Homeಕರ್ನಾಟಕಸುಹಾಸ್‌ ಶೆಟ್ಟಿಯ ರೌಡಿ ಶೀಟ್‌ ತೆರೆದಿದ್ದು ಪುಣ್ಯಾತ್ಮ ಬೊಮ್ಮಾಯಿ: ದಿನೇಶ್ ಗುಂಡೂರಾವ್

ಸುಹಾಸ್‌ ಶೆಟ್ಟಿಯ ರೌಡಿ ಶೀಟ್‌ ತೆರೆದಿದ್ದು ಪುಣ್ಯಾತ್ಮ ಬೊಮ್ಮಾಯಿ: ದಿನೇಶ್ ಗುಂಡೂರಾವ್

ಬಿಜೆಪಿಯವರೇ ಕ್ರಿಮಿನಲ್‌ಗಳನ್ನು ಸೃಷ್ಟಿಸಿ, ಅವರ ಮೇಲೆ ರೌಡಿ ಶೀಟರ್ ತೆರೆದು, ಈ ಕ್ರಿಮಿನಲ್‌ಗಳ ಹೆಣ ಬಿದ್ದ ಕೂಡಲೆ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ

- Advertisement -
- Advertisement -

ಮಂಗಳೂರಿನಲ್ಲಿ ಇತ್ತಿಚೆಗೆ ಹತ್ಯೆಯಾದ ರೌಡಿ ಸುಹಾಸ್ ಶೆಟ್ಟಿಯನ್ನು ರೌಡಿಯನ್ನಾಗಿ ಪಟ್ಟಿ ಮಾಡಿದ್ದ ಪೊಲೀಸ್ ಆದೇಶದ ಪತ್ರವನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಮಂಗಳವಾರ ಬಿಡುಗಡೆ ಮಾಡಿದ್ದಾರೆ. ರೌಡಿ ಸುಹಾಸ್‌ನನ್ನು‌ ಇಂದು ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ರೌಡಿ ಪಟ್ಟಿಗೆ ಸೇರಿಸಿದ್ದರು? ಎಂದು ಅವರು ಇದೇ ವೇಳೆ ಪ್ರಶ್ನಿಸಿದ್ದಾರೆ. ಸುಹಾಸ್‌ ಶೆಟ್ಟಿಯ

ಈ ಬಗ್ಗೆ ಎಕ್ಸ್‌ನಲ್ಲಿ ಅದೇಶ ಪತ್ರವನ್ನು ಪೋಸ್ಟ್‌ ಮಾಡಿರುವ ಗುಂಡೂರಾವ್ ಅವರು,”ಅಮಾಯಕರ ತಲೆಯಲ್ಲಿ ಮತಾಂಧತೆಯ ಅಮಲು‌ ತುಂಬಿ ಕಂಡವರ ಮಕ್ಕಳನ್ನು ಬಾವಿಗೆ ತಳ್ಳುತ್ತಿರುವ BJP ನಾಯಕರ ಗಮನಕ್ಕೆ. ಇದು ಇತ್ತೀಚೆಗೆ ಹತ್ಯೆಯಾದ ಸುಹಾಶ್ ಶೆಟ್ಟಿ ವಿರುದ್ದ ರೌಡಿ ಶೀಟರ್ ತೆರೆಯಲು ಪೊಲೀಸ್ ಇಲಾಖೆ ನೀಡಿದ್ದ ಆದೇಶದ ಪ್ರತಿ.” ಎಂದು ಅವರು ಹೇಳಿದ್ದಾರೆ.

“ಸುಹಾಸ್ ಶೆಟ್ಟಿ ವಿರುದ್ಧ ರೌಡಿ ಶೀಟರ್ ಓಪನ್ ಆಗಿದ್ದು 2020 ರಲ್ಲಿ. ಆಗ ಅಧಿಕಾರದಲ್ಲಿದ್ದದ್ದು ಬಿಜೆಪಿ ಸರ್ಕಾರ. ಗೃಹ ಸಚಿವರಾಗಿದ್ದ ಪುಣ್ಯಾತ್ಮ ಬಸವರಾಜ್ ಬೊಮ್ಮಾಯಿ. ಇಂದು ಸುಹಾಸ್‌ನನ್ನು‌ ಮಹಾತ್ಮ ಎಂದು ಬಿಂಬಿಸುತ್ತಿರುವ ಬಿಜೆಪಿಯವರು ಆಗ ಯಾಕೆ ಸುಹಾಸ್‌ನನ್ನು ರೌಡಿ ಪಟ್ಟಿಗೆ ಸೇರಿಸಿದ್ದರು?” ಎಂದು ಗುಂಡೂರಾವ್ ಪ್ರಶ್ನಿಸಿದ್ದಾರೆ.

“ಕರಾವಳಿಯನ್ನು ಕೋಮು‌ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿರುವ ಬಿಜೆಪಿಯವರೇ ಕ್ರಿಮಿನಲ್‌ಗಳ ನಿಜವಾದ ಸೃಷ್ಟಿಕರ್ತರು. ಇವರು‌ ಅಧಿಕಾರದಲ್ಲಿದ್ದಾಗ ಕ್ರಿಮಿನಲ್‌ಗಳನ್ನು ಸೃಷ್ಟಿಸುತ್ತಾರೆ. ಅವರ ಮೇಲೆ ರೌಡಿ ಶೀಟರ್ ತೆರೆಯುತ್ತಾರೆ. ಹೆಣ ಬಿದ್ದ ಕೂಡಲೆ ಅದೇ ಕ್ರಿಮಿನಲ್‌ಗಳನ್ನು‌ ಮಹಾತ್ಮರಂತೆ ಬಿಂಬಿಸಿ ಹುತಾತ್ಮರನ್ನಾಗಿ‌ ಮಾಡುತ್ತಾರೆ.” ಎಂದು ಅವರು ಹೇಳಿದ್ದಾರೆ.

“ಸುಹಾಸ್ ಹತ್ಯೆ ನಂತರ ಕೂಗುಮಾರಿಗಳಂತೆ ಅರಚುತ್ತಿರುವ ರಾಜ್ಯ ಬಿಜೆಪಿ ನಾಯಕರ‌ ಯಾರ ಮಕ್ಕಳಾದರೂ ಧರ್ಮದ ಅಮಲಿನಲ್ಲಿ ಬೀದಿ‌ ಕಾಳಗ ಮಾಡುತ್ತಿದ್ದಾರೆಯೆ.? ಅಥವಾ ಧರ್ಮಕ್ಕಾಗಿ ಬಡಿದಾಡುತ್ತಿದ್ದಾರೆಯೆ.? ಬಿಜೆಪಿ ನಾಯಕರ‌ ಧರ್ಮಾಂಧತೆಗೆ‌ ಬೀದಿ ಹೆಣವಾಗುತ್ತಿರುವುದು ಬಡವರ ಮಕ್ಕಳು. ಇದು ಸತ್ಯವಲ್ಲವೆ?” ಎಂದು ಅವರು ಇದೇ ವೇಳೆ ಪ್ರಶ್ನಿಸಿದ್ದಾರೆ.

“ಬಿಜೆಪಿಯವರ ‌ಕೆಟ್ಟ ರಾಜಕೀಯಕ್ಕೆ ಕರಾವಳಿಯಲ್ಲಿ ಎಷ್ಟೋ ಜನರ‌ ಬಲಿಯಾಗಿದೆ. ಎಷ್ಟೋ ಮನೆಗಳ‌‌ ದೀಪ ಆರಿ ಹೋಗಿದೆ. ಇಷ್ಟಾದರೂ ಇವರ ರಕ್ತದಾಹ ನಿಂತಿಲ್ಲ. ಕರಾವಳಿಯಲ್ಲಿ ಇನ್ನಷ್ಟು ಹೆಣ ಬೀಳಬೇಕು ಎನ್ನುವ ಉದ್ದೇಶದಿಂದ ‌ದುಷ್ಟ ರಾಜಕಾರಣ ಮಾಡುತ್ತಿದ್ದಾರೆ.” ಎಂದು ಅವರು ಹೇಳಿದ್ದಾರೆ.

“ದಕ್ಷಿಣ ಕನ್ನಡದ‌ ಜನ‌ ಪ್ರಜ್ಞಾವಂತಿಕೆಯ ಜೊತೆಗೆ ಸೂಕ್ಷ್ಮತೆಯನ್ನು ಅರಿತುಕೊಂಡವರು. ಇನ್ನಾದರೂ ಕರಾವಳಿಯ ಜನ ಬಿಜೆಪಿಯ ಹುನ್ನಾರ ಅರಿಯಬೇಕಿದೆ. ಇಲ್ಲದಿದ್ದರೆ‌ ಬಿಜೆಪಿಯವರ‌ ಕೆಟ್ಟ ರಾಜಕಾರಣಕ್ಕೆ ಜಿಲ್ಲೆಯ‌ ನೆಮ್ಮದಿಯೇ ಹಾಳಾಗಲಿದೆ.” ಎಂದು ಅವರು ಎಚ್ಚರಿಸಿದ್ದಾರೆ. ಸುಹಾಸ್‌ ಶೆಟ್ಟಿಯ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮೊರಾದಾಬಾದ್ ನಲ್ಲಿರುವ 22 ಪಾಕಿಸ್ತಾನಿ ಮಹಿಳೆಯರಿಗೆ 500ಕ್ಕಿಂತ ಹೆಚ್ಚಿನ ಭಾರತೀಯ ಮಕ್ಕಳು, ಮೊಮ್ಮಕ್ಕಳು

ಮೊರಾದಾಬಾದ್ ನಲ್ಲಿರುವ 22 ಪಾಕಿಸ್ತಾನಿ ಮಹಿಳೆಯರಿಗೆ 500ಕ್ಕಿಂತ ಹೆಚ್ಚಿನ ಭಾರತೀಯ ಮಕ್ಕಳು, ಮೊಮ್ಮಕ್ಕಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...

‘ನೆತನ್ಯಾಹು ಅವರ ನಿರ್ಲಜ್ಜ ಸಮರ್ಥನೆ’ : ಪ್ರಧಾನಿ ಮೋದಿಯ ನೆಸೆಟ್ ಭಾಷಣ ಟೀಕಿಸಿದ ಕಾಂಗ್ರೆಸ್

ಇಸ್ರೇಲ್ ಸಂಸತ್ ನೆಸೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಭಾಷಣವನ್ನು ಕಾಂಗ್ರೆಸ್ ಗುರುವಾರ (ಫೆ.26) ತೀವ್ರವಾಗಿ ಟೀಕಿಸಿದ್ದು, ಇದು ಅವರ ಆತಿಥೇಯರಾದ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ 'ನಿರ್ಲಜ್ಜ ಸಮರ್ಥನೆ' ಎಂದಿದೆ. ಇಸ್ರೇಲ್ ರಾಷ್ಟ್ರದ...

ವಿವಾದಿತ ಎನ್‌ಸಿಇಆರ್‌ಟಿ ಪಠ್ಯಪುಸ್ತಕ ನಿಷೇಧಿಸಿದ ಸುಪ್ರೀಂ ಕೋರ್ಟ್

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಿದ್ದಪಡಿಸಿದ 8 ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿರುವ 'ನ್ಯಾಯಾಂಗದಲ್ಲಿನ ಭ್ರಷ್ಟಾಚಾರ' ಎಂಬ ಅಧ್ಯಾಯದ ಕುರಿತು ಸುಪ್ರೀಂ ಕೋರ್ಟ್ ಗುರುವಾರ (ಫೆ.26) ತೀವ್ರ ಅಸಮಾಧಾನ...

ಕ್ಯೂಬಾ ಜಲಪ್ರದೇಶ ಪ್ರವೇಶಿಸಿದ ಅಮೆರಿಕಾ ಮೂಲದ ಸ್ಪೀಡ್‌ಬೋಟ್ ಮೇಲೆ ಕ್ಯೂಬಾ ಪಡೆಗಳಿಂದ ಗುಂಡಿನದಾಳಿ, ನಾಲ್ವರು ಸಾವು 

ಕ್ಯೂಬಾ: ಬುಧವಾರ ಕ್ಯೂಬಾದ ಪ್ರಾದೇಶಿಕ ಜಲಪ್ರದೇಶವನ್ನು ಪ್ರವೇಶಿಸಿದ ಫ್ಲೋರಿಡಾ-ನೋಂದಾಯಿತ ಸ್ಪೀಡ್‌ಬೋಟ್‌ನ ಮೇಲೆ ಕ್ಯೂಬಾ ಭದ್ರತಾ ಪಡೆಗಳು ಗುಂಡು ಹಾರಿಸಿವೆ. ಈ ವೇಳೆ ಬೋಟ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಆರು ಜನರು ಗಾಯಗೊಂಡರುವುದಾಗಿ ವರದಿಯಾಗಿದೆ....

ಬಾಲಕಿಯೊಂದಿಗೆ ಅನುಚಿತ ವರ್ತನೆ : ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲು

ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಮೇಲೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮಹಲ್ ರೋಝಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪ್ರಕರಣ ದಾಖಲಾಗಿದೆ. ಇತ್ತೀಚಿನ ವರದಿಗಳ ಪ್ರಕಾರ, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಶಹಾಪುರ...