Homeಮುಖಪುಟ'ಇಂತಹ ವರ್ತನೆಗಳಿಗೆ BJP, RSS ಮುಕ್ತ ಅವಕಾಶ ನೀಡಿದೆ’: ಮುಸ್ಲಿಂ ವಿರೋಧಿ ನಿಂದನೆಗೆ ಶಶಿ ತರೂರ್...

‘ಇಂತಹ ವರ್ತನೆಗಳಿಗೆ BJP, RSS ಮುಕ್ತ ಅವಕಾಶ ನೀಡಿದೆ’: ಮುಸ್ಲಿಂ ವಿರೋಧಿ ನಿಂದನೆಗೆ ಶಶಿ ತರೂರ್ ಪ್ರತಿಕ್ರಿಯೆ

- Advertisement -
- Advertisement -

ಗುರುವಾರ ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ನಾಯಕ ಡ್ಯಾನಿಶ್ ಅಲಿ ವಿರುದ್ಧ ಬಿಜೆಪಿ ಸಂಸದ ರಮೇಶ್ ಬಿಧುರಿ ಅವರ ನಿಂದನೀಯ ಹೇಳಿಕೆಯನ್ನು ಶುಕ್ರವಾರ ಕಾಂಗ್ರೆಸ್ ಸಂಸದ ಶಶಿ ತರೂರ್ ಖಂಡಿಸಿದ್ದಾರೆ.

ಈ ರೀತಿಯ ವಿಚಾರಗಳನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಸಾರ್ವಜನಿಕವಾಗಿ ಖಂಡಿಸಬೇಕು. ”ಇಂತಹ ವರ್ತನೆ” ಪ್ರದರ್ಶಿಸಲು ಬಿಜೆಪಿ ಮತ್ತು ಆರೆಸ್ಸೆಸ್ ಮುಕ್ತ ಅವಕಾಶ ನೀಡಿದೆ ಎಂದು ತರೂರ್ ಆರೋಪಿಸಿದ್ದಾರೆ.

”ಡ್ಯಾನಿಶ್ ಅಲಿ ಅವರ ಬಗ್ಗೆ ರಮೇಶ್ ಬಿಧುರಿ ಅವರ ಭೀಕರ ವರ್ತನೆಯನ್ನು ವ್ಯಾಪಕವಾಗಿ ಖಂಡಿಸಲಾಗಿದೆ ಮತ್ತು ಅಂತಹ ನಡವಳಿಕೆ ಮರುಕಳಿಸದಂತೆ ನೋಡಿಕೊಳ್ಳಲು ಅವರಿಗೆ ಶಿಕ್ಷೆ ನೀಡಬೇಕು” ಎಂದು ಹೇಳಿದರು.

”ದ್ವೇಷ ಮತ್ತು ತಿರಸ್ಕಾದಂತಹ ಧೋರಣೆಗಳಿಗೆ ಬಿಜೆಪಿ, ಆರ್‌ಎಸ್‌ಎಸ್ ಮುಕ್ತ ಅವಕಾಶಗಳನ್ನು ನೀಡಿದೆ. ಇಂತಹ ವಿಷವು ಹಲವು ಸ್ಥಳಗಳಲ್ಲಿ ಮತ್ತು ಈಗ ಸಂಸತ್ತಿನಲ್ಲಿಯೂ ಸಹ ಆಗಾಗ್ಗೆ ಮುಕ್ತ ಅಭಿವ್ಯಕ್ತಿಯಯಾಗಿ ಹೊರಹೊಮ್ಮುತ್ತಿದೆ ಎಂದು ತರೂರ್ ಹೇಳಿದರು.

”ಮೋದಿ ಮತ್ತು ಭಾಗವತ್ ಅಂತಹ ವಿಚಾರಗಳನ್ನು ಸಾರ್ವಜನಿಕವಾಗಿ ಖಂಡಿಸಬೇಕು. ಅವರು ಭಾರತವನ್ನು ಒಗ್ಗೂಡಿಸಲು ಬಯಸುತ್ತಾರೆ ಎಂದು ಪ್ರತಿಜ್ಞೆ ಮಾಡಬೇಕು, ಅದನ್ನು ವಿಭಜಿಸಲು ಅಲ್ಲ. ಇಲ್ಲದಿದ್ದರೆ ಈ ದ್ವೇಷದ ವಿಷವು ನಮ್ಮ ಸಮಾಜ ಮತ್ತು ರಾಷ್ಟ್ರವನ್ನು ಬಲಿಪಡೆಯುತ್ತದೆ” ಎಂದು ಅವರು ಹೇಳಿದರು.

ರಮೇಶ್ ಬಿಧುರಿ ಹೇಳಿದ್ದೇನು?

ಸಂಸತ್ತಿನ ಕೆಳಮನೆಯಲ್ಲಿ ಚಂದ್ರಯಾನ-3ರ ಯಶಸ್ಸಿನ ಚರ್ಚೆಯ ವೇಳೆ ಬಿಜೆಪಿ ನಾಯಕರ ಈ ದ್ವೇಷಪೂರಿತ ಹೇಳಿಕೆ ಹೊರಬಿದ್ದಿದೆ. ”ಯೇ ಉಗ್ರವಾದಿ (ಉಗ್ರವಾದಿ), ಯೇ ಆಟಂಕ್ವಾಡಿ ಹೈ, ಉಗ್ರವಾದಿ ಹೈ, ಯೇ ಆಂತಂಕ್ವಾದಿ (ಭಯೋತ್ಪಾದಕ) ಹೈ,” ಎಂದು ಬಿಧುರಿ ಹೇಳುವುದನ್ನು ಕೇಳಬಹುದು.

 ಬಿಜೆಪಿ ಸಂಸದ ರಮೇಶ್ ಬಿಧುರಿ ಅಮಾನತು ಮಾಡುವಂತೆ ಪ್ರತಿಪಕ್ಷಗಳ ಆಗ್ರಹ

ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಬಿಧುರಿಯವರು ನೀಡಿದ ಹೇಳಿಕೆಗಳು ಸಾಮಾಜಿಕ ಮಾಧ್ಯಮದಲ್ಲಿ ಮತ್ತು ರಾಜಕಾರಣಿಗಳಲ್ಲಿ ವ್ಯಾಪಕ ಆಕ್ರೋಶವನ್ನು ಉಂಟುಮಾಡಿತು. ಲೋಕಸಭೆಯಲ್ಲಿ ಚಂದ್ರಯಾನ-3 ಮಿಷನ್ ಕುರಿತ ಚರ್ಚೆಯ ವೇಳೆ ಅವರು ಮಾಡಿದ ಟೀಕೆಗಳನ್ನು ಕಲಾಪದಿಂದ ಹೊರಹಾಕಲಾಯಿತು. ಸ್ಪೀಕರ್ ಓಂ ಬಿರ್ಲಾ ಅವರಿಗೆ ಎಚ್ಚರಿಕೆ ನೀಡಿದರು, ಆದಾಗ್ಯೂ, ಹಲವಾರು ಸಂಸದರು ಅವರ ಕಾಮೆಂಟ್‌ಗಳನ್ನು “ದ್ವೇಷ ಭಾಷಣ” ಎಂದು ಲೇಬಲ್ ಮಾಡಿ ಅವರನ್ನು ಅಮಾನತುಗೊಳಿಸುವಂತೆ ಕರೆ ನೀಡಿದರು.

ಈ ಮಧ್ಯೆ ಡ್ಯಾನಿಶ್ ಅಲಿ ಘಟನೆಯನ್ನು “ಹೃದಯವಿದ್ರಾವಕ” ಎಂದು ಕರೆದರು ಮತ್ತು ಲೋಕಸಭೆಯಲ್ಲಿ ಅವಹೇಳನಕಾರಿ ಹೇಳಿಕೆಗಳಿಗಾಗಿ ಬಿಧುರಿ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಸದನದ ಸದಸ್ಯತ್ವವನ್ನು ತ್ಯಜಿಸುವ ಬಗ್ಗೆ ಯೋಚಿಸುವುದಾಗಿ ಹೇಳಿದರು. ”ಇದು ದ್ವೇಷದ ಭಾಷಣಕ್ಕಿಂತ ಕಡಿಮೆ ಏನಲ್ಲ. ಇದು ಸದನದಲ್ಲಿ ನಿಂತು ಮಾಡಿದ ದ್ವೇಷದ ಭಾಷಣವಾಗಿದೆ” ಎಂದು ಅಲಿ ಹೇಳಿದರು.

ಘಟನೆಯ ನಂತರ ಬಿಧುರಿ ಅವರಿಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಬಿಜೆಪಿ ನಾಯಕರು ಘಟನೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕ್ರಮ ಕೈಗೊಳ್ಳದಿದ್ದರೆ ಲೋಕಸಭಾ ಸದಸ್ಯತ್ವ ತ್ಯಜಿಸುವೆ: ಮುಸ್ಲಿಂ ವಿರೋಧಿ ನಿಂದನೆಗೆ ಡ್ಯಾನಿಶ್ ಅಲಿ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...