Homeಕರ್ನಾಟಕಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

ಮಂಗಳೂರು: ಅಮ್ಮನಿಗೆ ಜನ್ಮದಿನದ ಶುಭ ಕೋರಲು ಬಿಡದ ಶಾಲಾ ಮಂಡಲಿ; ವಿದ್ಯಾರ್ಥಿ ಆತ್ಮಹತ್ಯೆ

- Advertisement -
- Advertisement -

“ತಾಯಿಗೆ ಜನ್ಮದಿನದ ಶುಭಾಶಯಗಳು. ಎಲ್ಲರೂ ಖುಷಿಯಾಗಿರಿ, ಶಾಲೆಗೆ ತನಗಾಗಿ ಕಟ್ಟಿರುವ ಶುಲ್ಕವನ್ನು ವಾಪಸ್‌ ಪಡೆದುಕೊಳ್ಳಿ. ನಿಮ್ಮಿಂದ ನಾನು ದೂರವಾಗುತ್ತಿದ್ದೇನೆ. ನೀವು ನನ್ನನ್ನು ದುಃಖಕ್ಕೆ ತಳ್ಳಿದಿರಿ. ಯಾರೂ ಅಳಬೇಡಿ.”

-ಹೀಗೆ ಇಂಗ್ಲಿಷ್‌ನಲ್ಲಿ ಡೆತ್‌ ನೋಟ್ ಬರೆದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನ ತಲಪಾಡಿಯ ದೇವಿನಗರದ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿನಿಲಯದಲ್ಲಿ ನಡೆದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ರಮೇಶ್‌- ಮಂಜುಳಾ ದಂಪತಿಯ ಪುತ್ರ ಪೂರ್ವಜ್‌ (14) ಆತ್ಮಹತ್ಯೆ ಮಾಡಿಕೊಂಡಿದ್ದು, ವಿದ್ಯಾನಿಕೇತನ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

ಶನಿವಾರ ಪೂರ್ವಜ್ ತಾಯಿಯ ಜನ್ಮದಿನವಿತ್ತು. ಅಮ್ಮನಿಗೆ ಶುಭಕೋರಲು ಬಯಸಿದ್ದ ಪೂರ್ವಜ್‌ಗೆ ಹಾಸ್ಟೆಲ್‌ ವಾರ್ಡನ್ ಅವಕಾಶ ನೀಡಲಿಲ್ಲ. ಶಾಲಾ ಆಡಳಿತ ಮಂಡಳಿಯ ನಿಯಮದಂತೆ ಹಾಸ್ಟೆಲ್‌ ವಾರ್ಡನ್‌ ಮೊಬೈಲ್‌ ನೀಡಲು ನಿರಾಕರಿಸಿದ್ದರು ಎಂದು ‘ಪ್ರಜಾವಾಣಿ’ ವರದಿ ಮಾಡಿದೆ.

ರಾತ್ರಿ 12 ಗಂಟೆಯವರೆಗೂ ಮಂಕಾಗಿ ಕುಳಿತಿದ್ದ  ಪೂರ್ವಜ್‌ ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ ಕೋಣೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಭಾನುವಾರ ಬೆಳಿಗ್ಗೆ ವಿದ್ಯಾರ್ಥಿಯೊಬ್ಬ ಪೂರ್ವಜ್‌ ಶವ ನೋಡಿ, ವಾರ್ಡನ್‌ ಗಮನಕ್ಕೆ ತಂದಿದ್ದಾನೆ.

ವಿದ್ಯಾಸಂಸ್ಥೆ, ಶಾಲಾ ಪ್ರಾಂಶುಪಾಲರು ಹಾಗೂ ಹಾಸ್ಟೆಲ್‌ ವಾರ್ಡನ್‌ ವಿರುದ್ಧ ಮಂಜುಳಾ (ಸಾವಿಗೀಡಾದ ವಿದ್ಯಾರ್ಥಿಯ ತಾಯಿ) ಸಹೋದರ ಅರುಣ್‌ ಅವರು ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

‘ಶಾಲಾ ಆಡಳಿತ ಮಂಡಳಿಯ ಕಿರುಕುಳದಿಂದ ಪೂರ್ವಜ್‌ ಆತ್ಮಹತ್ಯೆ ಮಾಡಿದ್ದು, ಶಾಲಾ ಸೇರ್ಪಡೆ ವೇಳೆ ವಿದ್ಯಾರ್ಥಿಯ ಚಲನವಲನವನ್ನು ಪೋಷಕರಿಗೆ ತಿಳಿಸುತ್ತೇನೆ ಅಂದಿದ್ದರೂ ಈವರೆಗೆ ಪೂರ್ವಜ್‌ ಕುರಿತು ಯಾವುದೇ ಮಾಹಿತಿಯನ್ನು ನೀಡಿಲ್ಲ. ಹೆತ್ತವರು ಕರೆ ಮಾಡಿದರೂ ಸಂಭಾಷಣೆಗೆ ಶಾಲಾಡಳಿತ ಮಂಡಳಿ ಅವಕಾಶ ನೀಡುತ್ತಿರಲಿಲ್ಲ’ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಕುರಿತು ಶಿಕ್ಷಕ ಲಕ್ಷ್ಮಿಕಾಂತ ಮಿರಜಕರ ಪೋಸ್ಟ್‌ ಮಾಡಿದ್ದು, “ಕರ್ನಾಟಕ ರಾಜ್ಯದಲ್ಲಿ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ 826 ವಸತಿ ಶಾಲೆಗಳಿವೆ. ಬಡ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಸರಕಾರ ಸ್ಥಾಪಿಸಿರುವ ಈ ವಸತಿ ಶಾಲೆಗಳು ಇಡಿದೇಶಕ್ಕೆ ಮಾದರಿಯಾಗಿವೆ. ಆದರೆ ಕೇವಲ ಹಣ ಮಾಡುವ ಉದ್ದೇಶಕ್ಕೋಸ್ಕರ ಹುಟ್ಟಿಕೊಂಡಿರುವ ಇಂತಹ ಖಾಸಗಿ ವಸತಿ ಶಾಲೆಗಳು ತಮ್ಮ ಅತಿಯಾದ ನೀತಿ ನಿಯಮಗಳಿಂದಾಗಿ ಇಂತಹ ಶೋಚನೀಯ ಘಟನೆಗಳು ನಡೆಯಲು ಕಾರಣವಾಗುತ್ತಿವೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ಸಂಬಂಧಗಳ ಬೆಲೆ ಅರಿಯದೇ ಮಾನವೀಯತೆ ಮರೆತು ವರ್ತಿಸುವ ಇಂತಹ ಧನದಾಹಿ ರಕ್ಕಸ ವಸತಿ ಶಾಲೆಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳುವ ಅಗತ್ಯವಿದೆ. ಪ್ರತಿಷ್ಟೆಗೆಂದು, ಹಣವಿದೆಯೆಂದು ಇಂತಹ ಶಾಲೆಗಳ ಆಡಳಿತ ಮಂಡಳಿಗೆ ಬೆನ್ನು ಬಗ್ಗಿಸುವ ಪೋಷಕರು ತಮ್ಮ ಮಕ್ಕಳ ಜೀವದ ಬಗ್ಗೆ ಯೋಚಿಸಬೇಕಾಗಿದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಇಂತಹ ಶಿಕ್ಷಣ ಸಂಸ್ಥೆಗೆ ತಮ್ಮ ಮಕ್ಕಳನ್ನು ಸೇರಿಸುವ ಹೆತ್ತವರು ಇನ್ನು ಮುಂದೆಯಾದರೂ ಯೋಚನೆ ಮಾಡಿ… ಇದರ ಒಳ ಮರ್ಮವನ್ನು ದೇವರೇ ಬಲ್ಲ…

  2. ಇತ ಬರೆದಿದ್ದು ಎಲ್ಲಾ ಸುಳ್ಳು ಕಟ್ಟುಕಥೆ, ಪೀರ್ ಪಾಷಾ ಬಂಗ್ಲಾ ಚಾಲುಕ್ಯ ಶೈಲಿಯಲ್ಲಿ 12ನೇ ಶತಮಾನದಲ್ಲಿ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...