Homeಮುಖಪುಟಹೋರಾಟನಿರತ ರೈತರನ್ನು NIA ವಿಚಾರಣೆಗೆ ಕರೆಯುವುದಿಲ್ಲ: ರಾಜ್ಯಸಭೆಯಲ್ಲಿ ಸರ್ಕಾರ ಹೇಳಿಕೆ

ಹೋರಾಟನಿರತ ರೈತರನ್ನು NIA ವಿಚಾರಣೆಗೆ ಕರೆಯುವುದಿಲ್ಲ: ರಾಜ್ಯಸಭೆಯಲ್ಲಿ ಸರ್ಕಾರ ಹೇಳಿಕೆ

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ವಿವಾದಾತ್ಮಕ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರನ್ನು ವಿಚಾರಣೆಗೆಂದು ರಾಷ್ಟ್ರೀಯ ತನಿಖಾ ದಳ (NIA) ಕರೆದಿಲ್ಲವೆಂದು ರಾಜ್ಯಸಭೆಗೆ ಕೇಂದ್ರ ಸರ್ಕಾರ ತಿಳಿಸಿದೆ.

ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಮತ್ತು ಇತರರು ಸರ್ಕಾರದ ತನಿಖಾ ಏಜೆನ್ಸಿಗಳು ರೈತರಿಕೆ ವಿಚಾರಣೆ ನೆಪದಲ್ಲಿ ಕಿರುಕುಳ ನೀಡುತ್ತಿವೆ ಎಂಬ ದೂರು ಬಂದಿದೆ. ಈ ಕುರಿತು ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದ್ದರು.

ಅದಕ್ಕೆ ಉತ್ತರಿಸಿದ ಗೃಹ ಇಲಾಖೆಯ ರಾಜ್ಯ ಸಚಿವ ಜಿ.ಕಿಶನ್ ರೆಡ್ಡಿ, “ಇಲ್ಲ ಸರ್, ಪ್ರತಿಭಟಿಸುತ್ತಿರುವ ಯಾವುದೇ ರೈತರನ್ನು ವಿಚಾರಣೆಗೆಂದು NIA ಕರೆದಿಲ್ಲ” ಎಂದು ಲಿಖಿತ ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆ 79ನೇ ದಿನಕ್ಕೆ ಕಾಲಿಟ್ಟಿದೆ. ರೈತ ಸಂಘಗಳ ಒಕ್ಕೂಟವಾದ ಸಂಯುಕ್ತ್ ಕಿಸಾನ್ ಮೋರ್ಚಾ ಇಂದು ಸಭೆ ಸೇರಲಿದ್ದು, ಮುಂದಿನ ಹೋರಾಟದ ಮಾರ್ಗಗಳ ಕುರಿತು ಚರ್ಚಿಸಲಿದೆ.

ಗಣರಾಜ್ಯೋತ್ಸವದಂದು ನಡೆದ ಅಹಿತಕರ ಘಟನೆಯ ನಂತರ, ಇಲ್ಲಿಯವರೆಗೆ ರೈತರ ಹೋರಾಟವು ಮತ್ತೊಂದು ದಿಕ್ಕಿನತ್ತ ಹೊರಳಿದೆ. ರೈತ ಸಂಘದ ಮುಖಂಡರಿಗೆ ಕೇಂದ್ರ ಸರ್ಕಾರ ಕಿರುಕುಳ ನೀಡಲು ಪ್ರಾರಂಭಿಸಿದ ನಂತರ ದೆಹಲಿ ಕೇಂದ್ರವಾಗಿ ಇದ್ದ ಹೋರಾಟದ ಕಾವು ಉತ್ತರ ಪ್ರದೇಶ, ಹರಿಯಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ’ರೈತ ಮಹಾಪಂಚಾಯತ್’ ನಡೆಯುವ ಮೂಲಕ ಹೋರಾಟದ ವ್ಯಾಪ್ತಿ ಹೆಚ್ಚಾಗತೊಡಗಿದೆ. ದೇಶದೆಲ್ಲಡೆ ಗ್ರಾಮಪಂಚಾಯ್ತಿ ಮಟ್ಟದಲ್ಲಿ ಸಭೆ ಸೇರಿ ಹೋರಾಟ ತೀವ್ರಗೊಳಿಸಲು ನಿರ್ಧಿರಿಸದ್ದಾರೆ.


ಇದನ್ನೂ ಓದಿ; ಪತ್ರಕರ್ತರು, ಸಾಮಾಜಿಕ ಕಾರ್ಯಕರ್ತರು & ರಾಜಕಾರಣಿಗಳ ವಿರುದ್ಧ ಕ್ರಮ ಸಾಧ್ಯವಿಲ್ಲ: ಟ್ವಿಟರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...