Homeಮುಖಪುಟಬಿಲ್ಕಿಸ್ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿದ ದಾಖಲೆಗಳನ್ನು ಸಲ್ಲಿಸಿ: ಗುಜರಾತ್ ಸರ್ಕಾರಕ್ಕೆ ಸುಪ್ರಿಂ ತಾಕೀತು

ಬಿಲ್ಕಿಸ್ ಅತ್ಯಾಚಾರಿಗಳಿಗೆ ಕ್ಷಮಾದಾನ ನೀಡಿದ ದಾಖಲೆಗಳನ್ನು ಸಲ್ಲಿಸಿ: ಗುಜರಾತ್ ಸರ್ಕಾರಕ್ಕೆ ಸುಪ್ರಿಂ ತಾಕೀತು

- Advertisement -
- Advertisement -

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಅಪರಾಧಿಗಳಿಗೆ ಶಿಕ್ಷೆಯಿಂದ ವಿನಾಯಿತಿ ನೀಡಿದ ದಾಖಲೆಗಳನ್ನು ಏಪ್ರಿಲ್ 18 ರಂದು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಗುಜರಾತ್ ಸರ್ಕಾರಕ್ಕೆ ತಾಕೀತು ಮಾಡಿದೆ.

ನ್ಯಾಯಮೂರ್ತಿಗಳಾದ ಕೆ ಎಂ ಜೋಸೆಫ್ ಮತ್ತು ಬಿ ವಿ ನಾಗರತ್ನ ಅವರನ್ನೊಳಗೊಂಡ ಪೀಠವು ಬಿಲ್ಕಿಸ್ ಬಾನೊ ಅತ್ಯಾಚಾರ ಅಪರಾಧಿಗಳನ್ನು ಮುಂಚಿತ ಬಿಡುಗಡೆ ಮಾಡಿದ್ದು ಹಲವು ಸಮಸ್ಯೆಗಳನ್ನು ಹೊಂದಿದೆ. ಹಾಗಾಗಿ ಇದನ್ನು ವಿವರವಾಗಿ ಆಲಿಸುವ ಅಗತ್ಯವಿದೆ. ಅಲ್ಲದೆ ನ್ಯಾಯಪೀಠವು ಈ ಪ್ರಕರಣದಲ್ಲಿ ಭಾವನೆಗಳಲ್ಲಿ ಮುಳುಗಿಹೋಗಿದೆ ಕಾನೂನಿನ ಪ್ರಕಾರವೇ ವರ್ತಿಸುತ್ತದೆ ಎಂದು ಸ್ಪಷ್ಪಪಡಿಸಿದೆ.

ಕ್ಷಮಾಧಾನ ನೀಡಿದ್ದುರ ಕುರಿತಾಗಿ ಕೇಂದ್ರ ಮತ್ತು ಸರ್ಕಾರ ಮತ್ತು ಗುಜರಾತ್ ಸರ್ಕಾರಗಳು ತಮ್ಮ ಪ್ರತಿಕ್ರಿಯೆನ್ನು ಸಲ್ಲಿಸಬೇಕು ಎಂದು ಸಹ ಪೀಠ ನಿರ್ದೇಶಿಸಿದೆ.

ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ ಪ್ರಕರಣದ 11 ಅಪರಾಧಿಗಳ ಮುಂಚಿತ ಬಿಡುಗಡೆ ಪ್ರಶ್ನಿಸಿ, ಬಿಲ್ಕಿಸ್ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಸುಪ್ರೀಂ ಕೋರ್ಟ್, ಆ ಕುರಿತ ವಿಚಾರಣೆಗೆ ವಿಶೇ‍ಷ ಪೀಠ ರಚಿಸಿದೆ.

2002 ರ ಗುಜರಾತ್‌ ಗಲಭೆಯಲ್ಲಿ ಬಿಲ್ಕಿಸ್ ಬಾನೋ ಅವರು ಗರ್ಭಿಣಿಯಾಗಿದ್ದಾಗ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದು, ಮಾತ್ರವಲ್ಲದೆ ಅವರ ಮೂರು ವರ್ಷದ ಮಗಳು ಸೇರಿದಂತೆ ಅವರ ಕುಟುಂಬಿಕರನ್ನು ಕೊಲೆ ಮಾಡಲಾಗಿತ್ತು. ಒಟ್ಟು 11 ಜನರು ಈ ಪ್ರಕರಣದಲ್ಲಿ ತಪ್ಪಿತಸ್ಥರು ಎಂದು ಸಾಬೀತಾಗಿ 2008 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಆದರೂ ಈ ವರ್ಷ ಆಗಸ್ಟ್ 15 ರಂದು ಗುಜರಾತ್ ಸರ್ಕಾರವು ಅವರನ್ನು ಬಿಡುಗಡೆ ಮಾಡಿದೆ.

ಬಿಲ್ಕಿಸ್ ಬಾನೊ ಅತ್ಯಾಚಾರ  ಪ್ರಕರಣದಲ್ಲಿ ಶಿಕ್ಷೆಗೊಳಗಾದ 11 ಅಪರಾಧಿಗಳಲ್ಲಿ ಶೈಲೇಶ್ ಚಿಮನ್‌ಲಾಲ್ ಭಟ್ ಕಳೆದ ವರ್ಷ ಅವಧಿಗೂ ಮುನ್ನ ಬಿಡುಗಡೆಯಾಗಿದ್ದು, ಶನಿವಾರ, ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇಬ್ಬರು ಬಿಜೆಪಿ ಶಾಸಕರೊಂದಿಗೆ ವೇದಿಕೆ ಹಂಚಿಕೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಬಿಲ್ಕಿಸ್ ಬಾನೊ ಅತ್ಯಾಚಾರಿ ಬಿಜೆಪಿ ಶಾಸಕರೊಂದಿಗೆ ಗುಜರಾತ್ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...