Homeಕರ್ನಾಟಕ‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

‘ಕರ್ನಾಟಕ ಯುವ ನೀತಿ-2021’ ರೂಪಿಕರಣ ಸಮಿತಿಯಲ್ಲಿ ‘ಚಕ್ರವರ್ತಿ ಸೂಲಿಬೆಲೆ’!

ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌ ಅವರು ಸಮಿತಿಯಲ್ಲಿ ಸದಸ್ಯರಾಗಿದ್ದಾರೆ.

- Advertisement -
- Advertisement -

ಕರ್ನಾಟಕ ಯುವ ನೀತಿ- 2021 ರೂಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಸ್ವಾಮಿ ವಿವೇಕಾನಂದ ಯೂತ್‌ ಮೂವ್‌ಮೆಂಟ್‌ ಸಂಸ್ಥಾಪಕ ಡಾ.ಬಾಲಸುಬ್ರಹ್ಮಣ್ಯಂ ಅವರ ಅಧ್ಯಕ್ಷತೆ ಸಮಿತಿಯನ್ನು ರಚಿಸಿದೆ.

ಸಮಿತಿಯ ವಿಶೇಷ ಆಹ್ವಾನಿತರಾಗಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಹಾಗೂ ಸದಸ್ಯ ಕಾರ್ಯದರ್ಶಿಯಗಿ ಇಲಾಖೆ ಆಯುಕ್ತರನ್ನು ನೇಮಿಸಲಾಗಿದೆ. ತಜ್ಞರ ಸಮಿತಿಗೆ ಸಂಘ ಪರಿವಾರದ ಹಿನ್ನೆಲೆಯವರನ್ನು ಸದಸ್ಯರನ್ನಾಗಿ ಸೇರಿಸಲಾಗಿದೆ.

ಯುವ ಬ್ರಿಗೇಡ್ ಸಂಘಟನೆಯ ಚಕ್ರವರ್ತಿ ಸೂಲಿಬೆಲೆ, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರ ಪುತ್ರ ಸಂಕಲ್ಪ ಶೆಟ್ಟರ್‌‌, ಮಾಜಿ ಸಚಿವ ಅನಂತಕುಮಾರ್‌ ಅವರ ಪುತ್ರಿ ಐಶ್ವರ್ಯ ದಿವೇಶ್‌, ಬೆಂಗಳೂರಿನ ಮಲ್ಲಿಕಾರ್ಜುನ್‌ ಬಿ.ಪಾಟೀಲ್‌, ವಿನೋದ್‌ ಕೃಷ್ಣಮೂರ್ತಿ, ನೆಹರೂ ಯುವ ಕೇಂದ್ರದ ನಿರ್ದೇಶಕ ಎಂ.ಎನ್‌.ನಟರಾಜ್‌, ರಾಜ್ಯ ಎನ್‌‌ಎಸ್‌ಎಸ್‌ ಅಧಿಕಾರಿ ಡಾ.ಪ್ರತಾಪ್‌ ಲಿಂಗಯ್ಯ, ದೊಡ್ಡಬಳ್ಳಾಪುರದ ಡಾ.ಡಿ.ಎಸ್.ಕೃಷ್ಣ, ಮಂಡ್ಯದ ಕೆ.ನಾಗಣ್ಣಗೌಡ, ಬೇಲೂರಿನ ಸಂತೋಷ್ ಸೋಮಶೇಖರ್‌ (ಕೆಂಚಾಂಬ) ಅವರು ಸಮಿತಿ ಸದಸ್ಯರಾಗಿದ್ದಾರೆ.

ಪಠ್ಯಪುಸ್ತಕ ಪರಿಶೀಲನಾ ಸಮಿತಿ ರಚಿಸಿ, ಸಂಘಪರಿವಾರದ ಹಿನ್ನೆಲೆಯ ರೋಹಿತ್‌ ಚಕ್ರತೀರ್ಥ ಅವರನ್ನು ಸರ್ಕಾರ ನೇಮಿಸಿದ್ದು ಟೀಕೆಗೆ ಗುರಿಯಾಗಿತ್ತು. ರಾಷ್ಟ್ರಕವಿ ಕುವೆಂಪು ಅವರು ಬರೆದ ನಾಡಗೀತೆಯನ್ನು ತಿರುಚಿದ ಆರೋಪ ಚಕ್ರತೀರ್ಥ ಅವರ ಮೇಲಿದ್ದು, ಅಂಥವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನೇಮಿಸಿದಾಗಲೇ ಆಕ್ರೋಶ ವ್ಯಕ್ತವಾಗಿತ್ತು.

ಪ್ರಗತಿಪರ ಮನಸ್ಸುಗಳ ವಿರುದ್ಧ ನಂಜುಕಾರುವ ರೀತಿ ಚಕ್ರತೀರ್ಥ ಅವರು ಭಾಷೆಯನ್ನು ಬಳಸುತ್ತಾರೆ. ಅಂಥವರನ್ನು ಕನ್ನಡದ ಕೆಲಸಗಳಿಗೆ ನೇಮಿಸಬಾರದು ಎಂದು ಟೀಕಿಸಲಾಗಿತ್ತು. ಆದರೆ ಜನಾಗ್ರಹಕ್ಕೆ ಮಣಿಯದ ಸರ್ಕಾರ ಸಂಘಪರಿವಾರದ ಹಿನ್ನೆಲೆಯವರನ್ನು, ವಿವಿಧ ಕೆಲಸಗಳಿಗೆ ನೇಮಿಸುವುದನ್ನು ಮುಂದುವರಿಸಿದೆ.

ಈಗ ರಚಿಸಿರುವ ಯುವ ನೀತಿ ಸಮಿತಿಯು ರಾಜ್ಯದ ಯುವಜನರ ಭವಿಷ್ಯವನ್ನು ನಿರ್ಧರಿಸಲು ಚಿಂತಿಸಲಿದೆ ಎಂದು ಸರ್ಕಾರ ಹೇಳಿದೆ. “ಯುವಜನರು ತಮ್ಮ ಜೀವನವನ್ನು ಉತ್ತಮವಾಗಿ ಕಟ್ಟಿಕೊಳ್ಳಲು, ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಅನುವಾಗುವಂತೆ ಸಮಗ್ರ ಯುವ ನೀತಿ ಹೊರತರಲು ರಚನೆಯಾಗಿರುವ ತಜ್ಞರ ಸಮಿತಿ ಇದಾಗಿದ್ದು, ಸಮಗ್ರವಾಗಿ ಅಧ್ಯಯನ ನಡೆಸಿ ಎರಡು ತಿಂಗಳೊಳಗೆ ವರದಿ ನೀಡಬೇಕು” ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಉಮೇಶ್‌ ಶಾಸ್ತ್ರಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿರಿ: ಕಾಂಗ್ರೆಸ್‌ ಬಗ್ಗೆ ಅಪಪ್ರಚಾರ: ಚಕ್ರವರ್ತಿ ಸೂಲಿಬೆಲೆ ವಿರುದ್ಧ ದೂರು ದಾಖಲು

ಯುವಜನ ಸಬಲೀಕರಣ ಸಚಿವ ನಾರಾಯಣಗೌಡ  ಅವರು, “ಕರ್ನಾಟಕ ಯುವ ನೀತಿಯನ್ನು ಈ ಹಿಂದೆ 2012ರಲ್ಲಿ ರೂಪಿಸಲಾಗಿದ್ದು, ಕಾಲಕ್ಕೆ ಅನುಗುಣವಾಗಿ ಹೊಸ ಯುವ ನೀತಿ ರೂಪಿಸುವ ಅವಶ್ಯಕತೆ ಇದೆ. ಅದರಂತೆ ತಜ್ಞರ ಸಮಿತಿ ರಚಿಸಲಾಗಿದ್ದು, ಸಮಗ್ರ ಹಾಗೂ ಕೌಶಲ್ಯಭರಿತ ಇಂದಿನ ಕಾಲಮಾನಕ್ಕೆ ತಕ್ಕಂತೆ ನೀತಿಯನ್ನು ಸಮಿತಿ ರೂಪಿಸಲಿದೆ” ಎಂದಿದ್ದಾರೆ.

ಸಮಿತಿಗೆ ನೇಮಕವಾಗಿರುವವರಲ್ಲಿ ಸಂಘಪರಿವಾರದ ಹಿನ್ನೆಲೆಯವರು ಹೆಚ್ಚಾಗಿ ಇರುವುದರಿಂದ ಯುವ ನೀತಿಯ ಸಂಬಂಧ ಆಕ್ಷೇಪಗಳು ವ್ಯಕ್ತವಾಗಿವೆ. ಚಕ್ರವರ್ತಿ ಸೂಲಿಬೆಲೆಯವರ ಸಾರ್ವಜನಿಕ ಭಾಷಣಗಳ ಕುರಿತು ಮೊದಲಿನಿಂದಲೂ ವ್ಯಂಗ್ಯ, ಕುಹಕಗಳಿವೆ. ಚಕ್ರವರ್ತಿ ಸೂಲಿಬೆಲೆಯವರು ಸುಳ್ಳುಗಳನ್ನು ಪೋಣಿಸಿ ಭಾಷಣ ಮಾಡುತ್ತಾರೆಂಬ ಆರೋಪಗಳಿದ್ದು, ಅಂಥವರನ್ನು ಸಮಿತಿಯಿಂದ ಕೈಬಿಡಬೇಕು ಎಂದು ಪ್ರಗತಿಪರ ಮನಸ್ಸುಗಳು ಆಗ್ರಹಿಸಿವೆ.

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ, “ಚಕ್ರವರ್ತಿ ಸೂಲಿಬೆಲೆಯವರ ಮೇಲೆ ಇರುವ ಬಹಳ ದೊಡ್ಡ ಆರೋಪ ಅವರು ಸುಳ್ಳುಗಳನ್ನು ಹೇಳುತ್ತಾರೆಂಬುದು. ಯುವಜನರಿಗೆ ಬೇಕಾಗಿರುವುದು ಉದ್ಯೋಗ ಹಾಗೂ ಉದ್ಯೋಗ ಭದ್ರತೆ. ಇದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಯುವಜನರಿಗೆ ಸಮಸ್ಯೆ ಇದೆ, ನಿರುದ್ಯೋಗ ಇದೆ ಎಂದು ಒಪ್ಪಿಕೊಳ್ಳದೆ ಇರುವ ಜನರನ್ನು ಸಮಿತಿಯಲ್ಲಿ ನೇಮಿಸುವುದು ಆತಂಕಕಾರಿ. ಇಂಥವರು ಸರ್ಕಾರದ ಪರವಾಗಿಯೇ ನೀತಿ ರೂಪಿಸುತ್ತಾರೆ. ಯುವಜನರ ದಿಕ್ಕು ತಪ್ಪಿಸುವ ಹಿನ್ನೆಲೆ ಇರುವವರನ್ನು ಒಳಗೊಂಡ ಸಮಿತಿ ಮಾಡುವುದು ಸರ್ಕಾರದ ಅಧೋಗತಿಯನ್ನು ಸೂಚಿಸುತ್ತದೆ” ಎಂದರು.

ಸಾಮಾಜಿಕ ಕಾರ್ಯಕರ್ತ ಹರ್ಷಕುಮಾರ್‌ ಕುಗ್ವೆ ಪ್ರತಿಕ್ರಿಯಿಸಿ, “ಕಳೆದ 45 ವರ್ಷಗಳಲ್ಲೇ ಅತಿಹೆಚ್ಚು ನಿರುದ್ಯೋಗ ಮೋದಿ ಸರ್ಕಾರದ ಅವಧಿಯಲ್ಲಿ ಸೃಷ್ಟಿಯಾಗಿದೆ ಎಂದು ಎನ್‌ಎಸ್‌ಎಸ್‌ಓ ಹೇಳಿದೆ. ಆದರೆ ಸರ್ಕಾರ ಆ ವರದಿಯನ್ನು ತಡೆ ಹಿಡಿಯಿತು. ಮೋದಿ ಅವಧಿಯಲ್ಲಿ ಕೊಟ್ಯಾಂತರ ಯುವಕರು ಉದ್ಯೋಗ ಕಳೆದುಕೊಂಡಿದ್ದಾರೆ. ಇಂತಹ ಯುವಜನರ ಕೈಗೆ ಲಾಠಿ, ತ್ರಿಶೂಲ, ಬಡಿಗೆ ಕೊಟ್ಟು, ಮತ್ತೊಂದು ಕೋಮು ವಿರುದ್ಧ ದೊಂಬಿ ನಡೆಸಲಿಕ್ಕೆ ಸರ್ಕಾರ ಸಿದ್ಧವಾದಂತೆ ಕಾಣುತ್ತಿದೆ. ಇತ್ತೀಚೆಗೆ ಚಕ್ರವರ್ತಿ ಸೂಲಿಬೆಲೆ ಅವರು ಟ್ವೀಟ್‌ ಮಾಡಿದ್ದು, ಹಿಂದೂ ಶೂದ್ರ ಯುವಕರನ್ನು ಮುಸ್ಲಿಮರ ವಿರುದ್ಧ ನೇರವಾಗಿ ಪ್ರಚೋದನೆ ಮಾಡಲು ಯತ್ನಿಸಿದ್ದರು. ಇದನ್ನು ಗಮನಿಸಿ ಬೆಂಗಳೂರಿನ ಮಾಜಿ ಪೊಲೀಸ್‌ ಕಮೀಷನರ್‌, ಪ್ರಸ್ತುತ ರೈಲ್ವೇ ADGP ಆಗಿರುವ ಭಾಸ್ಕರ್‌ ರಾವ್ ಅವರು ಟ್ವಿಟರ್‌ನಲ್ಲೆ ಚಕ್ರವರ್ತಿ ಸೂಲಿಬೆಲೆಗೆ ಬುದ್ಧಿವಾದ ಹೇಳಿದ್ದರು. ಸಾರ್ವಜನಿಕ ವೇದಿಕೆಯಲ್ಲಿ ಮುಸ್ಲಿಮರ ವಿರುದ್ಧ ಯುವಕರನ್ನು ಛೂ ಬಿಡುವಂತಹ ಒಬ್ಬ ವ್ಯಕ್ತಿಯನ್ನು ಯುವ ನೀತಿ ಸಮಿತಿಯಲ್ಲಿ ಸೇರಿಸಿಕೊಂಡಿರುವುದು ಏತಕ್ಕೆ?” ಎಂದು ಪ್ರಶ್ನಿಸಿದರು.


ಇದನ್ನೂ ಓದಿರಿ: ಕೋಮು ಪ್ರಚೋದನೆ ಮಾಡಿದ ಸೂಲಿಬೆಲೆ: ಟ್ವಿಟರ್‌ನಲ್ಲಿ ಬುದ್ದಿವಾದ ಹೇಳಿದ ಪೊಲೀಸ್‌ ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಈ ತಂಡ ಕೇಶವ ಕೃಪಾದ ಆದೇಶದಂತೆ ಕೆಲಸ ನಿರ್ವಹಿಸುತ್ತದೆ. ಆದ್ದರಿಂದ ಈ ಸಮಿತಿಯಿಂದ ಯುವಜನತೆಗೆ ಯಾವ ಪ್ರಯೋಜನವೂ ಆಗುವುದಿಲ್ಲ.

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...