Homeಮುಖಪುಟಶಾಲೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜಾತಿ ದೌರ್ಜನ್ಯ: ಅಧ್ಯಯನದಿಂದ ಬಯಲು

ಶಾಲೆಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಜಾತಿ ದೌರ್ಜನ್ಯ: ಅಧ್ಯಯನದಿಂದ ಬಯಲು

- Advertisement -
- Advertisement -

ಶಾಲಾ-ಕಾಲೇಜುಗಳಲ್ಲಿ ಜಾತಿ ತಾರತಮ್ಯದ ಘಟನೆಗಳು ವ್ಯಾಪಕವಾಗಿ ನಡೆಯುತ್ತಿರುತ್ತದೆ ಆದರೆ ಕೆಲವೇ ಕೆಲವು ಘಟನೆಗಳು ಮಾತ್ರ ಅದರಲ್ಲಿ ಬಹಿರಂಗವಾಗುತ್ತದೆ. ತಮಿಳುನಾಡಿನ ಶಾಲೆಗಳಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ತಾರತಮ್ಯ ಮತ್ತು ಹಿಂಸಾಚಾರವನ್ನು ವರದಿಯೊಂದು ಬಹಿರಂಗಪಡಿಸಿದೆ. ಟಿಎನ್‌ಯುಇಎಫ್ ವರದಿ ಪ್ರಕಾರ, ತಮಿಳುನಾಡಿನ ಶಾಲಾ-ಕಾಲೇಜುಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ಮತ್ತು ತಾರತಮ್ಯ ವ್ಯಾಪಕವಾಗಿ ನಡೆಯುತ್ತಿದೆ.

ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ಫ್ರಂಟ್ (ಟಿಎನ್‌ಯುಇಎಫ್) ರಾಜ್ಯದ 441 ಶಾಲೆಗಳಲ್ಲಿ ನಡೆಸಿದ ಅಧ್ಯಯನವು ರಾಜ್ಯದ ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಜಾತಿ ಆಧಾರಿತ ಹಿಂಸಾಚಾರ ಮತ್ತು ತಾರತಮ್ಯ ವ್ಯಾಪಕವಾಗಿ ಇದೆ ಎಂಬುವುದನ್ನು ಪತ್ತೆ ಹಚ್ಚಿದೆ.

ಡಿ.23 ರಂದು ಶನಿವಾರ ತಮಿಳುನಾಡು ಅಸ್ಪೃಶ್ಯತೆ ನಿರ್ಮೂಲನಾ ಫ್ರಂಟ್ ತನ್ನ ವರದಿಯನ್ನು ಬಿಡುಗಡೆಗೊಳಿಸಿದೆ. ಅಧ್ಯಯನವು ಶಿಕ್ಷಕರು ಕೂಡ ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿದ್ದಾರೆ ಎನ್ನುವುದನ್ನು ತಿಳಿಸಿದೆ. ಶಾಲೆಗಳು ಮತ್ತು ಶಿಕ್ಷಕರ ಬಗ್ಗೆ ಹೆಸರುಗಳನ್ನು ಮಾಧ್ಯಮಗಳಿಗೆ ಬಹಿರಂಗಪಡಿಸದಿದ್ದರೂ, ತ್ವರಿತ ಕ್ರಮವನ್ನು ಕೋರಿ ರಾಜ್ಯ ಸರ್ಕಾರಕ್ಕೆ ವರದಿಯನ್ನು ನೀಡಲಾಗಿದೆ ಎಂದು ಟಿಎನ್‌ಯುಇಎಫ್ ಹೇಳಿದೆ.

ರಾಜ್ಯದ 36 ಜಿಲ್ಲೆಗಳಲ್ಲಿನ ಒಟ್ಟು 321 ಸರ್ಕಾರಿ ಶಾಲೆಗಳು, 58 ಸರ್ಕಾರಿ ಅನುದಾನಿತ ಶಾಲೆಗಳು ಮತ್ತು 62 ಖಾಸಗಿ ಶಾಲೆಗಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿದೆ. 6 ರಿಂದ 12ನೇ ತರಗತಿಯವರೆಗಿನ 644 ವಿದ್ಯಾರ್ಥಿಗಳನ್ನು ಸಮೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ 333 ಬಾಲಕರು ಮತ್ತು 311 ಬಾಲಕಿಯರು ಸೇರಿದ್ದಾರೆ. ಅಧ್ಯಯನದಲ್ಲಿ ಭಾಗವಹಿಸಿದ ಹೆಚ್ಚಿನ ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ ಸಮುದಾಯಕ್ಕೆ  ಸೇರಿದ್ದಾರೆ. ಸುಮಾರು 10% ವಿದ್ಯಾರ್ಥಿಗಳು ಹಿಂದುಳಿದ ಜಾತಿಗಳು (ಬಿಸಿ) ಮತ್ತು ಅತ್ಯಂತ ಹಿಂದುಳಿದ ವರ್ಗಗಳ ಮಕ್ಕಳು ಇದ್ದರು ಎಂದು ಸಮೀಕ್ಷೆ ನಡೆಸಿದ TNUEFನ ಪ್ರಧಾನ ಕಾರ್ಯದರ್ಶಿ ಸ್ಯಾಮುವೆಲ್ ರಾಜ್ ಹೇಳಿದ್ದಾರೆ.

ಅಧ್ಯಯನದ ಪ್ರಕಾರ, ರಾಮನಾಥಪುರಂ, ಕಡಲೂರು ಮತ್ತು ತಿರುವಣ್ಣಾಮಲೈ ಸೇರಿದಂತೆ ವಿವಿಧ ಜಿಲ್ಲೆಗಳ  25 ಶಾಲೆಗಳಲ್ಲಿ ವಿದ್ಯಾರ್ಥಿಗಳಲ್ಲಿ ಜಾತಿ ದೌರ್ಜನ್ಯ ವರದಿಯಾಗಿದೆ. ಕನಿಷ್ಠ 23 ಶಾಲೆಗಳಲ್ಲಿ ವಿದ್ಯಾರ್ಥಿಗಳು ಜಾತಿವಾದಿ ಭಾವನೆಗಳನ್ನು ಸಕ್ರಿಯವಾಗಿ ವ್ಯಕ್ತಪಡಿಸುವುದು ಕಂಡುಬಂದಿದೆ. 10 ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜಾತಿಗಳ ಆಧಾರದ ಮೇಲೆ ಪ್ರತ್ಯೇಕ ಗುಂಪುಗಳನ್ನು ರಚಿಸಿದ್ದಾರೆ. ಚೆನ್ನೈ, ಕಡಲೂರು ಮತ್ತು ತಿರುನೆಲ್ವೇಲಿ ಸೇರಿದಂತೆ 20 ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜಾತಿಯನ್ನು ಸೂಚಿಸಲು ನಿರ್ದಿಷ್ಟ ಬಣ್ಣಗಳ ಕರ್ಚೀಫ್‌ಗಳು, ಬಿಂದಿಗಳು, ದಾರಗಳು ಮತ್ತು ಸ್ಟಿಕ್ಕರ್‌ಗಳನ್ನು ಬಳಸುತ್ತಾರೆ. ಇದಲ್ಲದೆ ಇತರ 34 ಜಾತಿ ಸೂಚಕ ಸಂಕೇತಗಳನ್ನು ಮಕ್ಕಳು ಬಳಕೆ ಮಾಡುತ್ತಿದ್ದಾರೆ ಎನ್ನುವುದನ್ನು ಅಧ್ಯಯನವು ಬಹಿರಂಗಪಡಿಸಿದೆ.

15 ಶಾಲೆಗಳಲ್ಲಿ ದಲಿತ ವಿದ್ಯಾರ್ಥಿಗಳ ಕೈಯ್ಯಲ್ಲಿ ಶೌಚಾಲಯಗಳನ್ನು ಶುಚಿಗೊಳಿಸಲಾಗುತ್ತದೆ. 6 ಶಾಲೆಗಳಲ್ಲಿ ವಿದ್ಯಾರ್ಥಿಗಳು ತಮ್ಮ ಜಾತಿಯ ಆಧಾರದ ಮೇಲೆ ಪ್ರತ್ಯೇಕ ಸಾಲುಗಳಲ್ಲಿ ನಿಂತು ಮಧ್ಯಾಹ್ನದ ಊಟವನ್ನು ಸ್ವೀಕರಿಸುವಂತೆ ಪ್ರೋತ್ಸಾಹಿಸುತ್ತಿದ್ದಾರೆ ಎಂದು ವರದಿಯು ಬಹಿರಂಗಪಡಿಸಿದೆ.

ಕನಿಷ್ಠ 3 ಶಾಲೆಗಳಲ್ಲಿ ಶಿಕ್ಷಕರಲ್ಲಿ ಜಾತಿ ಆಧಾರಿತ ತಾರತಮ್ಯವು ಚಾಲ್ತಿಯಲ್ಲಿದೆ ಎಂದು ಅಧ್ಯಯನವು ಬಹಿರಂಗಪಡಿಸಿದೆ. 5 ಶಾಲೆಗಳಲ್ಲಿ ಶಿಕ್ಷಕರು ತರಗತಿಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಸಕ್ರಿಯವಾಗಿ ಪ್ರಚಾರ ಮಾಡುತ್ತಾರೆ. ಒಂದು ಶಾಲೆಯಲ್ಲಿ ಶಿಕ್ಷಕರು ದಲಿತ ವಿದ್ಯಾರ್ಥಿಗಳನ್ನು ಮುಟ್ಟಲು ನಿರಾಕರಿಸಿದ್ದು, 3 ಶಾಲೆಗಳಲ್ಲಿ ದಲಿತ ವಿದ್ಯಾರ್ಥಿಗಳನ್ನು ಅತಿಯಾಗಿ ಶಿಕ್ಷಿಸಿರುವುದು ಕಂಡುಬಂದಿದೆ. ಮದುರೈನ ಶಾಲೆಯೊಂದರಲ್ಲಿ 12 ನೇ ತರಗತಿ ಟಾಪರ್‌ಗಳಿಗೆ ಅಭಿನಂದನಾ ಸಮಾರಂಭವನ್ನು ರದ್ದುಗೊಳಿಸಲಾಗಿದೆ. ಏಕೆಂದರೆ ಮೊದಲ ಮತ್ತು ಎರಡನೇ ರ್ಯಾಂಕ್ ಹೊಂದಿರುವವರು ಇಬ್ಬರೂ ದಲಿತರು. ಅವರಿಗೆ ಬಹುಮಾನ ಕೊಡಬೇಕಾಗುತ್ತದೆ ಎಂಬ ಕಾರಣಕ್ಕೆ ಈ ರೀತಿ ಮಾಡಲಾಗಿದೆ ಎನ್ನುವ ಆಘಾತಕಾರಿ ಅಂಶಗಳು ಬಹಿರಂಗವಾಗಿದೆ.

ಈ ಸಮಸ್ಯೆಗಳನ್ನು ನಿವಾರಣೆಗೆ ಸಮೀಕ್ಷೆ ನಡೆಸಿದ TNUEF ಸರ್ಕಾರಕ್ಕೆ 23 ಶಿಫಾರಸುಗಳನ್ನು ಬಿಡುಗಡೆ ಮಾಡಿದೆ. ಜಾತಿವಾದವನ್ನು ಪರಿಹರಿಸಲು ಆಂತರಿಕ ದೂರುಗಳ ಸಮಿತಿಯಂತಹ ಪ್ರತ್ಯೇಕ ಪರಿಹಾರ ವ್ಯವಸ್ಥೆಯನ್ನು ರಾಜ್ಯದಾದ್ಯಂತ ಶಾಲೆಗಳಲ್ಲಿ ಸ್ಥಾಪಿಸಬೇಕು ಎಂದು ಆಗ್ರಹಿಸಿದೆ. ಈ ಬಗ್ಗೆ ಪೋಷಕರು, ವಿದ್ಯಾರ್ಥಿಗಳು ಮತ್ತು ಶಿಕ್ಷಕರೊಂದಿಗೆ ಸಮಿತಿಗಳನ್ನು ಸ್ಥಾಪಿಸಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಮತ್ತು ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ದೂರು ಪೆಟ್ಟಿಗೆಗಳನ್ನು ಇರಿಸಲು ಅವರು ಸರ್ಕಾರವನ್ನು ಕೋರಿದ್ದಾರೆ. ಮುಂದಿನ ತಿಂಗಳೊಳಗೆ ಶಾಲೆಗಳಲ್ಲಿ ಜಾತಿ ಆಧಾರಿತ ತಾರತಮ್ಯ ಪ್ರವೃತ್ತಿಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ, ಸಂಸ್ಥೆಯು ಶಾಲೆಗಳು ಮತ್ತು ಶಿಕ್ಷಕರ ಹೆಸರನ್ನು ಮಾದ್ಯಮಗಳಿಗೆ ಬಹಿರಂಗಪಡಿಸುತ್ತದೆ ಎಂದು ಸಾಮುವೆಲ್ ಎಚ್ಚರಿಸಿದ್ದಾರೆ.

ಇದನ್ನು ಓದಿ: ರಾಸಾಯನಿಕ ಹೊತ್ತ ಹಡಗಿನ ಮೇಲೆ ಇರಾನ್‌ನಿಂದ ಡ್ರೋನ್‌ ದಾಳಿ: ಗುಜರಾತ್‌ ಬಳಿ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...