Homeಕರ್ನಾಟಕಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

ಹಿಜಾಬ್‌ ಬೆಂಬಲಿಸಿ ‘ನೀಲಿ ಶಾಲು’ ಧರಿಸಿದ ವಿದ್ಯಾರ್ಥಿಗಳು; ಮೊಳಗಿದ ‘ಜೈ ಭೀಮ್‌’ ಘೋಷಣೆ

- Advertisement -
- Advertisement -

ಮುಸ್ಲಿಂ ವಿದ್ಯಾರ್ಥಿನಿಯರು ಮೊದಲಿನಿಂದಲೂ ಧರಿಸಿ ಬರುತ್ತಿರುವ ಹಿಜಾಬ್‌ಗೆ ವಿರೋಧ ಮಾಡಬಾರದು ಎಂದು ಆಗ್ರಹಿಸಿದ ವಿದ್ಯಾರ್ಥಿಗಳು ‘ನೀಲಿ ಶಾಲು’ ಧರಿಸಿ ಕಾಲೇಜಿಗೆ ಬಂದಿದ್ದಾರೆ. ‘ಜೈ ಭೀಮ್‌’, ‘ಜೈ ಅಂಬೇಡ್ಕರ್‌’ ಎಂದು ಕೂಗಿ ಹಿಜಾಬ್‌ಗೆ ಬೆಂಬಲ ಸೂಚಿಸಿರುವುದು ಹೊಸ ಸಂಚಲನ ಮೂಡಿಸಿದೆ.

ಚಿಕ್ಕಮಗಳೂರಿನ ಐಡಿಎಸ್‌ಜಿ ಕಾಲೇಜಿನ ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಘೋಷಣೆ ಕೂಗಿದ್ದಾರೆ. ಹಿಜಾಬ್‌ ವಿರೋಧಿಸಿ ಕೇಸರಿ ಶಾಲು ಹಾಕಿಕೊಂಡು ಬರುತ್ತಿದ್ದ ಬೆಳವಣಿಗೆಯ ಹಿನ್ನೆಲೆಯಲ್ಲಿ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್ ವಿರೋಧಿಸಿ ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಕಾಲೇಜಿನಲ್ಲಿ ಹಿಜಾಬ್‌ಗೆ ಅವಕಾಶ ನೀಡಬಾರದು ಎಂದು ಕೆಲ ವಿದ್ಯಾರ್ಥಿಗಳು ಆಗ್ರಹಿಸಿದರು.

ಹಿಜಾಬ್ ನಮ್ಮ ಹಕ್ಕು ಎಂದು ತೆಗೆಯಲ್ಲ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಹೇಳಿದರು. ಕಾಲೇಜಿನಲ್ಲಿ ಕೆಲ ಕಾಲ ಗೊಂದಲದ ವಾತಾವರಣ ಇತ್ತು. ಐಡಿಎಸ್‌ಜಿ ಕಾಲೇಜಿನಲ್ಲಿನ ಹಲವು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಹಿಜಾಬ್‌ಗೆ ಬೆಂಬಲ ವ್ಯಕ್ತಪಡಿಸಿದರು. ಕಾಲೇಜಿಗೆ ರಜೆ ಘೋಷಿಸಲಾಗಿದೆ ಎಂದು ವರದಿಯಾಗಿದೆ.

ಈ ನಡುವೆ ಕೇಸರಿ ಹಾಗೂ ನೀಲಿ ಶಾಲುಗಳ ನಡುವೆ ಧರಿಸಿದವರು ಮುಖಾಮುಖಿಯಾಗಿರುವ ವಿಡಿಯೊಗಳು ಹರಿದಾಡಿವೆ. ನೀಲಿ ಶಾಲು ಧರಿಸಿದ ವಿದ್ಯಾರ್ಥಿಗಳು ‘ಒಂದೇ ಮಾತರಂ’, ‘ಭಾರತ್‌ ಮಾತಾ ಕೀ ಜೈ’, ‘ಜೈ ಭೀಮ್‌‌’, ‘ಜೈ ಅಂಬೇಡ್ಕರ್‌’ ಎಂಬ ಘೋಷಣೆ ಮೊಳಗಿಸಿದ್ದಾರೆ.


ಇದನ್ನೂ ಓದಿರಿ: ಕುಂದಾಪುರ: ಹಿಜಾಬ್ ಧರಿಸಿ ಬಂದ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕೊಠಡಿ, ಪಾಠವಿಲ್ಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...