Homeಕರ್ನಾಟಕಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಪ್ರತಿ ಟನ್ ಗೆ 3.500ರೂ ಬೆಂಬಲ ಬೆಲೆ ನಿಗದಿಗೆ ಒತ್ತಾಯ

ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ: ಪ್ರತಿ ಟನ್ ಗೆ 3.500ರೂ ಬೆಂಬಲ ಬೆಲೆ ನಿಗದಿಗೆ ಒತ್ತಾಯ

- Advertisement -
- Advertisement -

ಬೆಳಗಾವಿ: ಪ್ರತಿ ಟನ್‌ ಕಬ್ಬಿಗೆ 3,500 ರೂ. ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಸಿರು ಸೇನೆ ರೈತ ಸಂಘದ ಬ್ಯಾನರ್ ಅಡಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿ ಟನ್‌ಗೆ 3,200 ರೂ ನೀಡುವ ಸಕ್ಕರೆ ಕಾರ್ಖಾನೆಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದಾರೆ.

ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಳೆದ 5 ದಿನಗಳಿಂದ ನಿರಂತರ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಬ್ಬು ಬೆಳೆಗಾರರು, ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಕಿಡಿಕಾರಿದ್ದಾರೆ.

ಕಳೆದ 5 ದಿನಗಳಿಂದ ರೈತರು ಬಿರುಸಿನ ಗಾಳಿಯಲ್ಲೂ, ಚಳಿಯಲ್ಲೂ ಅಹೋರಾತ್ರಿ ಕುಳಿತು ಹೋರಾಟ ನಡೆಸುತ್ತಿದ್ದಾರೆ. ಕೆಲವರು ಸ್ಥಳದಲ್ಲೇ ಅಡುಗೆ, ಊಟ, ನಿದ್ದೆ ಮಾಡುತ್ತಾ ಹೋರಾಟ ಮುಂದುವರೆಸುತ್ತಿದ್ದಾರೆ.

ಗೋಕಾಕ್ ಪಟ್ಟಣದಲ್ಲಿ, ವಿದ್ಯಾರ್ಥಿಗಳು ರೈತರೊಂದಿಗೆ ಸೇರಿ ಪ್ರಮುಖ ರಸ್ತೆಗಳ ತಡೆಹಿಡಿದರು. ಇದರಿಂದ ಬೆಳಗಾವಿ, ಸವದತ್ತಿ, ಮೂಡಲಗಿ ಮತ್ತು ಯರಗಟ್ಟಿಯನ್ನು ಸಂಪರ್ಕಿಸುವ ಪ್ರಮುಖ ಮಾರ್ಗಗಳಲ್ಲಿ ಸಂಚಾರ ಅಸ್ತವ್ಯಸ್ತಗೊಳ್ಳುವಂತಾಯಿತು.

ಹಸಿರು ಬಾವುಟಗಳನ್ನು ಹಿಡಿದಿರುವ ರೈತರು, ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಸರ್ಕಾರ ರೈತರ ಹಿತಾಸಕ್ತಿಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ದಿನ ಕಳೆದಂತೆ ಪ್ರತಿಭಟನಾಕಾರರ ಸಂಖ್ಯೆ ಹೆಚ್ಚುತ್ತಲೇ ಇದೆ. ಪ್ರತಿಭಟನಾ ಸ್ಥಳದಲ್ಲಿಯೇ ರೈತರು ತಾತ್ಕಾಲಿಕ ಅಡುಗೆ ಮನೆಗಳನ್ನು ಸ್ಥಾಪಿಸಿದ್ದು, ಪ್ರತಿಭಟನಾಕಾರರಿಗೆ ಆಹಾರ ವಿತರಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಮತ್ತು ಹಲವಾರು ರೈತ ಸಂಘಟನೆಗಳು ಆಯೋಜಿಸಿರುವ ಈ ಪ್ರತಿಭಟನೆಯಲ್ಲಿ ಬೆಳಗಾವಿ ತ್ತು ಹತ್ತಿರದ ಜಿಲ್ಲೆಗಳಾದ್ಯಂತ ರೈತರು ಬೃಹತ್ ಪ್ರಮಾಣದಲ್ಲಿ ಭಾಗವಹಿಸಿದ್ದಾರೆ.

ಮೂಡಲಗಿ, ರಾಯಬಾಗ್ ಮತ್ತು ಗೋಕಾಕ್ ವಕೀಲರ ಸಂಘದ ವಕೀಲರು, ವಿವಿಧ ಭಾಗಗಳ ಮಾಜಿ ಸೈನಿಕರು, ವಿವಿಧ ಸಂಸ್ಥೆಗಳ ಮಠಾಧೀಶರು ಕೂಡ ಪ್ರತಿಭಟನಾಕಾರರನ್ನು ಭೇಟಿ ಮಾಡಿ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ಪಕ್ಷಪಾತವಿಲ್ಲದೆ ಹಲವಾರು ನಾಯಕರು ಮತ್ತು ಚುನಾಯಿತ ಪ್ರತಿನಿಧಿಗಳು ರೈತರ ಬೆಂಬಲಕ್ಕೆ ನಿಂತಿದ್ದಾರೆ. ಸಂಸದ ಮತ್ತು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಸೋಮವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ರೈತರ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಇಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿ ವೈ ವಿಜಯೇಂದ್ರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ರೈತರಿಗೆ ತಮ್ಮ ಪಕ್ಷದ ಬೆಂಬಲವನ್ನು ನೀಡಿದರು.

ಈ ನಡುವೆ ಪ್ರತಿಭಟನಾ ನಿರತ ರೈತರು ನೆರೆಯ ಮಹಾರಾಷ್ಟ್ರದ ಸಕ್ಕರೆ ಕಾರ್ಖಾನೆಗಳು ಟನ್‌ಗೆ 3,600 ರೂ. ಪಾವತಿಸುತ್ತಿದ್ದರೂ, ಕರ್ನಾಟಕ ಸರ್ಕಾರ ಮಾತ್ರ ನ್ಯಾಯಯುತ ಬೆಲೆ ನಿಗದಿಪಡಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.

ಭಾನುವಾರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ್ ಗುಳೇದ್ ಅವರು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಆದರೆ, ಈ ಪ್ರಯತ್ನ ವಿಫಲವಾಯಿತು.

“ಜಿಲ್ಲಾಡಳಿತವು ಕಾರ್ಖಾನೆ ಮಾಲೀಕರೊಂದಿಗೆ ನಡೆಸಿದ ಮಾತುಕತೆಗಳು ತೃಪ್ತಿದಾಯಕ ನಿರ್ಧಾರವನ್ನು ಕೈಗೊಂಡಿದ್ದರೆ, ನಾವು ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವ ಕುರಿತು ಚಿಂತನೆ ನಡೆಸುತ್ತಿದ್ದೆವು. ಆದರೆ, ಅದು ಸಾಧ್ಯವಾಗಿಲ್ಲ. ಹಗಲು ರಾತ್ರಿ ಪ್ರತಿಭಟನೆ ಮುಂದುವರೆಸುತ್ತಿದ್ದೇವೆಂದು ರೈತ ಮುಖಂಡರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...