Homeಮುಖಪುಟತಮಿಳುನಾಡಿನಲ್ಲಿ ಹೋರ್ಡಿಂಗ್‌ ಬಿದ್ದು ಯುವತಿ ಸಾವು: ಗಾಳಿಯ ಮೇಲೆ ಕೇಸು ಹಾಕಿ ಎಂದ ರಾಜಕಾರಣಿ...

ತಮಿಳುನಾಡಿನಲ್ಲಿ ಹೋರ್ಡಿಂಗ್‌ ಬಿದ್ದು ಯುವತಿ ಸಾವು: ಗಾಳಿಯ ಮೇಲೆ ಕೇಸು ಹಾಕಿ ಎಂದ ರಾಜಕಾರಣಿ…

- Advertisement -
- Advertisement -

ಕಳೆದ ತಿಂಗಳು ಸೆಪ್ಟೆಂಬರ್ 12 ರಂದು, ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಭಾಶ್ರಿ ರವಿಯವರು ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಅಕ್ರಮವಾಗಿ ನಿರ್ಮಿಸಲಾದ ಹೋರ್ಡಿಂಗ್ ತನ್ನ ಮೇಲೆ ಬಿದ್ದ ಪರಿಣಾಮ ಸಾವನಪ್ಪಿದ್ದರು. ಅವರ ದುರಂತ ಸಾವಿಗೆ ತಮಿಳುನಾಡಿನ ಹಿರಿಯ ರಾಜಕಾರಣಿ ಪೊನ್ನಯ್ಯನ್ “ಗಾಳಿಯನ್ನು ಶಿಕ್ಷಿಸಿ” ಎಂದು ವಿಲಕ್ಷಣ ಹೇಳಿಕೆ ನೀಡಿದ್ದಾರೆ.

ಸ್ಥಳೀಯ ಸುದ್ದಿವಾಹಿನಿಯೊಂದಿಗೆ ಮಾತನಾಡಿದ AIADMK ಮುಖಂಡ ಪೊನ್ನಯ್ಯನ್, ಹೋರ್ಡಿಂಗ್ ನಿರ್ಮಿಸಿದ ವ್ಯಕ್ತಿಯನ್ನು ಮಹಿಳೆಯ ಸಾವಿಗೆ ಹೊಣೆಗಾರರನ್ನಾಗಿ ಮಾಡಲಾಗುವುದಿಲ್ಲ ಮತ್ತು ಕೇಸು ದಾಖಲಿಬೇಕಾದರೆ ಗಾಳಿಯ ಮೇಲೆ ದಾಖಲಿಸಿ ಶಿಕ್ಷಿಸಿ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.

ಚೆನ್ನೈನಿಂದ 320 ಕಿಲೋಮೀಟರ್ ದೂರದಲ್ಲಿರುವ ಕೃಷ್ಣಗಿರಿ ಜಿಲ್ಲೆಯಲ್ಲಿ ಮೂರು ವಾರಗಳ ನಂತರ ಬಂಧನಕ್ಕೊಳಗಾದ ಆಡಳಿತಾರೂಡ AIADMK ಸದಸ್ಯ ಜಯಗೋಪಾಲ್ ಅವರು ಈ ಹೋರ್ಡಿಂಗ್ ಅನ್ನು ನಿರ್ಮಿಸಿದ್ದರು.

“ಬ್ಯಾನರ್ ಇಟ್ಟುಕೊಂಡ ವ್ಯಕ್ತಿ ಅವಳನ್ನು ಸಾವಿಗೆ ತಳ್ಳಲಿಲ್ಲ. ಯಾವುದೇ ಪ್ರಕರಣವನ್ನು ದಾಖಲಿಸಬೇಕಾದರೆ, ಗಾಳಿಯನ್ನು ಹೊಣೆಗಾರರನ್ನಾಗಿ ಮಾಡಿ ”ಎಂದು ಅವರು ಹೇಳಿಕೆ ನೀಡಿದ್ದಾರೆ.

ಸೆಪ್ಟೆಂಬರ್ 12 ರಂದು, ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸುಭಾಶ್ರಿ ರವಿ (23) ಹೆಲ್ಮೆಟ್ ಧರಿಸಿ ತನ್ನ ದ್ವಿಚಕ್ರ ವಾಹನದಲ್ಲಿ ಪ್ರಮುಖ ನಗರದ ರಸ್ತೆಯೊಂದರಲ್ಲಿ ಹೋಗುತ್ತಿದ್ದರು. ಆಗ ತಮಿಳುನಾಡು ಮುಖ್ಯಮಂತ್ರಿ ಇ ಪಳನಿಸಾಮಿ ಮತ್ತು ಮಾಜಿ ಮುಖ್ಯಮಂತ್ರಿ ಜಯಲಲಿತಾರವರ ಫೋಟೊ ಇದ್ದ ಭಾರೀ ಗಾತ್ರದ ಕಟೌಟ್ ಆಕೆಯ ಸ್ಕೂಟರ್‍ ಮೇಲೆ ಬಿದ್ದಿತು. ಇದರಿಂದ ಗಾಬರಿಗೊಳಗಾದ ಆಕೆ ಆಯಾತಪ್ಪಿ ವಾಟರ್ ಟ್ಯಾಂಕರ್ ಸ್ಕೂಟರ್‌ನಿಂದ ಡಿಕ್ಕಿ ಹೊಡೆದಾಗ ಅವಳ ತಲೆಗೆ ಗಾಯವಾಯಿತು. ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತದರೂ ಅಲ್ಲಿ ಆಕೆ ಸಾವನ್ನಪ್ಪಿದ್ದಾಳೆ.

ಈ ಘಟನೆಯು ರಾಜ್ಯಾದ್ಯಂತ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ನಟ ಮತ್ತು ರಾಜಕಾರಣಿ ಕಮಲ್ ಹಾಸನ್  ರಾಜಕಾರಣಿಗಳನ್ನು ಕಟುವಾಗಿ ಟೀಕಿಸಿದ್ದರು. ರಾಜಕೀಯ ಪಕ್ಷಗಳು ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ನಿರ್ಮಿಸುವುದನ್ನು ನಿಷೇಧಿಸಿದ ಮದ್ರಾಸ್ ಹೈಕೋರ್ಟ್, “ರಾಜ್ಯವು ಅಕ್ರಮ ಹೋರ್ಡಿಂಗ್‌ಗಳ ವಿರುದ್ಧ ಕ್ರಮ ಕೈಗೊಳ್ಳುವವರೆಗೆ “ಇನ್ನೂ ಎಷ್ಟು ಲೀಟರ್ ರಕ್ತ” ಚೆಲ್ಲುಬೇಕು ಎಂದು ಪ್ರಶ್ನಿಸಿತ್ತು.

ಆದರೆ, ಚೆನ್ನೈನಿಂದ 60 ಕಿಲೋಮೀಟರ್ ದೂರದಲ್ಲಿರುವ ಐತಿಹಾಸಿಕ ಪಟ್ಟಣವಾದ ಮಾಮಲ್ಲಾಪುರಂನಲ್ಲಿ ನಡೆದ ಅನೌಪಚಾರಿಕ ಶೃಂಗಸಭೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರನ್ನು ಸ್ವಾಗತಿಸಲು ಗುರುವಾರ ನ್ಯಾಯಾಲಯವು, 30 ಬ್ಯಾನರ್‌ಗಳನ್ನು ಹಾಕಲು ಅನುಮತಿ ನೀಡಿತು. ಭಾರತ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ನಡುವೆ ವ್ಯತ್ಯಾಸವಿದೆ ಎಂದು ನ್ಯಾಯಾಲಯ ವಾದಿಸಿತು.

ಆದರೆ ಈ ಘಟನೆಯನ್ನು ಡಿಎಂಕೆ ಮುಖಂಡ ಕಮಲ್ ಹಾಸನ್‌ ತೀವ್ರವಾಗಿ ಖಂಡಿಸಿದ್ದರು. ಅನಧಿಕೃತವಾಗಿ ಹೋರ್ಡಿಂಗ್‌ ಹಾಕಿರುವವರ ಮೇಲೆ ಸೂಕ್ತ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದರು.

ನಾಲ್ಕು ಬಾರಿ ಶಾಸಕರಾದ ಪೊನ್ನಯ್ಯನ್ “ಎಂ.ಕೆ. ಸ್ಟಾಲಿನ್ ಈ ಬಗ್ಗೆ ಸುಳ್ಳು ಹೇಳುತ್ತಾರೆ ಮತ್ತು ಉತ್ಪ್ರೇಕ್ಷೆ ಮಾಡುತ್ತಾರೆ. ಪ್ರಕರಣವು ಸುಪ್ರೀಂ ಕೋರ್ಟ್‌ಗೆ ಹೋಗಲಿ. ಅವರು ತೀರ್ಮಾನಿಸಲಿ. ಕರುಣಾನಿಧಿಯ ಆಡಳಿತ ದಿನಗಳಿಂದ ಎಷ್ಟು ಬ್ಯಾನರ್‌ಗಳನ್ನು ಹಾಕಿದ್ದರೆಂದು ಗೊತ್ತಾಗುತ್ತದೆ ಎಂದು ಅವರ “ಬ್ಯಾನರ್ ಒಂದು ಸಂವಹನ ರೂಪವಾಗಿದೆ ” ಎಂದು ತಿಳಿಸಿದ್ದಾರೆ.

ನವೆಂಬರ್ 2017 ರಲ್ಲಿ, 30 ವರ್ಷದ ಸಾಫ್ಟ್‌ವೇರ್ ಎಂಜಿನಿಯರ್, ತಮಿಳುನಾಡಿನ ಕೊಯಮತ್ತೂರಿನಲ್ಲಿ ಸ್ನೇಹಿತರನ್ನು ಭೇಟಿಯಾಗಿ ವಾಪಸ್ ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅವರ ಬೈಕ್‌ಗೆ ಮರದ ಹೋರ್ಡಿಂಗ್‌ ಡಿಕ್ಕಿ ಹೊಡೆದು ಮೃತಪಟ್ಟರು. ಆಡಳಿತಾರೂಡ AIADMK ಎಂಜಿಆರ್‌ರವರ ಶತಮಾನೋತ್ಸವಕ್ಕಾಗಿ ಆ ಹೋರ್ಡಿಂಗ್‌ಅನ್ನು ರಸ್ತೆಯಲ್ಲಿ ಸ್ಥಾಪಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...