Homeಕರ್ನಾಟಕಕುವೆಂಪುಗೆ ಅವಮಾನಿಸಿದ ರೋಹಿತ್‌ ಚಕ್ರತೀರ್ಥ ವಿರುದ್ಧ ಸೂಕ್ತ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

ಕುವೆಂಪುಗೆ ಅವಮಾನಿಸಿದ ರೋಹಿತ್‌ ಚಕ್ರತೀರ್ಥ ವಿರುದ್ಧ ಸೂಕ್ತ ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

- Advertisement -
- Advertisement -

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮಿ ಕುವೆಂಪು ಬಗ್ಗೆ ವ್ಯಕ್ತಪಡಿಸಿರುವ ಅಭಿಪ್ರಾಯವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಪಠ್ಯಪುಸ್ತಕ ಮರು ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರ ವಿರುದ್ಧ ಸೂಕ್ತವಾದ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬೊಮ್ಮಾಯಿ ಭಾನುವಾರ ಹೇಳಿದ್ದಾರೆ.

ರಾಜ್ಯ ಪಠ್ಯಪುಸ್ತಕ ಮರು ಪರಿಷ್ಕರಣೆ ಅಧ್ಯಕ್ಷರಾಗಿರುವ ರೋಹಿತ್ ಚಕ್ರತೀರ್ಥ ಅವರು ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ಗೇಲಿ ಮಾಡಿ, ವಿಕೃತಗೊಳಿಸಿ, ಅವಮಾನ ಮಾಡಿರುವ ಹಳೆಯ ಪೋಸ್ಟ್‌ ವೈರಲ್ ಆಗಿದೆ. ಈ ಹಿನ್ನಲೆಯಲ್ಲಿ ಅವರನ್ನು ಬಂಧಿಸಬೇಕು ಮತ್ತು ಅವರ ಸಮಿತಿಯನ್ನು ರದ್ದು ಮಾಡಬೇಕು ಎಂದು ಆಗ್ರಹಗಳು ಕೇಳಿಬಂದಿವೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅದರಂತೆಯೆ ನಿರ್ಮಲಾನಂದನಾಥ ಸ್ವಾಮಿ ಅವರು ಕೂಡಾ ಮುಖ್ಯಮಂತ್ರಿಗೆ ಪತ್ರ ಬರೆದು, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸಲಿದೆ ಎಂದು ನಂಬಿದ್ದೇನೆ ಎಂದು ಹೇಳಿದ್ದರು.

ಇದನ್ನೂ ಓದಿ: ನಾಡಗೀತೆ ತಿರುಚಿದ, ಕುವೆಂಪುರನ್ನು ನಿಂದಿಸಿದವರ ವಿರುದ್ಧ ಕ್ರಮ ಜರುಗಿಸಿ: ನಿರ್ಮಲಾನಂದನಾಥ ಸ್ವಾಮೀಜಿ

ನಿರ್ಮಲಾನಂದ ಸ್ವಾಮಿ ಬರೆದಿರುವ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ, “ನಿರ್ಮಲಾನಂದ ಶ್ರೀಗಳು ಕುವೆಂಪು ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅದನ್ನು ಗಂಭೀರವಾಗಿ ತೆಗೆದುಕೊಂಡಿದ್ದೇನೆ. ಇವತ್ತೇ ನಮ್ಮ ಶಿಕ್ಷಣ ಮಂತ್ರಿಯನ್ನು ಕರೆಯುತ್ತಿದ್ದು, ಸೂಕ್ತವಾದ ಕ್ರಮ ಕೈಗೊಳ್ಳುತ್ತೇನೆ” ಎಂದು ಹೇಳಿದ್ದಾರೆ.

ನಿರ್ಮಲಾನಂದ ಅವರು ತಮ್ಮ ಪತ್ರದಲ್ಲಿ, “ಕುವೆಂಪು ಅವರು ತಮ್ಮ ಯೌವನದ ಕಾಲದಲ್ಲಿ ಬರೆದ ‘ಜೈ ಭಾರತ ಜನನಿಯ ತನುಜಾತೆ’ ಕವಿತೆಯು ಕಳೆದ ತೊಂಬತ್ತು ವರ್ಷಗಳಿಂದ ಕನ್ನಡಿಗರ ಹೃದಯದಲ್ಲಿ ನೆಲೆನಿಂತು, ದೇಶಭಕ್ತಿ ಮತ್ತು ನಾಡಪ್ರೇಮವನ್ನು ಉದ್ದೀಪಿಸಿದೆ. ಇದನ್ನು ಮನಗಂಡು ಕರ್ನಾಟಕ ಸರ್ಕಾರವು ‘ಜೈ ಭಾರತ ಜನನಿಯ ತನುಜಾತೆ’ ಗೀತೆಯನ್ನು ನಾಡಗೀತೆಯಾಗಿ ಘೋಷಿಸಿತು”

“ಅದನ್ನು ನಾಡಗೀತೆಯಾಗಿ ಘೋಷಣೆ ಮಾಡಬೇಕು ಎಂದು ಯಾರೂ ಕೇಳಿರಲಿಲ್ಲ. ಅದು ಸರ್ಕಾರವೇ ತೆಗೆದುಕೊಂಡ ತೀರ್ಮಾನವಾಗಿತ್ತು. ಕನ್ನಡ ಮತ್ತು ಕನ್ನಡಿಗರ ಅಸ್ಮಿತೆಯಾಗಿರುವ ಅಧಿಕೃತ ನಾಡಗೀತೆಯನ್ನು ಹಾಡಿ ಕೋಟಿ ಕೋಟಿ ಕನ್ನಡಿಗರು ಸಂಭ್ರಮಿಸಿದ್ದಾರೆ, ಸಂಭ್ರಮಿಸುತ್ತಿದ್ದಾರೆ. ಆದರೆ ಈಚೆಗೆ ಕೆಲವರು ನಾಡಗೀತೆಯನ್ನು ತಿರುಚಿ ಬರೆದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವುದು ಸರ್ಕಾರದ ತೀರ್ಮಾನವನ್ನು ಗೇಲಿ ಮಾಡುತ್ತಿರುವಂತಿದೆ” ಎಂದು ನಿರ್ಮಲಾನಂದ ಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಕವಿ ಕುವೆಂಪುರವರಿಗೆ ಅವಮಾನ: ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲು

“ನಾಡಗೀತೆಯನ್ನು ತಿರುಚಿರುವುದಷ್ಟೇ ಅಲ್ಲ, ಮಹಾಕವಿಗಳೂ ರಾಷ್ಟ್ರಕವಿಗಳೂ ಆಗಿರುವ ಕುವೆಂಪು ಅವರ ಬಗ್ಗೆ ಅತ್ಯಂತ ಕೀಳುಭಾಷೆಯಲ್ಲಿ ಅವಹೇಳನಕಾರಿ ಲೇಖನಗಳನ್ನು ಬರೆದಿದ್ದಾರೆ. ನಾಡಗೀತೆಯನ್ನು ಅವಮಾನಿಸುವುದೆಂದರೆ ರಾಷ್ಟ್ರಗೀತೆಯನ್ನು ಅವಮಾನಿಸಿದಂತೆ; ಹಾಗೂ ನೆಲದ ಕಾನೂನಿನ ಸ್ಪಷ್ಟ ಉಲ್ಲಂಘನೆಯಾಗಿದೆ” ಎಂದು ಅವರು ಪತ್ರದಲ್ಲಿ ಬೇಸರ ವ್ಯಕ್ತಪಡಿಸಿದ್ದರು.

“ಹೀಗಾಗಿ, ರಾಷ್ಟ್ರಕವಿ ಕುವೆಂಪು ಅವರನ್ನು ಅಸಂಸದೀಯ ಭಾಷೆಯಲ್ಲಿ ನಿಂದಿಸಿ ಲೇಖನ ಬರೆದಿರುವ ಮತ್ತು ನಾಡಗೀತೆಯನ್ನು ತಿರುಚಿ ಬರೆದಿರುವವರ ವಿರುದ್ಧ ಸೈಬರ್ ಕ್ರೈಮ್ ಅಡಿಯಲ್ಲಿ ಕಾನೂನು ಪ್ರಕಾರ ಸರ್ಕಾರವು ಕ್ರಮ ಜರುಗಿಸುತ್ತದೆಂದು ಭಾವಿಸುತ್ತೇವೆ. ಹಾಗೂ ಈ ಮೂಲಕ ಸರ್ಕಾರವು ಕಾನೂನು ಮತ್ತು ವ್ಯಕ್ತಿ ಸ್ವಾತಂತ್ರ್ಯದ ಮೇಲೆ ದಾಳಿ ಮಾಡುವವರನ್ನು ಕ್ಷಮಿಸುವುದಿಲ್ಲ ಎಂಬ ಸಂದೇಶ ರವಾನಿಸುತ್ತದೆ ಎಂಬುದು ನಮ್ಮ ಅಭಿಲಾಷೆಯಾಗಿದೆ” ಎಂದು ನಿರ್ಮಲಾನಂದ ಸ್ವಾಮಿ ಅವರು ಪತ್ರದಲ್ಲಿ ಹೇಳಿದ್ದಾರೆ.

ಈ ಮಧ್ಯೆ ನಾಡಗೀತೆಗೆ ಅವಹೇಳನ ಮಾಡಿರುವ ಆರೋಪ ಹೊತ್ತಿರುವ ರೋಹಿತ್‌ ಚಕ್ರತೀರ್ಥನನ್ನು ಈ ಕೂಡಲೇ ಪಠ್ಯ ಪರಿಶೀಲನಾ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ಒಕ್ಕಲಿಗರ ಸಂಘ ಆಗ್ರಹಿಸಿದೆ.

ಇದನ್ನೂ ಓದಿ: ನಾನು ಐಐಟಿ, ಸಿಇಟಿಗೆ ಪ್ರೊಫೆಸರ್ ಅಲ್ಲ: ರೋಹಿತ್ ಚಕ್ರತೀರ್ಥ ಸ್ಪಷ್ಟನೆ

ರೋಹಿತ್ ಚಕ್ರತೀರ್ಥ ಮತ್ತು ಕುವೆಂಪು ಅವರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನ ಮಾಡಿದ ಲಕ್ಷಣ ಆಕಾಶೆ ಕಾರ್ಕಳ ಎಂಬುವವರ ವಿರುದ್ಧ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಈಗಾಗಲೇ ದೂರು ನೀಡಲಾಗಿದೆ. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಎ.ಪಿ ರಂಗನಾಥ್, ವಕೀಲರಾದ ಕೆ.ಎನ್ ಜಗದೀಶ್ ಕುಮಾರ್, ಹರಿರಾಮ್ ಮತ್ತು ಸೂರ್ಯ ಮುಕುಂದರಾಜ್‌ರವರು ಇತ್ತೀಚೆಗೆ ಬೆಂಗಳೂರು ಪೊಲೀಸ್ ಆಯುಕ್ತರಾದ ಪ್ರತಾಪ ರೆಡ್ಡಿಯವರಿಗೆ ದೂರು ಸಲ್ಲಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಮುಖ್ಯ ಮಂತ್ರಿಗಳ ಈ ಬರವಸೆ ಕಾರ್ಯರೂಪಕ್ಕೆ ಬರಬೇಕು. ಆಗ ಮಾತ್ರ ಅವರ ಮಾತನ್ನು ನಂಬಬಹುದು.

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...