Homeಸಿನಿಮಾಕ್ರೀಡೆಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

ಡಿಫೆಂಡಿಂಗ್‌ನಲ್ಲಿ ಬಲ ಪ್ರದರ್ಶನ: ಯುಪಿ ಎದುರು ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಬೆಂಗಳೂರು ಬುಲ್ಸ್

- Advertisement -
- Advertisement -

ಕಾರ್ನರ್ ಡಿಫೆಂಡಿಂಗ್ ಆಟಗಾರರಾದ ಅಮನ್ ಮತ್ತು ಸೌರಭ್ ನಂದಲ್‌ ರವರ ಅದ್ಭುತ ಡಿಫೆಂಡಿಂಗ್ ಬಲದಿಂದ ಬೆಂಗಳೂರು ಬುಲ್ಸ್ ತಂಡವು ಬಲಿಷ್ಠ ಯುಪಿ ಯೋಧ ತಂಡವನ್ನು ಮಣಸಿ (38-35) ಪ್ಲೇ ಆಫ್‌ನಲ್ಲಿ ಸ್ಥಾನ ಖಚಿತಪಡಿಸಿಕೊಂಡಿತು.

ಡಿಫೆನ್ಸ್‌ನಲ್ಲಿ ಹೆಚ್ಚು ವೈಫಲ್ಯ ಕಾಣುತ್ತಿದ್ದ ಬೆಂಗಳೂರು ಬುಲ್ಸ್ ತಂಡದಲ್ಲಿ ಸುಧಾರಣೆ ಕಂಡಿದೆ. ಅಮನ್ ಏಳು ಡಿಫೆಂಡಿಂಗ್ ಪ್ರಯತ್ನಗಳಲ್ಲಿ 5 ಬಾರಿ ಯಶಸ್ಸು ಕಂಡರು. ಇನ್ನೊಂದೆಡೆ ಸೌರಭ್ ನಂದಲ್ ಮೂರು ಬಾರಿ ಪರ್ದೀಪ್ ನರ್ವಾಲ್‌ರವರನ್ನು ಕಟ್ಟಿ ಹಾಕುವಲ್ಲಿ ಸಫಲವಾದರು. ಪರಿಣಾಮ ಬುಲ್ಸ್ ತಂಡವನ್ನು ಯುಪಿ ಯೋಧ ತಂಡವನ್ನು ಎರಡು ಬಾರಿ ಆಲೌಟ್ ಮಾಡಲು ಸಾಧ್ಯವಾಯಿತು.

ಆದರೆ ರೈಡಿಂಗ್ ವಿಭಾಗದಲ್ಲಿ ಬುಲ್ಸ್ ತಂಡಕ್ಕೆ ಹೆಚ್ಚಿನ ಅಂಕಗಳು ಸಿಗಲಿಲ್ಲ. ಭರತ್ 13 ರೈಡ್‌ಗಳಿಂದ 8 ಪಾಯಿಂಟ್ ಪಡೆದರೆ, ವಿಕಾಸ್ ಖಂಡೋಲ 21 ರೈಡ್‌ಗಳಿಂದ ಕೇವಲ 6 ಪಾಯಿಂಟ್ ಪಡೆದರು. ನೀರಜ್ ನರ್ವಾಲ್ 9 ರೈಡ್‌ಗಳಿಂದ 4 ಅಂಕ ಪಡೆದರು. ಆದರೂ ಡಿಫೆಂಡರ್‌ಗಳು ತಮ್ಮ ನೈಜ ಆಟ ಪ್ರದರ್ಶಿಸಿದ ಕಾರಣ ಬೆಂಗಳೂರು ಬುಲ್ಸ್ ತಂಡ ಜಯಭೇರಿ ಬಾರಿಸಿತು.

ಒಂದು ಹಂತದಲ್ಲಿ ಬುಲ್ಸ್ ಮುಂದಿದ್ದರು ಮೂರು ಬಾರಿ ಸತತವಾಗಿ ಸೂಪರ್ ಟ್ಯಾಕಲ್ ಆಗಿ ಪಾಯಿಂಟ್ಸ್ ಚೆಲ್ಲಿತು. ಇನ್ನು 12 ಅಂಕಗಳಿಂದ ಮುಂದಿದ್ದಾಗಲೂ ಆಲೌಟ್ ಆಗಿ ಕೇವಲ 3 ಅಂಕದಿಂದ ಗೆಲ್ಲುವಂತಾಯಿತು.

ಜೈಪುರ್ ಪಿಂಕ್ ಪ್ಯಾಂಥರ್ಸ್ ಮತ್ತು ಪುಣೇರಿ ಪಲ್ಟಾನ್ ತಂಡಗಳು ತಲಾ 20 ಪಂದ್ಯಗಳಿಂದ ತಲಾ 74 ಅಂಕ ಗಳಿಸಿ ಮೊದಲ ಮತ್ತು ಎರಡನೇ ಸ್ಥಾನದಲ್ಲಿದ್ದು ಈಗಾಗಲೆ ಪ್ಲೇ ಆಫ್‌ನಲ್ಲಿ ತಮ್ಮ ಸ್ಥಾನ ಖಚಿತಪಡಿಸಿಕೊಂಡಿವೆ. ಬೆಂಗಳೂರು ತಂಡ 20 ಪಂದ್ಯಗಳಿಂದ 68 ಅಂಕ ಗಳಿಸಿದರೆ, ಅಷ್ಟೇ ಪಂದ್ಯಗಳಿಂದ ಯುಪಿ ಯೋಧ ತಂಡ 66 ಅಂಕ ಗಳಿಸಿ ಅದು ಸಹ ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿದೆ.

ಉಳಿದ ಎರಡು ಸ್ಥಾನಗಳಿಗಾಗಿ ತಮಿಳು ತಲೈವಾಸ್ (61 ಅಂಕ), ದಬಾಂಗ್ ಡೆಲ್ಲಿ (55 ಅಂಕ), ಯು ಮುಂಬಾ (51 ಅಂಕ), ಹರ್ಯಾಣ ಸ್ಟೀಲರ್ಸ್ (51 ಅಂಕ), ಗುಜರಾತ್ ಜೈಂಟ್ಸ್ (51 ಅಂಕ), ಬೆಂಗಾಲ್ ವಾರಿಯರ್ಸ್ (50 ಅಂಕ) ಮತ್ತು ಪಟ್ನಾ ಪೈರೇಟ್ಸ್ (49 ಅಂಕ) ಸೇರಿ ಒಟ್ಟು 7 ತಂಡಗಳು ಸೆಣಸಾಟ ನಡೆಸುತ್ತಿವೆ. ಪಟ್ನಾ ತಂಡಕ್ಕೆ 3 ಪಂದ್ಯಗಳಿ ಬಾಕಿ ಇದ್ದರೆ, ಉಳಿದ ತಂಡಗಳಿಗೆ ತಲಾ 2 ಪಂದ್ಯಗಳಿದ್ದು ಎಲ್ಲವನ್ನು ದೊಡ್ಡ ಅಂತರದಲ್ಲಿ ಗೆದ್ದ 2 ತಂಡಕ್ಕೆ ಮಾತ್ರ ಪ್ಲೇ ಆಫ್ ಅವಕಾಶವಿದೆ. ಆದರೆ 18 ಪಂದ್ಯ ಸೋತಿರುವ ತೆಲುಗು ಟೈಟನ್ಸ್ ಮಾತ್ರ ಟೂರ್ನಿಯಿಂದ ಹೊರ ಬಿದ್ದಿದೆ.

ಇಂದು ಪುಣೇರಿ ಪಲ್ಟಾನ್ ಮತ್ತು ಪಟ್ನಾ ನಡುವಿನ ಮೊದಲ ಪಂದ್ಯವಿದೆ. ಇಲ್ಲಿ ಪಟ್ನಾ ಗೆದ್ದಲ್ಲಿ ಅದರ ಪ್ಲೇ ಆಫ್ ಆಸೆ ಜೀವಂತವಾಗಿ ಉಳಿಯುತ್ತದೆ. ಪುಣೇರಿ ಪಲ್ಟಾನ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ. ಅದೇ ಎರಡನೇ ಪಂದ್ಯ ಜೈಪುರ್ ಮತ್ತು ಹರ್ಯಾಣ ನಡುವೆ ನಡೆಯಲಿದೆ. ಹರ್ಯಾಣ ಪ್ಲೇ ಆಫ್ ಆಸೆ ಜೀವಂತವಾಗಿಟ್ಟುಕೊಳ್ಳಬೇಕಾದರೆ ಇಂದು ಗೆಲ್ಲಲೇಬೇಕು. ಒಂದು ವೇಳೆ ಜೈಪುರ್ ಗೆದ್ದಲ್ಲಿ ಅದು ಅಂಕ ಪಟ್ಟಿಯಲ್ಲಿ ಮೊದಲ ಎರಡು ಸ್ಥಾನದಲ್ಲಿ ಉಳಿಯುವುದರಿಂದ ನೇರವಾಗಿ ಸೆಮಿಫೈನಲ್ ತಲುಪುತ್ತದೆ.

ಬೆಂಗಳೂರು ಬುಲ್ಸ್ ಬುಧವಾರ ಪಟ್ನಾ ಎದುರು ಆಡಿದರೆ ಶನಿವಾರ ತನ್ನ ಕೊನೆಯ ಪಂದ್ಯವನ್ನು ಯು ಮುಂಬಾ ಎದುರು ಆಡಲಿದೆ. ಅದು ಎರಡು ಪಂದ್ಯಗಳನ್ನು ಗೆಲ್ಲಬೇಕು ಮತ್ತು ಪುಣೆ ಅಥವಾ ಜೈಪುರ್ ಉಳಿದ ಎರಡು ಪಂದ್ಯಗಳನ್ನು ಸೋತರೆ ಮಾತ್ರ ಬೆಂಗಳೂರು ಅಗ್ರ ಮೊದಲ ಅಥವಾ ಎರಡನೇ ಸ್ಥಾನಕ್ಕೆ ಹೋಗಲು ಸಾಧ್ಯ. ಆದರೆ ಅದು ತೀರಾ ಕಷ್ಟ ಎನಿಸುತ್ತದೆ. ಏಕೆಂದರೆ  ಆ ಎರೆಡು ತಂಡಗಳು ಟೂರ್ನಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡುತ್ತಿವೆ.

ಪ್ರೊ ಕಬಡ್ಡಿಯ ಲೀಗ್‌ ಹಂತ ಡಬಲ್ ರೌಂಡ್ ರಾಬಿನ್ ಆಧಾರದಲ್ಲಿ ನಡೆಯುತ್ತದೆ. ಪ್ರತಿ ತಂಡಕ್ಕೂ 22 ಪಂದ್ಯಗಳು ಸಿಗುತ್ತವೆ. ಅಂಕಪಟ್ಟಿಯಲ್ಲಿ ಮೊದಲ ಆರು ಸ್ಥಾನ ಪಡೆದ ತಂಡಗಳು ಪ್ಲೇಆಫ್ ಪ್ರವೇಶಿಸಿದರೆ, ಉಳಿದ 6 ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಅದರಲ್ಲಿಯೂ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನ ಪಡೆದ ತಂಡಗಳು ನೇರವಾಗಿ ಸೆಮಿಫೈನಲ್ ತಲುಪುತ್ತವೆ. ಉಳಿದ ನಾಲ್ಕು ತಂಡಗಳು ಪ್ಲೇ ಆಫ್‌ನಲ್ಲಿ ಕ್ವಾಲಿಫೈಯರ್ ಪಂದ್ಯ ಎದುರಿಸಿ ಗೆದ್ದ ತಂಡಗಳು ಮಾತ್ರ ಸೆಮಿಫೈನಲ್ ಪ್ರವೇಶಿಸುತ್ತವೆ. ಸೋತ ತಂಡಗಳು ಟೂರ್ನಿಯಿಂದ ಹೊರಬೀಳುತ್ತವೆ. ಹಾಗಾಗಿ ಮೊದಲ ಎರಡು ಸ್ಥಾನ ಪಡೆಯುವುದು ಉತ್ತಮ. ಇಷ್ಟು ದಿನ ಮೊದಲು ಮತ್ತು ಎರಡನೇ ಸ್ಥಾನದಲ್ಲಿರುತ್ತಿದ್ದ ಬೆಂಗಳೂರು 3 ಸೋಲಿನೊಂದಿಗೆ ಮೂರನೇ ಸ್ಥಾನಕ್ಕೆ ಕುಸಿದಿದೆ.

ಡಿಸೆಂಬರ್ 13ರಂದು 2 ಎಲಿಮಿನೇಟರ್ ಪಂದ್ಯಗಳು ನಡೆಯುತ್ತವೆ. ಒಂದು ಪಂದ್ಯದಲ್ಲಿ ಅಂಕಪಟ್ಟಿಯಲ್ಲಿ ಮೂರು ಮತ್ತು ಆರನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸಿದರೆ ಮತ್ತೊಂದು ಪಂದ್ಯದಲ್ಲಿ ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳು ಸ್ಪರ್ಧಿಸುತ್ತವೆ. ಗೆದ್ದವರು ಸೆಮಿಫೈನಲ್ ಪ್ರವೇಶಿಸುತ್ತಾರೆ. ಸೋತವರು ಮನೆಗೆ ನಡೆಯುತ್ತಾರೆ.

ಡಿಸೆಂಬರ್ 15ರಂದು ಎರಡು ಸೆಮಿಫೈನಲ್ ಪಂದ್ಯಗಳು ನಡೆದರೆ, ಡಿಸೆಂಬರ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ; ಇರಾನ್‌ ಮಹಿಳೆಯರ ದಿಟ್ಟ ಹೋರಾಟ: ಮೊರಾಲಿಟಿ ಪೊಲೀಸ್‌ ವ್ಯವಸ್ಥೆ ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...