Homeಮುಖಪುಟಭೀಮಕೊರೆಗಾಂವ್‌‌ ಹಿಂಸಾಚಾರ ಪ್ರಚೋದಿಸಿದ ಆರೋಪಿ, ಬಲಪಂಥೀಯ ನಾಯಕನ ಕಾಲಿಗೆರಗಿದ ಸುಧಾ ಮೂರ್ತಿ; ಆಕ್ಷೇಪ

ಭೀಮಕೊರೆಗಾಂವ್‌‌ ಹಿಂಸಾಚಾರ ಪ್ರಚೋದಿಸಿದ ಆರೋಪಿ, ಬಲಪಂಥೀಯ ನಾಯಕನ ಕಾಲಿಗೆರಗಿದ ಸುಧಾ ಮೂರ್ತಿ; ಆಕ್ಷೇಪ

ಬಿಂದಿ ಧರಿಸದ ಪತ್ರಕರ್ತೆಯೊಬ್ಬರನ್ನು ‘ವಿಧವೆ’ ಎಂದು ಹೇಳಿ ಅವಮಾನಿಸಿದ್ದ ಭಿಡೆ ವಿರುದ್ಧ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ

- Advertisement -
- Advertisement -

ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ವಿವಾದಾತ್ಮಕ ಬಲಪಂಥೀಯ ನಾಯಕ, ಶಿವ ಪ್ರತಿಷ್ಠಾನ ಸಂಸ್ಥಾಪಕ ಸಂಭಾಜಿ ರಾವ್ ಭಿಡೆ ಅವರನ್ನು ಇನ್ಫೋಸಿಸ್‌ ಸಹ-ಸಂಸ್ಥಾಪಕಿ ಸುಧಾ ಮೂರ್ತಿ ಅವರು ಭೇಟಿಯಾಗಿದ್ದು, ಕಾಲಿಗೆ ಎರಗಿ ಆಶೀರ್ವಾದ ಪಡೆದಿದ್ದಾರೆ. ವಿಡಿಯೊ ಮತ್ತು ಚಿತ್ರಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಸುಧಾ ಮೂರ್ತಿ ಅವರು ಬಲಪಂಥೀಯ ನಾಯಕನ ಭೇಟಿಯಾಗಿದ್ದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ಷೇಪ ವ್ಯಕ್ತಿಯಾಗಿದ್ದು, ಹಲವಾರು ಜನರು ಇದನ್ನು ವಿರೋಧಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಭೇಟಿಯ ಕುರಿತು ಪ್ರತಿಕ್ರಿಯಿಸಿರುವ ಪತ್ರಕರ್ತೆ ಮಾನ್ಸಿ ದೇಶಪಾಂಡೆ ಅವರು, “ಕೇವಲ ಹೆಚ್ಚುವರಿ ಮಾಹಿತಿ. ಕೆಲ ದಿನಗಳ ಹಿಂದೆ ಮಹಿಳಾ ವರದಿಗಾರ್ತಿಯೊಬ್ಬರು ಬಿಂದಿ ಧರಿಸಿಲ್ಲ ಎಂಬ ಕಾರಣಕ್ಕೆ ಅವರೊಂದಿಗೆ ಮಾತನಾಡಲು ನಿರಾಕರಿಸಿದ್ದು ಇದೇ ವ್ಯಕ್ತಿ… ಮತ್ತು ಈ ಚಿತ್ರವೊಂದರಲ್ಲಿ ಸುಧಾ ಮೂರ್ತಿ ಅವರ ಪಾದಗಳನ್ನು ಸ್ಪರ್ಶಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಭಿಡೆ ನವೆಂಬರ್ 2 ರಂದು ಬಿಂದಿ ಧರಿಸದ ಮಹಿಳಾ ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ್ದು, ಇದರ ವಿರುದ್ಧ ಅವರಿಗೆ ಮಹಾರಾಷ್ಟ್ರ ಮಹಿಳಾ ಆಯೋಗ ಅವರಿಗೆ ನೋಟಿಸ್ ಜಾರಿ ಮಾಡಿದೆ. ಮಹಿಳೆ ಭಾರತ ಮಾತೆಯನ್ನು ಹೋಲುತ್ತಾಳೆ, ಅವಳು ಬಿಂದಿ ಹಾಕದೆ “ವಿಧವೆ” ಯಂತೆ ಕಾಣಿಸಿಕೊಳ್ಳಬಾರದು ಎಂದು ಅವರು ಮಹಿಳಾ ಪತ್ರಕರ್ತರಿಗೆ ಅವಮಾನಿಸಿದ್ದರು.

ಇದನ್ನೂ ಓದಿ: 2009ರಲ್ಲಿ ಯುಪಿಎ ಅಧಿಕಾರಕ್ಕೆ ಶ್ಲಾಘನೆ, ಈಗ ಟೀಕೆ; ವೈರಲ್‌ ಆಯ್ತು ಇನ್ಫೋಸಿಸ್‌ ನಾರಾಯಣಮೂರ್ತಿ ಹಳೆಯ ಸಂದರ್ಶನ

ಇಬ್ಬರ ಭೇಟಿಯ ಕುರಿತು ಪ್ರತಿಕ್ರಿಯಿಸಿದ ಎಎಪಿ ನಾಯಕಿ ಪ್ರೀತಿ ಶರ್ಮಾ ಮೆನನ್, “ಅವರು ಬಿಂದಿ ಧರಿಸಿದ್ದರು ಎಂದು ನಂಬಿ. ಸುಧಾ ಮೂರ್ತಿಯಂತಹವರು ಭಿಡೆಯಂತಹ ಧರ್ಮಾಂಧರನ್ನು ಭೇಟಿಯಾಗುವುದರ ಮೂಲಕ ಅವರು ತಮ್ಮ ನಿಜವಾದ ಬಣ್ಣವನ್ನು ಬಹಿರಂಗಪಡಿಸಿದ್ದಾರೆ” ಎಂದು ಹೇಳಿದ್ದಾರೆ.

ಸಂಭಾಜಿ ರಾವ್ ಭಿಡೆ ಅವರು ಆರೆಸ್ಸೆಸ್ಸಿನ ಮಾಜಿ ನಾಯಕ ಕೂಡಾ ಆಗಿದ್ದು, 2018 ರಲ್ಲಿ ಸಂಭವಿಸಿದ ಭೀಮಾ ಕೋರೆಗಾಂವ್ ಘರ್ಷಣೆಯಲ್ಲಿ, ಕಲ್ಲು ತೂರಾಟದ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದ ಆರೋಪದ ಮೇಲೆ ಅವರ ವಿರುದ್ಧ ಪ್ರಕರಣ ಕೂಡಾ ದಾಖಲಾಗಿತ್ತು.

2018 ರಲ್ಲಿ, ಭಿಡೆ ಅವರು ತಮ್ಮ ತೋಟದಿಂದ ಮಾವಿನ ಹಣ್ಣುಗಳನ್ನು ತಿಂದ ನಂತರ ದಂಪತಿಗಳಿಗೆ ಮಕ್ಕಳು ಹುಟ್ಟಿದೆ ಎಂದು ಹೇಳಿ ಟೀಕೆಗಳನ್ನು ಎದುರಿಸಿದ್ದರು. ಅಲ್ಲದೆ, 2008 ರಲ್ಲಿ ಅಶುತೋಷ್ ಗೋವಾರಿಕರ್ ಅವರ ಐತಿಹಾಸಿಕ ಚಲನಚಿತ್ರ ಜೋಧಾ ಅಕ್ಬರ್ ವಿರುದ್ಧದ ನಡೆದ ಪ್ರತಿಭಟನೆಗಳಲ್ಲಿ ಮುಂಚೂಣಿಯಲ್ಲಿದ್ದರು. ಜೊತೆಗೆ ಚಿತ್ರಮಂದಿರಗಳನ್ನು ದೋಚಿದ್ದಕ್ಕಾಗಿ ಮತ್ತು ಚಲನಚಿತ್ರದ ಪ್ರದರ್ಶನವನ್ನು ನಿಲ್ಲಿಸಿದ್ದಕ್ಕಾಗಿ ಭಿಡೆ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: ಮಾತು ಮರೆತ ಭಾರತ; ಭೀಮಾ ಕೊರೆಗಾಂವ್ ಫೈಲ್: ಅಂಬೇಡ್ಕರ್ ಮನೆತನದ ಸದಸ್ಯನನ್ನೇ ಜೈಲಿಗಟ್ಟಿದ ಬಿಜೆಪಿ ಸರ್ಕಾರ

ಮತ್ತೊಬ್ಬ ಟ್ವಿಟ್ಟರ್ ಬಳಕೆದಾರರು, “ಒಂದು ಕಾಲದಲ್ಲಿ, ಅವರು ಟೆಲ್ಕೊದ ‘ಓನ್ಲಿ ಮೆನ್’ ನೀತಿಯನ್ನು ಪ್ರಶ್ನಿಸಿ, ಪುರುಷ ಪ್ರಾಬಲ್ಯದ ವಿರುದ್ಧ ನಿಂತಿದ್ದರು. ಈಗ ಬಿಂದಿ ಧರಿಸಲಿಲ್ಲ ಎಂದು ಪತ್ರಕರ್ತೆಯೊಂದಿಗೆ ಮಾತನಾಡಲು ನಿರಾಕರಿಸಿದ ವ್ಯಕ್ತಿಯಿಂದ ಆಶೀರ್ವಾದ ತೆಗೆದುಕೊಳ್ಳುತ್ತಿದ್ದಾರೆ. ಎಂತಹ ಕುಸಿತ ಶ್ರೀಮತಿ ಸುಧಾ ಮೂರ್ತಿ (ವಾಟ್ ಎ ಫಾಲ್ ಮಿಸೆಸ್ ಸುಧಾ ಮೂರ್ತಿ)” ಎಂದು ಹೇಳಿದ್ದಾರೆ.

ಭಿಡೆ ಅವರು ಪುಣೆಯ ಫರ್ಗುಸನ್ ಕಾಲೇಜಿನಲ್ಲಿ ಭೌತಶಾಸ್ತ್ರದ ಪ್ರಾಧ್ಯಾಪಕರಾಗಿದ್ದರು. ನಂತರ, ಅವರು ಆರೆಸ್ಸೆಸ್ ಪ್ರಚಾರಕರಾಗಿ ಸೇರಿಕೊಂಡು, ಶಿವ ಪ್ರತಿಷ್ಠಾನ ಹಿಂದೂಸ್ತಾನ್ ಎಂಬ ಸಂಘಟನೆಯನ್ನು ಸ್ಥಾಪಿಸಿದರು. ಶಿವ ಪ್ರತಿಷ್ಠಾನ ಮರಾಠ ದೊರೆ ಶಿವಾಜಿ ಅವರ ಮಗ ಸಂಭಾಜಿಯ ಜೀವನದ ಬೋಧನೆಗಳು ಮತ್ತು ಮಾಹಿತಿಯನ್ನು ಹರಡಲು ಸ್ಥಾಪಿಸಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ, ಕೊಲ್ಲಾಪುರ ಮತ್ತು ಸತಾರಾದಲ್ಲಿ, ವಿಶೇಷವಾಗಿ ಯುವಜನರ ನಡುವೆ ಭಿಡೆ ಸಾಕಷ್ಟು ಅನುಯಾಯಿಗಳನ್ನು ಹೊಂದಿದ್ದಾರೆ.

ಇದನ್ನೂ ಓದಿ: ಮಹಿಳಾ ಮುಖ್ಯ ನ್ಯಾಯಮೂರ್ತಿ: ತನ್ನ ಪೂರ್ವಾಗ್ರಹಗಳಿಂದ ಬಿಡುಗಡೆ ಹೊಂದುವುದೇ ಸುಪ್ರೀಂಕೋರ್ಟ್?

ಇದನ್ನೂ ಓದಿ: ವ್ಯವಸ್ಥೆಯ ವಿರೋಧ, ಪ್ರಜಾಪ್ರಭುತ್ವವಾದಿ ಸಮಾನತೆಗೆ ಸಂಕೇತದಂತಿದ್ದ ನನ್ನ ಗುರು ಚಂಪಾ

ಈ ನಡುವೆ ಸುಧಾ ಮೂರ್ತಿ ಮತ್ತು ಭಿಡೆ ಭೇಟಿಯ ಬಗ್ಗೆ ಬಲಪಂಥೀಯರು ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...