Homeಕರ್ನಾಟಕನ.​ 24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ್​ ಹೆಗ್ಡೆ

ನ.​ 24ರೊಳಗೆ ಕಾಂತರಾಜು ಜಾತಿ ಗಣತಿ ವರದಿ ಸಲ್ಲಿಕೆ: ಜಯಪ್ರಕಾಶ್​ ಹೆಗ್ಡೆ

- Advertisement -
- Advertisement -

ಕಾಂತರಾಜು ಸಮಿತಿ ಸಿದ್ಧಪಡಿಸಿರುವ ಜಾತಿಗಣತಿ ವರದಿಯನ್ನು ನವೆಂಬರ್ 24ರೊಳಗೆ ಸರ್ಕಾರಕ್ಕೆ ಸಲ್ಲಿಕೆ ಮಾಡುತ್ತೇನೆ ಎಂದು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ಹೇಳಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಜಾತಿಗಣತಿ ವರದಿ ಸ್ವೀಕರಿಸಿ ತಿರಸ್ಕರಿಸಬೇಕು ಎಂದು ಸರ್ಕಾರದ ಮೇಲೆ ಒತ್ತಡ ಹೇರಲು ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಒಕ್ಕಲಿಗ ಸಮುದಾಯದ ನಾಯಕರು ತೀರ್ಮಾನಿಸಿದೆ.

ಈ ಬಗ್ಗೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್​ ಹೆಗ್ಡೆ ಅವರು ಮಾಧ್ಯಮದವರ ಜೊತೆ ಮಾತನಾಡಿ, ”ಶ್ರೀಗಳು ಯಾವ ಅರ್ಥದಲ್ಲಿ ಹೇಳಿದ್ದಾರೆ ಎನ್ನುವುದು ನನಗೆ ಗೊತ್ತಿಲ್ಲ. ಈಶ್ವರಪ್ಪ ಸಹ ಯಾವ ಅರ್ಥದಲ್ಲಿ ಹೇಳಿದ್ದಾರೋ ನನಗೆ ಗೊತ್ತಿಲ್ಲ. ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

”ಶಿಕ್ಷಕರೇ ಹೋಗಿ ಜನಗಣತಿಯ ಅಂಕಿ-ಅಂಶ ಪಡೆದಿದ್ದಾರೆ. ಪರ-ವಿರೋಧಗಳ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ. ಮರು ಪರಿಶೀಲನೆ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಬೇಕು. ವರದಿ ಸರಿ ಇಲ್ಲ ಎಂದು ಯಾವ ಆಧಾರದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ನವೆಂಬರ್​ 24ರೊಳಗೆ ಜಾತಿ ಗಣತಿ ವರದಿ ಸಲ್ಲಿಕೆ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಜಾತಿಗಣತಿ ವಿಚಾರವಾಗಿ ಮಾತನಾಡಿದ್ದ ಸಚಿವ ಕೆಎಸ್ ಈಶ್ವರಪ್ಪ, ”ಕಾಂತರಾಜ್ ವರದಿಯನ್ನು ಬೆಂಕಿಗೆ ಹಾಕಿ ಸುಡಬೇಕು ಎಂದು ಹೇಳಿದ್ದರು. ಅಲ್ಲದೇ ಮಾಜಿ ಸಚಿವ ಕೆ.ಗೋಪಾಲಯ್ಯ, ಕಾಂತರಾಜ್ ವರದಿಯಿಂದ ಒಕ್ಕಲಿಗರಿಗೆ ನಷ್ಟವಾಗಲಿದೆ ಎಂದಿದ್ದರು.

ರಾಜ್ಯ ರಾಜಕಾರಣದಲ್ಲಿ ಜಾತಿ ಗಣತಿ ವರದಿ ಭಾರೀ ಸದ್ದು ಮಾಡುತ್ತಿದ್ದು, ಸರ್ಕಾರಕ್ಕೆ ವರದಿ ಸಲ್ಲಿಕೆಯಾದ ಬಳಿಕ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎನ್ನುವುದನ್ನು ಕಾದುನೋಡಬೇಕಿದೆ.

ಇದನ್ನೂ ಓದಿ: ಜಾತಿ ನಿಂದನೆ ಪ್ರಕರಣ: ಹಿಂದುತ್ವವಾದಿ ಪುನೀತ್ ಕೆರೆಹಳ್ಳಿ ಬಂಧನ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...