Homeಕರ್ನಾಟಕಕುಡಿಯುವ ನೀರನ್ನು ಮಕ್ಕಳೇ ತಂದರೆ ಒಳ್ಳೆಯದು: ಹೀಗೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇಕೆ?

ಕುಡಿಯುವ ನೀರನ್ನು ಮಕ್ಕಳೇ ತಂದರೆ ಒಳ್ಳೆಯದು: ಹೀಗೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇಕೆ?

- Advertisement -
- Advertisement -

ಜೂನ್ 25 ರಿಂದ ಆರಂಭವಾಗಲಿರುವ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳೇ ಕುಡಿಯುವ ನೀರು ತಂದರೆ ಒಳ್ಳೆಯದು. ಅದರಲ್ಲೂ ಬಿಸಿನೀರು ತಂದರೆ ಉತ್ತಮ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.

ತುಮಕೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲೂ ಬಿಸಿನೀರು ಇರುತ್ತದೆ. ಆದರೆ ಕೊರೊನಾ ಸೋಂಕು ಭಯದ ಕಾರಣಕ್ಕೆ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿ ನೀರು ಕುಡಿದ ನಂತರ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಇದು ಸ್ವಲ್ಪ ಕಷ್ಟವಾಗಬಹುದು. ಹಾಗಾಗಿ ವಿದ್ಯಾರ್ಥಿಗಳೇ ಮನೆಯಿಂದ ನೀರು ತಂದರೆ ಉತ್ತಮ ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಬಿಡಲು ಖಾಸಗಿ ಶಾಲೆಗಳ ಬಸ್‌ಗಳನ್ನು ಬಳಸಿಕೊಳ್ಳಲು ಯೋಜಿಸಲಾಗುತ್ತಿದೆ. ಹೇಗಿದ್ದರೂ 1 ರಿಂದ 9ನೇ ತರಗತಿವರೆಗೆ ಪರೀಕ್ಷೆಗಳು ಇಲ್ಲದಿರುವುದರಿಂದ ಬಸ್‌ಗಳು ಲಭ್ಯವಿರುತ್ತವೆ. ಆ ಬಸ್‌ಗಳಿಗೆ ಡೀಸೆಲ್ ಮತ್ತು ಪೆಟ್ರೊಲ್ ವೆಚ್ಚವನ್ನು ಶಿಕ್ಷಣ ಇಲಾಖೆಯಿಂದ ಭರಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ವಾಹನಗಳನ್ನು ಬಳಸಿಕೊಳ್ಳುವ ಸಂಬಂಧ ಜೂನ್ 1ರಂದು ಸಾರಿಗೆ ಇಲಾಖೆಯ ಅಧಿಕಾರಿಗಳ ಸಭೆ ಕರೆದಿದೆ. ಪ್ರತಿ ವರ್ಷ ವಾಹನಗಳನ್ನು ಆರ್.ಟಿ.ಒ ಇಲಾಖೆ ಒದಗಿಸುತ್ತಿತ್ತು. ಇದರ ಜೊತೆ ಪೊಲೀಸ್‌ ಇಲಾಖೆಯ ಅಧಿಕಾರಿಗಳ ಸಭೆಯನ್ನು ಕರೆಯಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ 500 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡುವಂತೆ ಸೂಚಿಸಲಾಗುವುದು ಎಂದರು.

ಭಾರತ್ ಸ್ಕೌಟ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು 75 ಲಕ್ಷ ಮಾಸ್ಕ್‌ಗಳನ್ನು ಕೈಯಾರ ತಯಾರು ಮಾಡಿದ್ದು ಅವುಗಳನ್ನು ನಮಗೆ ನೀಡಲಾಗಿದೆ. ಅದರಲ್ಲಿ ವಿದ್ಯಾರ್ಥಿಗಳ ಶ್ರಮವಿದೆ. ಉತ್ತಮ ಗುಣಮಟ್ಟದ ಮಾಸ್ಕ್‌ಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ 8.48 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು ಈಗಿನ ಸನ್ನಿವೇಶದಲ್ಲಿ ಇದು ಸಾಹಸದ ಕೆಲಸ. ಮಕ್ಕಳ ಸುರಕ್ಷತೆ ಮತ್ತು ಆತ್ಮವಿಶ್ವಾಸ ಹೆಚ್ಚಿಸಲು ಪೋಷಕರು ಕ್ರಮ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ವಾಟ್ಸಪ್ ಸಂದೇಶಗಳನ್ನು ನಂಬಬಾರದು. ಶಿಕ್ಷಣ ಇಲಾಖೆ ನೀಡುವ ಮಾಹಿತಿಗೆ ಹೆಚ್ಚು ಒತ್ತು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಈ ನಡುವೆ ದಿನೇ ದಿನೇ ಕೊರೊನಾ ಸೋಂಕಿತರ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಾಗುತ್ತಿರುವುದರಿಂದ ಪರೀಕ್ಷೆ ನಡೆಸುವುದು ಬೇಡ ಎಂದು ಚಿಂತಕರು, ಶಿಕ್ಷಣ ತಜ್ಞರು ಮತ್ತು ವಿದ್ಯಾರ್ಥಿ ಮುಖಂಡರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಇನ್ನು ಹಲವು ಚಿಂತಕರು ಸದ್ಯಕ್ಕೆ ಶಿಕ್ಷಣಕ್ಕಿಂತ ಆರೋಗ್ಯ ರಕ್ಷಿಸುವುದಕ್ಕಾಗಿ ಸರ್ಕಾರ ಗಮನ ಕೊಡಬೇಕಿದೆ. ಈ ಕುರಿತು ಸುರೇಶ್ ಕುಮಾರ್ ರವರು ಚಿಂತಸಬೇಕು ಎಂದು ಆಗ್ರಹಿಸಿದ್ದು, ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಚರ್ಚೆ ನಡೆಯುತ್ತಿದೆ.


ಇದನ್ನೂ ಓದಿ: ಇಂದಿನ ಪರಿಸ್ಥಿತಿಯಲ್ಲಿ SSLC ಪರೀಕ್ಷೆ ನಡೆಸುವುದು ಸೂಕ್ತವಲ್ಲ : ಶಿಕ್ಷಣ ತಜ್ಞರು, ಹೋರಾಟಗಾರರ ಅಭಿಮತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...