Homeಕರ್ನಾಟಕಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ...

ಮಂಗಳೂರು | ವಿದ್ಯಾರ್ಥಿ ನಾಪತ್ತೆ ಪ್ರಕರಣ ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರು, ದುಷ್ಕರ್ಮಿಗಳ ವಿರುದ್ಧ ದೂರು

- Advertisement -
- Advertisement -

ಮಂಗಳೂರಿನ ಪರಂಗಿಪೇಟೆಯಲ್ಲಿ ಇತ್ತಿಚೆಗೆ ನಾಪತ್ತೆಯಾಗಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿ ದಿಗಂತ್ ಪ್ರಕರಣವನ್ನು ಮುಂದಿಟ್ಟು ಕೋಮು ಸಂಘರ್ಷಕ್ಕೆ ಯತ್ನಿಸಿದ ಬಿಜೆಪಿ ಶಾಸಕರುಗಳಾದ ಭರತ್‌ ಶೆಟ್ಟಿ, ಹರೀಶ್ ಪೂಂಜಾ ಸಹಿತ ಬಿಜೆಪಿಯ ಸಹ ಸಂಘಟನೆಗಳ ದುಷ್ಕರ್ಮಿಗಳ ವಿರುದ್ಧ ಸ್ವಯಂ ಪ್ರೇರಿತ ಮೊಕದ್ದಮೆ ಹೂಡಿ ಕಾನೂನು ಪ್ರಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಿ ‘ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ’ಯ ನಿಯೋಗ ಜಿಲ್ಲಾ ಎಸ್‌ಪಿ ಅವರನ್ನು ಭೇಟಿ ಮಾಡಿ ಸೋಮವಾರ ಒತ್ತಾಯಿಸಿದೆ. ಮಂಗಳೂರು

ಫೆಬ್ರವರಿ 25 ರಂದು ಸಂಜೆ 7 ಗಂಟೆಗೆ ಕಾಣೆಯಾಗಿದ್ದ ಫರಂಗಿಪೇಟೆಯ ಕಿದೆಬೆಟ್ಟು ನಿವಾಸಿ, ದ್ವಿತೀಯ ಪಿಯು ವಿದ್ಯಾರ್ಥಿ ದಿಗಂತ್ ಕೊನೆಗೂ ಶನಿವಾರ ಮಾರ್ಚ್ 8 ರಂದು ಸುರಕ್ಷಿತವಾಗಿ ಪತ್ತೆಯಾಗಿದ್ದರು. ಅವರ ನಿಗೂಢ ನಾಪತ್ತೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ವೇಳೆ ಫರಂಗಿಪೇಟೆಯ ಅಂಗಡಿ ಮುಂಗಟ್ಟನ್ನು ಬಂದ್ ಮಾಡಬೇಕೆಂದು ಬಿಜೆಪಿ ಪರ ಸಂಘಟನೆಗಳು ಕರೆ ಕೊಟ್ಟಿದ್ದವು. ಪಟ್ಟಣದ ಎಲ್ಲರೂ ಜಾತಿ ಧರ್ಮವೆನ್ನದೆ ಅಂಗಡಿ ಮುಂಗಟ್ಟನ್ನು ಬಂದ್ ಮಾಡಿ ಪ್ರತಿಭಟನೆಗೆ ಬೆಂಬಲ ನೀಡಿದ್ದರು.

ರಾಜ್ಯ ಮಟ್ಟದಲ್ಲಿ ಸುದ್ದಿಯಾಗಿದ್ದ ನಾಪತ್ತೆ ಪ್ರಕರಣ ಸದನದಲ್ಲೂ ಸದ್ದು ಮಾಡಿತ್ತು. ಸಂಘ ಪರಿವಾರದ ಸಂಘಟನೆಗಳು ಹಾಗೂ ಬಿಜೆಪಿ ನಾಪತ್ತೆ ಪ್ರಕರಣಕ್ಕೆ ಹಿಂದೂ ಮುಸ್ಲಿಂ ಬಣ್ಣ ಹಚ್ಚಲು ಗರಿಷ್ಠ ಪ್ರಯತ್ನ ಮಾಡಿದ್ದವು. ಫರಂಗಿಪೇಟೆ ಮುಸ್ಲಿಂ ಬಾಹುಳ್ಯದ ಪ್ರದೇಶ ಎಂಬ ಕಾರಣಕ್ಕೆ ದಿಗಂತ್ ನಾಪತ್ತೆ ಪ್ರಕರಣಕ್ಕೆ ಕೋಮು ಬಣ್ಣ ಹಚ್ಚಲು ಹಾಗೂ ಇಡೀ ಊರಿಗೆ ಕ್ರಿಮಿನಲ್ ಹಣೆಪಟ್ಟಿ ಕಟ್ಟಲು ಬಿಜೆಪಿ ಮತ್ತು ಅದರ ಸಂಘಟನೆಗಳ ದುಷ್ಕರ್ಮಿಗಳು ಮುಂದಾಗಿದ್ದರು. ದ್ವೆಷ ಭಾಷಣದ ಜೊತೆಗೆ ಮುಸ್ಲಿಮರು ಹೆಚ್ಚಾಗಿ ಇರುವ ಪ್ರದೇಶವನ್ನು ತಪ್ಪಾಗಿ ಮತ್ತು ಭಯ ಹುಟ್ಟಿಸುವ ಎಲ್ಲಾ ಪ್ರಪೊಗಾಂಡವನ್ನು ಬಿಜೆಪಿ ಮಾಡಿತ್ತು.

ಈ ನಡುವೆ ನಾಪತ್ತೆಯಾಗಿದ್ದ ಬಾಲಕ ಉಡುಪಿಯಲ್ಲಿ ಪತ್ತೆಯಾಗಿದ್ದು, ದ್ವಿತೀಯ ಪರೀಕ್ಷೆಗೆ ಹೆದರಿ ಮನೆ ಬಿಟ್ಟು ಹೋಗಿದ್ದಾಗಿ ಪೋಲಿಸರು ತಿಳಿಸಿದ್ದಾರೆ. ಫರಂಗಿಪೇಟೆಯಿಂದ ತೆರಳಿದ್ದ ಬಾಲಕ ಶಿವಮೊಗ್ಗ, ಮೈಸೂರು, ಕೆಂಗೇರಿ, ನಂದಿಬೆಟ್ಟ ಸುತ್ತಿ ಉಡುಪಿಗೆ ತೆರಳಿದ್ದರು. ಅಲ್ಲಿ ಬಟ್ಟೆ ಖರೀದಿ ವೇಳೆ ಪತ್ತೆಯಾಗಿದ್ದ ಅವರನ್ನು ಪೊಲೀಸರು ವಶಕ್ಕೆ ಪಡೆದು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದ್ದಾರೆ. ಸದ್ಯಕ್ಕೆ ಅವರನ್ನು ಬಾಲಮಂದಿರಕ್ಕೆ ಸೇರಿಸಲಾಗಿದೆ ಎಂದು ವರದಿಯಾಗಿದೆ. ಮಂಗಳೂರು

ಮಾರ್ಚ್‌ 12ರಂದು ಅವರನ್ನು ಹೈಕೋರ್ಟ್‌ ಹಾಜರುಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ್ ಎನ್. ಹೇಳಿದ್ದಾರೆ. ಅವರ ಹೆತ್ತವರು ಹೈಕೋರ್ಟ್‌ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರಿಂದ ಕೋರ್ಟ್ ಮುಂದೆ ಹಾಜರುಪಡಿಸಿ, ಕೋರ್ಟ್ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಭಾನುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ.

“ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಂಘಟನೆಗಳ ಜಂಟಿ ವೇದಿಕೆ” ನಿಯೋಗದಲ್ಲಿ ವೇದಿಕೆಯ ಸಂಚಾಲಕ, ಸಿಪಿಐಎಂ ದ.ಕ‌. ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಕಾಂಗ್ರೆಸ್ ರಾಜ್ಯ ವಕ್ತಾರ ಎಮ್ ಜಿ ಹೆಗ್ಡೆ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಶೇಖರ್ ಬಿ, ಆಮ್ ಆದ್ಮಿಯ ಎಸ್ ಎಲ್ ಪಿಂಟೊ, ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಮಾಜಿ ಮೇಯರ್ ಕೆ ಅಶ್ರಫ್, ಕರ್ನಾಟಕ ಪ್ರಾಂತ ರೈತ ಸಂಘದ ಕೆ ಯಾದವ ಶೆಟ್ಟಿ, ದಲಿತ ಸಂಘರ್ಷ ಸಮಿತಿ ಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರೆ ಇದ್ದರು.

ಜೊತೆಗೆ ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಎಐಟಿಯುಸಿ ಮುಂದಾಳು ಎಚ್ ವಿ ರಾವ್, ಕಾರ್ಮಿಕ ಮುಂದಾಳುಗಳಾದ ವಿ ಕುಕ್ಯಾನ್, ಸೀತಾರಾಮ ಬೇರಿಂಜೆ, ಡಿವೈಎಫ್ಐ ನ ಬಿ ಕೆ ಇಮ್ತಿಯಾಝ್, ಸಂತೋಷ್ ಬಜಾಲ್, ಜನವಾದಿ ಮಹಿಳಾ ಸಂಘಟನೆಯ ಜಯಂತಿ ಶೆಟ್ಟಿ, ಪ್ರಮೀಳಾ ಕೆ, ಎಸ್ಎಫ್ಐ ನ ವಿನುಷ ರಮಣ, ಸಮುದಾಯ ರಾಜ್ಯ ಕಾರ್ಯದರ್ಶಿ ಮನೋಜ್ ವಾಮಂಜೂರು, ವಿವಿಧ ಸಂಘಟನೆಗಳ ಮುಂದಾಳುಗಳಾದ ಸರೋಜಿನಿ ಬಂಟ್ವಾಳ, ಕರುಣಾಕರ ಮಾರಿಪಳ್ಳ, ಸಮರ್ಥ್ ಭಟ್, ನೀತ್ ಶರಣ್, ರಾಜೇಶ್ ದೇವಾಡಿಗಾ ಮುಂತಾದವರು ಉಪಸ್ಥಿತರಿದ್ದರು.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್‌

ಸಂಭಾಲ್ ಮಸೀದಿಯ ಹೊರ ಗೋಡೆಗೆ ಸುಣ್ಣ ಬಳಿದರೆ ಸಮಸ್ಯೆ ಏನು? – ಅಲಹಾಬಾದ್ ಹೈಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...