Homeಕರ್ನಾಟಕನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ನವೆಂಬರ್‌ 26 ರ ಅಖಿಲ ಭಾರತ ಮುಷ್ಕರಕ್ಕೆ ವಿದ್ಯಾರ್ಥಿ ಸಂಘಟನೆಗಳ ಬೆಂಬಲ

ರಾಷ್ಟ್ರೀಯ ಶಿಕ್ಷಣ ನೀತಿ-2020 ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಮುಷ್ಕರವನ್ನು ಬೆಂಬಲಿಸಿದ್ದು, ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಅದು ಹೇಳಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಅಸಂವಿಧಾನಿಕವಾಗಿ ಜಾರಿಗೊಳಿಸುತ್ತಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ- 2020 ವಿರೋಧಿಸಿ ನವೆಂಬರ್-26 ರಂದು ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಒಕ್ಕೂಟ ಕರೆ ನೀಡಿದೆ. ಇಂದು ಬೆಂಗಳೂರಿನ ಸೂರಿ ಭವನದಲ್ಲಿ ಸಭೆ ಸೇರಿದ ಎಡ ವಿದ್ಯಾರ್ಥಿ ಸಂಘಟನೆಗಳಾದ AISF, SFI, AIDSO, AISA ಮತ್ತು KVS, “ಹೊಸ ಶಿಕ್ಷಣ ನೀತಿ ಮೇಲುನೋಟಕ್ಕೆ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರೀಕರಣ, ಇತಿಹಾಸ ತಿರುಚುವಿಕೆ ಸೇರಿದಂತೆ ಹಲವು ಅಂಶಗಳು ಅಡಕವಾಗಿದೆ ಎಂದು ಹೇಳಿದೆ.

“ಕೇಂದ್ರ ಸರ್ಕಾರವು ಜಾರಿ ಮಾಡಲು ಹೊರಟಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಹಿಂದಿ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಇದ್ದು, ಭಾರತದ ಇನ್ನುಳಿದ ರಾಷ್ಟ್ರೀಯ ಪ್ರಾದೇಶಿಕ ಭಾಷೆಗಳಲ್ಲಿ ಇಲ್ಲ. ಸಾರ್ವಜನಿಕವಾಗಿ ಹಾಗೂ ಕೇಂದ್ರ ಮತ್ತು ರಾಜ್ಯಗಳ ಶಾಸನ ಸಭೆಯಲ್ಲಿ ಚರ್ಚೆಯಾಗದೆ, ಅದರ ಸಾಧಕ-ಬಾಧಕಗಳನ್ನು ಅರಿಯದೆ ಜಾರಿ ಮಾಡಲು ಹೊರಟಿರುವುದು ಪ್ರಜಾಪ್ರಭುತ್ವದ ಕಗ್ಗೂಲೆಯಾಗುತ್ತದೆ” ಎಡ ವಿದ್ಯಾರ್ಥಿ ಸಂಘಟನೆಗಳ ಜಂಟಿ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ: ದುರ್ಬಲ ವರ್ಗಗಳ ವಿದ್ಯಾರ್ಥಿಗಳಿಗೆ ಮಾಡಿದ ವ್ಯವಸ್ಥಿತ ವಂಚನೆ!

“ಮೇಲುನೋಟಕ್ಕೆ ಹೊಸ ಶಿಕ್ಷಣ ನೀತಿ ಎಲ್ಲರೂ ಒಪ್ಪಿಕೊಳ್ಳುವಂತಿದ್ದರೂ, ಅದರ ಆಂತರ್ಯದಲ್ಲಿ ಶಿಕ್ಷಣದ ಖಾಸಗೀಕರಣ, ಕೇಸರಿಕರಣ, ಇತಿಹಾಸ ತಿರುಚುಏಕೆ ಈ ರೀತಿ ಹತ್ತು ಹಲವು ಅಂಶಗಳು ಅಡಕವಾಗಿರುವುದು ಕಾಣುತ್ತದೆ. ನಮ್ಮ ರಾಜ್ಯದಲ್ಲೂ ಸಹ ಕೇಂದ್ರದ ಒತ್ತಡದ ಮೇರೆಗೆ ಯಾವುದೇ ರೀತಿಯ ಜನಾಭಿಪ್ರಾಯ ಸಂಗ್ರಹಿಸದೆ ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರುತ್ತಿರುವುದು ಖಂಡನೀಯ” ಎಂದು ಅದು ಹೇಳಿದೆ.

ರಾಜ್ಯ ಸರ್ಕಾರ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯನ್ನು ಚರ್ಚೆಗೆ ಬಿಡಬೇಕು ಎಂದು ಹೇಳಿರುವ ಸಂಘಟನೆಗಳು, ಅದರಲ್ಲಿನ ಶಿಕ್ಷಣದ ಕೇಸರೀಕರಣ, ಕೇಂದ್ರೀಕರಣ, ಕೋಮುವಾದೀಕರಣ ಹೇರುವ ಅಂಶಗಳನ್ನು ಕೈಬಿಡಬೇಕು ಹಾಗೂ ಅದರ ಸಾಧಕ-ಬಾಧಕಗಳನ್ನು ಅರಿತು ನಂತರ ಲೋಪ ದೋಷಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದೆ.

ಇದನ್ನೂ ಓದಿ: ಶಿಕ್ಷಣವನ್ನು ವೇಗವಾಗಿ ವ್ಯಾಪಾರ ಮಾಡಲು ಕೇಂದ್ರ ಸರ್ಕಾರ ಹೊಸ ಶಿಕ್ಷಣ ನೀತಿ ತರುತ್ತಿದೆ; ರಮೇಶ್ ಪಟ್ನಾಯಕ್

ಇಷ್ಟೇ ಅಲ್ಲದೆ ವಿದ್ಯಾರ್ಥಿ ಸಂಘಟನೆಗಳು ತಮ್ಮ ಬೇಡಿಕೆಯನ್ನು ಕೂಡಾ ಸರ್ಕಾರಗಳ ಮುಂದೆ ಇಟ್ಟಿದೆ.

  •  ಶಿಕ್ಷಣ ಕ್ಷೇತ್ರ ಸಂವಿಧಾನದ ಶೆಡ್ಯೂಲ್ -07 ರಂತೆ ಸಮವರ್ತಿ ಪಟ್ಟಿಯಲ್ಲಿ ಬರುತ್ತದೆ. ಆದರೆ ಈ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯು ರಾಜ್ಯ ಸರ್ಕಾರಗಳಿಗೆ ಇರುವ ಶಿಕ್ಷಣ ಕ್ಷೇತ್ರ ಅಧಿಕಾರ, ಹಕ್ಕುಗಳನ್ನು ಮೊಟಕುಗೊಳಿಸಿ ಶಿಕ್ಷಣವನ್ನು ನೀತಿ ನಿರೂಪಣೆಯ ಅಧಿಕಾರಿಗಳನ್ನು ಕೇಂದ್ರೀಕರಣಗೊಳಿಸುವ ಅಂಶಗಳನ್ನು ರಾಜ್ಯ ಸರ್ಕಾರ ವಿರೋಧಿಸಬೇಕು. ಅಲ್ಲದೆ ಶಿಕ್ಷಣ ಕ್ಷೇತ್ರದಲ್ಲಿ ರಾಜ್ಯದ ಸರ್ಕಾರಕ್ಕಿರುವ ಅಧಿಕಾರ ಹಕ್ಕುಗಳನ್ನು ಕಾಯ್ದಿರಿಸಲು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಒಕ್ಕೂಟ ವ್ಯವಸ್ಥೆಯ ಆಶಯಗಳನ್ನು ಉಳಿಸಲು ಮುಂದಾಗಬೇಕು.
  • ಸರ್ಕಾರವೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020ನ್ನು ಸಂವಿಧಾನದ ಮಾನ್ಯತೆ ಪಡೆದ ಎಲ್ಲ ಭಾಷೆಗಳಿಗೆ ಅನುವಾದಿಸಿ ಅಧ್ಯಯನಕ್ಕೆ ಅವಕಾಶ ನೀಡಿ, ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಅಂಗನವಾಡಿ, ಬಿಸಿಯೂಟ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಎಲ್ಲರೂ ಚರ್ಚಿಸಿ ತಿದ್ದುಪಡಿ ಸಲಹೆಗಳನ್ನು ನೀಡಲು ಅಗತ್ಯವಾದ ಕಾಲವಕಾಶ ನೀಡಬೇಕು.
  • ಕೇಂದ್ರ ಸರ್ಕಾರದ ಸಚಿವ ಸಂಪುಟ ಅನುಮೋದಿತ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಕುರಿತು ರಾಜ್ಯ ವಿಧಾನಸಭೆ, ವಿಧಾನ ಪರಿಷತ್ತಿನ ಉಭಯ ಸದನಗಳಲ್ಲಿ ಸಮಗ್ರ ಚರ್ಚೆ ನಡೆಸಬೇಕು. ಈ ಸದನದಲ್ಲಿ ಈ ಕುರಿತು ಜನಪ್ರತಿನಿಧಿಗಳು ಮಾತನಾಡಬೇಕು.
  • ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಪ್ರಸ್ತಾಪಿಸಿರುವ ತ್ರಿಭಾಷಾ ಸೂತ್ರವನ್ನು ತಮಿಳುನಾಡು ರಾಜ್ಯ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರ ವಿರೋಧಿಸಬೇಕು.
  • ಕೊರೊನಾ-ಕಾಲಾವಧಿಯಲ್ಲಿ ದೇಶದ ಭವಿಷ್ಯವನ್ನು ರೂಪಿಸುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ-2020 ಜಾರಿಯ ಕುರಿತು ರಾಜ್ಯ ಸರ್ಕಾರದ ಮಂತ್ರಿಗಳು ನಡೆಸುತ್ತಿರುವ ಏಕಮುಖವಾದ, ಅಪ್ರಜಾಸತ್ತಾತ್ಮಕವಾದ ಅನುಷ್ಠಾನದ ತಯಾರಿಗಳನ್ನು ಕೈ ಬಿಡಲು ಒತ್ತಾಯಿಸಬೇಕು.

ಇದನ್ನೂ ಓದಿ: ಹೊಸ ಶಿಕ್ಷಣ ನೀತಿ ಏನು? ಎತ್ತ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...