Homeಮುಖಪುಟಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್...

ಶಾರುಖ್ ಖಾನ್ ಮಧ್ಯಸ್ಥಿಕೆಯಿಂದ ಕತಾರ್ ಸರ್ಕಾರ  8 ಭಾರತೀಯರನ್ನು ಬಿಡುಗಡೆ ಮಾಡಿದೆ: ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ

- Advertisement -
- Advertisement -

ಬಿಜೆಪಿ ನಾಯಕ, ಸಂಸದ ಸುಬ್ರಮಣಿಯನ್ ಸ್ವಾಮಿ ಅವರು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಾಷ್ಟ್ರೀಯ ಭದ್ರತಾ ಸಂಸ್ಥೆ ವಿರುದ್ಧ ವಾಗ್ಧಾಳಿಯನ್ನು ನಡೆಸಿದ್ದು, ಯುಎಇ ಮತ್ತು ಕತಾರ್‌ಗೆ ಭೇಟಿ ನೀಡುವಾಗ ಬಾಲಿವುಡ್ ತಾರೆ ಶಾರುಖ್ ಖಾನ್ ಅವರನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಹೇಳಿದ್ದಾರೆ. ಅಲ್ಲದೆ ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ  8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಸುಬ್ರಮಣಿಯನ್ ಸ್ವಾಮಿ, ಮೋದಿ ಅವರು ತಮ್ಮೊಂದಿಗೆ ಸಿನಿಮಾ ನಟ ಶಾರುಖ್ ಖಾನ್ ಅವರನ್ನು ಕತಾರ್‌ಗೆ ಕರೆದುಕೊಂಡು ಹೋಗಬೇಕು, ಏಕೆಂದರೆ ವಿದೇಶಾಂಗ ಇಲಾಖೆ ಮತ್ತು NSA ಕತಾರ್‌ನ ಶೇಖ್‌ಗಳನ್ನು ಮನವೊಲಿಸಲು ವಿಫಲವಾದ ನಂತರ, ಮೋದಿ ಖಾನ್‌ಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದರು ಮತ್ತು ಹೀಗಾಗಿ ನಮ್ಮ ನೌಕಾ ಅಧಿಕಾರಿಗಳನ್ನು ಶಿಕ್ಷೆಯಿಂದ ಮುಕ್ತಗೊಳಿಸಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಕತಾರ್ ಪ್ರವಾಸದ ಬಗ್ಗೆ ಪೋಸ್ಟ್‌ವೊಂದನ್ನು ಹಾಕಿದ್ದರು. ಮುಂದಿನ ಎರಡು ದಿನಗಳಲ್ಲಿ, ನಾನು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಯುಎಇ ಮತ್ತು ಕತಾರ್‌ಗೆ ಭೇಟಿ ನೀಡಲಿದ್ದೇನೆ, ಇದು ಈ ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಸಂಬಂಧಗಳನ್ನು ಬಲಗೊಳಿಸುತ್ತದೆ. ಯುಎಇಗೆ ನನ್ನ ಭೇಟಿಯು ಅಧಿಕಾರ ವಹಿಸಿಕೊಂಡ ನಂತರ ನನ್ನ ಏಳನೆಯದಾಗಿದೆ, ಇದು ಬಲವಾದ ಭಾರತ-ಯುಎಇ ಸ್ನೇಹಕ್ಕೆ ನಾವು ನೀಡುವ ಆದ್ಯತೆಯನ್ನು ಸೂಚಿಸುತ್ತದೆ. ನನ್ನ ಸಹೋದರ HH @MohamedBinZayed ಅವರನ್ನು ಭೇಟಿಯಾಗಲು ನಾನು ಉತ್ಸುಕನಾಗಿದ್ದೇನೆ. ಯುಎಇಯಲ್ಲಿ ಮೊದಲ ಹಿಂದೂ ಮಂದಿರವನ್ನು ಉದ್ಘಾಟಿಸುವ ಗೌರವ ನನಗಿದೆ. ಅಬುಧಾಬಿಯಲ್ಲಿ ನಡೆಯುವ ಸಮುದಾಯ ಕಾರ್ಯಕ್ರಮದಲ್ಲಿ ನಾನು ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡುತ್ತೇನೆ. ನಾನು @WorldGovSummit ನಲ್ಲಿ ಮಾತನಾಡುತ್ತೇನೆ ಮತ್ತು ದುಬೈನಲ್ಲಿ @HHShkMohd ಅನ್ನು ಭೇಟಿ ಮಾಡುತ್ತೇನೆ. ನಾನು HH ಶೇಖ್ @TamimBinHamad ಅವರನ್ನು ಭೇಟಿ ಮಾಡುತ್ತೇನೆ ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಸುಬ್ರಮಣಿಯನ್ ಸ್ವಾಮಿ, ಶಾರುಖ್ ಖಾನ್ ಮಧ್ಯಸ್ಥಿಕೆಯಿಂದಾಗಿ ಕತಾರ್ ಸರ್ಕಾರ  8 ಭಾರತೀಯ ನೌಕಾಪಡೆಯ ಸಿಬ್ಬಂದಿಗಳನ್ನು ಬಿಡುಗಡೆ ಮಾಡಿದೆ ಎಂದು ಹೇಳಿದ್ದಾರೆ.

ಕತಾರ್‌ನಲ್ಲಿ ಗೂಢಚರ್ಯೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳನ್ನು ಕತಾರ್ ನ್ಯಾಯಾಲಯವು ಎರಡು ದಿನಗಳ ಮೊದಲು ಬಿಡುಗಡೆ ಮಾಡಿತ್ತು. ಕತಾರ್‌ನಲ್ಲಿ ಸೆರೆಯಾಗಿದ್ದ ಭಾರತೀಯ ನೌಕಾಪಡೆಯ ಅಧಿಕಾರಿಗಳು ಭಾರತಕ್ಕೆ ಮರಳಿದ್ದಾರೆ.

ಕತಾರ್‌ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ನೀಡುವ ಖಾಸಗಿ ಸಂಸ್ಥೆಯಾದ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ಗಾಗಿ ಕೆಲಸ ಮಾಡುತ್ತಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಕಳೆದ ವರ್ಷದ ಆಗಸ್ಟ್‌ನಲ್ಲಿ ಕತಾರ್‌ ಪೊಲೀಸರು ಬಂಧಿಸಿದ್ದರು. ಬಂಧಿತರ ಮೇಲೆ ಬೇಹುಗಾರಿಕೆಯ ಆರೋಪವನ್ನು ಹೊರಿಸಲಾಗಿತ್ತು. ಈ 8 ಮಾಜಿ ಅಧಿಕಾರಿಗಳ ಜಾಮೀನು ಅರ್ಜಿಗಳನ್ನು ಹಲವಾರು ಬಾರಿ ತಿರಸ್ಕರಿಸಲಾಗಿದೆ ಮತ್ತು ಅವರ ಬಂಧನವನ್ನು ಕತಾರ್ ಅಧಿಕಾರಿಗಳು ವಿಸ್ತರಿಸಿದ್ದರು. ಬಂಧಿತ ಭಾರತೀಯರಲ್ಲಿ ನಿವೃತ್ತ ಕಮಾಂಡರ್ ಪೂರ್ಣೇಂದು ತಿವಾರಿ ಅವರು ಅಲ್ ದಹ್ರಾ ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಪ್ರಕರಣದಲ್ಲಿ 8 ಮಂದಿ ಅಧಿಕಾರಿಗಳಿಗೆ ಕತಾರ್‌ನ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿತ್ತು. ದಹ್ರಾ ಗ್ಲೋಬಲ್ ಪ್ರಕರಣವು 8 ಮಂದಿ ಅಧಿಕಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಆದೇಶದ ಬಳಿಕ ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿತ್ತು. ಆ ಬಳಿಕ ಭಾರತೀಯ ನೌಕಾಪಡೆಯ 8 ಮಾಜಿ ಸಿಬ್ಬಂದಿಗಳ ಮರಣದಂಡನೆಯನ್ನು ಕತಾರ್‌ನ ಮೇಲ್ಮನವಿ ನ್ಯಾಯಾಲಯವು ಇಳಿಸಿದ್ದು, ಮರಣದಂಡನೆಯನ್ನು ಜೈಲು ಶಿಕ್ಷೆಗೆ ಪರಿವರ್ತಿಸಿತ್ತು.

 

 

ಇದನ್ನು ಓದಿ: ಪೂಂಚ್ ಸೇನಾ ಚಿತ್ರಹಿಂಸೆ ಬಗೆಗಿನ ವರದಿಯನ್ನು ತೆಗೆದು ಹಾಕುವಂತೆ ‘ದಿ ಕ್ಯಾರವಾನ್‌’ಗೆ ಸೂಚಿಸಿದ ಕೇಂದ್ರ ಸಚಿವಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...