Homeಮುಖಪುಟಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

ಸಿಂಗೂರು, ನಂದಿಗ್ರಾಮ ಚಳವಳಿಯ ಮುಂಚೂಣಿಯಲ್ಲಿದ್ದ SUCI ಈ ಚುನಾವಣೆಯಲ್ಲೇನು ಮಾಡುತ್ತಿದೆ?

- Advertisement -
- Advertisement -

ಈಗಾಗಲೆ ಪಂಚರಾಜ್ಯ ವಿಧಾನಸಭಾ ಚುನಾವಣೆಗಳು ಪ್ರಾರಂಭವಾಗಿದೆ. ಇಂದು ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಲ್ಲಿ ಎರಡನೆ ಹಂತದ ಚುನಾವಣೆ ನಡೆಯುತ್ತಿದೆ. ದೇಶವೆ ಕೂತೂಹಲದಿಂದ ಗಮನಿಸುತ್ತಿರುವ ಪಶ್ಚಿಮ ಬಂಗಾಳದ ಅತ್ಯಂತ ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾದ ‘ನಂದಿಗ್ರಾಮ’ದಲ್ಲಿ ಇಂದು ಮತದಾನ ನಡೆಯುತ್ತಿದೆ. ಈ ವೇಳೆ ಅಲ್ಲಿ ಆಡಳಿತರೂಢ ಟಿಎಂಸಿ, ಹೊಸದಾಗಿ ಎದ್ದು ನಿಲ್ಲಲು ಪ್ರಯತ್ನಿಸುತ್ತಿರುವ ಬಿಜೆಪಿ, ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿಕೂಟಗಳ ನಡುವೆ ಸ್ಪರ್ಧೆ ನಡೆಯುತ್ತಿದೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿಕೂಟದ ಜೊತೆ ಸೇರದೆ ಎಡಪಕ್ಷವಾದ ಸೋಷಿಯಲಿಸ್ಟ್‌ ಯುನಿಟಿ ಸೆಂಟರ್‌ ಆಫ್‌ ಇಂಡಿಯಾ-ಕಮ್ಯುನಿಷ್ಟ್ ‌(SUCI-C) ಪಕ್ಷವು ಏಕಾಂಗಿ ಹೋರಾಟ ನಡೆಸುತ್ತಿದೆ. ಪಕ್ಷವು ಪ್ರಸ್ತುತ ಐದು ರಾಜ್ಯಗಳಲ್ಲಿನ ವಿಧಾನಸಭಾ ಚುನಾವಣೆಗಳಲ್ಲಿ ಒಟ್ಟು 258 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಇದು ದೇಶದ ಪ್ರಮುಖ ಎಡಪಕ್ಷಗಳಾಗಿರುವ ಸಿಪಿಐಎಂ ಮತ್ತು ಸಿಪಿಐಗಿಂತಲೂ ಹೆಚ್ಚಾಗಿದೆ. ಸಿಪಿಐಎಂ 227 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದರೆ, ಸಿಪಿಐ 50 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ.

SUCI-C ಪಕ್ಷವು ಪಶ್ಚಿಮ ಬಂಗಾಳದಲ್ಲಿ ಒಟ್ಟು 193 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ. ಕೇರಳದಲ್ಲಿ 27 ಮತ್ತು ಅಸ್ಸಾಂನಲ್ಲಿ 29 ಕ್ಷೇತ್ರಗಳಲ್ಲಿ ಪಕ್ಷವು ಸ್ಪರ್ಧಿಸುತ್ತಿದೆ. ಈ ಎಲ್ಲಾ ಕ್ಷೇತ್ರದಲ್ಲಿ ಇತರ ಎಡಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳದೆ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ.

ಇದನ್ನೂ ಓದಿ: ಏಪ್ರಿಲ್ 1: ರಾಷ್ಟ್ರೀಯ ಜುಮ್ಲಾ ದಿನವನ್ನಾಗಿ ಆಚರಿಸಿದ ನೆಟ್ಟಿಗರು – #NationalJumlaDay ಟ್ರೆಂಡಿಂಗ್‌!

ಪಕ್ಷವು 2019 ರ ಸಂಸತ್ ಚುನಾವಣೆಯಲ್ಲಿ ಕೂಡಾ ಏಕಾಂಗಿಯಾಗಿ ಹೋರಾಟ ನಡೆಸಿತ್ತು. ಒಟ್ಟು 23 ರಾಜ್ಯಗಳಲ್ಲಿ 119 ಸ್ಥಾನಗಳಲ್ಲಿ ಹೋರಾಟ ಮಾಡಿತ್ತು. ಪಶ್ಚಿಮ ಬಂಗಾಳ ರಾಜ್ಯವೊಂದರಲ್ಲೇ ಪಕ್ಷದ 42 ಅಭ್ಯರ್ಥಿಗಳು ಇದ್ದರು. ಕೇರಳದಲ್ಲಿ 9, ಬಿಹಾರ, ಒರಿಸ್ಸಾ ಮತ್ತು ಕರ್ನಾಟಕದಲ್ಲಿ ತಲಾ 8, ಅಂಡಮಾನ್ ಮತ್ತು ಪಾಂಡಿಚೆರಿಯಲ್ಲಿ ತಲಾ ಒಬ್ಬೊಬ್ಬರು ಅಭ್ಯರ್ಥಿಗಳನ್ನು ಪಕ್ಷವು ಸ್ಪರ್ಧೆಗೆ ಇಳಿಸಿತ್ತು.

SUCI-C ದೇಶದಾದ್ಯಂತ 27 ರಾಜ್ಯಗಳಲ್ಲಿ ಘಟಕಗಳನ್ನು ಹೊಂದಿದೆಯಾದರೂ ಪಶ್ಚಿಮ ಬಂಗಾಳ, ಅಸ್ಸಾಂ, ಒರಿಸ್ಸಾ, ಜಾರ್ಖಂಡ್, ಹರಿಯಾಣ ಮತ್ತು ಕರ್ನಾಟಕದಲ್ಲಿ ಗಟ್ಟಿಯಾದ ಅಸ್ತಿತ್ವವನ್ನು ಹೊಂದಿದೆ. 2009 ರಲ್ಲಿ ಪಶ್ಚಿಮ ಬಂಗಾಳದಲ್ಲಿ SUCI-C ಒಬ್ಬ ಸಂಸದನನ್ನು ಹೊಂದಿತ್ತು.

ಪಕ್ಷದ ಪ್ರಧಾನ ಕಚೇರಿ ಕೋಲ್ಕತಾದಲ್ಲಿದ್ದು, ಪ್ರಧಾನ ಕಾರ್ಯದರ್ಶಿಯಾಗಿ ಪ್ರೋವಾಶ್ ಘೋಷ್ ಕಾರ್ಯನಿರ್ವಹಿಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ನಂದಿಗ್ರಾಮ ಚಳುವಳಿಯಲ್ಲಿ ಅಂದಿನ ಎಡಪಕ್ಷ ಸರ್ಕಾರದ ವಿರುದ್ದ ಪ್ರಬಲ ಹೋರಾಟವನ್ನು SUCI-C ಕಟ್ಟಿತ್ತು. ಆ ಹೊತ್ತಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಜೊತೆ ಸೇರಿಕೊಂಡಿತ್ತು. ಆದರೆ ನಂತರ ಮಮತಾ ಬ್ಯಾನರ್ಜಿ ಅವರ ನೀತಿಗಳಿಂದ ಬೇಸೆತ್ತು ಅವರ ಸಖ್ಯದಿಂದ ದೂರ ಸರಿದು ತಮ್ಮದೆ ಆದ ಹೋರಾಟವನ್ನು ಕಟ್ಟುತ್ತಾ ಬರುತ್ತಿದೆ.

ಇದನ್ನೂ ಓದಿ: ಬಡ್ಡಿದರ ಕಡಿತಗೊಳಿಸಿ ‘ನಿನ್ನೆ’ ಆದೇಶ: ‘ಇಂದು’ ಯೂಟರ್ನ್ ಹೊಡೆದ ಕೇಂದ್ರ ಸರ್ಕಾರ‌!

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ SUCI-C ಪಕ್ಷ ಕರ್ನಾಟಕ ರಾಜ್ಯ ಸಮಿತಿ ಕಾರ್ಯದರ್ಶಿ ಕೆ. ಉಮಾ ಅವರು, “ಪ್ರಸ್ತುತ ಎಲ್ಲಾ ಪಕ್ಷಗಳು ಬಂಡವಾಳಶಾಹಿಗಳ ಪರವಾಗಿ ಮಾತ್ರವೆ ಕೆಲಸ ನಿರ್ವಹಿಸುತ್ತಿದೆ. ಕಾಂಗ್ರೆಸ್‌ ಇದಕ್ಕೆ ದಾರಿ ಮಾಡಿಕೊಟ್ಟರೂ ಬಿಜೆಪಿ ಅವುಗಳನ್ನೂ ಮೀರಿ ಬಂಡವಾಳಶಾಹಿಗಳ ಪರವಾಗಿ ಕೆಲಸ ಮಾಡುತ್ತಿದೆ. ಸಿಂಗೂರು, ನಂದಿಗ್ರಾಮ ಹೋರಾಟದ ಸಮಯದಲ್ಲಿ ಬಂಡವಾಳಶಾಹಿಗಳಿಗೆ ಕೆಂಪುಹಾಸು ಹಾಸಿದ್ದೇ ಸಿಪಿಐಎಂ ನೇತೃತ್ವದ ಎಡಪಂಥೀಯ ಸರ್ಕಾರವಾಗಿದೆ. ನಮ್ಮ ವಿರೋಧದ ನಡುವೆಯ ಪೊಲೀಸರನ್ನು ಕಳುಹಿಸಿ ಸರ್ಕಾರದ ಕುಮ್ಮಕ್ಕಿನಿಂದ ರೈತರ ಮೇಲೆ ಹಲ್ಲೆ ನಡೆದಿದೆ” ಎಂದು ಆರೋಪಿಸಿದ್ದಾರೆ.

“ಈ ಹೊತ್ತಲ್ಲಿ ನಾವು ಜನರ ನಡುವೆ ನಿಂತು ಹೋರಾಟ ಕಟ್ಟಿದ್ದೇವೆ. ಈ ಹೋರಾಟದ ಕ್ರೆಡಿಟನ್ನು ಪ್ರಸ್ತುತ ಯಾರು ಯಾರೋ ಪಡೆದುಕೊಳ್ಳುತ್ತಿದ್ದಾರೆ. ಆ ಹೊತ್ತಲ್ಲಿ ತೃಣಮೂಲ ಪಕ್ಷವು ನಮ್ಮ ಜೊತೆ ಸೇರಿ ಸೀಟು ಹೊಂದಾಣಿಕೆ ಮಾಡಿಕೊಂಡಿತ್ತು. ಆಮೇಲೆ ಟಿಎಂಸಿ ಯಾವುದೇ ಜನಪರ ಕೆಲಸ ಮಾಡದೆ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡ ಪರಿಣಾಮ ಎಲ್ಲರಿಂದಲೂ ದೂರವಿದ್ದು ಹೋರಾಟ ನಿರತರಾಗಿದ್ದೇವೆ” ಎಂದು ಕೆ. ಉಮಾ ತಿಳಿಸಿದ್ದಾರೆ.

“ಅಧಿಕಾರ ಬಲ ಮತ್ತು ಹಣ ಬಲದಿಂದ ಚುನಾವಣೆ ನಡೆಯುತ್ತಿರುವ ಈ ಸಮಯದಲ್ಲಿ ನಮ್ಮ ಮೌಲ್ಯಾಧಾರಿತ ರಾಜಕೀಯವು ಅದಕ್ಕೆ ಸಮನಾಗಿ ಸ್ಪರ್ಧಿಸಲು ಆಗುತ್ತಿಲ್ಲ ಎಂಬುವುದು ನಿಜವಾಗಿದೆ. ಆದರೆ ಈ ಭಾರಿ ಎಲ್ಲಾ ಕಡೆಯಿಂದಲೂ ಒಳ್ಳೆಯ ಪ್ರತಿಕ್ರಿಯೆ ಬರುತ್ತಿದೆ. ಹಾಗಾಗಿ ಹೆಚ್ಚಿನ ಕಡೆಗಳಲ್ಲಿ ನಮ್ಮ ಅಭ್ಯರ್ಥಿಗಳು ಗೆಲ್ಲುತ್ತಾರೆ” ಎಂದು ಅವರು ಹೇಳಿದ್ದಾರೆ

ಇದನ್ನೂ ಓದಿ: 66 ವರ್ಷದ ಆಂಟಿ ಸಂಯಮದಿಂದಿರಬೇಕು: ಮಮತಾ ಬ್ಯಾನರ್ಜಿ ವಿರುದ್ಧ ಸುವೇಂಧು ಅಧಿಕಾರಿ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...