Homeಮುಖಪುಟಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

ಸಿಬಿಐ ಮುಖ್ಯಸ್ಥರಾಗಿ ಆಯ್ಕೆಯಾದ ಸುಬೋಧ್ ಕುಮಾರ್ ಜೈಸ್ವಾಲ್; ಕೇಂದ್ರಕ್ಕೆ ಹಿನ್ನಡೆ?

- Advertisement -
- Advertisement -

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಕೇಂದ್ರ ಸರ್ಕಾರ ಸಿದ್ದಪಡಿಸಿದ್ದ ಪಟ್ಟಿಯನ್ನು ಕೈಬಿಟ್ಟಿರುವ ತ್ರಿಸದಸ್ಯ ಸಮಿತಿಯು ಈ ಸ್ಥಾನಕ್ಕೆ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ. ಸುಪ್ರೀಂಕೋರ್ಟ್‌‌ನ ಮುಖ್ಯ ನ್ಯಾಯಮೂರ್ತಿ ರಮಣ ಅವರು, ಈ ಸ್ಥಾನಕ್ಕೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದರಿಂದ ಕೇಂದ್ರ ತಯಾರಿಸಿದ್ದ ಪಟ್ಟಿಯು ಹಿನ್ನಲೆಗೆ ಸರಿದಿದೆ.

ಸಿಬಿಐ ಮುಖ್ಯ ನಿರ್ದೇಶಕರ ಸ್ಥಾನಕ್ಕೆ ಆಯ್ಕೆಯಾಗಿರುವ ಜೈಸ್ವಾಲ್ ಅವರು 1985 ರ ಬ್ಯಾಚ್‌ನ ಮಹಾರಾಷ್ಟ್ರ ಕೇಡರ್‌ನ ಐಪಿಎಸ್ ಅಧಿಕಾರಿ. ಅವರು ಪ್ರಸ್ತುತ ಕೇಂದ್ರ ಕೈಗಾರಿಕಾ ಭದ್ರತಾ ಪಡೆಗಳ ಮುಖ್ಯಸ್ಥರಾಗಿದ್ದಾರೆ. ಅವರನ್ನು ಈಗ ಎರಡು ವರ್ಷಗಳ ಅವಧಿಗೆ ಕೇಂದ್ರ ತನಿಖಾ ವಿಭಾಗದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.

ಕೇಂದ್ರ ಸರ್ಕಾರವು ಸಿದ್ದಪಡಿಸಿದ್ದ ಪಟ್ಟಿಯಲ್ಲಿ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿ ಅವರ ಹೆಸರುಗಳಿದ್ದವು ಎಂದು ತಿಳಿದು ಬಂದಿದ್ದು, ಈ ಇಬ್ಬರೂ ಬಿಜೆಪಿಗೆ ಆಪ್ತರಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ ನ್ಯಾಯಮೂರ್ತಿ ರಮಣ ಮತ್ತು ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರ ನಡುವೆ ಸರಣಿ ಸಭೆಗಳ ನಂತರ ಮಂಗಳವಾರ ಸಂಜೆ ಸರ್ಕಾರದ ಅಧಿಸೂಚನೆ ಬಂದಿದೆ.

ಸಿಜೆಐ ಉಲ್ಲೇಖಿಸಿದ್ದು ಏನು?

ಸಿಬಿಐ ನಿರ್ದೇಶಕ ಅಥವಾ ಮುಖ್ಯಸ್ಥರನ್ನು ಪ್ರಧಾನಮಂತ್ರಿ, ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯಲ್ಲಿನ ವಿಪಕ್ಷ ನಾಯಕ ಇರುವ ತ್ರಿಸದಸ್ಯರ ಸಮಿತಿ ಆಯ್ಕೆ ಮಾಡುತ್ತದೆ. ಕೇಂದ್ರ ಸರ್ಕಾರ ಮೊದಲೇ ಒಂದು ಪಟ್ಟಿ ಸಿದ್ಧಪಡಿಸಿರುತ್ತದೆ. ಈ ಸಮಿತಿಯ ಮೂವರು ಸೇರಿ ಒಂದು ನಿರ್ಧಾರಕ್ಕೆ ಬರುತ್ತಾರೆ. ಚರ್ಚೆಗಳ ಬಳಿಕ ಮೂವರೂ ಸರ್ವಸಮ್ಮತದಿಂದ ಒಬ್ಬರನ್ನು ಆಯ್ಕೆ ಮಾಡುತ್ತಾರೆ. ಇದು ರೂಢಿಗತ ಪ್ರಕ್ರಿಯೆ.

ಫೆಬ್ರವರಿಯಿಂದ ಖಾಲಿಯಿದ್ದ ಸಿಬಿಐ ನಿರ್ದೇಶಕರ ಹುದ್ದೆ ಭರ್ತಿ ಮಾಡಲು ಸೋಮವಾರ ಈ ತ್ರಿಸದಸ್ಯರ ಸಮಿತಿ ಸಬೆ ಸೇರಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಮೂರು ಸದಸ್ಯರ ಸಮಿತಿಯ ಸಭೆಯಲ್ಲಿ ಕೇಂದ್ರ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ, ವಿಪಕ್ಷ ನಾಯಕ ಕಾಂಗ್ರೆಸ್‌ನ ಅಧೀರ್ ಚೌಧರಿ ಭಾಗವಹಿಸಿದ್ದ ಈ ಸಬೆಯಲ್ಲಿ ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ಉಲ್ಲೇಖಿಸಿದ ಸುಪ್ರಿಂಕೋರ್ಟ್‌ನ ಹಳೆ ತೀರ್ಪು ಒಂದು ಕೇಂದ್ರ ಸರ್ಕಾರ ಸೂಚಿಸಿದ್ದ ಪಟ್ಟಿ ಹಿನ್ನಲೆಗೆ ಸರಿಯಿತು ಎನ್ನಲಾಗಿದೆ.

ಇದನ್ನೂ ಓದಿ: ಸೋಂಕಿತರಿಗೆ ರಾಮದೇವ್‌‌ರ ‘ಕೊರೊನಿಲ್’ನ 1 ಲಕ್ಷ ಕಿಟ್: ಹರಿಯಾಣ ನಿರ್ಧಾರಕ್ಕೆ ವ್ಯಾಪಕ ವಿರೋಧ

90 ನಿಮಿಷ ಕಾಲ ನಡೆದ ಚರ್ಚೆಯಲ್ಲಿ ರಮಣ ಅವರು ಪ್ರಸ್ತಾಪಿಸಿದ ವಿಷಯ ತೀವ್ರ ಚರ್ಚೆಗೆ ಒಳಗಾಯಿತು ಎಂದು ಎನ್‌ಡಿಟಿವಿ ಸೇರಿದಂತೆ ವಿವಿಧ ಮಾಧ್ಯಮಗಳು ವರದಿ ಮಾಡಿವೆ.

ನಿರ್ದಿಷ್ಟವಾಗಿ ಸುಪ್ರೀಂಕೋರ್ಟ್ ತೀರ್ಪನ್ನು ಉಲ್ಲೇಖಿಸಿದ ಸಿಜೆಐ ರಮಣ ಅವರು, ಪ್ರಮುಖ ಹುದ್ದೆಗೆ ಆರು ತಿಂಗಳಿಗಿಂತ ಕಡಿಮೆ ಅವಧಿಯ ಸೇವೆಯನ್ನು ಹೊಂದಿರುವ ಪೊಲೀಸ್ ಅಧಿಕಾರಿಯನ್ನು ಪರಿಗಣಿಸಬಾರದು ಎಂದು ಒತ್ತಾಯಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ. ಹೊಸ ಸಿಬಿಐ ನಿರ್ದೇಶಕರ ಆಯ್ಕೆಯ ಸಮಯದಲ್ಲಿ ಇಂತಹ ನಿಯಮವನ್ನು ಮೊದಲ ಬಾರಿಗೆ ಮುಂದಿಡಲಾಗಿದೆ ಮತ್ತು ನ್ಯಾಯಮೂರ್ತಿ ರಮಣ ನಿಯಮವನ್ನು ಪಾಲಿಸಬೇಕು ಎಂದು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಕೂಡ ಇದನ್ನು ಬೆಂಬಲಿಸಿದ್ದಾರೆ.

ಇದರ ಪರಿಣಾಮವಾಗಿ, ಆಗಸ್ಟ್ 31 ರಂದು ನಿವೃತ್ತಿಯಾಗುತ್ತಿರುವ ಗಡಿ ಭದ್ರತಾ ಪಡೆ ಮುಖ್ಯಸ್ಥ ರಾಕೇಶ್ ಅಸ್ತಾನಾ ಮತ್ತು ಮೇ 31 ರಂದು ನಿವೃತ್ತರಾಗಲಿರುವ ರಾಷ್ಟ್ರೀಯ ತನಿಖಾ ಸಂಸ್ಥೆ ಮುಖ್ಯಸ್ಥ ವೈ.ಸಿ. ಮೋದಿಯ ಹೆಸರುಗಳು ಹಿನ್ನಲೆಗೆ ಸರಿಯಿತು.

ನಂತರ ಸಮಿತಿಯು ಮಹಾರಾಷ್ಟ್ರದ ಮಾಜಿ ಪೊಲೀಸ್ ಮಹಾನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್, ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಮಹಾನಿರ್ದೇಶಕ ಕೆ.ಆರ್. ಚಂದ್ರ ಮತ್ತು ಗೃಹ ಸಚಿವಾಲಯದ ವಿಶೇಷ ಕಾರ್ಯದರ್ಶಿ ವಿ.ಎಸ್.ಕೆ. ಕೌಮುದಿ ಅವರ ಹೆಸರನ್ನು ಪರಿಗಣಿಸಿ, ಹಿರಿಯರಾದ ಜೈಸ್ವಾಲ್ ಅವರನ್ನು ಆಯ್ಕೆ ಮಾಡಿದೆ.

ಇದನ್ನೂ ಓದಿ: ‘ಮುಗ್ಧ ಜನರ ರಕ್ತವನ್ನು ಮೊಸಳೆ ಕಣ್ಣೀರಿನಿಂದ ಅಳಿಸಲಾಗುವುದಿಲ್ಲ’ – #CrocodileTears ಟ್ರೆಂಡ್‌!

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಸೋಮವಾರ ಕೇವಲ 16 ಸಂಭಾವ್ಯ ಹೆಸರುಗಳನ್ನು ನೀಡಿದೆ ಎಂದು ಸಮಿತಿ ಸದಸ್ಯ ಕಾಂಗ್ರೆಸ್‌ನ ಚೌಧರಿ ಹೇಳಿದ್ದಾರೆ. ಆದರೆ ಮೇ 11 ರಂದು 109 ಹೆಸರುಗಳ ಪಟ್ಟಿಯನ್ನು ಅವರಿಗೆ ನೀಡಲಾಗಿತ್ತು. ಸಮಿತಿಯ ಸದಸ್ಯರನ್ನು ಬಹಳ ಲಘುವಾಗಿ ತೆಗೆದುಕೊಂಡ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (ಡಿಒಪಿಟಿ) ಪಟ್ಟಿಯನ್ನು ಕತ್ತರಿಸಿ 16ಕ್ಕೆ ಇಳಿಸಿದ್ದನ್ನು ಆಕ್ಷೇಪಿಸಿದ್ದಾರೆ. ಆ 16 ಜನರಲ್ಲಿ ಈಗಾಗಲೇ ಐವರು ನಿವೃತ್ತರು ಎಂಬುದನ್ನು ಚೌಧರಿ ಗಮನ ಸೆಳೆದಿದ್ದಾರೆ.

ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಲು, ಚೌಧರಿ ಅವರು ಸಮಿತಿ ಸಭೆಯನ್ನು ಮುಂದೂಡಲು ಪ್ರಯತ್ನಿಸಿದರು. ಆದರೆ, ಅವರ ಬೇಡಿಕೆಯನ್ನು ಸರ್ಕಾರ ಒಪ್ಪಲಿಲ್ಲ. ವಾಸ್ತವವಾಗಿ, ನಾಲ್ಕು ತಿಂಗಳ ವಿಳಂಬದ ನಂತರ ಸಮಿತಿ ಸಭೆ ಸೇರಿತ್ತು. ಸಮಿತಿ ಅಂತಿಮವಾಗಿ ಮೇಲೆ ತಿಳಿಸಿದ ಮೂರು ಹೆಸರುಗಳನ್ನು ಕಿರುಪಟ್ಟಿ ಮಾಡಿತು. ಮಂಗಳವಾರ ಸಂಜೆ ಸುಬೋಧ್ ಅವರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ.

ಪ್ರಸ್ತುತ ಸುಬೋಧ್ ಅವರು ಸಿಐಎನ್‌ಎಫ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮೊದಲು ಅವರು ಈ ವರ್ಷದ ಆರಂಭದಲ್ಲಿ ಕೇಂದ್ರ ಡೆಪ್ಯುಟೇಷನ್‌ಗೆ ಕರೆಸಿಕೊಳ್ಳುವ ಮೊದಲು ಮುಂಬೈ ಪೊಲೀಸ್ ಆಯುಕ್ತ ಮತ್ತು ಮಹಾರಾಷ್ಟ್ರ ಡಿಜಿಪಿ ಹುದ್ದೆಗಳನ್ನು ಅಲಂಕರಿಸಿದ್ದರು. ಸಿಬಿಐನಲ್ಲಿ ಸೇವೆ ಸಲ್ಲಿಸಿದ ಅನುಭವವಿಲ್ಲದಿದ್ದರೂ, ಇಂಟೆಲಿಜೆನ್ಸ್ ಬ್ಯೂರೋ ಮತ್ತು ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್ (ರಾ)ನಲ್ಲಿ ಅವರು ಸುದೀರ್ಘ ಅವಧಿಯನ್ನು ಹೊಂದಿದ್ದಾರೆ.

ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...