Homeಕರ್ನಾಟಕಅನುಮತಿ ಪಡೆಯುವವರೆಗೆ ಸಕ್ಕರೆ ಕಾರ್ಖಾನೆ ನಡೆಸಲಾಗದು: ಯತ್ನಾಳ್‌ ಕುಟುಂಬಕ್ಕೆ ಹೈಕೋರ್ಟ್‌ ಸೂಚನೆ

ಅನುಮತಿ ಪಡೆಯುವವರೆಗೆ ಸಕ್ಕರೆ ಕಾರ್ಖಾನೆ ನಡೆಸಲಾಗದು: ಯತ್ನಾಳ್‌ ಕುಟುಂಬಕ್ಕೆ ಹೈಕೋರ್ಟ್‌ ಸೂಚನೆ

- Advertisement -
- Advertisement -

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಂಬದ ಒಡೆತನದ ಸಿದ್ಧಸಿರಿ ಸಕ್ಕರೆ ಹಾಗೂ ಎಥೆನಾಲ್ ಘಟಕದ ಕಾರ್ಯಾಚರಣೆ ಸ್ಥಗಿತಗೊಳಿಸುವ ಕುರಿತು ಮಾಹಿತಿ ಪಡೆದು ತಿಳಿಸುವಂತೆ ಅರ್ಜಿದಾರರ ಪರ ವಕೀಲರಿಗೆ ಹೈಕೋರ್ಟ್ ಸೂಚನೆ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಯತ್ನಾಳ್‌ ಪುತ್ರ ಹಾಗೂ ಸಂಸ್ಥೆಯ ನಿರ್ದೇಶಕ ರಮಣಗೌಡ ಬಿ ಪಾಟೀಲ್‌ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ ಎಸ್‌ ದಿನೇಶ್‌ ಕುಮಾರ್‌ ಮತ್ತು ನ್ಯಾಯಮೂರ್ತಿ ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ವೆಂಕಟೇಶ್‌ ದಳವಾಯಿ ಅವರು, ರಾಜಕೀಯ ಕಾರಣಕ್ಕಾಗಿ ಕಾರ್ಖಾನೆ ಮುಚ್ಚಲು ಒತ್ತಾಯಿಸಲಾಗುತ್ತಿದೆ ಎಂದು ಆರೋಪಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಕಾರ್ಖಾನೆ ನಿಯಮದ ಪ್ರಕಾರ ನಡೆಯುತ್ತಿಲ್ಲ. ಹಾಗಾಗಿ, ಕ್ರಮ ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಎರಡೂ ಕಡೆಯ ವಾದ ಆಲಿಸಿದ ಪೀಠವು ಕಾರ್ಖಾನೆ ಮುಚ್ಚುವ ಸಂಬಂಧ ಅರ್ಜಿದಾರರಿಂದ ಮಾಹಿತಿ ಪಡೆದು ತಿಳಿಸಬೇಕು ಎಂದು ಸೂಚಿಸಿ ವಿಚಾರಣೆಯನ್ನು ಫೆಬ್ರವರಿ 8ಕ್ಕೆ ಮುಂದೂಡಿತು.

ಅರ್ಜಿದಾರರು 2021ರಲ್ಲಿ ಕಾರ್ಖಾನೆ ಖರೀದಿಸಿದ್ದು, ನಾವೀಗ 2024ರಲ್ಲಿದ್ದೇವೆ. ಈ ಅವಧಿಯಲ್ಲಿ ಅಗತ್ಯ ಅನುಮತಿ ಪಡೆಯಬೇಕಿತ್ತು. ಕಾನೂನಿನ ಪ್ರಕಾರ ನೀವು ಅನುಮತಿ ಪಡೆಯುವವರೆಗೆ ಕಾರ್ಖಾನೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.

ಪ್ರಕರಣದ ಹಿನ್ನೆಲೆ : ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನಲ್ಲಿರುವ ಶಾಸಕ ಯತ್ನಾಳ್ ಕುಟುಂಬದ ಒಡೆತನದ ಸಿದ್ದಸಿರಿ ಸಕ್ಕರೆ ಹಾಗೂ ಎಥೆನಾಲ್ ಘಟಕ ಮುಚ್ಚುವಂತೆ ಕಲಬುರಗಿ ವಲಯದ ಹಿರಿಯ ಪರಿಸರ ಅಧಿಕಾರಿ ಜ.18ರಂದು ನೋಟಿಸ್ ಜಾರಿ ಮಾಡಿದ್ದರು. ಬಳಿಕ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯೂ ಜ.25ರಂದು ಅದೇ ರೀತಿಯ ಆದೇಶ ನೀಡಿತ್ತು. ಈ ಎರಡೂ ಆದೇಶಗಳನ್ನು ರದ್ದು ಮಾಡುವಂತೆ ಯತ್ನಾಳ್ ಕುಟುಂಬಸ್ಥರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಮಾಲಿನ್ಯ ನಿಯಂತ್ರಣ ನಿಯಮಾವಳಿಗಳನ್ನು ಗಾಳಿಗೆ ತೂರಿ ಕಾರ್ಖಾನೆ ನಡೆಸುತ್ತಿದ್ದ ಆರೋಪ ಯತ್ನಾಳ್ ಕುಟುಂಬಸ್ಥರ ವಿರುದ್ದ ಕೇಳಿ ಬಂದಿದೆ. ವರದಿಗಳ ಪ್ರಕಾರ, ಅನುಮತಿ ಪಡೆಯದೆ ಬಾಯ್ಲರ್ ಆರಂಭ, ಕಬ್ಬು ಅರೆಯುವಿಕೆ, ತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣ ಹಂತದಲ್ಲಿದ್ದರೂ ಅನುಮತಿ ಪಡೆಯದೆ ಡಿಸ್ಟಿಲರಿ ಘಟಕ ಸ್ಥಾಪಿಸಿದ್ದು ಸೇರಿದಂತೆ ಅನೇಕ ಆರೋಪಗಳು ಈ ಕಾರ್ಖಾನೆ ವಿರುದ್ದವಿದೆ.

ಇದನ್ನೂ ಓದಿ : ಭೂ ವಿಜ್ಞಾನಿ ಪ್ರತಿಮಾ ಕೊಲೆ ಪ್ರಕರಣ: ಕೋರ್ಟ್‌ಗೆ 600 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...