Homeಚಳವಳಿಡೀಫಾಲ್ಟ್ ಜಾಮೀನು ಪ್ರಶ್ನಿಸಿದ್ದ ಎನ್‌ಐಎ ಅರ್ಜಿ ವಜಾಗೊಳಿಸಿದ ಸುಪ್ರೀಂ: ನಾಳೆ ಸುಧಾ ಭಾರದ್ವಾಜ್‌ ಬಿಡುಗಡೆ

ಡೀಫಾಲ್ಟ್ ಜಾಮೀನು ಪ್ರಶ್ನಿಸಿದ್ದ ಎನ್‌ಐಎ ಅರ್ಜಿ ವಜಾಗೊಳಿಸಿದ ಸುಪ್ರೀಂ: ನಾಳೆ ಸುಧಾ ಭಾರದ್ವಾಜ್‌ ಬಿಡುಗಡೆ

ಭೀಮಾ ಕೋರೆಂಗಾವ್ ಪ್ರಕರಣದಲ್ಲಿ ಬಂಧಿತರಾದ 16 ಹೋರಾಟಗಾರರಲ್ಲಿ ಸುಧಾ ಭಾರದ್ವಾಜ್ ಡೀಫಾಲ್ಟ್ ಜಾಮೀನು ಪಡೆದ ಮೊದಲಿಗರಾಗಿದ್ದಾರೆ.

- Advertisement -
- Advertisement -

ಹೋರಾಟಗಾರ್ತಿ ಸುಧಾ ಭಾರದ್ವಾಜ್‌ರವರಿಗೆ ಬಾಂಬೆ ಹೈಕೋರ್ಟ್‌ ನೀಡಲಾದ ಡೀಫಾಲ್ಟ್‌ ಜಾಮೀನನ್ನು ಪ್ರಶ್ನಿಸಿ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ. ಹಾಗಾಗಿ ಸುಧಾ ಭಾರದ್ವಾಜ್‌ರವರು ಡೀಫಾಲ್ಟ್ ಜಾಮೀನಿಗೆ ಅರ್ಹರಾಗಿದ್ದು ನಾಳೆ ಬೈಕುಲ್ಲಾ ಮಹಿಳಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

ಬಂಧನವಾಗಿ ಮೂರು ವರ್ಷಗಳು ಕಳೆದರೂ ಪೊಲೀಸರು ಯಾವುದೆ ದೋಷಾರೋಪ ಪಟ್ಟಿಯನ್ನು ಸಲ್ಲಿಸದೇ ಇರುವ ಕಾರಣ ಭೀಮಾ ಕೊರೆಗಾಂವ್‌‌‌ – ಎಲ್ಗರ್‌ ಪರಿಷತ್ ಪ್ರಕರಣದಲ್ಲಿ ಬಂಧಿಸಲ್ಪಟ್ಟಿದ್ದ ಮಾನವ ಹಕ್ಕುಗಳ ಹೋರಾಟಗಾರ್ತಿ, ವಕೀಲೆ ಸುಧಾ ಭಾರದ್ವಾಜ್ ಅವರಿಗೆ ಬಾಂಬೆ ಹೈಕೋರ್ಟ್ ಕಳೆದ ವಾರ ಡೀಫಾಲ್ಟ್ ಜಾಮೀನು ಮಂಜೂರು ಮಾಡಿತ್ತು. ಆದರೆ ಅದನ್ನು ಪ್ರಶ್ನಿಸಿ ಎನ್‌ಐಎ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಬಾಂಬೆ ಹೈಕೋರ್ಟ್ ನೀಡಿದ ಜಾಮೀನಿನಲ್ಲಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಸುಪ್ರೀಂ ನ್ಯಾಯಮೂರ್ತಿಗಳಾದ ಎಸ್‌ ಎಸ್‌ ಶಿಂಧೆ ಮತ್ತು ಎನ್‌ಜೆ ಜಾಮದಾರ್‌ರವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣದ ತನಿಖೆಗಾಗಿ ಒದಗಿಸಲಾದ ಗರಿಷ್ಠ ಅವಧಿ ಮುಗಿದ ನಂತರವೂ ಪೊಲೀಸರು ಯಾವುದೇ ಆರೋಪ ಪಟ್ಟಿಯನ್ನು ಸಲ್ಲಿಸದಿದ್ದರೆ, ಆರೋಪಿಯು ಜಾಮೀನಿನ ಮೇಲೆ ಬಿಡುಗಡೆಯಾಗಲು ಅರ್ಹನಾಗುತ್ತಾರೆ. ಇನ್ನು ಡೀಫಾಲ್ಟ್‌ ಜಾಮೀನು ಎಂದು ಕರೆಯುತ್ತಾರೆ.

ಡಿಸೆಂಬರ್ 8 ರಂದು ಮುಂಬೈನ ರಾಷ್ಟ್ರೀಯ ತನಿಖಾ ಸಂಸ್ಥೆ ನ್ಯಾಯಾಲಯದ ವಿಶೇಷ ನ್ಯಾಯಾಧೀಶರ ಮುಂದೆ ತನ್ನ ಜಾಮೀನಿನ ಷರತ್ತುಗಳ ನಿರ್ಧಾರಕ್ಕಾಗಿ ಸುಧಾ ಭಾರದ್ವಾಜ್‌ರವರು ಹಾಜರಾಗಬೇಕಾಗುತ್ತದೆ. ಇದರ ನಂತರ ಬೈಕುಲ್ಲಾ ಮಹಿಳಾ ಜೈಲಿನಿಂದ ಅವರನ್ನು ಬಿಡುಗಡೆ ಮಾಡಲಾಗುತ್ತದೆ.

ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿರುವ ಸುಧಾ ಭಾರದ್ವಾಜ್‌ರವರು ನವೆಂಬರ್ 26, 2018 ರಂದು ಡೀಫಾಲ್ಟ್ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅವರ ವಿರುದ್ಧ ಫೆಬ್ರವರಿ 21, 2019 ರಂದು ಚಾರ್ಜ್‌ಶೀಟ್ ಸಲ್ಲಿಸಲಾಯಿತು. ಹಾಗಾಗಿ ಅವರಿಗೆ ಜಾಮೀನು ಲಭ್ಯವಾಗಿದೆ.

ಭೀಮಾ ಕೋರೆಂಗಾವ್ ಪ್ರಕರಣದಲ್ಲಿ ಬಂಧಿತರಾದ 16 ಹೋರಾಟಗಾರರಲ್ಲಿ ಸುಧಾ ಭಾರದ್ವಾಜ್ ಡೀಫಾಲ್ಟ್ ಜಾಮೀನು ಪಡೆದ ಮೊದಲಿಗರಾಗಿದ್ದಾರೆ.

ಮೇ 2019ರಲ್ಲಿ ಅಂದರೆ ಚಾರ್ಜ್‌ಶೀಟ್‌ ಸಲ್ಲಿಸಿದ ನಂತರ ಜಾಮೀನಿಗೆ ಅರ್ಜಿ ಹಾಕಿದ ವರವರರಾವ್, ಅರುಣ್ ಫೆರಾರ, ವೆರ್ನನ್ ಗೊನ್ಸಾಲ್ವ್ಸ್ ರವರಿಗೆ ಜಾಮೀನು ನೀಡಲಾಗಿಲ್ಲ. ಆದರೆ ವರವರರಾವ್‌ರವರು ತಮ್ಮ ಅನಾರೋಗ್ಯದ ಕಾರಣಕ್ಕೆ ಡಿಸೆಂಬರ್ 06ರವರೆಗೆ ಜಾಮೀನು ಪಡೆದಿದ್ದಾರೆ.


ಇದನ್ನೂ ಓದಿ: ಬೆಂಗಳೂರಿನ ಮುಸ್ಲಿಂ ಯುವಕನಿಗೆ ಥಳಿತ, ಮೂತ್ರ ಕುಡಿಸಲು ಒತ್ತಾಯ ಆರೋಪ: ಸಬ್ ಇನ್ಸ್‌ಪೆಕ್ಟರ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇದು ಸ್ವಾಗತಾರ್ಹ. ಬೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂದಿತರಾಗಿರುವ ಎಲ್ಲರನ್ನೂ ಸರ್ಕಾರ ಈ ಕೂಡಲೇ ಬಿಡುಗಡೆ ಮಾಡಬೇಕು.

LEAVE A REPLY

Please enter your comment!
Please enter your name here

- Advertisment -

ಫ್ರಾನ್ಸ್‌ನಲ್ಲಿ ಭುಗಿಲೆದ್ದ ಜನಾಕ್ರೋಶ: ಬೆಲೆ ಏರಿಕೆ ಹಾಗೂ ಸಾರ್ವಜನಿಕ ಸೇವೆಗಳ ಕಡಿತ ವಿರೋಧಿಸಿ ಬೃಹತ್ ಪ್ರತಿಭಟನೆ; ಹಿಂಸಾಚಾರದಲ್ಲಿ 1,800ಕ್ಕೂ ಅಧಿಕ ಮಂದಿ ವಶ!

ಜೀವನ ವೆಚ್ಚದ ಭಾರಿ ಏರಿಕೆ, ಕುಸಿದುಬೀಳುತ್ತಿರುವ ಶಾಲಾ-ಕಾಲೇಜುಗಳ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೇವೆಗಳ ಕಡಿತವನ್ನು ಖಂಡಿಸಿ ಫ್ರಾನ್ಸ್‌ನಾದ್ಯಂತ ಶನಿವಾರ ಲಕ್ಷಾಂತರ ಜನರು ರಸ್ತೆಗಿಳಿದು ನಡೆಸಿದ ಬೃಹತ್ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿದ್ಯಾರ್ಥಿ...

ಪ.ಬಂಗಾಳ : ದುರ್ಗಾ ಪೂಜೆಗಳಲ್ಲಿ ಎಡಪಕ್ಷಗಳ ಪುಸ್ತಕ ಮಳಿಗೆಗಳ ಮೇಲೆ ದಾಳಿ

ಶನಿವಾರ (ಅಕ್ಟೋಬರ್ 17) ಸಂಜೆ ಕೋಲ್ಕತ್ತಾ ಮುನ್ಸಿಪಲ್ ಕಾರ್ಪೊರೇಶನ್‌ನ (ಕೆಎಂಸಿ) ತಂಡವೊಂದು ನಾಲ್ಕು ದಿನಗಳ ಹಿಂದೆ ಜಾದವ್‌ಪುರದಲ್ಲಿ ಸ್ಥಾಪಿಸಲಾಗಿದ್ದ ಪುಸ್ತಕ ಮಳಿಗೆಯನ್ನು ಧ್ವಂಸಗೊಳಿಸಲು ಆಗಮಿಸಿದಾಗ, ಕೇಂದ್ರ ಸಶಸ್ತ್ರ ಪಡೆಗಳು ಮತ್ತು ಪೊಲೀಸರು ಆ...

ಎಸ್‌ಐಆರ್ ಗೊಂದಲ: ರದ್ದಾಗಿರುವ ಮತದಾರರನ್ನು ಮರಳಿ ಸೇರಿಸಲು ‘ಫಾರ್ಮ್ 6’ ತಿದ್ದುಪಡಿಗೆ ಮಹಾರಾಷ್ಟ್ರ ಪ್ರಸ್ತಾಪ; ಜೈಲು ಶಿಕ್ಷೆಯ ಭೀತಿಯಲ್ಲಿ ಜನರು!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ ಹೆಸರು ರದ್ದಾಗಿರುವ ಹಳೆಯ ಮತದಾರರನ್ನು ಮರಳಿ ಪಟ್ಟಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯಲ್ಲಿ ಭಾರಿ ಆಡಳಿತಾತ್ಮಕ ಮತ್ತು ಕಾನೂನು ತೊಡಕು ಎದುರಾಗಿದೆ. ಎಸ್‌ಐಆರ್ ಪರಿಷ್ಕರಣೆಯಲ್ಲಿ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ : ಬೆಂಗಳೂರಿನ ಟೌನ್‌ಹಾಲ್ ಬಳಿ ಪ್ರತಿಭಟಿಸಿದವರ ಬಂಧನ, ಬಿಡುಗಡೆ

ಶನಿವಾರ (ಅಕ್ಟೋಬರ್ 17) ಬೆಂಗಳೂರಿನ ಟೌನ್ ಹಾಲ್ ಬಳಿ ಮತದಾರರ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ಪ್ರಕ್ರಿಯೆಯ ವಿರುದ್ಧ ಪ್ರತಿಭಟನೆ ನಡೆಸಿದ ಹಾಗೂ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಆಂಧ್ರದಲ್ಲಿ ಮುಂದುವರಿದ ಟಿಡಿಪಿ-ವೈಎಸ್‌ಆರ್‌ಸಿಪಿ ಸಂಘರ್ಷ : ಪರಿಸ್ಥಿತಿ ಹತೋಟಿಗೆ ತರಲು ಗಾಳಿಯಲ್ಲಿ ಗುಂಡು ಹಾರಿಸಿದ ಕಡಪಾ ಪೊಲೀಸರು

ಸ್ಥಳೀಯ ಸಂಸ್ಥೆಗಳ ಚುನಾವಣೆಯ ನಾಮಪತ್ರ ಸಲ್ಲಿಕೆಯ ಎರಡನೇ ದಿನವಾದ ಶನಿವಾರ (ಅಕ್ಟೋಬರ್ 17) ಆಂಧ್ರ ಪ್ರದೇಶದಲ್ಲಿ ರಾಜಕೀಯ ಸಂಘರ್ಷಗಳು ಮುಂದುವರಿದಿವೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ (ವೈಎಸ್ಆರ್‌ಸಿಪಿ) ಭದ್ರಕೋಟೆಯಾಗಿರುವ ವೈಎಸ್ಆರ್ ಕಡಪ ಜಿಲ್ಲೆಯ ಪುಲಿವೆಂದುಲದಲ್ಲಿ...

ಮಧ್ಯಪ್ರದೇಶ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ; 14 ಸಾವು, ಹಲವರಿಗೆ ಗಂಭೀರ ಗಾಯ

ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿರುವ ಶೀತಲಾ ಮಾತಾ ದೇವಸ್ಥಾನದ ಬಳಿ ನವರಾತ್ರಿ ಉತ್ಸವದ ಸಂಭ್ರಮದಲ್ಲಿದ್ದ ಭಕ್ತಾದಿಗಳ ಮೇಲೆ ಅತಿವೇಗವಾಗಿ ಬಂದ ಲಾರಿಯೊಂದು ನುಗ್ಗಿದ ಪರಿಣಾಮ ಕನಿಷ್ಠ 14 ಜನರು ದಾರುಣವಾಗಿ ಮೃತಪಟ್ಟು, ಹಲವರು ಗಂಭೀರವಾಗಿ ಗಾಯಗೊಂಡಿರುವ...

ಕೋಲ್ಕತ್ತಾ ದುರ್ಗಾ ಪೂಜೆ ಪೆಂಡಾಲ್‌ನಲ್ಲಿ ಕಾಲ್ತುಳಿತ : ಮೃತರ ಸಂಖ್ಯೆ 19ಕ್ಕೆ ಏರಿಕೆ; ಏಳು ಮಂದಿಯ ಬಂಧನ

ಕೋಲ್ಕತ್ತಾದ ಸಮುದಾಯ ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಶನಿವಾರ (ಅ.17) ಸಂಜೆ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ಸುಮಾರು 25 ಮಂದಿ ಗಾಯಗೊಂಡಿದ್ದು, ಕೋಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ...

ಯುಎಪಿಎ ಕಾಯಿದೆಯಡಿ ಆರೋಪ ಹೊರಿಸಿದ ಮಾತ್ರಕ್ಕೆ ವಿದೇಶ ಪ್ರಯಾಣದ ಹಕ್ಕು ಕಸಿಯಲಾಗದು: ನತಾಶಾ ನರ್ವಾಲ್‌ಗೆ ದೆಹಲಿ ಹೈಕೋರ್ಟ್ ಅಭಯ

ಒಬ್ಬ ವ್ಯಕ್ತಿಯ ವಿರುದ್ಧ ‘ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ’ (UAPA) ಯಂತಹ ಕಠಿಣ ಕಾಯಿದೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಒಂದೇ ಕಾರಣಕ್ಕೆ, ಅವರ ವಿದೇಶ ಪ್ರಯಾಣದ ಮೂಲಭೂತ ಹಕ್ಕನ್ನು ಸಂಪೂರ್ಣವಾಗಿ ಕಸಿದುಕೊಳ್ಳಲು...

ದೆಹಲಿ | ತಿರಂಗಾ ರ‍್ಯಾಲಿ ವೇಳೆ ಬಂಧಿತರಾಗಿದ್ದ ಅಭಿಜಿತ್ ದೀಪ್ಕೆಗೆ ‍‍ಜಾಮೀನು : ಪೊಲೀಸ್ ಕಸ್ಟಡಿಯಿಂದ ಬಿಡುಗಡೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರಿಗೆ ಶನಿವಾರ (ಅಕ್ಟೋಬರ್ 17) ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದ್ದು, ದೆಹಲಿಯ ಮಂದಿರ್ ಮಾರ್ಗ್ ಠಾಣೆ ಪೊಲೀಸರ ಕಸ್ಟಡಿಯಿಂದ ಬಿಡುಗಡೆಯಾಗಿದ್ದಾರೆ ಎಂದು...

ಮಕ್ಕಳು ಸೇರಿದಂತೆ ಪ್ರತಿಯೊಬ್ಬರಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು : ಸುಪ್ರೀಂ ಕೋರ್ಟ್

ಮಹತ್ವದ ತೀರ್ಪಿನಲ್ಲಿ, ಸಂವಿಧಾನದ 21 ಮತ್ತು 19(1)(ಎ) ವಿಧಿಗಳ ಅಡಿಯಲ್ಲಿ ಇಂಟರ್‌ನೆಟ್ ಪಡೆಯುವ ಮತ್ತು ಬಳಸುವ ಹಕ್ಕನ್ನು ಸುಪ್ರೀಂ ಕೋರ್ಟ್ 'ಮೂಲಭೂತ ಹಕ್ಕು' ಎಂದು ಘೋಷಿಸಿದೆ. ಮಕ್ಕಳು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ಈ...