Homeಕರ್ನಾಟಕಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆ ಸಂಜೆ ವಾಪಸ್!

ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳು: ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆ ಸಂಜೆ ವಾಪಸ್!

‘ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ’ ಎಂಬ ಟೀಕೆಗೆ ರಾಜ್ಯ ಸರ್ಕಾರ ಗುರಿಯಾಗಿದೆ. ಅಲ್ಪಾವಧಿಯಲ್ಲಿ ನಾಲ್ಕು ಸುತ್ತೋಲೆಗಳನ್ನು ವಾಪಸ್ ಪಡೆಯಲಾಗಿದೆ.

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಬೇಕೆಂದು ಹೊರಡಿಸಿದ್ದ ಸುತ್ತೋಲೆಯನ್ನು ಒಂದೇ ದಿನದಲ್ಲಿ ವಾಪಸ್ ಪಡೆಯಲಾಗಿದ್ದು, ‘ಸುತ್ತೋಲೆ ಹೊರಡಿಸಿ ವಾಪಸ್‌ ಪಡೆಯುವ ಸರ್ಕಾರ’ ಎಂಬ ಟೀಕೆಗೆ ಮತ್ತೊಮ್ಮೆ ರಾಜ್ಯ ಸರ್ಕಾರ ಗುರಿಯಾಗಿದೆ.

ನವೆಂಬರ್ 11ರಂದು ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಕ್ಕೆ ಪಿಯುಸಿ ವಿದ್ಯಾರ್ಥಿಗಳನ್ನು ಕರೆತರುವಂತೆ ನವೆಂಬರ್ 8ರಂದು ಬೆಳಿಗ್ಗೆ ಹೊರಡಿಸಿದ್ದ ಸುತ್ತೋಲೆಯನ್ನು ಸಂಜೆ ವೇಳೆಗೆ ವಾಪಸ್ ಪಡೆಯಲಾಯಿತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಈ ಆದೇಶ ಹೊರಡಿಸಿದ್ದರು. ಜಿಲ್ಲೆಯ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳಿಂದ ಪ್ರಧಾನಿಯವರ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕೆಂಬ ಆದೇಶಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.

ಈ ನಡೆಯ ವಿರುದ್ಧ ಕಾಂಗ್ರೆಸ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕಿಸಿದ್ದರು. ವಿರೋಧ ವ್ಯಾಪಕವಾಗಬಹುದು ಎಂಬ ಕಾರಣದಿಂದ ಇಲಾಖೆಯ ಅಧಿಕಾರಿಗಳ ಸೂಚನೆಯ ಮೇರೆಗೆ ಉಪನಿರ್ದೇಶಕರು ಸದರಿ ಸುತ್ತೋಲೆ ಹಿಂಪಡೆದು ಇನ್ನೊಂದು ಸುತ್ತೋಲೆ ಹೊರಡಿಸಿದ್ದಾರೆ.

“ಸುತ್ತೋಲೆ ಹೊರಡಿಸಿ ನಂತರ ವಾಪಸ್‌ ಪಡೆಯುವ ಸರ್ಕಾರವಿದು” ಎಂಬ ಟೀಕೆಗೆ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಗುರಿಯಾಗಿದೆ. ಅಲ್ಪಾವಧಿಯಲ್ಲಿ ನಾಲ್ಕು ಸುತ್ತೋಲೆಗಳನ್ನು ವಾಪಸ್ ಪಡೆದಿರುವುದು ಇದಕ್ಕೆ ಸಾಕ್ಷಿಯಾಗಿದೆ.

ಸರ್ಕಾರಗಳು ಸಾಮಾನ್ಯವಾಗಿ ಯಾರದೋ ಹಿತಾಸಕ್ತಿಯ ಪರವಾಗಿ ತಪ್ಪು ಹೆಜ್ಜೆ ಇಡುವುದು ಸಾಮಾನ್ಯ. ಆದರೆ ಪದೇಪದೇ ಇದೇ ತಪ್ಪುಗಳು ಮರುಕಳಿಸುತ್ತಿರುವುದಕ್ಕೆ ಜನರು ವಿಷಾದ ವ್ಯಕ್ತಪಡಿಸುತ್ತಿದ್ದಾರೆ. ಮುಂದಾಲೋಚನೆ ಮಾಡದೆ ಜನವಿರೋಧಿ ಕ್ರಮಗಳನ್ನು ಜರುಗಿಸಿ, ಆಕ್ಷೇಪಗಳು ವ್ಯಕ್ತವಾದ ಬಳಿಕ ಸುತ್ತೋಲೆ ಹಿಂಪಡೆಯುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಒಂದೂವರೆ ತಿಂಗಳ ಅವಧಿಯಲ್ಲಿ ಇಂತಹ ನಾಲ್ಕು ಪ್ರಕರಣಗಳು ನಡೆದಿವೆ.

ನಾಡಗೀತೆಗೆ ಅವಮಾನ ಮಾಡಿದ ಆರೋಪವನ್ನು ಹೊತ್ತಿರುವ ರೋಹಿತ್ ಚಕ್ರತೀರ್ಥ ಎಂಬವರು ಮಾಡಿರುವ ಪಠ್ಯಪುಸ್ತಕ ಪರಿಷ್ಕರಣೆಗೆ ನಾಡಿನ ಹಿರಿಯ ಲೇಖಕರು ವಿರೋಧ ವ್ಯಕ್ತಪಡಿಸಿದ್ದರು. ಸರ್ಕಾರ ಅಂತಿಮವಾಗಿ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿತ್ತು. ನಾಡಿನ ಸಾಕ್ಷಿಪ್ರಜ್ಞೆಗಳಾದ ದೇವನೂರ ಮಹಾದೇವ ಹಾಗೂ ಡಾ. ಜಿ.ರಾಮಕೃಷ್ಣ ಅವರು ಸೇರಿದಂತೆ ಏಳು ಲೇಖಕರ ಪಠ್ಯವನ್ನು ಕೈಬಿಟ್ಟಿರುವುದಾಗಿ ತಿಳಿಸಿದ್ದ ಸೆ.23ರ ಆದೇಶವನ್ನು ಶಿಕ್ಷಣ ಇಲಾಖೆ ಅ.28ರಂದು ವಾಪಸ್‌ ಪಡೆಯಲಾಗಿತ್ತು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಅಕ್ಟೋಬರ್ 19ರಂದು ಸುತ್ತೋಲೆಯೊಂದನ್ನು ಹೊರಡಿಸಿ,  ‘ನಮ್ಮ ಶಾಲೆ – ನನ್ನ ಕೊಡುಗೆ’ ಯೋಜನೆ ಘೋಷಿಸಿದ್ದರು. ಆ ಮೂಲಕ ಪೋಷಕರು ನೀಡುವ ದೇಣಿಗೆಯನ್ನು ಶಾಲೆ- ಶೌಚಾಲಯಗಳ ಸ್ವಚ್ಛತೆ, ಕುಡಿಯುವ ನೀರಿನ ಸೌಲಭ್ಯ, ವಿದ್ಯುತ್ ಬಿಲ್ ಪಾವತಿ, ಆಟದ ಮೈದಾನದ ಸುಧಾರಣೆ, ಗಣಕ ಯಂತ್ರಗಳ ರಿಪೇರಿ, ಬೋಧನೋಪಕರಣಗಳು, ಅಗತ್ಯವಾದ ಅತಿಥಿ ಶಿಕ್ಷಕರ ವೇತನಗಳು ಸೇರಿದಂತೆ ಮೊದಲ ಮತ್ತು ಎರಡನೇ ಆದ್ಯತೆಯಲ್ಲಿ ಪಟ್ಟಿ ಮಾಡಿದ ಸುಮಾರು 17 ಅಗತ್ಯಗಳಿಗಾಗಿ ಎಸ್‌ಡಿಎಂಸಿಗಳು ದೇಣಿಗೆ ಸಂಗ್ರಹಿಸಬೇಕೆಂದು ಸರ್ಕಾರ ಸೂಚಿಸಿತ್ತು.

ಈ ಯೋಜನೆಗೆ ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆ ಮುಖಂಡರು, ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಮಠಗಳಿಗೆ, ವಿವಾದಾತ್ಮಕ ಸ್ವಾಮೀಜಿಗಳಿಗೆ ನೂರಾರು ಕೋಟಿ ಹಣ ನೀಡುವ ಸರ್ಕಾರ ಬಡಮಕ್ಕಳ ಶಿಕ್ಷಣಕ್ಕೆ ಕೊಡಲು ಹಣವಿಲ್ಲವೇ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ತದನಂತರ ಈ ಸುತ್ತೋಲೆಯನ್ನೂ ವಾಪಸ್ ಪಡೆಯಲಾಯಿತು.

ದಲಿತ ವಿದ್ಯಾರ್ಥಿಗಳಿಗೆ ವೇದಗಣಿತ ಕಲಿಸುವ ಯೋಜನೆಯನ್ನು ರೂಪಿಸಿದ್ದ ಸರ್ಕಾರ, ತೀವ್ರ ವಿರೋಧದ ಬಳಿಕ ತನ್ನ ನಿರ್ಧಾರದಿಂದ ಹಿಂದೆ ಸರಿಯಿತು. ಹೀಗಾಗಿ ದಲಿತರಿಗೆ ಮೀಸಲಾಗಿದ್ದ ಕೋಟ್ಯಂತರ ಹಣ ದುರುಪಯೋಗ ಆಗುವುದು ತಪ್ಪಿತು.

ಇದನ್ನೂ ಓದಿರಿ: ತುಮಕೂರು ಜಿಲ್ಲಾಸ್ಪತ್ರೆ ದುರಂತ: ಅಮಾನತಾದ ವೈದ್ಯೆಯಿಂದ ಪತ್ರ

ವೇದಗಣಿತ ನೆಪದಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕುರಿತು ದೂರುಗಳು ಬಂದಿದ್ದವು. ದಲಿತ ಹೋರಾಟಗಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ದಲಿತರಿಗೆ ಮೀಸಲಾದ ಹಣವನ್ನು ಖಾಸಗಿ ಸಂಸ್ಥೆಗಳು ದುರುಪಯೋಗ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂಬ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ‘ನಾನುಗೌರಿ.ಕಾಂ’ ಸರಣಿಯಾಗಿ ವರದಿ ಮಾಡಿತ್ತು. ವೇದಗಣಿತದಿಂದ ದಲಿತ ಮಕ್ಕಳ ಮೇಲೆ ಬೀರುವ ದೂರಗಾಮಿ ಪರಿಣಾಮಗಳ ಕುರಿತು ಬೆಳಕು ಚೆಲ್ಲಲಾಗಿತ್ತು. ಶಿಕ್ಷಣ ಇಲಾಖೆ ವ್ಯಾಪ್ತಿಯ ಕೆಲಸವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮಾಡುತ್ತಿರುವುದು ಕೂಡ ಅನುಮಾನಗಳಿಗೆ ಆಸ್ಪದ ನೀಡಿತ್ತು. ಜನಾಕ್ರೋಶಕ್ಕೆ ಮಣಿದು ಈ ಸುತ್ತೋಲೆಯನ್ನೂ ವಾಪಸ್ ಪಡೆಯಿತು.

ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರುವಂತೆ ಸೂಚಿಸಿದ ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕರು, ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸಿದ್ದರು. ತಕ್ಷಣ ಎಚ್ಚೆತ್ತುಕೊಂಡ ಸರ್ಕಾರ ಈ ಸುತ್ತೋಲೆಯನ್ನೂ ವಾಪಸ್ ಪಡೆದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...

ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

ಬೆಂಗಳೂರಿನ ಆಶೀರ್ವಾದ್ ಸೆಂಟರ್ ನಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಪದ್ಮಾರವರ ಕುಟುಂಬ, ಸಹ ಹೋರಾಟಗಾರು, ಚಿಂತಕರು, ಸಾಹಿತಿಗಳು ಪಾಲ್ಗೊಂಡಿದ್ದರು. ಸಭೆಯಲ್ಲಿ ಪದ್ಮಾರವರ ಜೊತೆಗಿನ ಒಡನಾಟವನ್ನು ನೆನೆಯಲಾಯಿತು. ಡಿಸೆಂಬರ್ 25 ರಂದು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ...