Homeಅಂತರಾಷ್ಟ್ರೀಯಡಮಾಸ್ಕಸ್ ಚರ್ಚ್ ಮೇಲೆ ಆತ್ಮಾಹುತಿ ದಾಳಿ: 22 ಜನರು ಸಾವು

ಡಮಾಸ್ಕಸ್ ಚರ್ಚ್ ಮೇಲೆ ಆತ್ಮಾಹುತಿ ದಾಳಿ: 22 ಜನರು ಸಾವು

- Advertisement -
- Advertisement -

ಡಮಾಸ್ಕಸ್‌ನ ಚರ್ಚ್‌ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಮತ್ತು 63 ಜನರು ಗಾಯಗೊಂಡಿದ್ದಾರೆ ಎಂದು ಸಿರಿಯಾದ ಆರೋಗ್ಯ ಸಚಿವಾಲಯ ತಿಳಿಸಿದೆ.

ದ್ವೀಲಾ ಸಮೀಪದ ಗ್ರೀಕ್ ಆರ್ಥೊಡಾಕ್ಸ್ ಚರ್ಚ್‌ನಲ್ಲಿ ಭಾನುವಾರ (ಜೂ.22) ಸಂಜೆ ಪ್ರಾರ್ಥನೆ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ನಂತರ ತನ್ನ ದೇಹಕ್ಕೆ ಕಟ್ಟಿಕೊಂಡಿದ್ದ ಸ್ಪೋಟಕವನ್ನು ಸ್ಪೋಟಿಸಿದ್ದಾನೆ ಎಂದು ಬಿಬಿಸಿ ವರದಿ ಮಾಡಿದೆ.

ದಾಳಿಕೋರ ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್‌)ಗೆ ಸೇರಿದವನು ಎಂದು ಸಚಿವಾಲಯ ಹೇಳಿದೆ. ಆದರೆ, ಐಎಸ್‌ ಇದುವರೆಗೆ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.

ಚರ್ಚ್ ಒಳಗಿನಿಂದ ತೆಗೆದ ಫೋಟೋಗಳು ಮತ್ತು ವಿಡಿಯೋಗಳಲ್ಲಿ ತೀವ್ರವಾಗಿ ಹಾನಿಗೊಳಗಾದ ಬಲಿಪೀಠ, ಒಡೆದ ಗಾಜಿನಿಂದ ಆವೃತವಾದ ಬೆಂಚುಗಳು ಮತ್ತು ಗೋಡೆಗಳಲ್ಲಿ ರಕ್ತದ ಕಲೆಗಳು ನೋಡಬಹುದು.

“ಯಾರೋ ಹೊರಗಿನಿಂದ ಆಯುಧ ಹಿಡಿದು ಚರ್ಚ್ ಒಳಗೆ ಪ್ರವೇಶಿಸಿ ಗುಂಡು ಹಾರಿಸಲು ಪ್ರಾರಂಭಿಸಿದರು” ಎಂದು ಪ್ರತ್ಯಕ್ಷದರ್ಶಿ ಲಾರೆನ್ಸ್ ಮಾಮರಿ ಹೇಳಿರುವುದಾಗಿ ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ದಾಳಿಕೋರ ತನ್ನನ್ನು ತಾನು ಸ್ಪೋಟಿಸಿಕೊಳ್ಳಲುವ ಮೊದಲು ಜನರು ಆತನನ್ನು ತಡೆಯಲು ಪ್ರಯತ್ನಿಸಿದ್ದಾರೆ ಎಂದು ವರದಿ ತಿಳಿಸಿದೆ.

ಹತ್ತಿರದ ಅಂಗಡಿಯಲ್ಲಿದ್ದ ಜಿಯಾದ್ ಎಂಬ ಮತ್ತೊಬ್ಬ ವ್ಯಕ್ತಿ, “ಗುಂಡಿನ ಸದ್ದು ಕೇಳಿಬಂದಿದ್ದು, ನಂತರ ಗಾಜುಗಳು ಹಾರಿಹೋಗುವ ರೀತಿ ಸ್ಫೋಟ ಸಂಭವಿಸಿದೆ. ಚರ್ಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರವೇಶದ್ವಾರದವರೆಗೂ ಮರದ ಬೆಂಚುಗಳ ಅವಶೇಷಗಳು ಬಿದ್ದಿರುವುದನ್ನು ನಾವು ನೋಡಿದ್ದೇವೆ” ಎಂದು ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ಇಸ್ಲಾಮಿಸ್ಟ್ ನೇತೃತ್ವದ ಬಂಡಾಯ ಪಡೆಗಳು ಅಧ್ಯಕ್ಷ ಬಶರ್ ಅಲ್-ಅಸ್ಸಾದ್ ಅವರನ್ನು ಪದಚ್ಯುತಗೊಳಿಸಿ, 13 ವರ್ಷಗಳ ವಿನಾಶಕಾರಿ ಅಂತರ್ಯುದ್ಧವನ್ನು ಕೊನೆಗೊಳಿಸಿದ ನಂತರ ಡಮಾಸ್ಕಸ್‌ನಲ್ಲಿ ನಡೆದ ಮೊದಲ ದಾಳಿ ಇದಾಗಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಚರ್ಚ್ ಪ್ರವೇಶದ್ವಾರದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಕಟ್ಟಡದ ಒಳಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಜನರು ಸಾವನ್ನಪ್ಪಿದ್ದಾರೆ ಎಂದು ವರದಿಗಳು ಹೇಳಿವೆ.

ಸಿರಿಯಾದ ವಿಶ್ವಸಂಸ್ಥೆಯ ವಿಶೇಷ ರಾಯಭಾರಿ ಗೀರ್ ಪೆಡರ್ಸನ್ ಅವರ ಕಚೇರಿಯು ದಾಳಿಯನ್ನು ಖಂಡಿಸಿದ್ದು, “ಭಯೋತ್ಪಾದನೆ, ಉಗ್ರವಾದ, ಪ್ರಚೋದನೆ ಮತ್ತು ಯಾವುದೇ ಸಮುದಾಯವನ್ನು ಗುರಿಯಾಗಿಸಿಕೊಳ್ಳುವುದನ್ನು ತಿರಸ್ಕರಿಸುವಲ್ಲಿ ಸಿರಿಯನ್ನರು ಒಂದಾಗಬೇಕು” ಎಂದು ಆಗ್ರಹಿಸಿದೆ.

ಇರಾನ್-ಅಮೆರಿಕ ಸಂಘರ್ಷದ ನಡುವೆ ಗಾಝಾದಲ್ಲಿನ ನೋವು ಮರೆಯದಿರಿ: ಜಗತ್ತಿಗೆ ಪೋಪ್ ಲಿಯೋ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...