Homeಮುಖಪುಟಹಿಮಾಚಲಪ್ರದೇಶ ಮುಖ್ಯಮಂತ್ರಿಯಾಗಿ ಸುಖವಿಂದರ್‌ ಸಿಂಗ್ ಸುಖು ಆಯ್ಕೆ

ಹಿಮಾಚಲಪ್ರದೇಶ ಮುಖ್ಯಮಂತ್ರಿಯಾಗಿ ಸುಖವಿಂದರ್‌ ಸಿಂಗ್ ಸುಖು ಆಯ್ಕೆ

- Advertisement -
- Advertisement -

ಹಿಮಾಚಲ ಪ್ರದೇಶದ ಸಿಎಂ ಹುದ್ದೆ ಅಲಂಕರಿಸುವ ಸ್ಪರ್ಧೆಯಲ್ಲಿರುವ ಅತ್ಯಂತ ಉನ್ನತ ಮಟ್ಟದ ನಾಯಕರಲ್ಲಿ ಒಬ್ಬರಾದ ಸುಖವಿಂದರ್ ಸಿಂಗ್ ಸುಖು ಅವರನ್ನು ರಾಜ್ಯದ ಮುಂದಿನ ಮುಖ್ಯಮಂತ್ರಿ ಎಂದು ಹೆಸರಿಸಲಾಗಿದೆ. ಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದ ಮುಖೇಶ್ ಅಗ್ನಿಹೋತ್ರಿ ಅವರು ರಾಜ್ಯದ ಉಪ ಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ.

ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರ ಸಭೆಯು ಶಿಮ್ಲಾದ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ನಡೆದಿದ್ದು ಮುಂದಿನ ಮುಖ್ಯಮಂತ್ರಿಯ ಹೆಸರನ್ನು ನಿರ್ಧರಿಸಲಾಗಿದೆ. ಈ ಸಭೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಪ್ರಕಟಿಸಿದೆ.

ನೂತನ ಮುಖ್ಯಮಂತ್ರಿಯನ್ನು ನಿರ್ಧರಿಸಲು ಪಕ್ಷದ ಹೈಕಮಾಂಡ್‌ಗೆ ಅಧಿಕಾರ ನೀಡುವ ಒಂದು ಸಾಲಿನ ನಿರ್ಣಯವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಶುಕ್ರವಾರ ಅಂಗೀಕರಿಸಿದೆ.

ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರು ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಡಿಸೆಂಬರ್ 8 ರಂದು ಹೊರಬಿದ್ದ ಹಿಮಾಚಲ ಪ್ರದೇಶದ ಫಲಿತಾಂಶದಲ್ಲಿ ಕಾಂಗ್ರೆಸ್ ಗೆದ್ದಿತ್ತು. 68 ಸದಸ್ಯ ಬಲದ ವಿಧಾನಸಭೆಯಲ್ಲಿ 40 ಸ್ಥಾನಗಳೊಂದಿಗೆ ಕಾಂಗ್ರೆಸ್ ಗೆಲುವು ಸಾಧಿಸಿತು. ಮುಂದಿನ ಮುಖ್ಯಮಂತ್ರಿ ಸ್ಥಾನದ ರೇಸ್‌ನಲ್ಲಿ ಸುಖವಿಂದರ್‌ ಸಿಂಗ್‌ ಸುಖು, ಪ್ರತಿಭಾ ಸಿಂಗ್ ಮತ್ತು ಮುಖೇಶ್ ಅಗ್ನಿಹೋತ್ರಿಯವರ ಹೆಸರುಗಳಿದ್ದವು.

ಪ್ರತಿಭಾ ಸಿಂಗ್ ಮತ್ತು ಸುಖು ಅವರ ಬೆಂಬಲಿಗರು ಪಕ್ಷದ ಕಚೇರಿಯ ಹೊರಗೆ ಶುಕ್ರವಾರ ಮುಖಾಮುಖಿಯಾಗಿದ್ದರು. ಶಕ್ತಿ ಪ್ರದರ್ಶನ ಮಾಡಿ ತಮ್ಮ ನಾಯಕರನ್ನು ಬೆಂಬಲಿಸುವ ಘೋಷಣೆಗಳನ್ನು ಕೂಗಿದ್ದರು.

ಸುಖವಿಂದರ್ ಸಿಂಗ್ ಸುಖು ಯಾರು?

58 ವರ್ಷದ ಸುಖು ಅವರು ರಾಜ್ಯದ ಹಮೀರ್‌ಪುರ ಜಿಲ್ಲೆಯ ನಾದೌನ್‌ನಿಂದ ಮೂರು ಬಾರಿ ಶಾಸಕರಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ಅವರು, ಕಾಂಗ್ರೆಸ್‌ನ ವಿದ್ಯಾರ್ಥಿ ಸಂಘಟನೆಯಾದ ನ್ಯಾಷನಲ್ ಸ್ಟೂಡೆಂಟ್ ಯೂನಿಯನ್ ಆಫ್ ಇಂಡಿಯಾ (ಎನ್‌ಎಸ್‌ಯುಐ) ಮೂಲಕ ನಾಯಕರಾಗಿ ಹೊಮ್ಮಿದವರು.

ಅವರು 1985- 1988ರ ಅವರಧಿಯಲ್ಲಿ ಎನ್‌ಎಸ್‌ಯುಐ ರಾಜ್ಯ ಘಟಕವನ್ನು ಮುನ್ನಡೆಸಿದರು. ಅವರು ಹಿಮಾಚಲ ಪ್ರದೇಶ ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಮಾಡುವಾಗ ಪಕ್ಷದೊಂದಿಗೆ ಕ್ರಿಯಾಶೀಲರಾಗಿದ್ದರು.

ನಂತರ 1988ರಿಂದ 2008ರವರೆಗೆ 10 ವರ್ಷಗಳ ಕಾಲ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಿ ಸುಖು ಸೇವೆ ಸಲ್ಲಿಸಿದ್ದರು. ಶಿಮ್ಲಾದಿಂದ ಎರಡು ಬಾರಿ ಪುರಸಭೆ ಚುನಾವಣೆಯಲ್ಲಿ ಗೆದ್ದ ನಂತರ, ಅವರು 2008ರಲ್ಲಿ ರಾಜ್ಯ ಘಟಕದ ಕಾರ್ಯದರ್ಶಿಯಾಗಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಟಿಪ್ಪು ಸುಲ್ತಾನ್’ ಸಿನಿಮಾದಲ್ಲಿ ಶಾರುಖ್ ಖಾನ್ ನಟಿಸಲಿದ್ದಾರೆ ಎಂಬುವುದು ಸುಳ್ಳು

0
"ಜಿಹಾದಿ ಶಾರುಖ್ ಖಾನ್‌ನ ಭಾರೀ ಬಜೆಟ್‌ನಿಂದ ತಯಾರಾದ ದೇಶದ್ರೋಹಿ, ಮತಾಂಧ ತಿಪ್ಪೆ ಸುಲ್ತಾನನ ನಕಲಿ ಚರಿತ್ರೆ ಬರುತ್ತಿದೆ. ಇಂತಹ ದೇಶದ್ರೋಹಿಯ ಸಿನಿಮಾವನ್ನು ಬಹಿಷ್ಕರಿಸಲು ಶೇರ್ ಮಾಡಿ" ಎಂದು ಪೋಸ್ಟರ್ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ...