ತಮಿಳುನಾಡಿನ ಕಲ್ಲಕುರುಚಿಯಲ್ಲಿ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜ್ಯದ ಸೇಲಂ ಜಿಲ್ಲೆಯಲ್ಲಿ ಅಶಾಂತಿ ಮೂಡಿಸಿದೆ. ಪ್ರತಿಭಟನಾಕಾರರು ಶಾಲಾ ಬಸ್‌ಗಳು ಮತ್ತು ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಹಲವು ಪೊಲೀಸ್ ಅಧಿಕಾರಿಗಳು ಭಾನುವಾರ ಗಾಯಗೊಂಡಿದ್ದಾರೆ. ಪ್ರಕರಣದಲ್ಲಿ ಮತ್ತೇ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ.
ತಮಿಳುನಾಡಿನ ಕಲ್ಲಕುರಿಚಿಯಲ್ಲಿ 12ನೇ ತರಗತಿಯ ವಿದ್ಯಾರ್ಥಿಯೊನಿಯೊಬ್ಬರು ಶಿಕ್ಷಕರ ಚಿತ್ರಹಿಂಸೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಲವು ಗಾಯಗಳು ಮತ್ತು ರಕ್ತಸ್ರಾವ ವಿದ್ಯಾರ್ಥಿನಿಯ ಸಾವಿಗೆ ಕಾರಣ ಎಂದು ಮೊದಲ ಶವಪರೀಕ್ಷೆಯ ವರದಿಯು ತಿಳಿಸಿತ್ತು. ಈ ಪ್ರಕರಣದಲ್ಲಿ ಇದುವರೆಗೆ ಐವರು ಶಿಕ್ಷಕರು ಹಾಗೂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಪೊಲೀಸ್ ಅಧಿಕಾರಿಗಳು, “ಮೃತ ಬಾಲಕಿ ಮಂಗಳವಾರ ರಾತ್ರಿ ಶಾಲೆಯ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಾಲೆಯ ಇಬ್ಬರು ಶಿಕ್ಷಕರು ನಿರಂತರವಾಗಿ ಓದುವಂತೆ ಒತ್ತಾಯಿಸಿ ಚಿತ್ರಹಿಂಸೆ ನೀಡಿದ್ದರು” ಎಂದು ಹೇಳಿದ್ದರು. ಅಸ್ವಾಭಾವಿಕ ಮರಣದ ಸೆಕ್ಷನ್ 174 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
ಸೋಮವಾರ ಶಾಲೆಯ ರಸಾಯನಶಾಸ್ತ್ರ ಶಿಕ್ಷಕಿ ಹರಿಪ್ರಿಯಾ ಮತ್ತು ಗಣಿತ ಶಿಕ್ಷಕಿ ಕೃತಿಕಾ ಅವರನ್ನು ಬಂಧಿಸಲಾಗಿತ್ತು. ಇದಕ್ಕೂ ಮುನ್ನ ಶಾಲೆಯ ಪ್ರಾಂಶುಪಾಲರು, ಕಾರ್ಯದರ್ಶಿ ಸೇರಿದಂತೆ ಮೂವರು ಆಡಳಿತಾಧಿಕಾರಿಗಳನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ: ಅಧಿಕಾರಕ್ಕೆ ಸವಾಲೆಸೆದ ತಮಿಳುನಾಡಿನ ಇಬ್ಬರು ಯುವಪ್ರತಿಭೆಗಳು
500 ಕ್ಕೂ ಹೆಚ್ಚು ಜನರು ಶಾಲೆಯ ಮುಂದೆ ಜಮಾಯಿಸಿ ವಿದ್ಯಾರ್ಥಿನಿಯ ಸಾವಿಗೆ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ದಾರೆ. ಇದರ ನಂತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾಕಾರರು ಕಲ್ಲು ತೂರಾಟ ಮತ್ತು ಶಾಲಾ ಬಸ್‌ಗಳಿಗೆ ಬೆಂಕಿ ಹಚ್ಚಿದ್ದಾರೆ. ಜೊತೆಗೆ ಶಾಲೆಯ ಆಸ್ತಿಯನ್ನೂ ಹಾಳು ಮಾಡಿದ್ದಾರೆ.
ಶಾಂತಿಗಾಗಿ ಮನವಿ ಮಾಡಿದ ಮುಖ್ಯಮಂತ್ರಿ ಸ್ಟಾಲಿನ್
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಶಾಂತಿಗಾಗಿ ಮನವಿ ಮಾಡಿ ಟ್ವೀಟ್ ಮಾಡಿದ್ದಾರೆ. “ಹಿಂಸಾಚಾರ ನನಗೆ ಆತಂಕ ತಂದಿದೆ. ಶಾಲಾ ಬಾಲಕಿಯ ಸಾವಿನ ಪ್ರಕರಣ ಪೊಲೀಸ್ ತನಿಖೆಯಾಗಿ ಆರೋಪಿಗಳಿಗೆ ಶಿಕ್ಷೆಯಾಗಲಿದೆ. ನಾನು ಡಿಜಿಪಿ, ಗೃಹ ಕಾರ್ಯದರ್ಶಿಗಳಿಗೆ ಕಲ್ಲಕುರಿಚಿಗೆ ತೆರಳುವಂತೆ ಕೇಳಿದ್ದೇನೆ. ಜನರು ಶಾಂತಿಯನ್ನು ಕಾಪಾಡಲು ವಿನಂತಿಸುತ್ತೇನೆ” ಎಂದು ಅವರು ಹೇಳಿದ್ದಾರೆ.


