Homeಮುಖಪುಟಆತ್ಮಾಹುತಿ ದಾಳಿ ಬೆದರಿಕೆ: ಬಿಜೆಪಿ ಜಿಲ್ಲಾಧ್ಯಕ್ಷನ ಬಂಧನ

ಆತ್ಮಾಹುತಿ ದಾಳಿ ಬೆದರಿಕೆ: ಬಿಜೆಪಿ ಜಿಲ್ಲಾಧ್ಯಕ್ಷನ ಬಂಧನ

- Advertisement -
- Advertisement -

ತಮಿಳುನಾಡಿನ ಅರಿಯಲೂರು ಜಿಲ್ಲಾಧಿಕಾರಿ ಕಚೇರಿ ಎದುರು ಡಿಸೆಂಬರ್‌ 1ರಂದು ನಡೆದ ಪ್ರತಿಭಟನೆ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ, ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಅಯ್ಯಪ್ಪನ್ ಅವರನ್ನು ಭಾರತೀಯ ದಂಡ ಸಂಹಿತೆಯ (ಐಪಿಸಿ) ಆರು ಕಲಂಗಳ ಅಡಿಯಲ್ಲಿ ಅರಿಯಲೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.

ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವಂತೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿತ್ತು. ಈ ಪ್ರತಿಭಟನೆಯು ಜಿಲ್ಲೆಯ ಬಿಜೆಪಿ ನಾಯಕ ಅಯ್ಯಪ್ಪ ಅವರ ನೇತೃತ್ವದಲ್ಲಿ ನಡೆದಿತ್ತು. ಭಾಷಣದ ವೇಳೆ ಅವರು ಸರ್ಕಾರದ ವಿರುದ್ಧ ಪ್ರಚೋದನಕಾರಿಯಾಗಿ ಮಾತನಾಡಿದ್ದರು.

“ಇಂಧನ ತೆರಿಗೆ ಕಡಿತಗೊಳಿಸಲು ರಾಜ್ಯ ಸರ್ಕಾರ ವಿಫಲವಾದರೆ ರಾಜ್ಯಾಧ್ಯಕ್ಷರ ಆದೇಶದಂತೆ ಆತ್ಮಾಹುತಿ ದಾಳಿ ನಡೆಸಲೂ ಸಿದ್ಧ” ಎಂದು ಅವರು ಹೇಳಿದ್ದರು. ಅವರ ಈ ಭಾಷಣದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದನ್ನೂ ಓದಿ:ತಮಿಳುನಾಡು ಸ್ಥಳೀಯ ಸಂಸ್ಥೆ ಚುನಾವಣೆ: ಕೇವಲ ಒಂದು ಮತ ಪಡೆದ ಬಿಜೆಪಿ ಅಭ್ಯರ್ಥಿ!

ವಾಲಾಜಾನಗರದ ವಿಎಒ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಶುಕ್ರವಾರ ಜಯಂಕೊಂಡಂನಲ್ಲಿರುವ ಅವರ ನಿವಾಸದಿಂದ ಅಯ್ಯಪ್ಪನನ್ನು ಬಂಧಿಸಿದ್ದಾರೆ.

504 ಒಳಗೊಂಡಿರುವ IPC ಯ ಆರು ಸೆಕ್ಷನ್‌ಗಳ ಅಡಿಯಲ್ಲಿ ಅಯ್ಯಪ್ಪ ಅವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಬಂಧನದ ನಂತರ ಅವರನ್ನು ಅರಿಯಲೂರು ನ್ಯಾಯಾಲಯಕ್ಕೆ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಮ್ಯಾಜಿಸ್ಟ್ರೇಟ್ ಅವರನ್ನು 15 ದಿನಗಳ ಕಾಲ ಕಸ್ಟಡಿಗೆ ಒಪ್ಪಿಸಿದ್ದು, ಅವರನ್ನು ಜಯನಕೊಂಡಂ ಉಪ ಕಾರಾಗೃಹದಲ್ಲಿ ಇರಿಸಲಾಗಿದೆ.

“ಆತ್ಮಹತ್ಯಾ ದಾಳಿಯ ಬೆದರಿಕೆಯ ಭಾಷಣಕ್ಕಾಗಿ ನಾವು ಅಯ್ಯಪ್ಪನನ್ನು ಬಂಧಿಸಿದ್ದೇವೆ” ಎಂದು ಅರಿಯಲೂರಿನ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎರಡು ದಿನಗಳ ಹಿಂದೆ ಬಿಜೆಪಿ ಒಬಿಸಿ ವಿಭಾಗದ ರಾಜ್ಯ ಉಪಾಧ್ಯಕ್ಷ ಕೆ. ಅಗೋರಂ ಅವರನ್ನು ಇದೇ ರೀತಿಯ ಪ್ರತಿಭಟನೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯ ಬಗ್ಗೆ ವಿವಾದಾತ್ಮಕ ಹೇಳಿಕೆಗಳಿಗಾಗಿ ಜಯಂಕೊಂಡಂ ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ:ತಮಿಳುನಾಡು: ಲೈಂಗಿಕ ಹಗರಣದಲ್ಲಿ ಬಿಜೆಪಿ ಮುಖಂಡ, ವಿಡಿಯೊ ಪ್ರಸಾರದ ಮಾಡಿದ ಸ್ವಪಕ್ಷದ ಸದಸ್ಯ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...