Homeಮುಖಪುಟಸಂಸ್ಕೃತ ಪ್ರೊಫೆಸರ್‌ ಫಿರೋಜ್‌ ಖಾನ್‌ರನ್ನು ಬೆಂಬಲಿಸಿ ವಿದ್ಯಾರ್ಥಿಗಳ ರ್‍ಯಾಲಿ: ಧರ್ಮ ತಾರತಮ್ಯಕ್ಕೆ ಖಂಡನೆ

ಸಂಸ್ಕೃತ ಪ್ರೊಫೆಸರ್‌ ಫಿರೋಜ್‌ ಖಾನ್‌ರನ್ನು ಬೆಂಬಲಿಸಿ ವಿದ್ಯಾರ್ಥಿಗಳ ರ್‍ಯಾಲಿ: ಧರ್ಮ ತಾರತಮ್ಯಕ್ಕೆ ಖಂಡನೆ

- Advertisement -
- Advertisement -

ಬನಾರಸ್‌ ಹಿಂದೂ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ವಿಭಾಗಕ್ಕೆ ನೇಮಕಗೊಂಡಿದ್ದ ಉಪ ಪ್ರಾಧ್ಯಾಪಕ ಫಿರೋಜ್‌ ಖಾನ್‌ ಅವರಿಗೆ ಬೆಂಬಲ ಸೂಚಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಫಿರೋಜ್‌ ಮುಸ್ಲಿಂ ಧರ್ಮದವರು ಎನ್ನುವ ಕಾರಣಕ್ಕೆ ಸಂಸ್ಕೃತ ವಿಭಾಗದ 30 ವಿದ್ಯಾರ್ಥಿಗಳು ಫಿರೋಜ್‌ ಖಾನ್‌ ಅವರಿಂದ ಪಾಠ ಕೇಳಲು ನಿರಾಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಧರ್ಮ ತಾರತಮ್ಯವನ್ನು ಖಂಡಿಸಿ, ಫಿರೋಜ್‌ ಖಾನ್‌ ಅವರನ್ನು ವಿದ್ಯಾರ್ಥಿಗಳು ಸ್ವೀಕರಿಸಬೇಕು. ಮತ್ತೆ ನೇಮಕ ಮಾಡಿಕೊಳ್ಳಬೇಕು ಎಂದು ನೂರಾರು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ.

ಜಂಟಿ ಕ್ರಿಯಾ ಸಮಿತಿ ಬ್ಯಾನರ್ ಅಡಿಯಲ್ಲಿ, ಎಬಿವಿಪಿ ವಿದ್ಯಾರ್ಥಿ ಸಂಘಟನೆಯನ್ನು ಹೊರತುಪಡಿಸಿ, ಉಳಿದ ವಿದ್ಯಾರ್ಥಿಗಳ ಗುಂಪು ಫಿರೋಜ್‌ ಖಾನ್‌ ಅವರಿಗೆ ಬೆಂಬಲ ಸೂಚಿಸಿತು. ಕೈಯಲ್ಲಿ ಫಿರೋಜ್‌ ಖಾನ್‌ ಪರ ಭಿತ್ತಿಪತ್ರ, ಬ್ಯಾನರ್‌ ಹಿಡಿದು ಪ್ರತಿಭಟನೆ ನಡೆಸಿದರು. ನವೆಂಬರ್‌ 5ರಂದು ಫಿರೋಜ್‌ ಖಾನ್‌, ಸಂಸ್ಕೃತ ವಿದ್ಯಾಧರ್ಮ ವಿಜ್ಞಾನ ವಿಭಾಗದ ಇಲಾಖೆಯ ಉಪ ಪ್ರಾಧ್ಯಾಪಕ ಹುದ್ದೆಗೆ ನೇಮಕಗೊಂಡಿದ್ದರು. ಆದರೆ ಸಂಸ್ಕೃತ ವಿಭಾಗ ವಿದ್ಯಾರ್ಥಿಗಳು ಫಿರೋಜ್‌, ಮುಸ್ಲಿಂ ಎಂಬ ಕಾರಣದಿಂದ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕ್ರಮವನ್ನು ಖಂಡಿಸಿ, ಇತರೆ ವಿದ್ಯಾರ್ಥಿಗಳು ಖಂಡಿಸಿದ್ದಾರೆ.

ಲಂಕಾ ಗೇಟ್‌ನಿಂದ ರವಿದಾಸ್‌ ಗೇಟ್‌ವರೆಗೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ’ನಾವು ನಿಮ್ಮೊಂದಿಗೆ ಇದ್ದೇವೆ. ಭಾಷೆಗೆ ಧರ್ಮದ ನಂಟಿಲ್ಲ’. ಯಾರು ಬೇಕಾದರೂ ಯಾವ ಭಾಷೆಯನ್ನಾದರೂ ಕಲಿಯಬಹುದು ಮತ್ತು ಕಲಿಸಬಹುದು ಎಂದು ಘೋಷಣೆ ಕೂಗುತ್ತ, ಬ್ಯಾನರ್‌ ಹಿಡಿದು, ಫಿರೋಜ್‌ ಖಾನ್‌ ಅವರಿಗೆ ಬೆಂಬಲ ಸೂಚಿಸಿದರು.

ಧರ್ಮ ಮತ್ತು ಜಾತಿ ಆಧಾರಿಸಿ ವಿಶ್ವವಿದ್ಯಾಲಯಗಳಲ್ಲಿ ತಾರತಮ್ಯ ಮಾಡುವುದು ಅಸಾಂವಿಧಾನಿಕ ಕ್ರಮ. ಬನಾರಸ್‌ ಹಿಂದೂ ವಿಶ್ವವಿದ್ಯಾಲಯ ಸಂಸ್ಥಾಪಕ ಮದನ್‌ ಮೋಹನ್‌ ಮಾಳವಿಯಾ ಸಹ ಭಾರತ ಕೇವಲ ಹಿಂದೂಗಳದ್ದಲ್ಲ ಇಲ್ಲಿ ಮುಸ್ಲಿಂ, ಸಿಖ್ಖ್‌, ಕ್ರಿಶ್ಚಿಯನ್‌, ಜೈನ್‌ ಅವರನ್ನೂ ಒಳಗೊಂಡಿದ್ದು, ಎಲ್ಲರ ಭಾರತ ಎಂದಿದ್ದರು ಎಂದು ರಾಜ್‌ ಅಭಿಶೇಕ್‌ ಹೇಳಿದರು.

ಇದನ್ನೂ ಓದಿ: ಸಂಸ್ಕೃತ ಪ್ರಾಧ್ಯಾಪಕ ಫಿರೋಜ್‌ ಖಾನ್ ನೇಮಕಕ್ಕೆ ವಿರೋಧ: ವಿದ್ಯಾರ್ಥಿಗಳ ನಡೆಗೆ ಬಿಜೆಪಿಯ ಪರೇಶ್‌ ಖಂಡನೆ

ಖಾನ್‌ ಅವರು ವಿದ್ಯಾರ್ಥಿಗಳಿಗೆ ಕಲಿಸಲು ಸಾಧ್ಯವಾಗಿಲ್ಲ. ನವೆಂಬರ್‌ 7ರಿಂದಲೇ ವಿಭಾಗದ ಗೇಟ್‌ ಬಂದ್‌ ಮಾಡಲಾಗಿದೆ. ವಿಭಾಗದ ಡೀನ್‌ ಮಾತನಾಡಿ, ಯಾರೂ ಪ್ರತಿಭಟನೆಯಲ್ಲಿ ಭಾಗಿಯಾಗಬೇಡಿ. ತರಗತಿಗಳನ್ನು ತೆಗೆದುಕೊಳ್ಳಿ, ಪರೀಕ್ಷೆ ಸಮಯ ಹತ್ತಿರವಾಗುತ್ತಿದೆ ಎಂದು ಮನವಿ ಮಾಡಿದ್ದಾರೆ. ಆದರೂ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎಂದು ಸಲಾವಿ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...