Homeಮುಖಪುಟನೇಪಾಳದಲ್ಲಿ 5.6 ತೀವ್ರತೆಯ ಭೂಕಂಪ: ದೆಹಲಿಯಲ್ಲೂ ಪ್ರಬಲ ಕಂಪನ

ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪ: ದೆಹಲಿಯಲ್ಲೂ ಪ್ರಬಲ ಕಂಪನ

- Advertisement -
- Advertisement -

ನೇಪಾಳದಲ್ಲಿ ಸೋಮವಾರ ಮಧ್ಯಾಹ್ನ ಮತ್ತೆ 5.6 ತೀವ್ರತೆಯ ಭೂಕಂಪ ಸಂಭವಿಸಿದೆ. ದೆಹಲಿ ಮತ್ತು ಹತ್ತಿರದ ನಗರಗಳಲ್ಲಿ ಭೂಕಂಪನದ ಅನುಭವಾಗಿದೆ ಎಂದು NDTV ವರದಿ ಮಾಡಿದೆ.

ಉತ್ತರ ಪ್ರದೇಶದ ಅಯೋಧ್ಯೆಯ ಉತ್ತರಕ್ಕೆ 233 ಕಿಲೋಮೀಟರ್ ದೂರದಲ್ಲಿ ಭೂಕಂಪದ ಕೇಂದ್ರಬಿಂದುವಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.

ಈ ಭೂಕಂಪನವು ಜನರಲ್ಲಿ ಭೀತಿಯನ್ನು ಉಂಟುಮಾಡಿತು, ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ ಡೆಸ್ಕ್ ಮತ್ತು ಪೀಠೋಪಕರಣಗಳ ತೀವ್ರ ಅಲುಗಾಡುವಿಕೆಯ ಅನುಭವವಾಗಿದೆ ಎಂದು ವರದಿ ಮಾಡಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿನ ದೃಶ್ಯಾವಳಿಗಳು ಜನರು ವಸತಿ ಕಟ್ಟಡಗಳಿಂದ ಹೊರಬರುವುದನ್ನು ತೋರಿಸುತ್ತವೆ.

ಕಳೆದ ಶುಕ್ರವಾರ, ನೇಪಾಳದಲ್ಲಿ 6.4 ತೀವೃತೆಯ ಪ್ರಬಲವಾದ ಭೂಕಂಪಣದಿಂದ ಕನಿಷ್ಠ 157 ಜನರು ಸಾವಿಗೀಡಾಗಿದ್ದಾರೆ. ಇದು 2015 ರಿಂದ ನೇಪಾಳದಲ್ಲಿ ಸಂಭವಿಸಿದ ಅತ್ಯಂತ ಭೀಕರ ಭೂಕಂಪವಾಗಿದೆ. ನೇಪಾಳವು ವಿಶ್ವದ ಅತ್ಯಂತ ಸಕ್ರಿಯವಾದ ಟೆಕ್ಟೋನಿಕ್ ವಲಯಗಳಲ್ಲಿ ಒಂದಾಗಿದೆ, ಈ ಭಾಗದಲ್ಲಿ ಅತಿಹೆಚ್ಚು ಭೂಕಂಪಗಳು ಸಂಭವಿಸುತ್ತವೆ.

ಇದನ್ನೂ ಓದಿ: ಭೀಕರ ಭೂಕಂಕ್ಕೆ ಕಂಗೆಟ್ಟ ನೇಪಾಳ: 128 ಜನರ ಸಾವು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ಕಿರುಕುಳ ಪ್ರಕರಣ: ಜೆಡಿಎಸ್ ಶಾಸಕ ಎಚ್.ಡಿ. ರೇವಣ್ಣಗೆ ಮಧ್ಯಂತರ ಜಾಮೀನು

0
ಮನೆಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎಚ್.ಡಿ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. 47ರ ಹರೆಯದ ಮನೆ ಕೆಲಸದಾಕೆಗೆ ಲೈಂಗಿಕ...