Homeಕರ್ನಾಟಕಸುಡಾನ್ ಸಂಘರ್ಷ: ಕರ್ನಾಟಕದ ಹಕ್ಕಿಪಿಕ್ಕಿ ಜನರ ರಕ್ಷಣೆಗಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್

ಸುಡಾನ್ ಸಂಘರ್ಷ: ಕರ್ನಾಟಕದ ಹಕ್ಕಿಪಿಕ್ಕಿ ಜನರ ರಕ್ಷಣೆಗಾಗಿ ಕೇಂದ್ರದ ವಿರುದ್ಧ ಕಿಡಿಕಾರಿದ ಕಾಂಗ್ರೆಸ್

- Advertisement -
- Advertisement -

ಸುಡಾನ್‌ನಲ್ಲಿ ನಡೆಯುತ್ತಿರುವ ಸೇನೆ ಮತ್ತು ಅರೆಸೇನಾ ಪಡೆ ನಡುವಿನ ಸಂಘ‍ರ್ಷದಲ್ಲಿ ಈಗಾಗಲೇ ಸಾಕಷ್ಟು ಸಾವು-ನೋವು ಸಂಭವಿಸಿದ್ದು, ಅಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಹಕ್ಕಿಪಿಕ್ಕಿ ಜನಾಂಗದ ಜನರನ್ನು ರಕ್ಷಣೆ ಮಾಡಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದರು. ಇದಕ್ಕೆ ಸರಿಯಾದ ರೀತಿಯಲ್ಲಿ ಪ್ರತಿಕ್ರಿಯಿಸಬೇಕಾಗಿದ್ದ ವಿದೇಶಾಂಗ ಸಚಿವರು ರಾಜಕೀಯ ಮಾಡಬೇಡಿ ಎಂದರು. ಇದು ಈಗ ಕಾಂಗ್ರೆಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಪಕ್ಷ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದು, ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ 31 ಕನ್ನಡಿಗರು ಸುಡಾನ್‌ನಲ್ಲಿ ಅಂತರ್ಯುದ್ಧದಲ್ಲಿ ಸಿಲುಕಿಕೊಂಡಿದ್ದಾರೆ. ಕನ್ನಡ ವಿರೋಧಿ ಮೋದಿ ಸರ್ಕಾರವು ಅವರನ್ನು ಸ್ಥಳಾಂತರಿಸುವ ಮತ್ತು ಸುರಕ್ಷಿತವಾಗಿ ವಾಪಸ್ ಕರೆತರುವ ಬದಲಿಗೆ, ಅವರ ಭವಿಷ್ಯದ ಜೊತೆ ಆಟವಾಡುತ್ತಿದೆ. ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ ಮತ್ತು ಬಿಜೆಪಿ ಎಂಪಿಗಳು ಎಲ್ಲಿದ್ದಾರೆ? ನಾಚಿಕೆ ಆಗುತ್ತಿದೆ ಬೊಮ್ಮಾಯಿ!” ಎಂದು ಕಿಡಿಕಾರಿದ್ದಾರೆ.

ಕನ್ನಡಿಗರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಸಿದ್ದರಾಮಯ್ಯ ಅವರು ಮಂಗಳವಾರ ಟ್ವೀಟ್‌ ಮಾಡಿದ್ದರು. ಇದಕ್ಕೆ ಟ್ವಿಟರ್‌ನಲ್ಲೇ ಪ್ರತಿಕ್ರಿಯಿಸಿರುವ ಜೈಶಂಕರ್‌, ‘ಇದನ್ನು ರಾಜಕೀಯಗೊಳಿಸಬೇಡಿ’ ಎಂದರು. ಇದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಕೂಡ ತಿರುಗೇಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

ಸಿದ್ದರಾಮಯ್ಯನವರು ಸುಡಾನ್‌ನಲ್ಲಿ ಸಿಲುಕಿರುವ ರಾಜ್ಯದ ಹಕ್ಕಿ ಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಸಿಲುಕಿದ್ದಾರೆ ಅವರನ್ನು ಸುರಕ್ಷಿತವಾಗಿ ಕರೆತರಬೇಕು ಎಂದಿದ್ದರು.

ಅದಕ್ಕೆ ಜೈಶಂಕರ್ ಅವರು, ”ನಿಮ್ಮ (ಸಿದ್ದರಾಮಯ್ಯ) ಟ್ವೀಟ್‌ ನೋಡಿ ಆಶ್ಚರ್ಯವಾಯಿತು. ಅಲ್ಲಿ ಜೀವಗಳು ಅಪಾಯದಲ್ಲಿವೆ. ದಯವಿಟ್ಟು ಇದರಲ್ಲಿ ರಾಜಕೀಯ ಮಾಡಬೇಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಜೈಶಂಕರ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ”ನೀವು ವಿದೇಶಾಂಗ ವ್ಯವಹಾರಗಳ ಸಚಿವರಾಗಿರುವುದರಿಂದ ನಾನು ನಿಮಗೆ ಸಹಾಯಕ್ಕಾಗಿ ಮನವಿ ಮಾಡಿದ್ದೇನೆ. ಆದರೆ ನೀವು ಆಶ್ಚರ್ಯಗೊಳ್ಳುವುದರಲ್ಲಿ ಬ್ಯುಸಿಯಾಗಿದ್ದರೆ ದಯವಿಟ್ಟು ನಮ್ಮ ಜನರನ್ನು ಮರಳಿ ಕರೆತರಲು ಸಹಾಯ ಮಾಡುವ ವ್ಯಕ್ತಿಯ ಸಂಪರ್ಕ ಮಾಡಿಕೊಡಿ” ಎಂದು ತಿರುಗೇಟು ನೀಡಿದ್ದಾರೆ.

ಇದನ್ನೂ ಓದಿ: ಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

ಇದರ ಬೆನ್ನಲ್ಲೇ ಕಾಂಗ್ರೆಸ್ ಸಂಸದ ಶಶಿ ತರೂರ್‌ ಅವರು ಟ್ವೀಟ್ ಮಾಡಿದ್ದು, ಈ ವಿಷಯದ ಬಗ್ಗೆ ಜೈಶಂಕರ್ ಅವರ ಪ್ರತಿಕ್ರಿಯೆ ನನಗೆ ಆಶ್ಚರ್ಯವನ್ನುಂಟು ಮಾಡುತ್ತದೆ. ಸಂಕಷ್ಟದಲ್ಲಿರುವ ಭಾಗದಿಂದ ಸಾರ್ವಜನಿಕ ಪ್ರತಿನಿಧಿಗಳು ಆಗಾಗ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾರೆ ಎಂಬುದು ಅವರಿಗೆ ತಿಳಿದಿದೆ. ಕೋವಿಡ್ ಸಮಯದಲ್ಲಿ ಅವರು ನನಗೆ/ಹಲವಾರು ಸಹಾಯ ಮಾಡಿದ್ದಾರೆ. ಏಕೆ ಆಗಿತ್ತು ಸಿದ್ದರಾಮಯ್ಯ ಅವರ ವಿನಂತಿಯು ”ಭಯಾನಕ”?” ಎಂದು ಜೈ ಶಂಕರ್ ಅವರನ್ನು ಪ್ರಶ್ನೆ ಮಾಡಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರ ರಾಜೀವ್‌ಗೌಡ ಮಾತನಾಡಿ, ”ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗಕ್ಕೆ ಸೇರಿದ ಕರ್ನಾಟಕದ 31 ಜನರು ಅಂತರ್ಯುದ್ಧದಿಂದ ತತ್ತರಿಸಿರುವ ಸುಡಾನ್‌ನಲ್ಲಿ ಸಿಲುಕಿಕೊಂಡಿದ್ದಾರೆ. ಆಹಾರ, ನೀರು ಇಲ್ಲದೆ ಪರದಾಡುತ್ತಿದ್ದಾರೆ. ಈ ಗಂಭೀರ ಪರಿಸ್ಥಿತಿಯನ್ನು ಗಮನಿಸಿದರೆ, ವಿದೇಶಾಂಗ ಸಚಿವರ ಗಮನ ಸೆಳೆಯುವುದು ಯಾವುದೇ ನಾಯಕನ ಕರ್ತವ್ಯವಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ವಿಷಯವನ್ನು ಪರಿಶೀಲಿಸುವಂತೆ ಭಾರತದ ವಿದೇಶಾಂಗ ಸಚಿವರನ್ನು ಕೇಳಿದರು. ಆದರೆ ಅವರ ಉತ್ತರವು ಕರ್ನಾಟಕದ ಜನರ ಮೇಲಿನ ಅಹಂಕಾರ, ಕ್ರೋಧ ಮತ್ತು ಹಗೆತನದಿಂದ ತುಂಬಿತ್ತು” ಎಂದು ಹೇಳಿದ್ದಾರೆ.

”ಸುಡಾನ್‌ನಲ್ಲಿ ನಮ್ಮ ಜನರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕನಿಷ್ಠ ಮಾಹಿತಿ ಇದೆಯಾ? ವಿದೇಶಾಂಗ ಸಚಿವರು ಟ್ವಿಟರ್‌ನಲ್ಲಿ ಆಟವಾಡುವ ಬದಲು, ಜವಾಬ್ದಾರಿ ಅರಿತು ಕೆಲಸ ಮಾಡಿದರೆ ಉತ್ತಮ. ಅವರು ಸೌಜನ್ಯತೆ ಕಲಿತು, ರಾಜ್ಯದ ಮಾಜಿ ಮುಖ್ಯಮಂತ್ರಿಗಳಿಗೆ ಅಪಮಾನ ಮಾಡುವುದನ್ನು ನಿಲ್ಲಿಸಲಿ” ಎಂದು ಕಿಡಿಕಾರಿದ್ದಾರೆ.

ಕಾಂಗ್ರೆಸ್ ಪಕ್ಷದ ವಕ್ತಾರ ಗೌರವ್ ವಲ್ಲಭ್ ಅವರು, ”ಯುದ್ಧಗಳನ್ನು ನಿಲ್ಲಿಸುವ ಪ್ರಧಾನಮಂತ್ರಿಯ ಸಾಮರ್ಥ್ಯಗಳ ಕುರಿತು ಶ್ರೀ ನಡ್ಡಾ ಅವರ ಹೇಳಿಕೆಯನ್ನು ಗಮನಿಸಿದರೆ (ಅವರ ಪ್ರಕಾರ ಮೋದಿ ಅವರು ಉಕ್ರೇನ್ ಯುದ್ಧವನ್ನು ನಿಲ್ಲಿಸಿದ್ದರು), ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಯುದ್ಧವನ್ನು ನಿಲ್ಲಿಸಿ ಸುಡಾನ್‌ನಿಂದ ಕರ್ನಾಟಕದ 31 ಹಕ್ಕಿಪಿಕ್ಕಿ ಜನರನ್ನು ಯಾವಾಗ ಕರೆತರುತ್ತಾರೆ?” ಎಂದು ಪ್ರಶ್ನೆ ಮಾಡಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...