Homeಮುಖಪುಟನಾಳೆಯೊಳಗೆ ಎರಡು ಪತ್ರಗಳನ್ನು ಸಲ್ಲಿಸಿ: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಸುಪ್ರೀಂ ಸೂಚನೆ

ನಾಳೆಯೊಳಗೆ ಎರಡು ಪತ್ರಗಳನ್ನು ಸಲ್ಲಿಸಿ: ಮಹಾರಾಷ್ಟ್ರ ಮುಖ್ಯಮಂತ್ರಿಗೆ ಸುಪ್ರೀಂ ಸೂಚನೆ

- Advertisement -
- Advertisement -

ಮಹಾರಾಷ್ಟ್ರ ರಾಜ್ಯಪಾಲರು ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನಿಸಿರುವ ಪತ್ರ ಮತ್ತು ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ನೀಡಿರುವ ಬೆಂಬಲ ಪತ್ರಗಳನ್ನು ಸೋಮವಾರ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಸಾಲಿಸಿಟರ್‌ ತುಷಾರ ಮೆಹ್ತಾ ಅವರಿಗೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ.

ಇದೇ ವೇಳೆ ಮಹಾರಾಷ್ಟ್ರ ಸರ್ಕಾರ, ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೆ ಸುಪ್ರೀಂಕೋರ್ಟ್ ನೋಟೀಸ್ ನೀಡಿದೆ.

ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿಲ್ಲ. ಇದರಿಂದ ದೇವೇಂದ್ರ ಫಡ್ನಾವಿಸ್‌ರವರಿಗೆ ದೊಡ್ಡ ರಿಲೀಫ್‌ ತಂದುಕೊಟ್ಟಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿನ ರಾಜ್ಯಪಾಲರು ಅಮಿತ್ ಶಾರವರ ಹಿಟ್‌ಮ್ಯಾನ್ ಆಗಿದ್ದಾರೆ: ಕಾಂಗ್ರೆಸ್‌ನ 10 ಪ್ರಶ್ನೆಗಳು
“ವಿಶ್ವಾಸಮತ ಸಾಬೀತುಪಡಿಸುವುದೇ ಪ್ರಜಾಪ್ರಭುತ್ವದ ಹಾಲ್‌ಮಾರ್ಕ್‌ ಆಗಿದೆ. ಅದನ್ನು ಹೊರತುಪಡಿಸಿ ಬೇರೆ ಔಪಚಾರಿಕತೆಯ ಅಗತ್ಯವಿಲ್ಲ” ಎಂದು ಕಾಂಗ್ರೆಸ್ ಪ್ರತಿನಿಧಿಸಿದ ಅಭಿಷೇಕ್ ಸಿಂಗ್ವಿ ನ್ಯಾಯಾಲಯಕ್ಕೆ ತಿಳಿಸಿದ್ದರು.

ಅದಕ್ಕೆ ವಿರುದ್ಧವಾಗಿ, ರಾಜ್ಯಪಾಲರ ನಿರ್ಧಾರವನ್ನು ನ್ಯಾಯಾಂಗ ಪರಿಶೀಲನೆಗೆ ಒಳಪಡಿಸುವ ಅಗತ್ಯವಿಲ್ಲ ಎಂದು ವಾದ ಮಂಡಿಸಿತು. ಸುಪ್ರೀಂ ಸೂಚಿಸಿದ ಆ ಎರಡು ಪತ್ರಗಳನ್ನು ಹಾಜರುಪಡಿಸಲು ಹೆಚ್ಚಿನ ಸಮಯವನ್ನು ಬಿಜೆಪಿ ಕೇಳಿದರೂ ಕೂಡ, ನ್ಯಾಯಾಲಯ ಅದನ್ನು ತಿರಸ್ಕರಿಸಿದೆ.

ಎನ್‌ಸಿಪಿಯ 54 ಶಾಸಕರ ಬೆಂಬಲ ಬಿಜೆಪಿಗಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಇದು ಸಂಪೂರ್ಣ ಸುಳ್ಳು ಎಂದು ಎನ್‌ಸಿಪಿ ವಾದಿಸಿದೆ. ಮಾತ್ರವಲ್ಲದೇ ತನ್ನೊಂದಿಗೆ 50 ಶಾಸಕರು ಇದ್ದಾರೆ ಎಂದು ಎನ್‌ಸಿಪಿ ಹೇಳಿದೆ. ಅವರಲ್ಲಿ ಹೆಚ್ಚಿನವರು ನಿನ್ನೆ ಸಂಜೆ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು, ಸಭೆಯಲ್ಲಿ ಅಜಿತ್ ಪವಾರ್ ಅವರನ್ನು ಶಾಸಕಾಂಗ ಪಕ್ಷದ ನಾಯಕ ಹುದ್ದೆಯಿಂದ ಕೆಳಗಿಳಿಸಲಾಗಿದೆ.

ಬಿಜೆಪಿ ಶಾಸಕರು ಮತ್ತು ಇಬ್ಬರು ಸ್ವತಂತ್ರರ ಪರವಾಗಿ ಹಾಜರಾದ ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹಟ್ಗಿ ಅವರು ರಾಜ್ಯಪಾಲರ ನಿರ್ಧಾರವನ್ನು ನ್ಯಾಯಾಂಗ ಪರಿಶೀಲನೆಗೆ ಒಳಪಡಿಸಲಾಗುವುದಿಲ್ಲ ಎಂದು ಹೇಳಿದ್ದಾರೆ. ರಾಜ್ಯಪಾಲರು 361 ನೇ ವಿಧಿ ಅನ್ವಯ ವಿನಾಯಿತಿ ಹೊಂದಿದ್ದಾರೆ. ರಾಜ್ಯಪಾಲರ ವಿರುದ್ಧ ಯಾವುದೇ ಕ್ರಮಕ್ಕೆ ಸಂಪೂರ್ಣ ನಿರ್ಬಂಧವಿದೆ” ಎಂದು ಅವರು ಹೇಳಿದರು.

2018 ರಲ್ಲಿ ಕರ್ನಾಟಕದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಸುಪ್ರೀಂ ಕೋರ್ಟ್ ವಿಶ್ವಾಸಮತಯಾಚನೆಗೆ ಆದೇಶಿಸಿದ ನಂತರ, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಬಿಜೆಪಿಯ ಬಿಎಸ್ ಯಡಿಯೂರಪ್ಪ ಅವರು ತಮ್ಮ ಬಳಿ ಅಗತ್ಯ ಶಾಸಕರ ಬೆಂಬಲ ಇಲ್ಲವೆಂದು ಹೇಳಿ ರಾಜೀನಾಮೆ ನೀಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ರಚನೆಯನ್ನು ಸಮರ್ಥಿಸಿಕೊಂಡ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್

154 ಶಾಸಕರನ್ನು ಒಟ್ಟಿಗೆ ಹೊಂದಿರುವ ಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್, ಸರ್ಕಾರ ರಚಿಸುವ ಹಕ್ಕನ್ನು ಹೊಂದಿದ್ದೇವೆ ಎಂದು ತಿಳಿಸಿದ್ದಾರೆ. “ಗೌರವಾನ್ವಿತ ರಾಜ್ಯಪಾಲರು ಪಕ್ಷಪಾತದ ರೀತಿಯಲ್ಲಿ ವರ್ತಿಸಿದ್ದಾರೆ ಮತ್ತು ರಾಜ್ಯಪಾಲರ ಉನ್ನತ ಕಚೇರಿಯನ್ನು ಅಪಹಾಸ್ಯ ಮಾಡಿದ್ದಾರೆ” ಎಂದು ಕಾಂಗ್ರೆಸ್ ಆರೋಪಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಎನ್.ಸಿ.ಪಿ. ಮುಖಂಡ ನವಾಜ್ ಮಲ್ಲಿಕ್, ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಸ್ವಾಗತಿಸುತ್ತೇವೆ. ನಮ್ಮ ಪಕ್ಷದ ಶಾಸಕರು ವಾಪಸ್ ಬಂದಿದ್ದಾರೆ. ಶರದ್ ಪವಾರ್ ಶಾಸಕರನ್ನು ಭೇಟಿ ಮಾಡಿದ್ದಾರೆ. ಮುಖ್ಯಮಂತ್ರಿ ದೇವೇಂದ್ರ ಫಡ್ನಾವೀಸ್ ಅಲ್ಪಮತದ ಸರ್ಕಾರವೆಂಬ ವಾಸ್ತವವನ್ನು ಅರ್ಥ ಮಾಡಿಕೊಳ್ಳಬೇಕು. ಗೌರವಯುತವಾಗಿ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನೊಂದೆಡೆ ನಾಪತ್ತೆಯಾಗಿದ್ದ ಶಾಸಕ ದೌಲತ್ ದರೋಡ ಪತ್ತಯಾಗಿದ್ದಾರೆ. ನಾನು ಸುರಕ್ಷಿತವಾಗಿದ್ದೇನೆ. ಎನ್.ಸಿ.ಪಿ ಪಕ್ಷದ ಗಡಿಯಾರದ ಗುರುತಿನ ಮೇಲೆ ಗೆದ್ದು ಬಂದು ಶಾಸಕನಾಗಿದ್ದೇನೆ. ಪಕ್ಷವನ್ನು ಬದಲಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಶರದ್ ಪವಾರ್ ಏನೇ ನಿರ್ಧಾರ ತೆಗೆದುಕೊಂಡರೂ ಅವರ ಜೊತೆ ಇರುತ್ತೇನೆ. ಯಾವುದೇ ವದಂತಿಗಳನ್ನು ನಂಬಬೇಡಿ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...