Homeಕರ್ನಾಟಕಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

ಸುಡಾನ್ ಸಂಘರ್ಷದಲ್ಲಿ ಕನ್ನಡಿಗರಿಗೆ ಸಂಕಷ್ಟ: ಜೈಶಂಕರ್-ಸಿದ್ದರಾಮಯ್ಯ ಮಧ್ಯೆ ಟ್ವೀಟ್ ವಾರ್

- Advertisement -
- Advertisement -

ಸುಡಾನ್‌ನಲ್ಲಿ ನಡೆಯುತ್ತಿರುವ ಸೇನೆ ಮತ್ತು ಅರೆಸೇನಾ ಪಡೆ ನಡುವಿನ ಸಂಘ‍ರ್ಷದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದಕ್ಕೆ ವಿದೇಶಾಂಗ ಸಚಿವ ಜೈಶಂಕರ್‌ ಪ್ರತಿ ಟ್ವೀಟ್ ಮಾಡಿದ್ದು, ಟ್ವಿಟರ್ ವಾರ್‌ಗೆ ಕಾರಣವಾಗಿದೆ.

ಕನ್ನಡಿಗರ ಸುರಕ್ಷತೆ ಬಗ್ಗೆ ಕಳವಳ ವ್ಯಕ್ತಪಡಿಸಿ ಸಿದ್ದರಾಮಯ್ಯ ಅವರು ಮಂಗಳವಾರ ಟ್ವೀಟ್‌ ಮಾಡಿದ್ದರು. ಇದಕ್ಕೆ ಟ್ವಿಟರ್‌ನಲ್ಲೇ ಪ್ರತಿಕ್ರಿಯಿಸಿರುವ ಜೈಶಂಕರ್‌, ‘ಇದನ್ನು ರಾಜಕೀಯಗೊಳಿಸಬೇಡಿ’ ಎಂದು ತಿರುಗೇಟು ನೀಡಿದ್ದರು. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ಟ್ವೀಟ್‌ ಏಟು ನೀಡಿದ್ದಾರೆ.

ಸಿದ್ದರಾಮಯ್ಯ ಅವರು, ”ಕೇಂದ್ರ ಬಿಜೆಪಿ ಸರ್ಕಾರವು ತಕ್ಷಣವೇ ರಾಜತಾಂತ್ರಿಕ ಚರ್ಚೆಗಳನ್ನು ತೆರೆಯಬೇಕು ಮತ್ತು ಹಕ್ಕಿ ಪಿಕ್ಕಿಗಳ ಯೋಗಕ್ಷೇಮದ ಬಗ್ಗೆ ತಿಳಿದುಕೊಳ್ಳಲು ಅಂತರಾಷ್ಟ್ರೀಯ ಏಜೆನ್ಸಿಗಳಿಗೆ ತಿಳಿಸಬೇಕು. ಭಾರತೀಯರ ರಕ್ಷಣೆಗೆ ಕೂಡಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಮಾಡುತ್ತೇನೆ” ಎಂದು ಟ್ವೀಟ್ ಮಾಡಿದ್ದರು.

ಸಿದ್ದರಾಮಯ್ಯನವರು ಸುಡಾನ್‌ನಲ್ಲಿ ಸಿಲುಕಿರುವ ರಾಜ್ಯದ ಹಕ್ಕಿ ಪಿಕ್ಕಿ ಬುಡಕಟ್ಟಿಗೆ ಸೇರಿದ 31 ಜನರು ಸಿಲುಕಿದ್ದಾರೆ ಅವರನ್ನು ಸುರಕ್ಷಿತವಾಗಿ ಕರೆತರಬೇಕು ಎಂದಿದ್ದರು.

ಅದಕ್ಕೆ ಜೈಶಂಕರ್ ಅವರು, ”ನಿಮ್ಮ (ಸಿದ್ದರಾಮಯ್ಯ) ಟ್ವೀಟ್‌ ನೋಡಿ ಆಶ್ಚರ್ಯವಾಯಿತು. ಅಲ್ಲಿ ಜೀವಗಳು ಅಪಾಯದಲ್ಲಿವೆ. ದಯವಿಟ್ಟು ಇದರಲ್ಲಿ ರಾಜಕೀಯ ಮಾಡಬೇಡಿ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಭಾರತದ ರಾಯಭಾರ ಕಚೇರಿಯು ಸುಡಾನ್‌ನಲ್ಲಿರುವ ಹೆಚ್ಚಿನ ಭಾರತೀಯ ಪ್ರಜೆಗಳು ಸಂಪರ್ಕದಲ್ಲಿದ್ದಾರೆ” ಎಂದು ಹೇಳಿದ್ದಾರೆ.

ಜೈಶಂಕರ್‌ ಟ್ವೀಟ್‌ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ ”ನೀವು ವಿದೇಶಾಂಗ ವ್ಯವಹಾರಗಳ ಸಚಿವರಾಗಿರುವುದರಿಂದ ನಾನು ನಿಮಗೆ ಸಹಾಯಕ್ಕಾಗಿ ಮನವಿ ಮಾಡಿದ್ದೇನೆ. ಆದರೆ ನೀವು ಆಶ್ಚರ್ಯಗೊಳ್ಳುವುದರಲ್ಲಿ ಬ್ಯುಸಿಯಾಗಿದ್ದರೆ ದಯವಿಟ್ಟು ನಮ್ಮ ಜನರನ್ನು ಮರಳಿ ಕರೆತರಲು ಸಹಾಯ ಮಾಡುವ ವ್ಯಕ್ತಿಯ ಸಂಪರ್ಕ ಮಾಡಿಕೊಡಿ” ಎಂದು ತಿರುಗೇಟು ನೀಡಿದ್ದಾರೆ.

ಸುಡಾನ್‌ ರಾಜಧಾನಿ ಖಾರ್ಟೂಮ್‌ ಸೇರಿದಂತೆ ದೇಶದ ವಿವಿಧೆಡೆ ಕಳೆದ ಎರಡು ದಿನಗಳಿಂದ ಸೇನೆ ಮತ್ತು ಅರೆಸೇನಾ ಪಡೆ ನಡುವೆ ಉಂಟಾದ ಸಂಘರ್ಷ ಮುಂದುವರಿದಿದೆ. ಈವರೆಗೆ ಕನಿಷ್ಠ 200ಜನರು ಸಾವಿಗೀಡಾಗಿದ್ದು, 1800ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸೇನೆ ಮತ್ತು ಅರೆಸೇನಾಪಡೆ ನಡುವೆ ಗುಂಡಿನ ಕಾಳಗ ನಡೆಯುತ್ತಿದ್ದು ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ಸೇನೆ ಮತ್ತು ಅರೆಸೇನಾಪಡೆ (ಆರ್‌ಎಸ್‌ಎಫ್‌) ನಡುವೆ ಅಧಿಕಾರಕ್ಕಾಗಿ ಮೂಡಿರುವ ಬಿಕ್ಕಟ್ಟು ಇನ್ನಷ್ಟು ಉಲ್ಬಣಗೊಂಡಿದೆ. ಸೇನೆಗಿಂತಲೂ ಅರೆಸೇನಾಪಡೆ ಪ್ರಬಲವಾಗಿದೆ ಎಂದು ಮೂಲಗಳು ತಿಳಿಸಿವೆ.

ಸೇನೆ ನೇತೃತ್ವವನ್ನು ಅಬ್ದೆಲ್‌ ಫತ್ಹಾ ಅಲ್ ಬುರ‍್ಹಾನ್ ವಹಿಸಿದ್ದರೆ, ಉಪ ನಾಯಕನಾಗಿ ರ‍್ಯಾಪಿಡ್‌ ಸಪೋರ್ಟ್‌ ಫೋರ್ಸ್‌ ಕಮಾಂಡರ್‌ ಮೊಹಮ್ಮದ್ ಹಮ್ದಾನ್‌ ಡಾಗ್ಲೊ ಅವರು ಇದ್ದಾರೆ. ಅಧಿಕಾರಕ್ಕಾಗಿ ಈ ಇಬ್ಬರ ನಡುವೆ ಸಂಘರ್ಷಕ್ಕೆ ನಡೆಯುತ್ತಿದೆ.

ಸಂಕಷ್ಟದಲ್ಲಿ ಕರ್ನಾಟಕ ಸೇರಿದಂತೆ ಅನೇಕ ಭಾರತೀಯರು..

ಸುಡಾನ್‌ನಲ್ಲಿನ ಪರಿಸ್ಥಿತಿಯನ್ನು ಗಮನಿಸುತ್ತಿರುವ ಭಾರತದ ವಿದೇಶಾಂಗ ಸಚಿವಾಲಯ ಅಲ್ಲಿನ ಭಾರತೀಯರ ರಕ್ಷಣೆ ಮತ್ತು ಸಹಾಯಕ್ಕಾಗಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಅಲ್ಲದೆ ನಿಯಂತ್ರಣ ಕೊಠಡಿ ಸಂಖ್ಯೆಯ ದೂರವಾಣಿ ಸಂಖ್ಯೆ ಇಮೇಲ್ ವಿಳಾಸಗಳನ್ನು ಸಹ ಜನತೆಗೆ ನೀಡಲಾಗಿದೆ. ದೂರವಾಣಿ ಸಂಖ್ಯೆಗಳು: 1800 11 8797 (ಟೋಲ್ ಫ್ರೀ) +91-11-23012113; +91-11-23014104; +91-11-23017905; ಮೊಬೈಲ್: +91 99682 91988 ಮತ್ತು ಇಮೇಲ್: [email protected]

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...