Homeಕರ್ನಾಟಕಯುವಜನರ ಹಠಾತ್ ಸಾವು - ತಜ್ಞರು, ವಿಜ್ಞಾನಿಗಳ ಸಮಿತಿ ರಚಿಸಿ ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

ಯುವಜನರ ಹಠಾತ್ ಸಾವು – ತಜ್ಞರು, ವಿಜ್ಞಾನಿಗಳ ಸಮಿತಿ ರಚಿಸಿ ಅಗತ್ಯ ಕ್ರಮಕ್ಕೆ ಸಿಎಂ ಸೂಚನೆ

- Advertisement -
- Advertisement -

ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವ ಹಿನ್ನಲೆ, ಕೊರೊನಾ ಅಥವಾ ಕೊರೊನಾ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಲು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಸೂಚಿಸಿದ್ದಾರೆ. ಯುವಜನರ ಹಠಾತ್ ಸಾವು

ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರ ಮನವಿಯ ಮೇರೆಗೆ ಮುಖ್ಯಮಂತ್ರಿ ಈ ಕ್ರಮಕೈಗೊಂಡಿದ್ದಾರೆ. ಯುವ ಜನರ ಹಠಾತ್ ಸಾವಿನ ಬಗ್ಗೆ ರಾಜಾರಾಂ ತಲ್ಲೂರು ಅವರು ನಿರಂತರವಾಗಿ ಧ್ವನಿ ಎತ್ತುತ್ತಲೆ ಬಂದಿದ್ದರು. ಜೊತೆಗೆ ಮುಖ್ಯಮಂತ್ರಿಗೆ ಇ-ಮೇಲ್ ಮೂಲಕ ಈ ಬಗ್ಗೆ ಕ್ರಮಕೈಗೊಳ್ಳುವಂತೆ ಪತ್ರ ಬರೆದಿದ್ದರು. ಯುವಜನರ ಹಠಾತ್ ಸಾವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ರಾಜಾರಾಂ ಅವರ ಪತ್ರವನ್ನು ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಠಾತ್ ಸಾವಿನ ಬಗ್ಗೆ ಸಂಶೋಧನೆ ನಡೆಸಲು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸುವುದಾಗಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ತನ್ನ ಟಿಪ್ಪಣಿಯಲ್ಲಿ, “ಶ್ರೀ ರಾಜಾರಾಂ ತಲ್ಲೂರು, ಹಿರಿಯ ಪತ್ರಕರ್ತರು ಇವರು ತಮ್ಮ ಇ-ಮೇಲ್ ಮೂಲಕ, ಇತ್ತೀಚಿಗೆ ರಾಜ್ಯದಲ್ಲಿ ಹೃದಯಾಘಾತ, ಹೃದಯಸ್ತಂಭನ, ಮೆದುಳು ಸಂಬಂಧಿ, ನರ ಸಂಬಂಧಿ ಮತ್ತಿತರ ಕಾರಣಗಳಿಂದಾಗಿ ಯುವ ಜನರು ಹಠಾತ್ ಸಾವಿಗೀಡಾಗುತ್ತಿರುವುದು ದಿನಪತ್ರಿಕೆಗಳಲ್ಲಿ ವರದಿಯಾಗುತ್ತಿದ್ದು, ಪ್ರತಿ ಸಾವು ಅವರ ಅವಲಂಬಿತ ಕುಟುಂಬಗಳನ್ನು ಆರ್ಥಿಕ-ಸಾಮಾಜಿಕ ಸಮಸ್ಯೆಗಳಿಗೆ ತಳ್ಳುತ್ತಿದೆ ಎಂದು ತಿಳಿಸಿರುತ್ತಾರೆ.

ಈ ಸಾವುಗಳು ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡ ಪರಿಣಾಮಗಳ ಕಾರಣಕ್ಕೆ ಸಂಭವಿಸುತ್ತಿರಬಹುದೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಆದ್ದರಿಂದ, ಕೋವಿಡ್ ಅಥವಾ ಕೋವಿಡ್ ಲಸಿಕೆಯ ಅಡ್ಡಪರಿಣಾಮಗಳಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಇಂತಹ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರಿರುತ್ತಾರೆ.

ಆದ್ದರಿಂದ, ಇಂತಹ ಹಠಾತ್ ಸಾವುಗಳ ಕುರಿತಂತೆ ಹಾಗೂ ಮುಂದೆ ಈ ರೀತಿಯ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ, ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ.” ಎಂದು ತಿಳಿಸಿದ್ದಾರೆ.

ತಮ್ಮ ಪತ್ರಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗೆ ಕೃತಜ್ಞತೆ ತಿಳಿಸಿರುವ ರಾಜಾರಾಂ ತಲ್ಲೂರು ಅವರು, “ಜನವರಿ 28ರಂದು ನಾನು ಕಳುಹಿಸಿದ್ದ ಇಮೇಲ್‌ ಆಧರಿಸಿ, ಕರ್ನಾಟಕದ ಮುಖ್ಯಮಂತ್ರಿಯವರು ಮಹತ್ವದ ತೀರ್ಮಾನವೊಂದನ್ನು ತೆಗೆದುಕೊಂಡು, ಈ ಹಠಾತ್ ಸಾವುಗಳು ಸಂಭವಿಸದಂತೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮರ್ಪಕ ಸಂಶೋಧನೆ ನಡೆಸಲು ಒಂದು ತಜ್ಞರ ಹಾಗೂ ವಿಜ್ಞಾನಿಗಳ ಸಮಿತಿಯನ್ನು ರಚಿಸಿ ವರದಿ ಪಡೆದು, ಅಗತ್ಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ರಾಜ್ಯದ ಮುಖ್ಯಕಾರ್ಯದರ್ಶಿಗಳಿಗೆ ನಿನ್ನೆ (ಫೆ. 06) ಸೂಚಿಸಿದ್ದಾರೆ” ಎಂದು ಪತ್ರವನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

“ರಾಜ್ಯಸರ್ಕಾರ ವಿಳಂಬವಾಗಿಯಾದರೂ ಇಂತಹದೊಂದು ಅಗತ್ಯ ತೀರ್ಮಾನವನ್ನು ಕೈಗೊಳ್ಳುವುದಕ್ಕೆ ಮುಂದಾಗಿರುವುದು ಸ್ವಾಗತಾರ್ಹ. ಅದಕ್ಕಾಗಿ ನಾನು ವೈಯಕ್ತಿಕವಾಗಿ ಮುಖ್ಯಮಂತ್ರಿಗಳಿಗೆ ಋಣಿ. ಶಾಸಕಾಂಗ ತೆಗೆದುಕೊಳ್ಳಬಹುದಾದ ತೀರ್ಮಾನ ತೆಗೆದುಕೊಂಡಿದೆ. ಇನ್ನು, ಈ ನಿಟ್ಟಿನಲ್ಲಿ ಕ್ಷಿಪ್ರವಾಗಿ ಕಾರ್ಯಾಚರಿಸುವುದು, ಕಾರ್ಯಾಂಗದ ಮುಖ್ಯಸ್ಥರಾಗಿ, ರಾಜ್ಯದ ಮುಖ್ಯಕಾರ್ಯದರ್ಶಿಗಳ ಜವಾಬ್ದಾರಿ” ಎಂದು ಅವರು ಹೇಳಿದ್ದಾರೆ.

“ಸ್ವತಃ ತಾಯಿ ಮನಸ್ಸಿನ ಮುಖ್ಯಕಾರ್ಯದರ್ಶಿಯವರು (ಆ ದಂಪತಿ ಈ ಹಿಂದೆ ದ.ಕ.ದಲ್ಲಿ ಜಿಲ್ಲಾಧಿಕಾರಿ-ಜಿಪಂ ಮುಖ್ಯಾಧಿಕಾರಿ ಆಗಿ ಕೆಲಸ ಮಾಡಿದ್ದನ್ನು ಗಮನಿಸಿದ್ದೇನೆ; ನನ್ನ ಗೆಳೆಯರಿಂದ ಕೇಳಿ ತಿಳಿದಿದ್ದೇನೆ) ಈ ನಿಟ್ಟಿನಲ್ಲಿ ವಿಳಂಬ ಮಾಡುವುದಿಲ್ಲ ಎಂದುಕೊಂಡಿದ್ದೇನೆ” ಎಂದು ಹೇಳಿರುವ ಅವರು, ಮಂಗಳೂರಿನ ಖ್ಯಾತ ವೈದ್ಯರಾದ ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರಂತಹ ಸಾಂಕ್ರಾಮಿಕ ರೋಗಗಳ ನಿರ್ವಹಣೆಯಲ್ಲಿ ಸಾಕಷ್ಟು ತಳಮಟ್ಟದ ಅನುಭವ ಹಾಗೂ ದೂರದೃಷ್ಟಿ ಇರುವ ವೈದ್ಯರ ಸೇವೆಯನ್ನು ಈ ನಿಟ್ಟಿನಲ್ಲಿ ಸರ್ಕಾರ ಪಡೆಯುವಂತಾಗಲಿ ಎಂದು ಆಶಿಸಿದ್ದಾರೆ.

ಇದನ್ನೂಓದಿ:  ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ದೆಹಲಿ | ಎಎಪಿ ಅಭ್ಯರ್ಥಿಗಳಿಗೆ ಬಿಜೆಪಿ ಆಮಿಷ ಆರೋಪ : ತನಿಖೆಗೆ ಆದೇಶಿಸಿದ ಲೆ.ಗವರ್ನರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...