Homeಚಳವಳಿಸಂದರ್ಶಕ ಉಪನ್ಯಾಸಕಿಯಾಗಲು ನೀತಾ ಅಂಬಾನಿಗೆ ಪ್ರಸ್ತಾಪ: ಬನಾರಸ್‌ ವಿವಿಯ ವಿದ್ಯಾರ್ಥಿಗಳ ಪ್ರತಿಭಟನೆ

ಸಂದರ್ಶಕ ಉಪನ್ಯಾಸಕಿಯಾಗಲು ನೀತಾ ಅಂಬಾನಿಗೆ ಪ್ರಸ್ತಾಪ: ಬನಾರಸ್‌ ವಿವಿಯ ವಿದ್ಯಾರ್ಥಿಗಳ ಪ್ರತಿಭಟನೆ

ಉತ್ತರ ಪ್ರದೇಶದ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕುಲಪತಿ ರಾಕೇಶ್ ಭಟ್ನಾಗರ್ ಅವರ ಮನೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

- Advertisement -
- Advertisement -

ರಿಲಯನ್ಸ್ ಫೌಂಡೇಶನ್ ಮುಖ್ಯಸ್ಥೆ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಕಾರ್ಯನಿರ್ವಾಹಕ ನಿರ್ದೇಶಕಿ ನೀತಾ ಅಂಬಾನಿಗೆ ಬನಾರಸ್ ಹಿಂದೂ ವಿಶ್ವವಿದ್ಯಾಯಲದಲ್ಲಿ ಸಂದರ್ಶಕ ಉಪನ್ಯಾಸಕಿಯಾಗಲು ಪ್ರಸ್ತಾಪ ನೀಡಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಮಹಿಳಾ ಅಧ್ಯಯನ ಮತ್ತು ಅಭಿವೃದ್ಧಿ ಕೇಂದ್ರವು ವಿಶ್ವವಿದ್ಯಾನಿಲಯದಲ್ಲಿ ‘ಮಹಿಳಾ ಅಧ್ಯಯನ’ವನ್ನು ಪಾಠ ಮಾಡಲು ಸಂದರ್ಶಕ ಉಪನ್ಯಾಸಕಿಯಾಗಲು ಅವರಿಗೆ ಪ್ರಸ್ತಾಪವನ್ನು ಕಳುಹಿಸಿತ್ತು. ನೀತಾ ಅಂಬಾನಿ ಇದಕ್ಕೆ ಮೌಖಿಕ ಒಪ್ಪಿಗೆ ನೀಡಿದ್ದಾರೆ ಎಂದು ವರದಿಯಾಗಿತ್ತು.

ಉತ್ತರ ಪ್ರದೇಶದ ವಾರಣಾಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದ ಸುಮಾರು 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮಂಗಳವಾರ ಬಿಎಚ್‌ಯು ಕುಲಪತಿ ರಾಕೇಶ್ ಭಟ್ನಾಗರ್ ಅವರ ಮನೆಯ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಇದನ್ನೂ ಓದಿ: ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡಲಿರುವ ನೀತಾ ಅಂಬಾನಿ!

ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ ನಂತರ ಪ್ರತಿಕ್ರಿಯೆ ನೀಡಿರುವ ಅಧಿಕಾರಿಗಳು, ನೀತಾ ಅಂಬಾನಿ ಅಥವಾ ರಿಲಯನ್ಸ್‌ಗೂ ಈ ಪ್ರಸ್ತಾಪಕ್ಕೆ ಯಾವುದೇ ಸಂಬಂಧವಿಲ್ಲ. ನೀತಾ ಅಂಬಾನಿ ಮತ್ತು ಇತರ ಪ್ರಭಾವಿ ಮಹಿಳೆಯರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳೊಂದಿಗೆ, ವಿಶೇಷವಾಗಿ ಮಹಿಳೆಯರೊಂದಿಗೆ ಸಂವಹನ ನಡೆಸುವುದು ನಮ್ಮ ಆಲೋಚನೆಯಾಗಿತ್ತು ಎಂದಿದ್ದಾರೆ.

8rdbfr5o
PC: NDTV

ಘಟನೆಗೆ ಪ್ರತಿಕ್ರಿಯೆ ನೀಡಿರುವ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್, 57 ವರ್ಷದ ನೀತಾ ಅಂಬಾನಿ ಅವರಿಗೆ ವಿಶ್ವವಿದ್ಯಾಲಯದಿಂದ ಅಂತಹ ಯಾವುದೇ ಆಹ್ವಾನ ಬಂದಿಲ್ಲ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: ಕೇರಳ: ನಾನು ಬಿಜೆಪಿಯ ಕಾರ್ಯಕರ್ತನೂ ಅಲ್ಲ & ಸ್ಪರ್ಧಿಸುವುದಿಲ್ಲ- ಬಿಜೆಪಿ ಟಿಕೆಟ್ ಘೋಷಿಸಲಾಗಿದ್ದ ವ್ಯಕ್ತಿ

“ನೀತಾ ಅಂಬಾನಿ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಸಂದರ್ಶಕ ಉಪನ್ಯಾಸಕರಾಗಲಿದ್ದಾರೆ ಎಂಬ ವರದಿಗಳು ನಕಲಿ. ಅವರಿಗೆ ಅಂತಹ ಯಾವುದೇ ಆಹ್ವಾನ ಬಂದಿಲ್ಲ” ಎಂದು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ವಕ್ತಾರರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೆಖಿಸಿದೆ.

ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿ ಶುಭಮ್ ತಿವಾರಿ, ’ನೀತಾ ಅಂಬಾನಿ ಬದಲಿಗೆ ಮಹಿಳಾ ಸಬಲೀಕರಣಕ್ಕೆ ಕೆಲಸ ಮಾಡಿ, ಮಹಿಳೆಯರಿಗೆ ಉದಾಹರಣೆ ಆಗಿರುವವರನ್ನು ಸಂದರ್ಶಕ ಉಪನ್ಯಾಸಕಿಯರಾಗಲು ಆಹ್ವಾನಿಸಬೇಕು’ ಎಂದಿದ್ದಾರೆ.

ನೀತಾ ಅಂಬಾನಿ ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ಅವರ ಪತ್ನಿಯಾಗಿದ್ದು, ಅವರು ಮುಂಬೈ ವಿಶ್ವವಿದ್ಯಾಲಯದಿಂದ ಬಿ.ಕಾಂ ಪದವಿ ಪಡೆದಿದ್ದಾರೆ. 2014 ರಲ್ಲಿ ರಿಲಯನ್ಸ್ ಇಂಡಸ್ಟ್ರೀಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. 2010 ರಲ್ಲಿ ಅವರು ರಿಲಯನ್ಸ್ ಫೌಂಡೇಶನ್‌ ಅನ್ನು ಪ್ರಾರಂಭಿಸಿದರು.


ಇದನ್ನೂ ಓದಿ: ಅರ್ನಾಬ್ ವಾಟ್ಸಾಪ್ ಚಾಟ್: ಕೇಂದ್ರಕ್ಕೆ ಯಾವುದೇ ಮಾಹಿತಿಯಿಲ್ಲ ಎಂದ ಸಚಿವ ಜಿ.ಕಿಶನ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...