Homeಕರ್ನಾಟಕಸುಳ್ಯದಲ್ಲಿ ಅನೈತಿಕ ಪೊಲೀಸ್ ಗಿರಿ: ಯುವಕನಿಗೆ ಸಂಘ ಪರಿವಾರದ ಕಾರ್ಯಕರ್ತರಿಂದ ಹಲ್ಲೆ

ಸುಳ್ಯದಲ್ಲಿ ಅನೈತಿಕ ಪೊಲೀಸ್ ಗಿರಿ: ಯುವಕನಿಗೆ ಸಂಘ ಪರಿವಾರದ ಕಾರ್ಯಕರ್ತರಿಂದ ಹಲ್ಲೆ

- Advertisement -
- Advertisement -

ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಅನೈತಿಕ ಪೊಲೀಸ್ ಗಿರಿ ವರದಿಯಾಗಿದ್ದು, ಸಂಘ ಪರಿವಾರದ ಕಾರ್ಯಕರ್ತರೆನ್ನಲಾದವರ ತಂಡ ಸುಳ್ಯದಲ್ಲಿ ಯುವಕನೋರ್ವನಿಗೆ ಹಲ್ಲೆ ನಡೆಸಿರುವ ಬಗ್ಗೆ ವರದಿಯಾಗಿದೆ.

ಕೇರಳದ ಮಣಪ್ಪುರಂ ನಿವಾಸಿ ಅರಂತೋಡಿನಲ್ಲಿ  ಸಧ್ಯ ವಾಸವಿದ್ದ ಜಲೀಲ್ ಮೇಲೆ ಹಲ್ಲೆ ನಡೆದಿದೆ. ಈ ಕುರಿತು ಜಲೀಲ್ ಪೊಲೀಸರಿಗೆ ದೂರು ನೀಡಿದ್ದಾರೆ.

ಕೇರಳದಿಂದ ಸುಳ್ಯಕ್ಕೆ ಬಂದಿದ್ದ ಮಹಿಳೆಯೊಬ್ಬರು ಜಲೀಲ್ ಬಳಿ ತನಗೆ ಸುಳ್ಯದಲ್ಲಿ ರೂಂ ತೆಗೆದು ಕೊಡುವಂತೆ ಹೇಳಿದ್ದಾರೆ. ಅದರಂತೆ ಜಲೀಲ್ ಮಹಿಳೆಯನ್ನು ಕರೆದುಕೊಂಡು  ಎರಡು ಕಡೆ ರೂಂ ಪಡೆಯಲು ಯತ್ನಿಸಿದ್ದರೂ ರೂಂ ಕೊಟ್ಟಿರಲಿಲ್ಲ.ಬಳಿಕ ಮಹಿಳೆ ವಾಪಾಸ್ಸಾಗಿದ್ದಾರೆ. ಇದೇ ಕಾರಣಕ್ಕೆ ಜಲೀಲ್ ತೆರಳುತ್ತಿದ್ದ ಕಾರನ್ನು ತಡೆದು ಸಂಘ ಪರಿವಾರದ ಕಾರ್ಯಕರ್ತರ ತಂಡ  ಹಲ್ಲೆ ನಡೆಸಿದ್ದಾರೆಂದು ಆರೋಪಿಸಲಾಗಿದೆ.

ಪ್ರಕರಣಕ್ಕೆ ಸಬಂಧಿಸಿ ಓರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕರಾವಳಿಯಲ್ಲಿ ಅನೈತಿಕ ಪೊಲೀಸ್ ಗಿರಿ ಪ್ರಕರಣಗಳು ಹೆಚ್ಚಾಗಿದ್ದು, ನೂತನ ಕಾಂಗ್ರೆಸ್ ಸರಕಾರ ಬಂದ ಮೇಲೆ ಇದಕ್ಕೆ ಕಡಿವಾಣ ಬೀಳುತ್ತದೆ ಎಂದು ಹೇಳಲಾಗಿತ್ತು. ಆದರೆ ಕರಾವಳಿಯಲ್ಲಿ ಮತ್ತೆ ಅನೈತಿಕ ಪೊಲೀಸ್ ಗಿರಿ ವರದಿಯಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಪೊಲೀಸ್ ಪೇದೆ, ಪತ್ರಕರ್ತನ ಮೇಲೆ ಕೂಡ ಅನೈತಿಕ ಪೊಲೀಸ್ ಗಿರಿ ನಡೆದಿದ್ದು ಪೊಲೀಸ್ ಇಲಾಖೆ ಮತ್ತು ಸರಕಾರಕ್ಕೆ ಮುಜುಗರ ಉಂಟು ಮಾಡಿದೆ.

ಇದನ್ನು ಓದಿ: ತಮಿಳುನಾಡು: ದೇವಸ್ಥಾನಕ್ಕೆ ಹೋಗುವ ರಸ್ತೆಯಲ್ಲಿ ಮಾಂಸಹಾರಿ ಹೋಟೆಲ್: ರಾಜ್ಯಪಾಲರಿಂದ ಆಕ್ಷೇಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನೀವು ಕಾನೂನಿಗಿಂತ ಮೇಲಲ್ಲ: ಜಾರಿ ನಿರ್ದೇಶನಾಲಯಕ್ಕೆ ತರಾಟೆಗೆ ತೆಗೆದುಕೊಂಡ ದೆಹಲಿ ಹೈಕೋರ್ಟ್‌

0
ಜಾರಿ ನಿರ್ದೇಶನಾಲಯವು (ಇಡಿ) ಕಾನೂನಿನ ಚೌಕಟ್ಟಿಗೆ ಒಳಪಟ್ಟಿದೆ ಮತ್ತು ಸಾಮಾನ್ಯ ನಾಗರಿಕರ ವಿರುದ್ಧ ಬಲಪ್ರದರ್ಶನ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಹೇಳಿದ್ದು, ನೀವು ಕಾನೂನಿಗಿಂತ ಮೇಲಲ್ಲ ಎಂದು ಸ್ಪಷ್ಟವಾಗಿ ಹೇಳಿದೆ. ಮಧ್ಯಂತರ...