Homeಕರ್ನಾಟಕಸೂಲಿಬೆಲೆ ಆಟ ಇನ್ನು ನಡೆಯಲ್ಲ: ಎಂ.ಬಿ.ಪಾಟೀಲ್ ಖಡಕ್‌ ಎಚ್ಚರಿಕೆ

ಸೂಲಿಬೆಲೆ ಆಟ ಇನ್ನು ನಡೆಯಲ್ಲ: ಎಂ.ಬಿ.ಪಾಟೀಲ್ ಖಡಕ್‌ ಎಚ್ಚರಿಕೆ

- Advertisement -
- Advertisement -

ಸುಳ್ಳುಗಳನ್ನು ಹೇಳುತ್ತಾರೆಂಬ ಆರೋಪಗಳಿಗೆ ಗುರಿಯಾಗಿರುವ ಬಲಪಂಥೀಯ ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಸಚಿವರು, “ಸಮಾಜದಲ್ಲಿ ಕೋಮು ಭಾವನೆ ಸೃಷ್ಟಿಸುವ ಚಕ್ರವರ್ತಿ ಸೂಲಿಬೆಲೆ ಆಟ ಇನ್ನು ನಡೆಯದು” ಎಂದಿದ್ದಾರೆ.

ಮೈಸೂರಿನಲ್ಲಿ ಆಯೋಜಿಸಲಾಗಿದ್ದ ವಿ.ಡಿ.ಸಾವರ್ಕರ್ ಜಯಂತಿಯಲ್ಲಿ ಮಾತನಾಡಿದ್ದ ಸೂಲಿಬೆಲೆ, ರಾಜ್ಯದಲ್ಲಿ ಹಿಟ್ಲರ್‌ ಸರ್ಕಾರವಿದೆ” ಎಂದಿದ್ದರು. ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಎಂ.ಬಿ.ಪಾಟೀಲ್‌, “ಬಿಜೆಪಿ ಸರ್ಕಾರದಲ್ಲಿ ಹಿಜಾಬ್, ಹಲಾಲ್, ಉರಿಗೌಡ ಅಂತೆಲ್ಲ ಸಮಾಜದಲ್ಲಿ ಸಂಘರ್ಷಮಯ ವಾತಾವರಣ ಸೃಷ್ಟಿಸುವ ಕೆಲಸ ಮಾಡಿದ ಬಿಜೆಪಿ, ರಾಜ್ಯದ ಅಭಿವೃದ್ಧಿ ಕಡೆಗಣಿಸಿತು” ಎಂದು ಟೀಕಿಸಿದ್ದಾರೆ.

“ರೋಸಿಹೋದ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದಾರೆ. ಮಾಧ್ಯಮಗಳೂ ಸೇರಿದಂತೆ ಎಲ್ಲರ ನಿರೀಕ್ಷೆ ಹುಸಿಗೊಳಿಸಿ ಕಾಂಗ್ರೆಸ್ ಪಕ್ಷಕ್ಕೆ ಅದ್ಭುತ ಬಹುಮತದ ಸರ್ಕಾರ ರಚನೆಗೆ ಮತದಾರ ಪ್ರಭುಗಳು ಆಶೀರ್ವಾದ ಮಾಡಿದ್ದಾರೆ. ನಮ್ಮ ಸರ್ಕಾರ ಎಲ್ಲ ಸಮುದಾಯಗಳ ರಕ್ಷಣೆ ವಿಷಯದಲ್ಲಿ ವಿಶೇಷ ಕಾಳಜಿ ತೋರಲಿದೆ” ಎಂದು ತಿಳಿಸಿದ್ದಾರೆ.

“ಗೋಹತ್ಯೆ ನಿಷೇಧ ಕಾನೂನು, ಮುಸ್ಲಿಮರಿಂದ ಕಿತ್ತುಕೊಂಡ ಶೇ.4 ಮೀಸಲಾತಿ, ಮತಾಂತರ ನಿಷೇಧ ಕಾನೂ ಹಿಂಪಡೆಯುವುದು ಸೇರಿದಂತೆ ಅಹಿಂದ ಸಂಘಟನೆಯ ಬೇಡಿಕೆ ಈಡೇರಿಸುವ ಕುರಿತು ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ.

“ಈ ಹಿಂದೆ ನಾಲ್ಕು ವರ್ಷ ಸೂಲಿಬೆಲೆ ಅನಾಹುತ ಮಾಡಿದ್ದಾರೆ. ಸೂಲಿಬೆಲೆ ಮಾಡಿದ ಅನಾಹುತಗಳನ್ನ ಈಗ ನಾವು ಸರಿಪಡೆಸುತ್ತಿದ್ದೇವೆ. ಅಲ್ಲದೇ, ಪಠ್ಯಪುಸ್ತಕ, ಹಿಜಾಬ್, ಹಲಾಲ್, ಅಝಾನ್ ಅಂತ ನಾಟಕ ಮಾಡಿದ್ದಾರೆ. ಇದಕ್ಕೆಲ್ಲ ಇತಿಶ್ರೀ ಹಾಡುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯಾಗಲಿ’: ಸಚಿವರ ಹೇಳಿಕೆ ಸ್ವಾಗತಿಸಿದ ರೈತರು ಏನಂತಾರೆ?

“ಕೇಸರಿ ಬಣ್ಣ ಬರೀ ಬಿಜೆಪಿಯವರು ಗುತ್ತಿಗೆ ಪಡೆದಿಲ್ಲ. ನಮ್ಮ ದೇವಸ್ಥಾನಗಳ ಮೇಲೆ ಕೇಸರಿ ಧ್ವಜವನ್ನೇ ಹಾರಿಸಲಾಗುತ್ತದೆ. ನಮ್ಮ ಮನೆಯಲ್ಲೂ ಕೇಸರಿ ಬಣ್ಣ ಬಳಕೆ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

ಶನಿವಾರ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸೂಲಿಬೆಲೆ, “ಇಂದಿನ ಕಾರ್ಯಕ್ರಮ ಇಲ್ಲ, ರದ್ದಾಗಲಿದೆ ಎಂದು ನಾವು ತಿಳಿದಿದ್ದೆವು. ಇದಕ್ಕೆ ಹಲವರು ಕಾರಣಗಳು ಇವೆ. ಸಾಹಿತಿ ಎಸ್.ಎಲ್.ಭೈರಪ್ಪ, ನಾನು ಇದ್ದೇವೆ ಎಂದು ರದ್ದು ಪಡಿಸುವ ಕೆಲಸವಾಗಿದೆ” ಎಂದಿದ್ದರು.

“ಸಾವರ್ಕರ್ ಕಾರ್ಯಕ್ರಮದ ಬಗ್ಗೆ ಸರ್ಕಾರಕ್ಕೆ ಭಯ ಇರಬಹುದು. ಅಧಿಕಾರಕ್ಕೆ ಬಂದು ಒಂದು ವಾರವಾಗಿಲ್ಲ. ಅಷ್ಟರಲ್ಲಿ ಸಾವರ್ಕರ್ ಜಯಂತಿ ರದ್ದು ಮಾಡಲು ಹೊರಟಿದ್ದಾರೆ. ಇದು ಹಿಟ್ಲರ್ ಸರ್ಕಾರ. ಸಾವರ್ಕರ್ ಇವತ್ತಿಗೂ ಪ್ರಸ್ತುತ ಹಾಗೂ ಜೀವಂತ” ಎಂದು ಅಭಿಪ್ರಾಯಪಟ್ಟಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....