Homeಮುಖಪುಟಉತ್ತರಪ್ರದೇಶ: 10ನೇ ತರಗತಿ ವಿದ್ಯಾರ್ಥಿಯ ಕೊಲೆ; ಕುಟುಂಬಸ್ಥರಿಂದ ಪ್ರತಿಭಟನೆ

ಉತ್ತರಪ್ರದೇಶ: 10ನೇ ತರಗತಿ ವಿದ್ಯಾರ್ಥಿಯ ಕೊಲೆ; ಕುಟುಂಬಸ್ಥರಿಂದ ಪ್ರತಿಭಟನೆ

- Advertisement -
- Advertisement -

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ  10ನೇ ತರಗತಿಯ ವಿದ್ಯಾರ್ಥಿಗೆ ಅನ್ಯ ಸಮುದಾಯಕ್ಕೆ ಸೇರಿದ ಸಹಪಾಠಿ ವಿದ್ಯಾರ್ಥಿಗಳ ತಂಡ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಕಾರಣ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನಡೆದಿದೆ.

ಪ್ರಯಾಗರಾಜ್‌ನ ಖೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಪುರ ದತ್ತು ಗ್ರಾಮದ ಬಳಿ  16 ವರ್ಷದ ಸತ್ಯಂ ಶರ್ಮಾ ಮೃತ ವಿದ್ಯಾರ್ಥಿ. ಘಟನೆಯಿಂದ ಕೋಪಗೊಂಡ ಬಾಲಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಖೇರಿ ಚೌಕದ ಬಳಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿರುವ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಸತ್ಯಂ ಶರ್ಮಾ ಅವರ  ಸಂಬಂಧಿ ಬಾಲಕಿ ಕೂಡ ಅದೇ ಶಾಲೆಯಲ್ಲಿ ಓದುತ್ತಿದ್ದರು. ಶಾಲೆಯಲ್ಲಿ ಕೆಲವು ವಿದ್ಯಾರ್ಥಿಗಳು ಬಾಲಕನೊಂದಿಗೆ ಜಗಳವಾಡಿದ್ದರು. ಈ ವೇಳೆ ಶಾಲೆಯ ಶಿಕ್ಷಕರೊಬ್ಬರು ಸಮಾಧಾನಪಡಿಸಿ ಕಳುಹಿಸಿದ್ದರು. ಆದರೆ ಮನೆಗೆ ತೆರಳುವಾಗ ಮತ್ತೆ ಗಲಾಟೆಯಾಗಿ ಕೊಲೆ ನಡೆದಿದೆ ಎನ್ನಲಾಗಿದೆ.

ಹಿರಿಯ ಪೊಲೀಸ್ ಅಧಿಕಾರಿಯೋರ್ವರು ಈ ಕುರಿತು ಮಾಹಿತಿಯನ್ನು ನೀಡಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ವಾಗ್ವಾದ ನಡೆದಿದೆ. ಬಳಿಕ ಮನೆಗೆ ತೆರಳುವಾಗ ವಿದ್ಯಾರ್ಥಿ ಮೇಲೆ ಬ್ಯಾಟ್‌ನಿಂದ ಹಲ್ಲೆ ನಡೆಸಲಾಗಿದೆ. ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಅವರು ತಿಳಿಸಿದ್ದಾರೆ.

ಈ ಕುರಿತು ಪ್ರಕರಣ ದಾಖಲಾಗಿದೆ. ಸದ್ಯ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಬಾಲಕ ಸಂಬಂಧಿ ಬಾಲಕಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ್ದಕ್ಕೆ ಕೊಲೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಆದರೆ  ಸುದ್ದಿ ಸುಳ್ಳು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಅಶಾಂತಿ ಹೆಚ್ಚಾದ ಕಾರಣ ಅಂಗಡಿಗಳನ್ನು ಮುಚ್ಚಲಾಗಿತ್ತು. ಸಂಜೆಯವರೆಗೂ ಗಲಾಟೆ ಮುಂದುವರಿದಿದ್ದು, ಪೊಲೀಸರು ಸ್ಥಳದಲ್ಲಿ ಹೆಚ್ಚುವರಿ ಪಡೆಗಳನ್ನು ನಿಯೋಜಿಸಿ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ.

ಇದನ್ನು ಓದಿ: ನೀವು ಯಾಕೆ ಪಾಕಿಸ್ತಾನಕ್ಕೆ ಹೋಗಿಲ್ಲ?: ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರಶ್ನಿಸಿದ ಶಿಕ್ಷಕಿ ವಿರುದ್ಧ ಪ್ರಕರಣ ದಾಖಲು

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೋವಿಶೀಲ್ಡ್‌ ಲಸಿಕೆ ಅಡ್ಡ ಪರಿಣಾಮ: ನೀವು ಭಯಪಡಬೇಕೆ? ವೈದ್ಯರು ಹೇಳುವುದೇನು?

0
ಕೋವಿಡ್ -19 ವಿರುದ್ಧದ 'ಕೋವಿಶೀಲ್ಡ್‌' ಲಸಿಕೆಯು ರಕ್ತ ಹೆಪ್ಪುಗಟ್ಟುವಿಕೆಗೆ ಸಂಬಂಧಿಸಿದ ಅಪರೂಪದ ಅಡ್ಡ ಪರಿಣಾಮದ ಸಾಮರ್ಥ್ಯವನ್ನು ಹೊಂದಿದೆ ಎಂದು ಬ್ರಿಟಿಷ್ ಫಾರ್ಮಾ ದೈತ್ಯ ‘ಅಸ್ಟ್ರಾಜೆನೆಕಾ’  ನ್ಯಾಯಾಲಯದಲ್ಲಿ ಮೊದಲ ಬಾರಿಗೆ ಒಪ್ಪಿಕೊಂಡಿದೆ. TTS ಅಥವಾ...