿ’: ಹಮಾಸ್ ವಿರುದ್ಧವೇ ಪ್ರತಿಭಟನೆಗಿಳಿದ ಗಾಝಾ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...